Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Crime News

ಆರು ಲಕ್ಷ ಜನರಿಗೆ ಉದ್ಯೋಗವಕಾಶ ಲಭಿಸಲಿದೆ-ಸಚಿವ ಎಂ.ಬಿ. ಪಾಟೀಲ್

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಇನ್ವೆಸ್ಟ್ ಕರ್ನಾಟಕ – 2025ರ ಸಮಾವೇಶದಲ್ಲಿ ಒಡಂಬಡಿಕೆ ಮಾಡಿಕೊಂಡಿರುವ ಹಾಗೂ ಅನುಮೋದನೆ ಪಡೆದಿರುವ ಯೋಜನೆಗಳಿಂದ ಅಂದಾಜು 6 ಲಕ್ಷ ಜನರಿಗೆ ಉದ್ಯೋಗ ದೊರೆಯಲಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವರಾದ ಎಂ.ಬಿ. ಪಾಟೀಲ್ ಅವರು ತಿಳಿಸಿದರು.


ಇಂದು ವಿಧಾನ ಪರಿಷತ್ತಿನ ಪ್ರಶ್ನೋತ್ತರ ಕಲಾಪದ ವೇಳೆ ವಿಧಾನ ಪರಿಷತ್ ಸದಸ್ಯ ಎಸ್.ವಿ ಸಂಕನೂರ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದ ಸಚಿವರು, ಇನ್ವೆಸ್ಟ್ ಕರ್ನಾಟಕ – 2025ರ ಸಮಾವೇಶವನ್ನು  ರೂ 90.00 ಕೋಟಿಗಳ ವೆಚ್ಚದಲ್ಲಿ ಆಯೋಜಿಸಲು ಸರ್ಕಾರವು ಅನುಮೋದನೆ ನೀಡಿರುತ್ತದೆ. ಇದರಲ್ಲಿ ಇಲ್ಲಿಯವರೆಗೆ ರೂ 75.00 ಕೋಟಿ ಅನುದಾನವನ್ನು ಬಿಡುಗಡೆ ಮಾಡಲಾಗಿರುತ್ತದೆ. ಸಮಾವೇಶವು ಇತ್ತಿಚೆಗೆ ಫೆಬ್ರವರಿ 14ರಂದು ಮುಕ್ತಾವಾಗಿದ್ದು, ಸಮಾವೇಶಕ್ಕಾಗಿ ತಗುಲಿದ ವಾಸ್ತವಿಕ ವೆಚ್ಚದ ವಿವರಗಳನ್ನು ಕ್ರೋಢೀಕರಿಸಲಾಗುತ್ತಿದ್ದು, ಅಂತಿಮ ಹಂತದಲ್ಲಿದೆ ಎಂದು ತಿಳಿಸಿದರು.

ಸಮಾವೇಶದಲ್ಲಿ ಒಟ್ಟು 3250 ಉದ್ದಿಮೆದಾರರು ಭಾಗವಹಿಸಿದ್ದು, ವಿವಿಧ ರಾಜ್ಯಗಳಿಂದ 266, ವಿದೇಶಗಳಿಂದ 72, ಕರ್ನಾಟಕ ರಾಜ್ಯದಿಂದ 2892 ಉದ್ದಿಮೆದಾರರು ಭಾಗವಹಿಸಿದ್ದರು. ಒಟ್ಟು 98 ಕಂಪನಿಗಳೊಂದಿಗೆ ಒಡಂಬಡಿಕೆಗಳಾಗಿವೆ. ಅವುಗಳ ಹೂಡಿಕೆಯು ರೂ. 6,23,970 ಕೋಟಿಯಾಗಲಿದೆ. ಅಲ್ಲದೆ, ರೂ. 4,03,533 ಕೋಟಿ ಬಂಡವಾಳ ಹೂಡಿಕೆ ಮಾಡಲು 1101 ಕಂಪನಿಗಳು ಸಂಬಂಧಿಸಿದ ಸಮಿತಿಗಳಿಂದ ಅನುಮೋದನೆ ಪಡೆದಿರುತ್ತಾರೆ ಎಂದು ತಿಳಿಸಿದರು.

ಈ ಹಿಂದೆ ನಡೆದ ಇನ್ವೆಸ್ಟ್ ಕರ್ನಾಟಕ - 2022ರ ಸಮಾವೇಶದಲ್ಲಿ ಉದ್ಯಮ ಪ್ರಾರಂಭಿಸಲು 57 ಕಂಪನಿಗಳೊಂದಿಗೆ ಒಟ್ಟು 5,41,696/- ಕೋಟಿ ಬಂಡವಾಳ ಹೂಡಲು ಒಪ್ಪಂದಗಳಿಗೆ ಸಹಿ ಮಾಡಲಾಗಿತ್ತು. ಸದರಿ 57 ಕಂಪನಿಗಳಲ್ಲಿ ಏಕಗವಾಕ್ಷಿ ಅನುಮೋದನಾ ಸಮಿತಿ ಸಭೆಯಲ್ಲಿ ಒಟ್ಟು 20 ಕಂಪನಿಗಳಿಗೆ ಅನುಮೋದನೆ ನೀಡಲಾಗಿದ್ದು, ಈ ಪ್ರಸ್ತಾವಗಳಿಂದ ಒಟ್ಟು ರೂ. 2,01,167 ಕೋಟಿ ಬಂಡವಾಳ ಹೂಡಿಕೆಯಾಗಲಿದೆ ಹಾಗೂ 70,740 ಉದ್ಯೋಗ ಸೃಜನೆಯಾಗಲಿದೆ ಇವುಗಳಲ್ಲಿ 2 ಯೋಜನೆಗಳು ಅನುಷ್ಠಾನಗೊಂಡಿರುತ್ತದೆ. ಮುಂದುವರೆದು ಈ ಸಮಾವೇಶದ ಸಮಯದಲ್ಲಿ 606 ಯೋಜನೆಗಳಿಗೆ ಒಟ್ಟು ರೂ 3,26,015/- ಹೂಡಿಕೆಗೆ ಏಕ ಗವಾಕ್ಷಿ ಸಮಿತಿ ಸಭೆಗಳಲ್ಲಿ ಅನುಮೋದನೆ ನೀಡಲಾಗಿತ್ತು ಎಂದು ತಿಳಿಸಿದರು.


Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಿಕ್ಷಣಕ್ಕೆ ಹೆಚ್ಚಿನ ಒತ್ತು ಕೊಡಬೇಕು : ಜಿಲ್ಲಾ ಉಸ್ತುವಾರಿ ಸಚಿವರು ಟಿ ರಘುಮೂರ್ತಿಸಾಂಸ್ಕೃತಿಕ ನೆಲೆಗಟ್ಟಿನ ಮೇಲೆ ಕಾಡುಗೊಲ್ಲರ ಬದುಕು - ಸಣ್ಣಚಿತ್ತಯ್ಯ ಸಾರ್ವಜನಿಕ ಗಣೇಶೋತ್ಸವಕ್ಕೆ ಹಂದರಗಂಭ ಪೂಜೆನೂತನ ಬಸ್ ನಿಲ್ದಾಣ ಲೋಕಾರ್ಪಣೆ ನೆರವೇರಿಸಿದ ಸಚಿವ ಟಿ.ರಘುಮೂರ್ತಿ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಅತ್ಯಾಧುನಿಕ ಕ್ರೀಡಾ ಸೌಲಭ್ಯಗಳ ಉದ್ಘಾಟನೆಬೆಳೆ ಸಮೀಕ್ಷೆದಾರರ ಬೇಡಿಕೆ ಈಡೇರಿಕೆಗೆ ಕ್ರಮ: ಸರ್ಕಾರದೊಂದಿಗೆ ಚರ್ಚಿಸುವ ಭರವಸೆ ನೀಡಿದ ಸಚಿವ ರಘುಮೂರ್ತಿದೇವಾಲಯ ನಿರ್ಮಾಣ ಪವಿತ್ರ ಕಾರ್ಯ - ಟಿ. ರಘುಮೂರ್ತಿಡಾ.ಹೇಮಂತರಾಜು ರವರ ನಾನು ನೀನು ಮತ್ತು ಸ್ಕಿಜೋಫ್ರೇನಿಯಾ ಕವನ ಸಂಕಲನ ಲೋಕಾರ್ಪಣೆಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಇತಿಹಾಸ ಬರೆದ ಭಾರತದ ಶೂಟಿಂಗ್ ತಾರೆ ಮನು ಭಾಕರ್ಪ್ಯಾರಾ ಕಾಮನ್‌ವೆಲ್ತ್‌ನಲ್ಲಿ ಪದಕ ಗೆದ್ದು ಇತಿಹಾಸ ಬರೆದ ಕೆ.ಎಸ್. ಶಿಲ್ಪಾ