ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ರಾಜ್ಯ ಸರ್ಕಾರದ ಯೋಜನೆ ಮತ್ತು ಸಾಂಖ್ಯಿಕ ಖಾತೆ ಸಚಿವರು ಹಾಗೂ ಹಿರಿಯ ರಾಜಕಾರಣಿ ಡಿ. ಸುಧಾಕರ್ ಅವರ ಅಕಾಲಿಕ ನಿಧನಕ್ಕೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ತೀವ್ರ ಅತೀವ ದುಃಖ ವ್ಯಕ್ತಪಡಿಸಿದ್ದಾರೆ.
ಸುಧಾಕರ್ ಅವರ ನಿಧನದ ಸುದ್ದಿ ತಿಳಿಯುತ್ತಿದ್ದಂತೆ ಹೆಚ್‌ಡಿಕೆ ಅವರು ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ ಶೋಕ ಸಂದೇಶ ಹಂಚಿಕೊಂಡಿದ್ದಾರೆ. "ನಾಡಿನ ಹಿರಿಯ ರಾಜಕಾರಣಿ ಡಿ. ಸುಧಾಕರ್ ಅವರ ಅಕಾಲಿಕ ಮರಣ ನನಗೆ ಅತೀವ ದುಃಖ ಉಂಟು ಮಾಡಿದೆ. ಜನಾನುರಾಗಿ ನಾಯಕರಾಗಿದ್ದ ಅವರ ನಿಧನ ರಾಜ್ಯಕ್ಕೆ ಆಗಿರುವ ಬಹುದೊಡ್ಡ ನಷ್ಟವಾಗಿದೆ," ಎಂದು ಅವರು ಕಂಬನಿ ಮಿಡಿದಿದ್ದಾರೆ.
"ಮೃತರ ಆತ್ಮಕ್ಕೆ ಆ ಭಗವಂತ ಚಿರಶಾಂತಿ ನೀಡಲಿ. ಈ ಅಗಲಿಕೆಯ ದುಃಖವನ್ನು ಭರಿಸುವ ಶಕ್ತಿಯನ್ನು ಅವರ ಕುಟುಂಬದ ಸದಸ್ಯರಿಗೆ ಹಾಗೂ ಹಿತೈಷಿಗಳಿಗೆ ದೇವರು ದಯಪಾಲಿಸಲಿ," ಎಂದು ಕುಮಾರಸ್ವಾಮಿ ಅವರು ಪ್ರಾರ್ಥಿಸಿದ್ದಾರೆ.

ಡಿ. ಸುಧಾಕರ್ ಅವರು ಹಿರಿಯೂರು ಕ್ಷೇತ್ರದ ಶಾಸಕರಾಗಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾಗಿ ಸುದೀರ್ಘ ಕಾಲ ಸಾರ್ವಜನಿಕ ಸೇವೆಯಲ್ಲಿ ತೊಡಗಿಸಿಕೊಂಡಿದ್ದರು. ಅವರ ನಿಧನಕ್ಕೆ ಪಕ್ಷಾತೀತವಾಗಿ ರಾಜ್ಯದ ಗಣ್ಯರು ಸಂತಾಪ ಸೂಚಿಸುತ್ತಿದ್ದಾರೆ.


