Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸಿಸಿ ರಸ್ತೆ ಕಾಮಗಾರಿಗೆ ಚಾಲನೆ ನೀಡಿದ ಸಚಿವ ಕೆ.ಹೆಚ್ ಮುನಿಯಪ್ಪ

Advertisement
Advertisement

 ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಉಸ್ತುವಾರಿ ಮಂತ್ರಿಯಾಗಿದ್ದು
, ಜಿಲ್ಲೆಯ ಎಲ್ಲಾ ವಿಧಾನಸಭಾ ಕ್ಷೇತಗಳ ಸರ್ವಾಂಗೀಣ ಅಭಿವೃದ್ಧಿಗಳಿಗೆ ಒತ್ತು ನೀಡಲು ಬದ್ಧನಿದ್ದೇನೆ ಎಂದು ಆಹಾರ ನಾಗರೀಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಸಚಿವರು ಮತ್ತು ಬೆಂಗಳೂರು ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್.ಮುನಿಯಪ್ಪ ಅವರು ಹೇಳಿದರು.

ದೊಡ್ಡಬಳ್ಳಾಪುರ ತಾಲ್ಲೂಕಿನ ಶಿರವಾರ ಗ್ರಾಮದಲ್ಲಿ 01 ಕೋಟಿ ರೂ. ವೆಚ್ಚದಲ್ಲಿ ಸಿಸಿ ರಸ್ತೆ ಹಾಗೂ ಚರಂಡಿ ನಿರ್ಮಾಣ ಕಾಮಗಾರಿಯ ಶಂಕುಸ್ಥಾಪನೆ ನೆರವೇರಿಸಿ, ಅವರು ಮಾತನಾಡಿ ದೇವನಹಳ್ಳಿ ವಿಧಾನಸಭಾ ಕ್ಷೇತ್ರದ ದೊಡ್ಡಬಳ್ಳಾಪುರ ವ್ಯಾಪ್ತಿಯಲ್ಲಿ ನಿವೇಶನ ರಹಿತ ಬಡ ಕುಟುಂಬಗಳಿಗೆ 500 ನಿವೇಶನ ಹಂಚಿಕೆ ಸಂಬಂಧ ಕಾರ್ಯ ಪ್ರಗತಿಯಲ್ಲಿದ್ದು, ಇದೇ ತಿಂಗಳ ಅಂತ್ಯ ಅಥವಾ ಜೂನ್ ತಿಂಗಳಲ್ಲಿ ನಿವೇಶನ ವಿತರಣೆ ಮಾಡಲಾಗುವುದು.

ನಮ್ಮ ಸರ್ಕಾರವು ಹಸಿವಿನಿಂದ ಯಾರೊಬ್ಬರು ಮಲಗಬಾರದು ಎಂದು ಅನ್ನಭಾಗ್ಯ ಯೋಜನೆಯಡಿ  ಪಡಿತರ ಅಕ್ಕಿ ವಿತರಿಸಿ ಹಸಿವು ನೀಗಿಸುವ ಕೆಲಸ ಮಾಡುತ್ತಿದೆ. ಪಂಚ ಗ್ಯಾರಂಟಿಗಳ ಮೂಲಕ ಸರ್ಕಾರ ಮಹತ್ತರ ಬದಲಾವಣೆಗೆ ಹೆಜ್ಜೆ ಇಟ್ಟಿದೆ ಎಂದು ಹೇಳಿದರು.

2028 ಕ್ಕೆ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ:
ಮುಂಬರುವ 2028 ರ ವಿಧಾನಸಭಾ ಚುನಾವಣೆಯಲ್ಲಿ ಮತದಾರರು ಕಾಂಗ್ರೆಸ್ ಪಕ್ಷಕ್ಕೆ ಹೆಚ್ಚಿನ ಬಹುಮತ ನೀಡಿ
, ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್ ಸರ್ಕಾರಕ್ಕೆ ಅವಕಾಶ ನೀಡುವ ವಿಶ್ವಾಸವಿದೆ.

ಶಿರವಾರ ಗ್ರಾಮದಲ್ಲಿನ ಇನ್ನುಳಿದ ರಸ್ತೆ, ಚರಂಡಿ, ನಿವೇಶನ ಹಕ್ಕು ಪತ್ರ ಸಮಸ್ಯೆ, ಕನಕ ಭವನ ನಿರ್ಮಾಣ ಸೇರಿದಂತೆ ಸಾರ್ವಜನಿಕರ ಸಮಸ್ಯೆಗಳಿಗೆ ಹಂತ ಹಂತವಾಗಿ ಪರಿಹರಿಸಲಾಗುವುದು ಎಂದರು.

ಶಿರವಾರ ಗ್ರಾಮಸ್ಥರಿಗೆ ಅದೇ ಗ್ರಾಮದಲ್ಲಿ ಪಡಿತರ ಅಕ್ಕಿ ವಿತರಿಸಲಾಗುವುದು. ಸಾರ್ವಜನಿಕರ ಸಮಸ್ಯೆಗಳಿಗೆ ಶೀಘ್ರ ಸ್ಪಂದಿಸುವ ಜತೆಗೆ ಅವರ ಕೆಲಸ ಕಾರ್ಯಗಳು ಮಾಡಿಕೊಡಲು ಅಧಿಕಾರಿಗಳಿಗೆ ಸಚಿವರು ಸೂಚಿಸಿದರಲ್ಲದೇ, ತಮ್ಮ ಜಿಲ್ಲಾ ಪ್ರವಾಸದ ವೇಳೆ ಎಲ್ಲಾ ಇಲಾಖೆ ಅಧಿಕಾರಿಗಳು ಕಡ್ಡಾಯವಾಗಿ ಉಪಸ್ಥಿತರಿರಬೇಕು. ಆಗ ಸಾರ್ವಜನಿಕರ ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ ಕಂಡುಕೊಳ್ಳಲು ಅನುಕೂಲವಾಗುತ್ತದೆ ಎಂದು ತಹಶೀಲ್ದಾರ್ ಅವರಿಗೆ ಸೂಚಿಸಿದರು.

 ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಬಿ.ರಾಜಣ್ಣ ಮಾತನಾಡಿ, ರಾಜ್ಯ ಸರ್ಕಾರ ಪಂಚ ಗ್ಯಾರಂಟಿಗಳ ಮೂಲಕ ಜನರ ಅಭಿವೃದ್ಧಿ ಹಾಗೂ ಕಲ್ಯಾಣಕ್ಕಾಗಿ ಶ್ರಮಿಸುತ್ತಿದೆ. ಜಿಲ್ಲೆಯ ತೂಬಗೇರೆ ಹೋಬಳಿ ವ್ಯಾಪ್ತಿಯಲ್ಲಿ ಸಚಿವರು 25 ಕೋಟಿ ರೂ. ವೆಚ್ಚದ ಅಭಿವೃದ್ಧಿ ಕಾಮಗಾರಿ ಅಷ್ಟೇ ಅಲ್ಲದೇ ಈ ಭಾಗಕ್ಕೆ ವೃಷಭಾವತಿ ನೀರು ತರಲಾಗುತ್ತಿದ್ದು, ಇದರಿಂದ ಜಮೀನಿನಲ್ಲಿ ಬೋರ್ವೆಲ್ ಗಳ ಅಂತರ್ಜಲ ಮಟ್ಟವನ್ನು ವೃದ್ದಿಯಾಗಲು  ಶ್ರಮಿಸುತ್ತಿದ್ದಾರೆ ಎಂದರು.

ಕಾರ್ಯಕ್ರಮದಲ್ಲಿ ಬಯಪ ಸದಸ್ಯರಾದ ಪ್ರಸನ್ನಕುಮಾರ್, ಕೆಪಿಸಿಸಿ ಸದಸ್ಯರಾದ ಮುನಿರಾಜು, ತೂಬಗೆರೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರವಿಸಿದ್ಧಪ್ಪ, ವಿವಿಧ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು, ಘಾಟಿ ಸುಬ್ರಮಣ್ಯ ದೇವಸ್ಥಾನ ಅಭಿವೃದ್ದಿ ಪ್ರಾಧಿಕಾರದ ಸದಸ್ಯರು, ದೊಡ್ಡಬಳ್ಳಾಪುರ ತಹಶೀಲ್ದಾರ್ ಮಲ್ಲಪ್ಪ, ಹಣಬೆ ಗ್ರಾಪಂ ಪಿಡಿಒ ಸೌಮ್ಯ ಸೇರಿದಂತೆ ಗ್ರಾಮಸ್ಥರು ಉಪಸ್ಥಿತರಿದ್ದರು.

 

 

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಾಲಮಸ್ಸೇರಿ ಹೆಚ್‌ಎಂಟಿ ಘಟಕಕ್ಕೆ ಕೇಂದ್ರ ಸಚಿವ ಕುಮಾರಸ್ವಾಮಿ ಭೇಟಿ ಪರಿಶೀಲನೆತುಷ್ಟೀಕರಣದ ಮಿತಿ ಮೀರಿದ ಕಾಂಗ್ರೆಸ್: ಗಲಭೆ ಪ್ರಕರಣಗಳ ವಾಪಸಾತಿ ವಿರುದ್ಧ ವಿಜಯೇಂದ್ರಲೆಕ್ಕ ಕೊಡಿ ಸಿದ್ದರಾಮಣ್ಣ!: ಗೃಹಲಕ್ಷ್ಮಿ ಯೋಜನೆಯ 5,000 ಕೋಟಿ ಹಣ ಎಲ್ಲಿದೆ? ನಿಖಿಲ್ ಕುಮಾರಸ್ವಾಮಿ ಪ್ರಶ್ನೆವೈಮಾನಿಕ ಮತ್ತು ರಕ್ಷಣಾ ಕ್ಷೇತ್ರದ ಉತ್ಪಾದನೆಗೆ ಕರ್ನಾಟಕವೇ ನೆಚ್ಚಿನ ತಾಣ: ಸಚಿವ ಎಂ.ಬಿ. ಪಾಟೀಲ್ಸರಕಾರಿ ಜಾಗಕ್ಕೆ 12 ಕೋಟಿ, ರೈತರ ಜಮೀನಿಗೆ ಕೇವಲ 2 ಕೋಟಿ!: ​ಗೃಹಲಕ್ಷ್ಮಿಯರ 2 ತಿಂಗಳ ಕಂತಿನ 5,000 ಕೋಟಿ ಹಣ ಏನಾಯ್ತು?: ನಿಖಿಲ್ ಆಕ್ರೋಶರೈತರ ಒಕ್ಕಲೆಬ್ಬಿಸುವಿಕೆ ನಿಲ್ಲಿಸಿ, ಖಾಸಗಿ ಕಂಪನಿಗಳಲ್ಲಿ ಸ್ಥಳೀಯರಿಗೆ 50% ಉದ್ಯೋಗ ಕಡ್ಡಾಯಗೊಳಿಸಿ: ನಿಖಿಲ್ಪುಲ್ವಾಮಾ ದಾಳಿಯ ಮಾಸ್ಟರ್‌ ಮೈಂಡ್, ಉಗ್ರ ಹಮ್ಜಾ ಬುರ್ಹಾನ್ ಹತ್ಯೆ: ಬಿಜೆಪಿ ನಾಯಕ ಸಿ.ಟಿ. ರವಿ ಪ್ರತಿಕ್ರಿಯೆರೌಡಿಶೀಟರ್, ಮುಸ್ಲಿಂ ಗೂಂಡಾಗಳ ಕೇಸ್ ವಾಪಸ್; ಸರ್ಕಾರದ ವಿರುದ್ಧ ಸಿ.ಟಿ. ರವಿ ಆಕ್ರೋಶಗರ್ಭಿಣಿಯರು, ಬಾಣಂತಿಯರಿಗೆ ನಿತ್ಯ ಪೌಷ್ಠಿಕ ಬಿಸಿಯೂಟ!​- ಡಾ. ಪ್ರಭಾ