ಚಂದ್ರವಳ್ಳಿ ನ್ಯೂಸ್, ಬೆಂಗಳೂರು
ಬೆಂಗಳೂರಿಗೆ ನೂತನವಾಗಿ ನೇಮಕಗೊಂಡಿರುವ ಕೆನಡಾದ ಕಾನ್ಸುಲ್ ಜನರಲ್ ರಯಾನ್ ವಾರ್ಡ್ ಅವರು ಗ್ರಾಮೀಣ ಅಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಐಟಿ-ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಅವರನ್ನು ಭೇಟಿಯಾಗಿ ಸೌಹಾರ್ದಯುತ ಮಾತುಕತೆ ನಡೆಸಿದರು.
ಈ ವೇಳೆ ಕರ್ನಾಟಕ ಹಾಗೂ ಕೆನಡಾ ನಡುವಿನ ದ್ವಿಪಕ್ಷೀಯ ಬಾಂಧವ್ಯವನ್ನು ಮತ್ತಷ್ಟು ಬಲಪಡಿಸುವ ಕುರಿತು ಸುದೀರ್ಘ ಚರ್ಚೆ ನಡೆಯಿತು.
ಬರುವ ಅಕ್ಟೋಬರ್‌ನಲ್ಲಿ ಭಾರತಕ್ಕೆ ಕೆನಡಾದ 'ಟೀಮ್ ಕೆನಡಾ ಟ್ರೇಡ್ ಮಿಷನ್' ನಿಯೋಗ ಆಗಮಿಸಲಿದ್ದು, ಈ ಭೇಟಿಯ ಹಿನ್ನೆಲೆಯಲ್ಲಿ ಉಭಯ ಪ್ರದೇಶಗಳ ನಡುವೆ ಸಹಕಾರ ವೃದ್ಧಿಸುವ ಕುರಿತು ಸಚಿವರು ಆಶಾವಾದ ವ್ಯಕ್ತಪಡಿಸಿದರು.
ಆದ್ಯತಾ ಕ್ಷೇತ್ರಗಳು: ತಂತ್ರಜ್ಞಾನ, ಜಾಗತಿಕ ಸಾಮರ್ಥ್ಯ ಕೇಂದ್ರಗಳು ಮತ್ತು ಕೌಶಲ್ಯಾಭಿವೃದ್ಧಿ ಕ್ಷೇತ್ರಗಳಲ್ಲಿ ಜಂಟಿ ಸಹಕಾರ.
ಆರ್ಥಿಕ ಪ್ರಗತಿ: ಹೊಸ ಹೂಡಿಕೆಗಳು, ನಾವೀನ್ಯತೆ ಹಾಗೂ ಉದ್ಯಮ ಸಹಭಾಗಿತ್ವಕ್ಕೆ ಹೊಸ ಅವಕಾಶಗಳನ್ನು ಸೃಷ್ಟಿಸುವುದು.
ದ್ವಿಪಕ್ಷೀಯ ಬಾಂಧವ್ಯ: ಕರ್ನಾಟಕ ಮತ್ತು ಕೆನಡಾ ನಡುವಿನ ಶೈಕ್ಷಣಿಕ ಹಾಗೂ ತಾಂತ್ರಿಕ ಸಂಬಂಧಗಳನ್ನು ಮತ್ತಷ್ಟು ವಿಸ್ತರಿಸುವುದು.




