Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಐಮಂಗಲ ಕಿತ್ತೂರು ರಾಣಿ ಚೆನ್ನಮ್ಮ ವಸತಿಶಾಲೆಗೆ ಸಚಿವ ಕೆ.ಹೆಚ್.ಮುನಿಯಪ್ಪ ಭೇಟಿ

ಚಂದ್ರವಳ್ಳಿ ನ್ಯೂಸ್, ಐಮಂಗಲ:
ಹಿರಿಯೂರು ತಾಲ್ಲೂಕಿನ ಐಮಂಗಲ ಗ್ರಾಮದ ಹತ್ತಿರದ ಕಿತ್ತೂರು ರಾಣಿ ಚೆನ್ನಮ್ಮ ವಸತಿಶಾಲೆಗೆ ಶನಿವಾರ ಸಮಾಜ ಕಲ್ಯಾಣ ಸಚಿವ ಕೆ.ಹೆಚ್.ಮುನಿಯಪ್ಪ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಈ ವೇಳೆ ಎಸ್.ಎಸ್.ಎಲ್.ಸಿ ಓದುತ್ತಿರುವ ವಿದ್ಯಾರ್ಥಿನಿಯರಿಗೆ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗುವಂತೆ ಕಿವಿಮಾತು ಹೇಳಿದ ಸಚಿವರು, ವಸತಿ ಶಾಲೆಯಲ್ಲಿ ಪಿ.ಯು. ಶಿಕ್ಷಣ ಆರಂಭಿಸುವ ಭರವಸೆಯನ್ನು ನೀಡಿದರು.

Advertisement

"ಬಡತನದ ಹಿನ್ನೆಲೆ ಹೊಂದಿರುವ ಮಕ್ಕಳೇ‌ಇಲಾಖೆಯ ವಸತಿ ಶಾಲೆಯಲ್ಲಿ ಓದುವುದು. ನಿಮ್ಮ ತಂದೆ ತಾಯಂದಿರಿಗೆ ಲಕ್ಷಾಂತರ ರೂಪಾಯಿ ಖರ್ಚು ಮಾಡುವ ಆರ್ಥಿಕ ಚೈತನ್ಯವಿಲ್ಲ. ಎಸ್.ಎಸ್.ಎಲ್.ಸಿ‌ಹಾಗೂ ಪಿಯುಸಿಯಲ್ಲಿ ಅತ್ಯುನ್ನತ ‌ಶ್ರೇಣಿಯಲ್ಲಿ ಪಾಸಾಗಿ, ನೀಟ್ ಹಾಗೂ ಸಿಇಟಿ ಮೂಲಕ ಸರ್ಕಾರಿ ಕೋಟಾದಡಿ ವೈದ್ಯಕೀಯ ಹಾಗೂ ಇಂಜಿನಿಯರ್ ಸೀಟನ್ನು ಪಡೆಯುವ ಲಕ್ಷ್ಯ ಹೊಂದಬೇಕು. ಇದರೊಂದಿಗೆ ಸ್ಪರ್ಧಾತ್ಮಕ ಪರೀಕ್ಷೆಯ ಎದುರಿಸಿ  ಐ.ಎ.ಎಸ್, ಐ.ಪಿ.ಎಸ್ ಹಾಗೂ ಕೆ.ಎ.ಎಸ್ ಅಧಿಕಾರಿಗಳಾಗಿ ಸೇವೆ ಮಾಡುವ ಕನಸುಗಳನ್ನು ಕಾಣುವಂತೆ" ವಿದ್ಯಾರ್ಥಿನಿಯರಿಗೆ ಸಚಿವ ಕೆ.ಹೆಚ್. ಮುನಿಯಪ್ಪ ಪ್ರೇರಣೆ ನೀಡಿದರು.

ವಸತಿ ಶಾಲೆ ಹಾಗೂ ನಿಲಯಗಳಿಗೆ ಭೇಟಿ ನೀಡಿ ವರದಿ ನೀಡಲು ತಾಕೀತು: ಅಧಿಕಾರಿಗಳು ಕಚೇರಿ ಕೆಲಸಗಳಿಗೆ ಸೀಮಿತವಾಗಬಾರದು. ಪ್ರತಿನಿತ್ಯ ಒಂದು ವಸತಿಶಾಲೆ ಅಥವಾ ನಿಲಯಗಳಿಗೆ ಭೇಟಿ ನೀಡಿ ಪರಿಶೀಲನಾ ವರದಿ ನೀಡುವಂತೆ ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಮಲ್ಲಿಕಾರ್ಜುನ್ ಅವರಿಗೆ ಸಚಿವ ಕೆ.ಹೆಚ್.ಮುನಿಯಪ್ಪ ತಾಕೀತು ಮಾಡಿದರು.

ಈ ಕುರಿತು ಇಲಾಖೆ ಆಯುಕ್ತರಿಂದ ಸುತ್ತೋಲೆ ಹೊರಡಿಸಲಾಗುವುದು. ವಸತಿಶಾಲೆ ಹಾಗೂ ನಿಲಯಗಳಲ್ಲಿ ಅಧಿಕಾರಿ ಪರಿಶೀಲಿಸಬೇಕಾದ ತಪಸೀಲು ಪಟ್ಟಿಯನ್ನು ಸಹ ಸತ್ತೋಲೆಯೊಂದಿಗೆ ನೀಡಲಾಗುವುದು. ವಸತಿ ನಿಲಯ ಅಥವಾ ಶಾಲೆ ಮುಖ್ಯಸ್ಥರಿಗೆ ಯಾವುದೇ ಸುಳಿವು ನೀಡದೆ, ಅನಿರೀಕ್ಷಿತವಾಗಿ ಭೇಟಿ ನೀಡಬೇಕು. ಕಡ್ಡಾಯವಾಗಿ ವಾರಕ್ಕೆ ಒಂದು ದಿನ ಜಿಲ್ಲಾಧಿಕಾರಿ ಹಾಗೂ ಸಿಇಓಗಳು ಸಹ ಪರಿಶೀಲನೆ ನಡೆಸಬೇಕು ಎಂದು ಸಚಿವ ಕೆ.ಹೆಚ್.ಮುನಿಯಪ್ಪ ಸೂಚಿಸಿದರು.

ಕುಡಿಯುವ ನೀರು ಸರಬರಾಜಿಗೆ ಅನುದಾನ:
ಐಮಂಗಲ ಬಹುಗ್ರಾಮ ಕುಡಿಯುವ ನೀರಿನ ಯೋಜನಯಿಂದ ವಸತಿ ಶಾಲೆ ನೀರು ಸರಬರಾಜು ಮಾಡಲು ವಿದ್ಯಾರ್ಥಿನಿಯರು ಮನವಿ ಮಾಡಿದರು. ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ ಸಚಿವ ಕೆ.ಹೆಚ್.ಮುನಿಯಪ್ಪನವರು ಪೈಪ್ ಲೈನ್ ಕಾಮಗಾರಿ ಯೋಜನಾ ವರದಿಯನ್ನು ಸಿದ್ದಪಡಿಸುವಂತೆ ಸಿಇಓ‌ಗೆ ಸೂಚಿಸಿದರು. ಕಾಮಗಾರಿ ತಗಲು ವೆಚ್ಚಕ್ಕೆ ಇಲಾಖೆಯಿಂದ ಅನುದಾನ ನೀಡುವುದಾಗಿ ತಿಳಿಸಿದರು. ಇದೇ ವೇಳೆ ವಸತಿ ಶಾಲೆಯ ಬೋದನಾ ಕೊಠಡಿ, ಪ್ರಯೋಗಾಲಯ, ಡಾರ್ಮೆಂಡರ್, ಭೋಜನಾಲಯಗಳಿಗೆ ಸಚಿವರು ಭೇಟಿ ನೀಡಿ ಪರಿಶೀಲಿಸಿದರು‌.

ಸೊಪ್ಪು ತರಕಾರಿ ತೊಳೆದು ಬಳಸಲು ಸಲಹೆ: ವಸತಿ ಶಾಲೆಯ ಅಡುಗೆ ಸಿಬ್ಬಂದಿಯೊಂದಿಗೆ ಸಂವಾದ ನಡೆಸಿದ ಸಚಿವ ಕೆ.ಹೆಚ್.ಮುನಿಯಪ್ಪನವರು, ಸೊಪ್ಪು ತರಕಾರಿಗಳನ್ನು ತಪ್ಪದೇ ನೀರಿನಲ್ಲಿ ತೊಳೆದು ಬಳಸುವಂತೆ ಸಲಹೆ ನೀಡಿದರು. ಊಟದ ಮೆನುವಿನ ಆಧರಿಸಿ ಮಕ್ಕಳಿಗೆ ಪೌಷ್ಠಿಕ ಆಹಾರ ನೀಡಬೇಕು. ಮೊಟ್ಟೆ,ಬಾಳೆಯನ್ನು ವಿತರಿಸಬೇಕು ಎಂದರು.

ಈ ವೇಳೆ ಬಹಳ ವರ್ಷಗಳಿಂದ ವಸತಿ ಶಾಲೆಯಲ್ಲಿ ಗುತ್ತಿಗೆ ಆಧಾರದಲ್ಲಿ ಕೆಲಸ ನಿರ್ವಹಿಸುತ್ತಿದ್ದು, ಖಾಯಂ ಗೊಳಿಸಲು ಅಡುಗೆ ಸಿಬ್ಬಂದಿ ಸಚಿವರಲ್ಲಿ ಮನವಿ ಮಾಡಿದರು.

ಇಲಾಖೆಯಲ್ಲಿನ ಖಾಯಂ ಅಡುಗೆ ಸಿಬ್ಬಂದಿಗೆ ಸೇವಾ ಹಿರಿತನದ ಆಧಾರದಲ್ಲಿ ಬಡ್ತಿ ನೀಡಲಾಗುತ್ತದೆ. ನಂತರ ಭರ್ತಿ ಮಾಡುವ ಹುದ್ದೆಗಳಲ್ಲಿ ಕ್ರೈಸ್ ಅಡಿ ಈಗಾಗಲೇ ಕೆಲಸ ಮಾಡುವ ಅಡುಗೆ ಸಿಬ್ಬಂದಿಗೆ ಆದ್ಯತೆ ನೀಡಲು ಪ್ರಯತ್ನಿಸುವುದಾಗಿ ಭರವಸೆ ನೀಡಿದರು.

ಪಿ.ಯು.ಶಿಕ್ಷಣ ಆರಂಭಕ್ಕೆ ಸಿದ್ದತೆಗೆ ಸೂಚನೆ:  ಸದ್ಯ ಇರುವ ವಸತಿ ಶಾಲೆಯ ಕಟ್ಟದ ಮೇಲ್ಬಾಗದಲ್ಲಿಯೇ ಇನ್ನಷ್ಟು ಕೊಠಡಿಗಳನ್ನು ನಿರ್ಮಿಸಿ ಪಿ.ಯು. ಶಿಕ್ಷಣ ಆರಂಭಿಸಲು ಯೋಜನೆಯೊಂದನ್ನು ಸಿದ್ದಪಿಡಿಸಿ ಇಲಾಖೆ ಪ್ರಸ್ತಾವನೆ ಸಲ್ಲಿಸುವಂತೆ ವಸತಿ ಶಾಲೆ ಪ್ರಾಂಶುಪಾಲರಿಗೆ ಸಚಿವ.ಕೆ.ಹೆಚ್.ಮುನಿಯಪ್ಪ ಸೂಚಿಸಿದರು. ವಸತಿ ಶಾಲೆಯ ಕಾರ್ಯವೈಖರಿಗೆ ಮೆಚ್ಚುಗೆ ಸೂಚಿಸಿದ ಅವರು, ಎಲ್ಲಾ ವಿದ್ಯಾರ್ಥಿಗಳನ್ನು ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣ ಮಾಡುವ ಗುರಿಯನ್ನು ಪ್ರಾಂಶುಪಾಲರಿಗೆ ನೀಡಿ, ಗಣ್ಯರ ಭೇಟಿ ಪುಸ್ತಕದಲ್ಲಿ ಸಹಿ ಮಾಡಿದರು. ಭೇಟಿ ನೆನಪಿಗಾಗಿ ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿ ಸಚಿವರೊಂದಿಗೆ ಪೋಟೋ ತೆಗೆಸಿಕೊಂಡರು.

ಈ ವೇಳೆ ಮಾಜಿ ಸಚಿವ ಹೆಚ್.ಆಂಜನೇಯ, ಮಾಜಿ ಸಂಸದ ಬಿ.ಎನ್.ಚಂದ್ರಪ್ಪ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಎಸ್.ಆಕಾಶ್, ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಮಲ್ಲಿಕಾರ್ಜುನ್, ವಸತಿ ಶಾಲೆ ಪ್ರಾಂಶುಪಾಲ ಆರ್.ರಮೇಶ್ ಸೇರಿದಂತೆ ಮತ್ತಿತರರು ಇದ್ದರು.

Author
ಸಿ.ಹೆಂಜಾರಪ್ಪ
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಸಾಪ ಮಾಜಿ ಜಿಲ್ಲಾಧ್ಯಕ್ಷ, ಶಿಕ್ಷಣತಜ್ಞ ಡಾ. ಕೆ.ಎಂ. ವೀರೇಶ್ ಹೃದಯಾಘಾತದಿಂದ ನಿಧನದುರ್ಗಕ್ಕೆ ಹರಿದು ಬಂದ ಭದ್ರೆ- ಸೆ.24ರಂದು ಮುಖ್ಯಮಂತ್ರಿಗಳಿಂದ ಗಂಗಾಪೂಜೆ,  ಬೃಹತ್ ಸಾರ್ವಜನಿಕ ಸಮಾರಂಭಆರ್.ಎಲ್ ಜಾಲಪ್ಪ ತಾಂತ್ರಿಕ ಮಹಾವಿದ್ಯಾಲಯದಲ್ಲಿ 22ನೇ ಘಟಿಕೋತ್ಸವ ಮತ್ತು ಪದವಿ ಪ್ರದಾನ ಕಾರ್ಯಕ್ರಮನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ ಬೈಕ್ ಸವಾರ ಸಾವುಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ಸರ್ವ ಸದಸ್ಯರ ವಾರ್ಷಿಕ ಸಭೆ ಹೋರಾಟಗಳಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಪ್ರಾತಿನಿಧ್ಯ ಕಡಿಮೆ- ಚಿಕ್ಕಪ್ಪನಹಳ್ಳಿ ಷಣ್ಮುಖಕುಂಚಿಟಿಗ ನೌಕರರ ಸಂಘಕ್ಕೆ ಸದಸ್ಯರಾಗಿ: ಎಸ್.ಕೆ ಲಕ್ಷ್ಮಣ್ಚಳವಳಿ ನೆನಪಾಗಿ ಉಳಿದ ‘ತೆಂಕ-ಬಡಗ’ಅಂತಾರಾಷ್ಟ್ರೀಯ ಶಾಂತಿ ದಿನ – ಮನದ ದ್ವೇಷ ಕರಗಿದಾಗಲೇ ಜಗದ ಶಾಂತಿ ಅರಳುವುದು!ಗಣಪತಿ ಮೆರವಣಿಗೆ ವೇಳೆ ಗಲಾಟೆ 7 ಯುವಕರ ವಿರುದ್ಧ ಸುಮೋಟೋ ಪ್ರಕರಣ ದಾಖಲು