Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸಚಿವ ಡಿ. ಸುಧಾಕರ್ ನಿಧನ: ನಾಳೆ ಚಿತ್ರದುರ್ಗ ಜಿಲ್ಲೆಯಾದ್ಯಂತ ರಜೆ ಘೋಷಣೆ

Advertisement

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕರ್ನಾಟಕ ಸರ್ಕಾರದ ಯೋಜನೆ ಮತ್ತು ಸಾಂಖ್ಯಿಕ ಸಚಿವರಾದ ಶ್ರೀ ಡಿ. ಸುಧಾಕರ್ ಅವರು ಇಂದು (ಮೇ 10
, 2026) ನಿಧನರಾಗಿದ್ದಾರೆ. ಸಚಿವರ ನಿಧನಕ್ಕೆ ರಾಜ್ಯ ಸರ್ಕಾರ ತೀವ್ರ ಸಂತಾಪ ವ್ಯಕ್ತಪಡಿಸಿದ್ದು, ಅವರ ಗೌರವಾರ್ಥವಾಗಿ ನಾಳೆ ರಜೆ ಹಾಗೂ ರಾಜ್ಯಾದ್ಯಂತ ಶೋಕಾಚರಣೆಯನ್ನು ಘೋಷಿಸಿ ಅಧಿಕೃತ ಆದೇಶ ಹೊರಡಿಸಿದೆ.

​​ಜಿಲ್ಲಾ ರಜೆ: ದಿವಂಗತ ಸಚಿವರ ಗೌರವಾರ್ಥವಾಗಿ ಮೇ 11, 2026ರ ಸೋಮವಾರದಂದು ಚಿತ್ರದುರ್ಗ ಜಿಲ್ಲೆಯಾದ್ಯಂತ ಎಲ್ಲಾ ಸರ್ಕಾರಿ ಕಚೇರಿಗಳು, ಶಾಲಾ-ಕಾಲೇಜುಗಳು (ಅನುದಾನಿತ ವಿದ್ಯಾಸಂಸ್ಥೆಗಳು ಸೇರಿದಂತೆ) ಮತ್ತು ಸರ್ಕಾರಿ ಸ್ವಾಮ್ಯದ ಸಂಸ್ಥೆಗಳಿಗೆ ಸಾರ್ವಜನಿಕ ರಜೆ ಘೋಷಿಸಲಾಗಿದೆ.

​ರಾಜ್ಯಾದ್ಯಂತ ಶೋಕಾಚರಣೆ: ಮೇ 10 ರಿಂದ ಮೇ 12 ರವರೆಗೆ ಒಟ್ಟು ಮೂರು ದಿನಗಳ ಕಾಲ ರಾಜ್ಯಾದ್ಯಂತ ಶೋಕಾಚರಣೆ ಇರಲಿದೆ.
​ನಿರ್ಬಂಧಗಳು: ಶೋಕಾಚರಣೆಯ ಅವಧಿಯಲ್ಲಿ ಯಾವುದೇ ಅಧಿಕೃತ ಸಾರ್ವಜನಿಕ ಮನರಂಜನಾ ಕಾರ್ಯಕ್ರಮಗಳು ಇರುವುದಿಲ್ಲ. ಸರ್ಕಾರಿ ಕಟ್ಟಡಗಳ ಮೇಲೆ ರಾಷ್ಟ್ರಧ್ವಜವನ್ನು ಅರ್ಧಮಟ್ಟದಲ್ಲಿ ಹಾರಿಸಲಾಗುವುದು.

​ಅಂತ್ಯಕ್ರಿಯೆ: ಸಚಿವ ಡಿ. ಸುಧಾಕರ್ ಅವರ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲು ಸರ್ಕಾರ ಆದೇಶಿಸಿದೆ.

​ಈ ಆದೇಶವನ್ನು ನೆಗೋಷಿಯೇಬಲ್ ಇನ್ಸ್ಟ್ರುಮೆಂಟ್ ಆಕ್ಟ್ 1881 ರ ಅಡಿಯಲ್ಲೂ ಸಾರ್ವಜನಿಕ ರಜೆ ಎಂದು ಪರಿಗಣಿಸಲಾಗಿದೆ ಎಂದು ಸರ್ಕಾರದ ಅಧೀನ ಕಾರ್ಯದರ್ಶಿಗಳು ತಮ್ಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸಚಿವ ಡಿ. ಸುಧಾಕರ್ ನಿಧನ: ನಾಳೆ ಚಿತ್ರದುರ್ಗ ಜಿಲ್ಲೆಯಾದ್ಯಂತ ರಜೆ ಘೋಷಣೆಹಿರಿಯೂರು, ಚಳ್ಳಕೆರೆಯಲ್ಲಿ ಸಚಿವ ಸುಧಾಕರ್ ಅವರ ಅಂತಿಮ ದರ್ಶನ ಮತ್ತು ಅಂತ್ಯಕ್ರಿಯೆಯ ಸಮಯ ನಿಗದಿಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವರಾದ ಡಿ. ಸುಧಾಕರ್ ಅವರ ನಿಧನಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವರಾದ ಡಿ. ಸುಧಾಕರ್ ಅವರ ನಿಧನಡಿ.ಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿದ ಸಂಸದೆ ಡಾ.ಪ್ರಭಾದೊಡ್ಡಬಳ್ಳಾಪುರದಲ್ಲಿ ಜನಸಾಗರ: ಜನರ ಪ್ರೀತಿ ಕಂಡು ಭಾವುಕರಾದ ನಿಖಿಲ್ ಕುಮಾರಸ್ವಾಮಿಬಂಗಾಳದಲ್ಲಿ ನವ ಮನ್ವಂತರದ ಆರಂಭ: ಸುವೇಂದು ಅಧಿಕಾರ ಸ್ವೀಕಾರಕ್ಕೆ ಸಿ.ಟಿ. ರವಿ ಹರ್ಷಬಂಗಾಳದ ಜನಶಕ್ತಿಗೆ 'ನಮೋ' ನಮನ: ಸಿ.ಟಿ. ರವಿ ಹರ್ಷಕಾಯಕ ಸಮಾಜಗಳ ಅಭಿವೃದ್ಧಿ ನಿಧಿ ದುರ್ಬಳಕೆ: ಕಾಂಗ್ರೆಸ್ ಸರ್ಕಾರದ ವಿರುದ್ಧ ನಿಖಿಲ್ ಆಕ್ರೋಶಜೆಡಿಎಸ್ ವತಿಯಿಂದ ಬೂತ್ ಮಟ್ಟದ ಏಜೆಂಟ್ ಗಳ ಕಾರ್ಯಾಗಾರ