Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಇಂದಿನಿಂದ ಶಿರಾ ಗೇಟ್ ರಸ್ತೆಃ ಸಂಚಾರಕ್ಕೆ ಮುಕ್ತ - ಸಚಿವ ಪರಮೇಶ್ವರ

Advertisement
ಚಂದ್ರವಳ್ಳಿ ನ್ಯೂಸ್, ತುಮಕೂರು:
ಕಳೆದೈದು ತಿಂಗಳಿಂದ ಬಂದ್ ಮಾಡಲಾಗಿದ್ದ ನಗರದ ಶಿರಾ ಗೇಟ್ ರಸ್ತೆಯನ್ನು ಇಂದಿನಿಂದ ಸಂಚಾರಕ್ಕೆ ಮುಕ್ತಗೊಳಿಸಲಾಗಿದೆ ಎಂದು ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ: ಜಿ. ಪರಮೇಶ್ವರ ಅವರು ತಿಳಿಸಿದರು.


         ನಗರದ ಎಸ್.ಮಾಲ್ ಬಳಿ ಲೋಕೋಪಯೋಗಿ ಇಲಾಖೆಮಹಾನಗರ ಪಾಲಿಕೆ ಹಾಗೂ  ನಗರಾಭಿವೃದ್ಧಿ ಪ್ರಾಧಿಕಾರದ ವತಿಯಿಂದ ಸುಮಾರು ೬.೬೫ ಕೋಟಿ ರೂ.ಗಳ ಅಂದಾಜು ವೆಚ್ಚದಲ್ಲಿ ಪುನರ್ ನಿರ್ಮಿಸಿರುವ ಸೇತುವೆಯನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದ ಅವರು    ಅಮಾನಿಕೆರೆ ಕೋಡಿ ನೀರು ಹರಿಯುವ ರಾಷ್ಟ್ರೀಯ ಹೆದ್ದಾರಿ ೪ರ ಸೇತುವೆಯಲ್ಲಿ   ಅಪಘಾತಗಳ ಸಂಖ್ಯೆ ಹೆಚ್ಚಾಗಿ ಸಾವುಗಳು ಸಂಭವಿಸುತ್ತಲೇ ಇದ್ದವು.  ಕಿರಿದಾಗಿದ್ದ ಈ ಸೇತುವೆಯನ್ನು ಅಗಲೀಕರಣಗೊಳಿಸಿ, ಹೊಸ ಸೇತುವೆಯನ್ನು ನಿರ್ಮಿಸಬೇಕೆಂದು ಈ ಭಾಗದ ಜನರು, ಜನಪ್ರತಿನಿಧಿಗಳಿಂದ ಬಹು ದಿನಗಳ ಬೇಡಿಕೆಯಿತ್ತು.    ರಾಜ್ಯದ ೧೫ ಜಿಲ್ಲೆ ಸೇರಿ ಜಿಲ್ಲೆಯ ಪಾವಗಡ, ಕೊರಟಗೆರೆ, ಶಿರಾ, ಮಧುಗಿರಿ ಭಾಗಕ್ಕೆ ಇದೇ ರಸ್ತೆಯಿಂದ ತೆರಳಬೇಕಿತ್ತು.  ರಸ್ತೆ ಕಾಮಗಾರಿ ಕೈಗೊಂಡ ನಂತರ ವಾಹನಗಳು ಬಳಸಿಕೊಂಡು ಹನುಮಂತಪುರ ಮೂಲಕ ಸಾಗಬೇಕಿತ್ತು.  ಈಗ ಸೇತುವೆ ಅಗಲೀಕರಣ ಕಾಮಗಾರಿ ಪೂರ್ಣಗೊಂಡಿರುವುದರಿಂದ   ವಾಹನಗಳು ಮುಕ್ತವಾಗಿ ಸಂಚರಿಸಬಹುದಾಗಿದೆ ಎಂದು ಹೇಳಿದರು. 

೫೦ ಕೋಟಿ ರೂ. ವೆಚ್ಚದಲ್ಲಿ ವಿದ್ಯಾರ್ಥಿನಿಲಯಃ       ಶೈಕ್ಷಿಣಿಕ ನಗರವೆನಿಸಿಕೊಂಡಿರುವ ತುಮಕೂರಿನಲ್ಲಿ ಬಹುತೇಕ ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆ ಪೂರಕವಾದ ಹಾಸ್ಟೆಲ್ ವ್ಯವಸ್ಥೆಗಳಿಲ್ಲ. ಈಗಿರುವ ಹಾಸ್ಟೆಲ್‌ಗಳು ಸಾಲುತ್ತಿಲ್ಲ. ಜಿಲ್ಲೆಯಲ್ಲಿ   ೫೦ ಕೋಟಿ ರೂ. ವೆಚ್ಚದಲ್ಲಿ ೧೨ ನೂತನ ಹಾಸ್ಟೆಲ್‌ಗಳನ್ನು ನಿರ್ಮಿಸಲು   ಶೀಘ್ರದಲ್ಲಿ ಅಡಿಗಲ್ಲು ಹಾಕಲಾಗುವುದು ಎಂದು ಹೇಳಿದರು.

ವಸಂತ ನರಸಾಪುರದಲ್ಲಿ ೩೦೦೦ಕ್ಕೂ ಹೆಚ್ಚು ಉದ್ಯೋಗಃ      ಮುಂದಿನ ದಿನಗಳಲ್ಲಿ ವಸಂತನರಸಾಪುರದ ಕೈಗಾರಿಕಾ ಪ್ರದೇಶದಲ್ಲಿ ೩೦೦೦ ಹಾಗೂ ಗುಬ್ಬಿ ತಾಲೂಕಿನ ಎಚ್‌ಎಎಲ್ ಘಟಕದಲ್ಲಿ ೬೫೦೦ಕ್ಕೂ ಹೆಚ್ಚು ಜನರಿಗೆ ಉದ್ಯೋಗ ಸೃಷ್ಟಿಯಾಗಲಿದೆ ಎಂದು ತಿಳಿಸಿದರಲ್ಲದೆ   ಬೆಂಗಳೂರಿನ ಒಂದು ಭಾಗವಾಗಿ ಬೆಳೆಯುತ್ತಿರುವ  ತುಮಕೂರು ಜಿಲ್ಲೆಗೆ   ಸವಲತ್ತು ನೀಡುವ ಅವಶ್ಯಕತೆ ಇದ್ದು, ನಮ್ಮ ಸರ್ಕಾರವು  ಜಿಲ್ಲೆಯ   ಅಭಿವೃದ್ಧಿಗೆ ಬದ್ಧವಾಗಿದೆ ಎಂದು ಹೇಳಿದರು.

ಪಾಲಿಕೆಯ ಇತರೆ ವಾರ್ಡುಗಳ ಅಭಿವೃದ್ಧಿಗೆ ೧೦೦ ಕೋಟಿ ರೂ. ವಿನಿಯೋಗಃ        ಮಹಾನಗರ ಪಾಲಿಕೆ ವ್ಯಾಪ್ತಿಯ ಕೇವಲ ೬ ವಾರ್ಡ್‌ಗಳನ್ನು ಮಾತ್ರ ಸ್ಮಾರ್ಟ್ ಸಿಟಿ ಯೋಜನೆಗೊಳಪಡಿಸಿ ಅಭಿವೃದ್ಧಿಪಡಿಸಲಾಗಿದೆ.  ಉಳಿದ ವಾರ್ಡುಗಳಲ್ಲಿ ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲು ೧೦೦ ಕೋಟಿ ರೂ.ಗಳನ್ನು ವಿನಿಯೋಗಿಸಲು ತೀರ್ಮಾನಿಸಲಾಗಿದೆ ಎಂದು ನುಡಿದರು.

      ಗುಬ್ಬಿ ರಸ್ತೆಯಲ್ಲಿರುವ ಭೀಮಸಂದ್ರದ ಸೇತುವೆಯನ್ನೂ ಸಹ ಅಗಲೀಕರಣಗೊಳಿಸುವ ಕಾಮಗಾರಿಯನ್ನು ಸದ್ಯದಲ್ಲೆ ಕೈಗೆತ್ತಿಕೊಳ್ಳಲಾಗುವುದು ಎಂದು ಹೇಳಿದರು.

ಬಡವರ ಏಳಿಗೆಗಾಗಿ  ಗ್ಯಾರಂಟಿ ಯೋಜನೆಃ      ಬಡವರು ಬಡವರಾಗಿಯೇ ಉಳಿಯಬಾರದೆಂಬ ಉದ್ದೇಶದಿಂದ ನಮ್ಮ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದ್ದು, ಇದರಲ್ಲಿ ಯಾವುದೇ ರಾಜಕಾರಣವಿಲ್ಲ.  ಗ್ಯಾರಂಟಿ ಯೋಜನೆಗಳಿಂದ ರಾಜ್ಯದಲ್ಲಿ ಅಭಿವೃದ್ಧಿ ಕೆಲಸಗಳು ನಿಂತಿವೆ ಎಂಬ ಟೀಕೆಗಳು ಬರುತ್ತಲೇ ಇವೆ.  ಇತ್ತೀಚೆಗಷ್ಟೇ ಹಾಸನ ಜಿಲ್ಲೆ ಸಕಲೇಶಪುರದಲ್ಲಿ ಚಾಲನೆ ನೀಡಿದ ಎತ್ತಿನಹೊಳೆ ಮೊದಲ ಹಂತದ ಯೋಜನೆಯು ರಾಜ್ಯದ ಅಭಿವೃದ್ಧಿ ಕಾಮಗಾರಿಗಳಿಗೆ ಹಿಡಿದ ಕೈಗನ್ನಡಿಯಾಗಿದೆ.  ಯಾವುದೇ ಕಾರಣಕ್ಕು ಗ್ಯಾರಂಟಿ ಯೋಜನೆಗಳು ನಿಲ್ಲುವುದಿಲ್ಲ ಎಂದು ಸ್ಪಷ್ಟಪಡಿಸಿದರು.

      ತುಮಕೂರಿಗೆ ಮೆಟ್ರೋ ರೈಲು ಸಂಚಾರ ಸೌಲಭ್ಯವನ್ನು ತರುವ ನಿಟ್ಟಿನಲ್ಲಿ ವಿಸ್ತೃತ ವರದಿಯನ್ನು ಸಿದ್ಧಪಡಿಸಲಾಗಿದ್ದು, ಶೀಘ್ರದಲ್ಲೇ ಅನುಮೋದನೆ ನೀಡಲಾಗುವುದೆಂದರು.

ಸೇತುವೆ ಪುನರ್ ನಿರ್ಮಾಣದಿಂದ ಸಂಚಾರ ಸುಗಮಃ      ಸಹಕಾರ ಸಚಿವ ಕೆ.ಎನ್.ರಾಜಣ್ಣ ಮಾತನಾಡಿ ವಸಂತನರಸಾಪುರದಲ್ಲಿ ಕೈಗಾರಿಕೆಗಳು ಸ್ಥಾಪನೆಯಾದ ನಂತರ ಎಸ್ ಮಾಲ್ ಬಳಿಯಿರುವ ಈ ಸೇತುವೆಯಲ್ಲಿ ವಾಹನ ಸಂಚಾರ ದಟ್ಟಣೆ ಹೆಚ್ಚಾಗಿತ್ತು.  ಈ ಸೇತುವೆ ಪುನರ್ ನಿರ್ಮಾಣದಿಂದ ಸಂಚಾರ ದಟ್ಟಣೆ ಕಡಿಮೆಯಾಗಿ ಸುಗಮ ಸಂಚಾರಕ್ಕೆ ಅನುವಾಲಿದೆ ಎಂದರಲ್ಲದೆ  ನಿಗಧಿತ ಅವಧಿಯೊಳಗೆ ಗುಣಮಟ್ಟದ ಸೇತುವೆ ನಿರ್ಮಾಣ ಕಾಮಗಾರಿ ನಿರ್ವಹಿಸಿದ ಗುತ್ತಿಗೆದಾರ ನಾರಾಯಣಪ್ಪ ಅವರನ್ನು ಅಭಿನಂದಿಸಿದರು.

        ಶಾಸಕ ಬಿ. ಸುರೇಶ್‌ಗೌಡ ಮಾತನಾಡಿ ಜಿಲ್ಲೆಯ ಅಭಿವೃದ್ಧಿ ವಿಚಾರದಲ್ಲಿ ನಾನೆಂದಿಗೂ ರಾಜಕಾರಣ ಮಾಡುವುದಿಲ್ಲ.  ವೇಗವಾಗಿ ಬೆಳೆಯುತ್ತಿರುವ ತುಮಕೂರು ನಗರವನ್ನು ಎಕನಾಮಿಕ್ ಹಬ್ ಆಗಿ ಅಭಿವೃದ್ಧಿಗೊಳಿಸಬೇಕು.  ಕೈಗಾರಿಕಾ ಪ್ರದೇಶಗಳಲ್ಲಿ ಅಗತ್ಯ ಮೂಲಭೂತ ಸೌಕರ್ಯಗಳನ್ನು ಕಲ್ಪಿಸುವ ಮೂಲಕ ಹೊಸ-ಹೊಸ ಕೈಗಾರಿಕೆಗಳನ್ನು ಸೆಳೆಯಬೇಕು.  ನೂತನ ವಿಶ್ವವಿದ್ಯಾಲಯವನ್ನು ಶೀಘ್ರವಾಗಿ ಉದ್ಘಾಟಿಸಬೇಕು.  ವಾಯುವಿಹಾರ ಮಾಡುವವರಿಗೆ ಅಮಾನಿಕೆರೆ ಉಚಿತ ಪ್ರವೇಶಕ್ಕೆ ಅವಕಾಶ ಕಲ್ಪಿಸಬೇಕೆಂದು ಸಚಿವರಿಗೆ ಮನವಿ ಮಾಡಿದರಲ್ಲದೆ  ಮುಂದಿನ ೩.೫ ವರ್ಷದೊಳಗೆ ಮೆಟ್ರೋ ರೈಲು ನಗರಕ್ಕೆ ಬರಬೇಕೆಂಬ ಆಶಯ ವ್ಯಕ್ತಪಡಿಸಿದರು.

        ಅಧ್ಯಕ್ಷತೆವಹಿಸಿ ಮಾತನಾಡಿದ ಜಿ.ಬಿ. ಜ್ಯೋತಿಗಣೇಶ್  ಸೇತುವೆ ಪುನರ್ ನಿರ್ಮಾಣ ಕೈಗೊಂಡ ನಂತರ ಸ್ಥಳೀಯರಿಂದ ಪ್ರತೀದಿನ ಆದಷ್ಟು ಬೇಗ ಕಾಮಗಾರಿ ಪೂರ್ಣಗೊಳಿಸಬೇಕೆಂದು ಒತ್ತಡಗಳು ಬರುತ್ತಲೇ ಇದ್ದವು.  ಇಂದಿನಿಂದ ಸೇತುವೆಯು ವಾಹನ ಸಂಚಾರಕ್ಕೆ ಲೋಕಾರ್ಪಣೆಗೊಂಡಿರುವುದು ಸಂತಸ ತಂದಿದೆ. ನಗರದ ಕುಡಿಯವ ನೀರು ಹಾಗೂ ಒಳಚರಂಡಿ ವ್ಯವಸ್ಥೆಗಾಗಿ ೧೦೦ ಕೋಟಿ ರೂ.ಗಳಿಗಿಂತ ಹೆಚ್ಚಿನ ಅನುದಾನದ ಅಗತ್ಯವಿದ್ದು, ಅಗತ್ಯ ಅನುದಾನ ಒದಗಿಸುವಲ್ಲಿ ನಗರಾಭಿವೃದ್ಧಿ ಸಚಿವರೊಂದಿಗೆ ಚರ್ಚಿಸಿ ತೀರ್ಮಾನ ತೆಗೆದುಕೊಂಡು ಕ್ರಮ ಕೈಗೊಳ್ಳಬೇಕೆಂದು ಸಚಿವರಲ್ಲಿ ಮನವಿ ಮಾಡಿದರು.

        ಈ ಸಂದರ್ಭದಲ್ಲಿ  ವಿಧಾನ ಪರಿಷತ್‌ನ ಮಾಜಿ ಸದಸ್ಯ ಹುಲಿ ನಾಯ್ಕರ್, ಮಾಜಿ ಸಚಿವ ರೇವಣ್ಣ, ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ. ಅಶೋಕ್, ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ. ಪ್ರಭು, ಮಹಾನಗರ ಪಾಲಿಕೆ ಆಯುಕ್ತೆ ಬಿ.ವಿ. ಅಶ್ವಿಜಾ, ಲೋಕೋಪಯೋಗಿ ಇಲಾಖೆ ಮುಖ್ಯ ಇಂಜಿನಿಯರ್ ಮಂಜಪ್ಪ, ಅಧೀಕ್ಷಕ ಇಂಜಿನಿಯರ್ ಜಿ.ಸಿ. ಜಗದೀಶ್, ಕಾರ್ಯನಿರ್ವಾಹಕ ಇಂಜಿನಿಯರ್ ಹರೀಶ್, ಅಪರ ಜಿಲ್ಲಾಧಿಕಾರಿ ಡಾ: ತಿಪ್ಪೇಸ್ವಾಮಿ, ಹಿರಿಯ ಪತ್ರಕರ್ತ ಎಸ್.ನಾಗಣ್ಣ, ಉಪಸ್ಥಿತರಿದ್ದರು.
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ