Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ನಗರ ಸ್ಥಳೀಯ ಸಂಸ್ಥೆಗಳಿಗೆ ಮೀಸಲಾತಿ ನಿಗದಿಗೆ ಕ್ರಮ:  ಸಚಿವರು

Advertisement
ಚಂದ್ರವಳ್ಳಿ ನ್ಯೂಸ್, ಬೆಳಗಾವಿ:
ಅವಧಿ ಮುಕ್ತಾಯಗೊಂಡಿರುವ ನಗರ ಸ್ಥಳೀಯ ಸಂಸ್ಥೆಗಳಿಗೆ ವಾರ್ಡುವಾರು ಮೀಸಲಾತಿಯನ್ನು ನಿಗದಿಪಡಿಸುವ ಪ್ರಕ್ರಿಯೆ ಜಾರಿಯಲ್ಲಿರುತ್ತದೆ ಎಂದು ಪೌರಾಡಳಿತ ಮತ್ತು ಹಜ್ ಸಚಿವರಾದ ರಹೀಂ ಖಾನ್ ಹೇಳಿದರು.


ಪರಿಷತ್ತಿನಲ್ಲಿ ಪ್ರಶ್ನೋತ್ತರ ವೇಳೆ ಸದಸ್ಯರಾದ ಪ್ರತಾಪ್ ಸಿಂಹ ನಾಯಕ ಅವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ರಾಜ್ಯದಲ್ಲಿರುವ 187 ನಗರ ಸ್ಥಳೀಯ ಸಂಸ್ಥೆ (ಪಟ್ಟಣ ಪಂಚಾಯಿತಿ, ಪುರಸಭೆ ಮತ್ತು ನಗರಸಭೆ) ಗಳ ಐದು ವರ್ಷಗಳ ಕೌನ್ಸಿಲ್ ಅಧಿಕಾರವಧಿ ಮುಕ್ತಾಯಗೊಂಡಿರುತ್ತದೆ.

ಆದ್ದರಿಂದ ಸರ್ಕಾರದ ಅಧಿಸೂಚನೆ ಸಂ: ನಅಇ 287 ಎಂಎಲ್‍ಆರ್ 2025 ದಿನಾಂಕ 06.11.2025, 19.11.2025 ಹಾಗೂ 05.12.2025ರಲ್ಲಿ ಕರ್ನಾಟಕ ಪೌರಸಭೆಗಳ ಕಾಯ್ದೆ 1964 ರ ಕಲಂ 389 ರಲ್ಲಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಅವಧಿ ಮುಕ್ತಾಯಗೊಂಡಿರುವ ಸ್ಥಳೀಯ ಸಂಸ್ಥೆಗಳಲ್ಲಿ

ಹೊಸದಾಗಿ ಚುನಾಯಿತ ಕೌನ್ಸಿಲ್ ಅಸ್ತಿತ್ವಕ್ಕೆ ಬರುವವರೆಗೂ ಅವುಗಳ ದಿನನಿತ್ಯದ ಕಾರ್ಯನಿರ್ವಹಣೆಗಾಗಿ ಹಾಗೂ ನಗರ ಸ್ಥಳೀಯ ಸಂಸ್ಥೆಗಳ ಆಡಳಿತ ಹಿತದೃಷ್ಟಿಯಿಂದ ಆಡಳಿತಾಧಿಕಾರಿಯನ್ನು ನೇಮಿಸಲಾಗಿರುತ್ತದೆ. ಈ ಮೂಲಕ ನಗರಸಭೆ, ಪುರಸಭೆ ಹಾಗು ಪಟ್ಟಣ ಪಂಚಾಯತಿ ವ್ಯಾಪ್ತಿಯಲ್ಲಿ ಅಭಿವೃದ್ಧಿ ಕಾರ್ಯಗಳು ಕುಂಠಿತವಾಗದಂತೆ ಕ್ರಮವಹಿಸಲಾಗಿರುತ್ತದೆ.

ಆಡಳಿತಾಧಿಕಾರಿಗಳ ನೇಮಕ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿರುವ ಉಳ್ಳಾಲ, ಪುತ್ತೂರ, ಬಂಟ್ವಾಳ, ಮೂಡುಬಿದರೆ, ಬೆಳ್ತಂಗಡಿ, ಸುಳ್ಯ ಮತ್ತು ಮುಲ್ಕಿ ನಗರ ಸ್ಥಳೀಯ ಸಂಸ್ಥೆಗಳಿಗೆ ಈಗಾಗಲೇ ಆಡಳಿತಾಧಿಕಾರಿಗಳನ್ನು ನೇಮಕ ಮಾಡಲಾಗಿದೆ ಎಂದು ಸಚಿವರು ಮಾಹಿತಿ ನೀಡಿದರು.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ