Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವಿದ್ಯಾರ್ಥಿಗಳು ಶಿಕ್ಷಣದ ಜತೆಗೆ ಸಾಂಸ್ಕೃತಿಕ ರಾಯಬಾರಿಗಳಾಗಿ: ಸಚಿವ ಮಧು ಬಂಗಾರಪ್ಪ

Advertisement
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ವಿದ್ಯಾರ್ಥಿಗಳು ತಮ್ಮ ಶಿಕ್ಷಣದ ಜತೆಗೆ ದೇಶದ, ರಾಜ್ಯದ ಸಾಂಸ್ಕøತಿಕ ರಾಯಬಾರಿಗಳಾಗಿ ಕಲೆ, ಸಂಸ್ಕøತಿಯನ್ನು ಮುಂದಿನ ಪೀಳಿಗೆಗೆ ಕೊಂಡ್ಯೊಯುವ ಕೆಲಸ ಮಾಡಬೇಕು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ವಿದ್ಯಾರ್ಥಿಗಳಿಗೆ ಕರೆ ನೀಡಿದರು.

ನಗರದ ಮುರುಘರಾಜೇಂದ್ರ ಬೃಹನ್ಮಠದ ಅನುಭವ ಮಂಟಪದಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಎರಡು ದಿನಗಳ ರಾಜ್ಯ ಮಟ್ಟದ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ಕಾರ್ಯಕ್ರಮಕ್ಕೆ ಸರ್ಕಾರದಿಂದ  ಹೆಚ್ಚಿನ ಅನುದಾನ ಕೊಡುವುದಿಲ್ಲ. ಕುರಿತು ಮುಖ್ಯಮಂತ್ರಿಗಳ ಜತೆ ಚರ್ಚಿಸಿದ್ದು, ಶಿಕ್ಷಣಕ್ಕೆ ಪೂರಕವಾಗಿ ಕಲೆ ಮತ್ತು ಸಂಸ್ಕøತಿಯನ್ನು ಮುಂದಿನ ಪೀಳಿಗೆಗೆ ಪರಿಚಯಿಸುವ ನಿಟ್ಟಿನಲ್ಲಿ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ ಕಾರ್ಯಕ್ರಮಕ್ಕೆ ಹೆಚ್ಚಿನ ಅನುದಾನಕ್ಕಾಗಿ ಪ್ರಸ್ತಾವ ಸಲ್ಲಿಸಿದ್ದು, ಮುಂದಿನ ದಿನಗಳಲ್ಲಿ ಹೆಚ್ಚಿನ ಅನುದಾನ ದೊರೆಯುವ ಸಾಧ್ಯತೆ ಇದೆ ಎಂದು ಸಚಿವರು ವಿಶ್ವಾಸ ವ್ಯಕ್ತಪಡಿಸಿದರು.

ಅತಿ ಹೆಚ್ಚು ಸಂಸ್ಕೃತಿ, ಕಲೆ, ವಿಭಿನ್ನವಾದ ಭಾಷೆ ಇದ್ದರೂ ಒಂದೇ ನೆಲದಲ್ಲಿ ಬಾಳುವ ದೇಶ ಭಾರತ. ಶಿಕ್ಷಣದ ಜತೆಗೆ ಕಲೆ, ನಮ್ಮ ಶ್ರೀಮಂತ ಸಂಸ್ಕೃತಿಯನ್ನು ಮುಂದಿನ ಪೀಳಿಗೆಗೆ ಕೊಂಡ್ಯೊಯುವ ಕೆಲಸ ಮಾಡಬೇಕು.  ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ ಕಾರ್ಯಕ್ರಮಗಳು ಇದಕ್ಕೆ ಸಹಕಾರಿಯಾಗಿವೆ ಎಂದು ಹೇಳಿದರು.

ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ಕಾರ್ಯಕ್ರಮದಡಿ ಕ್ಲಸ್ಟರ್ ಮಟ್ಟ, ತಾಲ್ಲೂಕು ಹಾಗೂ ಜಿಲ್ಲಾ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದು, ರಾಜ್ಯ ಮಟ್ಟಕ್ಕೆ ಆಯ್ಕೆಯಾದ ಸುಮಾರು 1200 ಕ್ಕೂ ಹೆಚ್ಚು ಮಕ್ಕಳು ಕಾರ್ಯಕ್ರಮದಲ್ಲಿ ಪಾಲ್ಗೊಂಡಿರುವುದು ಸಂತಸ ತಂದಿದೆ. ಶಿಕ್ಷಣ, ಕಲೆ, ಸಂಸ್ಕøತಿ ಇವುಗಳಲ್ಲಿ ನೆಂಟಸ್ಥಿಕೆ ಇರುವುದನ್ನು ಕಾಣಬಹುದಾಗಿದೆ. ಶಿಕ್ಷಣದಿಂದ ಕಲೆ, ಸಂಸ್ಕøತಿಯು ಬೆಳೆಯಲಿದೆ. ಹಾಗಾಗಿ ಶಿಕ್ಷಣಕ್ಕೆ ಹೆಚ್ಚಿನ ಒತ್ತು ಕೊಡುವ ಕೆಲಸ ಮಾಡಬೇಕಾಗುತ್ತದೆ ಎಂದರು.

15 ಸಾವಿರ ಶಿಕ್ಷಕರ ನೇಮಕಕ್ಕೆ ಕ್ರಮ:
ಶಿಕ್ಷಣ ಇಲಾಖೆಗೆ ಈಗಾಗಲೇ 13 ಸಾವಿರ ಶಿಕ್ಷಕರ ನೇಮಕಾತಿ ಮಾಡಿಕೊಳ್ಳಲಾಗಿದ್ದು, ಹೊಸದಾಗಿ 15 ಸಾವಿರ ಶಿಕ್ಷಕರ ನೇಮಕಕ್ಕೆ ಕ್ರಮ ಕೈಗೊಳ್ಳಲಾಗುವುದು. ಇದರ ಜೊತೆಗೆ ಅನುದಾನಿತ ಶಾಲೆಗೆ ಶಿಕ್ಷಕರ ನೇಮಕಾತಿ ಪ್ರಕ್ರಿಯೆಗೆ ಚಾಲನೆ ದೊರೆಯಲಿದೆ. ಕಲ್ಯಾಣ ಕರ್ನಾಟಕ ಭಾಗದಲ್ಲಿ ಖಾಲಿ ಇರುವ ಶಿಕ್ಷಕ ಹುದ್ದೆಗಳಲ್ಲಿ ಶೇ.80 ರಷ್ಟು ಶಿಕ್ಷಕರನ್ನು ಆದಷ್ಟು ಶೀಘ್ರ ನೇಮಕಾತಿ ಮಾಡಿ, ಶಿಕ್ಷಣವನ್ನು ಮೇಲ್ದರ್ಜೆಗೆ ಕೊಂಡ್ಯೊಯುವ ಕೆಲಸ ಮಾಡಲಾಗುವುದು ಎಂದು ತಿಳಿಸಿದ ಅವರು, ದ್ವಿತೀಯ ಪಿಯು ಪೂರೈಸಿದ ಮಕ್ಕಳು ನೀಟ್, ಸಿಇಟಿ ಪರೀಕ್ಷೆಗಾಗಿ ಕೋಚಿಂಗ್ ತರಗತಿಗಳಿಗೆ ಹೋಗಬೇಕಾಗುತ್ತದೆ. ಕೋಚಿಂಗ್ಗಾಗಿ ಸುಮಾರು 4 ರಿಂದ 5 ಲಕ್ಷದವರೆಗೆ ಶುಲ್ಕ ಪಾವತಿಸಬೇಕಾಗುತ್ತದೆ. ಹಿನ್ನಲೆಯಲ್ಲಿ ದೇಶದಲ್ಲಿಯೇ ಪ್ರಥಮ ಬಾರಿಗೆ ನಮ್ಮ ರಾಜ್ಯದಲ್ಲಿ ಸುಮಾರು 25 ಸಾವಿರ ಮಕ್ಕಳಿಗೆ ನೀಟ್, ಸಿಇಟಿ ಸೇರಿದಂತೆ ವೃತ್ತಿಪರ ಕೋರ್ಸ್ಗಳಿಗೆ ಉಚಿತವಾಗಿ ತರಬೇತಿ ನೀಡುವ ಕಾರ್ಯಕ್ರಮವನ್ನು ಈಗಾಗಲೇ ಅನುಷ್ಠಾನಗೊಳಿಸಲಾಗಿದೆ ಎಂದು ಹೇಳಿದರು.

8, 9 ಹಾಗೂ 10ನೇ ತರಗತಿಯ ಮಕ್ಕಳಿಗೆ ಸ್ಕಿಲ್ ಅಟ್ ಸ್ಕೂಲ್ಎಂಬ ಕಾರ್ಯಕ್ರಮವನ್ನು ಇದೇ ಮೊದಲಬಾರಿಗೆ ಪ್ರಾರಂಭ ಮಾಡಲಾಗುವುದು. ಇದರಿಂದ ಕಲಿಕೆಯ ಜೊತೆಗೆ ಪ್ರಾಯೋಗಿಕ ಜ್ಞಾನ ಪಡೆಯಬಹುದಾಗಿದೆ. ಕರ್ನಾಟಕ ಪಬ್ಲಿಕ್ ಶಾಲೆಗಳಲ್ಲಿ ಸಂಗೀತ, ಕಲೆ ಶಿಕ್ಷಕರ ನೇಮಕ ಮಾಡಿಕೊಳ್ಳಲು ನಿರ್ಧರಿಸಲಾಗಿದ್ದು, ಮೊದಲ ಹಂತದಲ್ಲಿ ಕರ್ನಾಟಕ ಪಬ್ಲಿಕ್ ಶಾಲೆಗಳಿಗೆ ನೇಮಕ ಮಾಡಿ, ಮುಂದಿನ ದಿನಗಳಲ್ಲಿ ಆರ್ಥಿಕ ವ್ಯವಸ್ಥೆ ನೋಡಿಕೊಂಡು, ಉಳಿದ ಶಾಲೆಗಳಿಗೂ ನೇಮಕ ಮಾಡಿಕೊಳ್ಳಲು ಕ್ರಮ ಕೈಗೊಳ್ಳಲಾಗುವುದು.



ವಿಧಾನ ಪರಿಷತ್ ಸದಸ್ಯ ಡಿ.ಟಿ.ಶ್ರೀನಿವಾಸ್ ಮಾತನಾಡಿ, ವೈವಿದ್ಯಮಯದಲ್ಲಿ ಏಕತೆ ಕಾಪಾಡಲಿಕ್ಕೆ ಸಂವಿಧಾನ ಅವಕಾಶ ಕಲ್ಪಿಸಿಕೊಟ್ಟಿದೆ. ಮಕ್ಕಳ ಪ್ರತಿಭೆ ಅನಾವರಣಕ್ಕೆ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ಉತ್ತಮ ವೇದಿಕೆಯಾಗಿದೆ ಎಂದರು.

 ಅತೀ ಶೀಘ್ರದಲ್ಲಿಯೇ ಅನುದಾನಿತ ಶಾಲೆಗಳ ಹುದ್ದೆಗಳ ಭರ್ತಿಗೆ ಅಗತ್ಯ ಕ್ರಮ ವಹಿಸಲಾಗಿದೆ. ಒಪಿಎಸ್ಗೆ ಸಂಬಂಧಿಸಿದಂತೆ ಇತರೆ ರಾಜ್ಯಗಳಲ್ಲಿ ಅಳವಡಿಸಿಕೊಂಡಿರುವ ವಿಧಾನಗಳನ್ನು ಪರಿಶೀಲಿಸಿ ನಮ್ಮ ರಾಜ್ಯದಲ್ಲಿ ಜಾರಿಗೊಳಿಸಿ ಶಿಕ್ಷಕರ ನೆಮ್ಮದಿಯ ಜೀವನಕ್ಕೆ ಅವಕಾಶ ಮಾಡಿಕೊಡಬೇಕು. 12 ರಿಂದ 13 ವರ್ಷಗಳ ಕಾಲ ಅತಿಥಿ ಶಿಕ್ಷಕರಾಗಿ ಕಾರ್ಯನಿರ್ವಹಿಸಿದವರು ಅವಕಾಶದಿಂದ ವಂಚಿತರಾಗುತ್ತಿದ್ದಾರೆ. ಹಾಗಾಗಿ ಅವರಿಗೆ ಅನ್ಯಾಯವಾಗದ ರೀತಿಯಲ್ಲಿ ಸರ್ಕಾರದ ವತಿಯಿಂದ ನಿಯಮ ರೂಪಿಸುವಾಗ ಅವರಿಗೆ ಪೂರಕವಾಗಿರಬೇಕು.  ಖಾಸಗಿ ಶಾಲೆಗಳ ನವೀಕರಣ ಪ್ರಕ್ರಿಯೆ ಕುರಿತು ಸಾಕಷ್ಟು ದೂರುಗಳು ಕೇಳಿಬರುತ್ತಿವೆ.  ವಿದ್ಯಾ ಸಂಸ್ಥೆಗಳ ಮಾಲೀಕರು, ಶಿಕ್ಷಕರನ್ನು ಕಚೇರಿಗೆ ಅಲೆದಾಡಿಸುವ ಕಾರ್ಯ ಸಲ್ಲದು ಎಂದರು.

ಹೊಸದುರ್ಗ ಶಾಸಕ ಬಿ.ಜಿ.ಗೋವಿಂದಪ್ಪ ಅವರು ಮಾತನಾಡಿ, ರಾಜ್ಯದ ವಿವಿಧ ಭಾಗಗಳಿಂದ ತಮ್ಮ ಪ್ರತಿಭೆಯನ್ನು ಅನಾವರಣಗೊಳಿಸಲು ಕೋಟೆಯ ನಾಡು ಚಿತ್ರದುರ್ಗ ಜಿಲ್ಲೆಗೆ ಆಗಮಿಸಿರುವುದು ಸಂತಸ ತಂದಿದೆ.  ಮಕ್ಕಳು ತಮ್ಮ ಪ್ರತಿಭೆ ಪ್ರದರ್ಶಿಸಲು ಇಂತಹ ಕಾರ್ಯಕ್ರಮಗಳು ಉತ್ತಮ ವೇದಿಕೆಯಾಗಿವೆ ಎಂದರು.

      ಮುರುಘಾಮಠದ ಆಡಳಿತ ಮಂಡಳಿ ಸದಸ್ಯ ಡಾ.ಬಸವಕುಮಾರ ಸ್ವಾಮೀಜಿ ಮಾತನಾಡಿ, ಪ್ರತಿಯೊಂದು ಮಗುವಿಗೆ ಸಾಂಸ್ಕøತಿಕ ಜಗತ್ತು ಇದೆ. ಪ್ರತಿಭೆ ಅನಾವರಣ ನಮ್ಮೆಲ್ಲರ ಜವಾಬ್ದಾರಿಯಾಗಿದೆ. ಶಿಕ್ಷಣ ಕ್ಷೇತ್ರದಲ್ಲಿ ಕ್ರಾಂತಿಯಾದರೆ ಉಳಿದ ಎಲ್ಲ ಕ್ಷೇತ್ರಗಳು ಸಹ ಸುಧಾರಣೆ ಆಗಲು ಸಾಧ್ಯವಾಗಲಿದೆ. ಪ್ರತಿಭಾವಂತರಿಗೆ ಅವಕಾಶ ಬೇಕು. ರಾಜ್ಯದ ಸುಮಾರು 25 ಸಾವಿರ ಮಕ್ಕಳಿಗೆ ನೀಟ್, ಸಿಇಟಿ ಸೇರಿದಂತೆ ವೃತ್ತಿಪರ ಕೋರ್ಸ್ಗಳಿಗೆ ಉಚಿತವಾಗಿ ತರಬೇತಿ ನೀಡುವ ಕಾರ್ಯಕ್ರಮವನ್ನು 2 ರಿಂದ 3 ಲಕ್ಷ ವಿದ್ಯಾರ್ಥಿಗಳಿಗೆ ಅವಕಾಶ ನೀಡಬೇಕು. ಉನ್ನತ ಶಿಕ್ಷಣದಲ್ಲಿ ಸರ್ಕಾರಿ ಶಾಲೆ ಮಕ್ಕಳಿಗೆ ಹೆಚ್ಚಿನ ಸೀಟು ಹಂಚಿಕೆಯಾಗುವಂತಾಗಬೇಕು ಎಂದು ಸಲಹೆ ನೀಡಿದರು.

ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯರಾದ ಕೆ.ಎಸ್.ನವೀನ್, ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಎಂ.ಕೆ.ತಾಜ್ಪೀರ್, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಆರ್. ಶಿವಣ್ಣ, ಜಿಲ್ಲಾಧಿಕಾರಿ ಟಿ.ವೆಂಕಟೇಶ್, ಜಿ.ಪಂ ಸಿಇಒ ಎಸ್.ಜೆ.ಸೋಮಶೇಖರ್, ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಕುಮಾರಸ್ವಾಮಿ, ಡಿಡಿಪಿಯು ಪುಟ್ಟಸ್ವಾಮಿ, ಡಯಟ್ ಪ್ರಾಂಶುಪಾಲ ನಾಸಿರುದ್ದೀನ್ ಸೇರಿದಂತೆ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಇದ್ದರು.

ಡಿವೈಪಿಸಿ ವೆಂಕಟೇಶ್ ನೇತೃತ್ವದಲ್ಲಿ ಮಠದ ಕುರುಬರಹಟ್ಟಿ ಶಾಲೆಯ ಮಕ್ಕಳು ಸಂವಿಧಾನದ ಪೀಠಿಕೆಯನ್ನು ಇದೇ ಸಂದರ್ಭಧಲ್ಲಿ ವಾಚಿಸಿದರು.  ರಾಜ್ಯ ಮಟ್ಟದ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ ಅಂಗವಾಗಿ ವಿವಿಧ ಶಾಲೆಗಳ ಮಕ್ಕಳು ವೈವಿಧ್ಯಮಯ ಸಾಂಸ್ಕೃತಿಕ ಕಲೆಯನ್ನು ಇದೇ ವೇಳೆ ಪ್ರದರ್ಶಿಸಿ, ಮೆಚ್ಚುಗೆಗೆ ಪಾತ್ರರಾದರು.

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ