Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸರ್ಕಾರಿ ವೈದ್ಯರುಗಳ ಖಾಸಗಿ ಸೇವೆಗಳ ನಿಯಂತ್ರಣಕ್ಕೆ ಕ್ರಮ- ಸಚಿವ ದಿನೇಶ್ ಗುಂಡೂರಾವ್

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಸರ್ಕಾರಿ ಆಸ್ಪತ್ರೆಯ ವೇಳೆಯ ನಂತರ ಖಾಸಗಿ ವೃತ್ತಿ ಮಾಡಲು ಈ ಹಿಂದೆ ಸರ್ಕಾರ ಅನುಮತಿ ನೀಡಲಾಗಿತ್ತು. ಸರ್ಕಾರಿ ವೈದ್ಯರುಗಳು ಕೊರತೆಯ ಕಾರಣ ಸರ್ಕಾರಿ ಆಸ್ಪತ್ರೆಗಳ ಸೇವೆ ಕುಂಠಿತವಾಗುತ್ತಿದೆ.


ಈ ನಿಟ್ಟಿನಲ್ಲಿ ಸರ್ಕಾರಿ ಆಸ್ಪತ್ರೆಗಳ ಸೇವೆಯನ್ನು ಬಲಪಡಿಸಬೇಕಿದೆ. ಈಗಾಗಲೇ ಚಾಲ್ತಿಯಲ್ಲಿರುವ ಸರ್ಕಾರಿ ಸದರಿ ಸುತ್ತೋಲೆಯನ್ನು ಪರಿಷ್ಕರಿಸಿ ಸರ್ಕಾರಿ ಆಸ್ಪತ್ರೆಯ ವೇಳೆಯ ನಂತರ ವೈದ್ಯರುಗಳು ಎಮರ್ಜೆನ್ಸಿ ಕೇಸುಗಳನ್ನು ತೆಗೆದುಕೊಳ್ಳಬಾರದು.

ಒಳರೋಗಿಗಳ ಸೇವೆ, ಕನ್ಸಲ್ಟೇಷನ್ ಸೇವೆಗೆ ಮಾತ್ರ ಸೀಮಿತಗೊಳಿಸಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರ ದಿನೇಶ್ ಗುಂಡೂರಾವ್ ತಿಳಿಸಿದರು.

ವಿಧಾನಸಭೆಯ ಸದನದ ಪ್ರಶ್ನೋತ್ತರ ವೇಳೆಯಲ್ಲಿ ಅರಸೀಕೆರೆ ಶಾಸಕ ಶಿವಲಿಂಗೇಗೌಡ ಇವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ರಾಜ್ಯದ ಎಲ್ಲಾ ಸಮುದಾಯ ಆರೋಗ್ಯ ಕೇಂದ್ರಗಳು, ಸಾರ್ವಜನಿಕ ಆಸ್ಪತ್ರೆಗಳು, ಉಪವಿಭಾಗೀಯ ಆಸ್ಪತ್ರೆಗಳು, ಜಿಲ್ಲಾ ಆಸ್ಪತ್ರೆಗಳು ಮತ್ತು ಪ್ರಮುಖ ಸರ್ಕಾರಿ ಆಸ್ಪತ್ರೆಗಳು ದಿನದ 24 ಗಂಟೆಗಳ ಕಾಲ ಕರ್ತವ್ಯ ನಿರ್ವಹಿಸುತ್ತಿದ್ದು, ತುರ್ತು ಚಿಕಿತ್ಸೆಗಾಗಿ ವೈದ್ಯರು ಸದಾಕಾಲ ಲಭ್ಯವಿರಬೇಕು.

ಈ ನಿಟ್ಟಿನಲ್ಲಿ ಕರ್ನಾಟಕ ಆಡಳಿತ ಸುಧಾರಣೆ ಆಯೋಗವು ಶಿಫಾರಸ್ಸು ಮಾಡಿರುವಂತೆ ಸರ್ಕಾರಿ ವೈದ್ಯರುಗಳು ಸರ್ಕಾರಿ ಕೆಲಸಗಳಿಗೆ ತೊಂದರೆಯಾಗದಂತೆ ಖಾಸಗಿ ನಿರ್ವಹಿಸಬೇಕು ಎಂದರು.

ಇತ್ತೀಚೆಗೆ ಹಲವು ದೂರುಗಳು ದಾಖಲಾದ ಹಿನ್ನೆಲೆಯಲ್ಲಿ ಇದಕ್ಕೆ ಕಡಿವಾಣ ಹಾಕಲು ಸರ್ಕಾರಿ ವೈದ್ಯರುಗಳ ಖಾಸಗಿ ಸೇವೆಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಸರ್ಕಾರ ಯೋಚಿಸಿ ಈ ಹಿಂದೆ ಇದ್ದ ಸುತ್ತೋಲೆಯನ್ನು ಪರಿಷ್ಕರಿಸಲಾಗುತ್ತಿದೆ. ವೈದ್ಯರುಗಳ ತಮ್ಮ ಖಾಸಗಿ ಸೇವೆಯನ್ನು ಸರ್ಕಾರಕ್ಕೆ ಕಡ್ಡಾಯವಾಗಿ ಘೋಷಿಸಬೇಕು ಎಂದು ವಿಧಾನಸಭೆಯಲ್ಲಿ ತಿಳಿಸಿದರು.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ