Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Crime News

ಪಶು ವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಆರಂಭ - ಸಚಿವ ಕೆ. ವೆಂಕಟೇಶ್

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಸರ್ಕಾರವು ಪಶು ಸಂಗೋಪನೆ ಇಲಾಖೆಯಲ್ಲಿ ಖಾಲಿ ಇರುವ 400 ಪಶು ವೈದ್ಯಾಧಿಕಾರಿಗಳ ಹುದ್ದೆಗಳ ನೇಮಕಾತಿ ಪ್ರಕ್ರಿಗೆ ಚಾಲನೆ ನೀಡಿದೆ ಎಂದು ಪಶುಸಂಗೋಪನೆ ಮತ್ತು ರೇಷ್ಮೆ ಸಚಿವ ಕೆ. ವೆಂಕಟೇಶ್ ತಿಳಿಸಿದರು.


ಇಂದು ವಿಧಾನಸಭೆಯ ಪ್ರಶ್ನೋತ್ತರ ಕಲಾಪದವೇಳೆ ವಿಧಾನಸಭೆ ಶಾಸಕರಾದ ಸಿಮೆಂಟ್ ಮಂಜು ಅವರ  ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದ ಸಚಿವರು 400 ಪಶು ವೈದ್ಯಾಧಿಕಾರಿಗಳ ಖಾಯಂ ಹುದ್ದೆಗಳನ್ನು ನೇರ ನೇಮಕಾತಿ ಮುಖಾಂತರ ಭರ್ತಿ ಮಾಡಲು ಕರ್ನಾಟಕ ಲೋಕಸೇವಾ ಆಯೋಗದಿಂದ ನೇಮಕಾತಿ ಪ್ರಕ್ರಿಯೆಯನ್ನು ಆರಂಭಿಸಲಾಗಿದೆ ಎಂದು ತಿಳಿಸಿದರು.

ಸಕಲೇಶಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಪಶುವೈದ್ಯರು ಮತ್ತು ಸಿಬ್ಬಂದಿ ವರ್ಗದ ಹುದ್ದೆಗಳ ಕೊರತೆ ಇರುವುದು ಸರ್ಕಾರದ ಗಮನಕ್ಕೆ ಬಂದಿರುವುದರಿಂದಲೇ ಹೆಚ್ಚುವರಿಯಾಗಿ 400 ಪಶುವೈದ್ಯಾಧಿಕಾರಿ ಹುದ್ದೆಗಳನ್ನು ಹಾಗೂ 300 ಪಶುವೈದ್ಯಕೀಯ ಪರೀಕ್ಷಕರ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳುವ ಪ್ರಸ್ತಾವನೆಯನ್ನು ಆರ್ಥಿಕ ಇಲಾಖೆಗೆ ಕಳುಹಿಸಲಾಗಿತ್ತು. ಪ್ರಸ್ತಾವನೆಯು ಆರ್ಥಿಕ ಇಲಾಖೆಯ ಪರಿಶೀಲನೆ ಹಂತದಲ್ಲಿ ಇರುವುದಾಗಿ ತಿಳಿಸಿದರು.

ಹುದ್ದೆಗಳ ಕೊರತೆ ಇದ್ದರೂ ಕೂಡ ಪಶುವೈದ್ಯಕೀಯ ಸಂಸ್ಥೆಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅನುಗುಣವಾಗಿ ಲಭ್ಯವಿರುವ ಅಧಿಕಾರಿ ಮತ್ತು ಸಿಬ್ಬಂದಿಗಳನ್ನು ಅಧಿಕ ಪ್ರಭಾರದಲ್ಲಿರಿಸಿ, ರೈತರ ಜಾನುವಾರುಗಳಿಗೆ ಸಂಚಾರಿ ಪಶುಚಿಕಿತ್ಸಾಲಯ ವಾಹನದ (1962 ಸಹಾಯವಾಣಿ) ಸೌಲಭ್ಯದೊಂದಿಗೆ ರೈತರ ಮನೆ ಬಾಗಿಲಿಗೆ ತೆರಳಿ ಜಾನುವಾರುಗಳಿಗೆ ವಿಳಂಬವಾಗದಂತೆ ಚಿಕಿತ್ಸೆ ಸೌಲಭ್ಯವನ್ನು ಒದಗಿಸಲಾಗುತ್ತಿದೆ ಎಂದು ತಿಳಿಸಿದರು.

 

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಿಕ್ಷಣಕ್ಕೆ ಹೆಚ್ಚಿನ ಒತ್ತು ಕೊಡಬೇಕು : ಜಿಲ್ಲಾ ಉಸ್ತುವಾರಿ ಸಚಿವರು ಟಿ ರಘುಮೂರ್ತಿಸಾಂಸ್ಕೃತಿಕ ನೆಲೆಗಟ್ಟಿನ ಮೇಲೆ ಕಾಡುಗೊಲ್ಲರ ಬದುಕು - ಸಣ್ಣಚಿತ್ತಯ್ಯ ಸಾರ್ವಜನಿಕ ಗಣೇಶೋತ್ಸವಕ್ಕೆ ಹಂದರಗಂಭ ಪೂಜೆನೂತನ ಬಸ್ ನಿಲ್ದಾಣ ಲೋಕಾರ್ಪಣೆ ನೆರವೇರಿಸಿದ ಸಚಿವ ಟಿ.ರಘುಮೂರ್ತಿ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಅತ್ಯಾಧುನಿಕ ಕ್ರೀಡಾ ಸೌಲಭ್ಯಗಳ ಉದ್ಘಾಟನೆಬೆಳೆ ಸಮೀಕ್ಷೆದಾರರ ಬೇಡಿಕೆ ಈಡೇರಿಕೆಗೆ ಕ್ರಮ: ಸರ್ಕಾರದೊಂದಿಗೆ ಚರ್ಚಿಸುವ ಭರವಸೆ ನೀಡಿದ ಸಚಿವ ರಘುಮೂರ್ತಿದೇವಾಲಯ ನಿರ್ಮಾಣ ಪವಿತ್ರ ಕಾರ್ಯ - ಟಿ. ರಘುಮೂರ್ತಿಡಾ.ಹೇಮಂತರಾಜು ರವರ ನಾನು ನೀನು ಮತ್ತು ಸ್ಕಿಜೋಫ್ರೇನಿಯಾ ಕವನ ಸಂಕಲನ ಲೋಕಾರ್ಪಣೆಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಇತಿಹಾಸ ಬರೆದ ಭಾರತದ ಶೂಟಿಂಗ್ ತಾರೆ ಮನು ಭಾಕರ್ಪ್ಯಾರಾ ಕಾಮನ್‌ವೆಲ್ತ್‌ನಲ್ಲಿ ಪದಕ ಗೆದ್ದು ಇತಿಹಾಸ ಬರೆದ ಕೆ.ಎಸ್. ಶಿಲ್ಪಾ