Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಹಣ್ಣು, ತರಕಾರಿ, ಹೂ ಮಾರುಕಟ್ಟೆ ಸ್ಥಳಾಂತರಕ್ಕೆ ನಿರ್ದೇಶನ ನೀಡಿದ ಸಚಿವ ಸುಧಾಕರ್

Advertisement
 ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ನಗರದ ಗಾಂಧಿ ವೃತ್ತ ಹಾಗೂ ಸಂತೆಹೊಂಡದ ಬಳಿ 15ನೇ ಹಣಕಾಸು ಯೋಜನೆಯಡಿ ಸಂಕೀರ್ಣ ನಿರ್ಮಾಣ ಕಾಮಗಾರಿ ಆರಂಭಿಸಿ, ಪ್ರಸ್ತುತ ಸ್ಥಗಿತಗೊಂಡಿರುವ ವಾಣಿಜ್ಯ ಸಂಕೀರ್ಣಗಳ ಕಾಮಗಾರಿಯನ್ನು ಪುನರಾರಂಭಿಸಲು ಚಿಂತನೆ ನಡೆಸಲಾಗುತ್ತಿದೆ ಎಂದು ಯೋಜನೆ ಮತ್ತು ಸಾಂಖ್ಯಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಹೇಳಿದರು.  


ಸೋಮವಾರ ನಗರದ ಗಾಂಧಿವೃತ್ತ ಹಾಗೂ ಸಂತೆಹೊಂಡದ ಬಳಿಯ ವಾಣಿಜ್ಯ ಸಂಕೀರ್ಣಗಳ ಕಾಮಗಾರಿ ವೀಕ್ಷಣೆ ನಡೆಸಿ ಅವರು ಮಾತನಾಡಿದರು.


ಬಹಳ ವರ್ಷಗಳ ಹಿಂದೆ 15ನೇ ಹಣಕಾಸು ಯೋಜನೆಯಡಿ ಇಲ್ಲಿ ವಾಣಿಜ್ಯ ಸಂಕೀರ್ಣಗಳನ್ನು ನಿರ್ಮಿಸಲು ಯೋಜನೆ ರೂಪಿಸಲಾಗಿತ್ತು. ಅನುದಾನ ಕೊರತೆಯಿಂದ ಕಾಮಗಾರಿಗಳು ಅರ್ಧಕ್ಕೆ ನಿಂತಿವೆ. ಡಿ.ಎಂ.ಎಫ್ ಹಾಗೂ ನಗರಸಭೆಯ ಅನುದಾನ ನೀಡಿ ಅರ್ಧಕ್ಕೆ ನಿಂತ ಕಾಮಗಾರಿಗಳನ್ನು ಮುಂದುವರಿಸಲು ಆಲೋಚಿಸಲಾಗಿದ್ದು, ನಗರಸಭೆ ಸದಸ್ಯರು, ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳೊಂದಿಗೆ ಚರ್ಚಿಸಿ ಮುಂದಿನ ಕ್ರಮ ಕೈಗೊಳ್ಳುವುದಾಗಿ ಅವರು ಹೇಳಿದರು.


ಸ್ವಚ್ಚತೆಗೆ ಆದ್ಯತೆ ನೀಡಲು ಸೂಚನೆ:
ನಗರದ ಹೃದಯ ಭಾಗದಲ್ಲಿರುವ ಗಾಂಧಿ ವೃತ್ತ ಹಾಗೂ ಸಂತೆಹೊಂಡದ ಬಳಿ ಕಸ ಹಾಗೂ ತ್ಯಾಜಗಳನ್ನು ಎಲ್ಲೆಂದರಲ್ಲಿ ಬಿಸಾಡಿರುವುದನ್ನು ಕಂಡು ಸಚಿವ ಡಿ.ಸುಧಾಕರ್ ತೀವ್ರ ಅಸಮಾಧನ ವ್ಯಕ್ತಪಡಿಸಿ ನಗರಸಭೆ ಅಧಿಕಾರಿಗಳು ಸ್ವಚ್ಛತೆಗೆ ಆದ್ಯತೆ ನೀಡುವಂತೆ ಸೂಚಿಸಿದರು.  ಸಂತೆಹೊಂಡದ ಬಳಿ ರಾತ್ರಿಯ ವೇಳೆ ಹೋಟೆಲ್‍ಗಳಿಂದ ತಾಜ್ಯಗಳನ್ನು ತಂದು ಸುರಿಯುತ್ತಾರೆ ಎಂದು ಬೀದಿ ಬದಿ ವ್ಯಾಪಾರಿಗಳು ಸಚಿವರ ಗಮನಕ್ಕೆ ತಂದರು. ಇದಕ್ಕೆ ಸ್ಪಂದಿಸಿದ ಸಚಿವ ಡಿ.ಸುಧಾಕರ್ ಅವರು, ತ್ಯಾಜ್ಯ ಸುರಿಯುವ ಹೋಟೆಲ್‍ಗಳ ಲೈಸೆನ್ಸ್ ರದ್ದು ಮಾಡಲು ಕೂಡಲೆ ಕ್ರಮ ಜರುಗಿಸುವಂತೆ ನಗರಸಭೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.


ಮಾರುಕಟ್ಟೆ ಸ್ಥಳಾಂತರಕ್ಕೆ ನಿರ್ದೇಶನ :
ಸಂತೆಹೊಂಡದ ಎದುರುಗಡೆ ಇರುವ ಸ್ಥಳದಲ್ಲಿ ತರಕಾರಿ, ಹಣ್ಣು ಮಾರಾಟ ಅಂಗಡಿಗಳು ಹಾಗೂ ಇತರೆ ಬೀದಿಬದಿ ವ್ಯಾಪಾರಿಗಳನ್ನು ಖಾಸಗಿ ಬಸ್ ನಿಲ್ದಾಣದ ಹಿಂಭಾಗದಲ್ಲಿ ನಿರ್ಮಿಸಿರುವ ಮಾರುಕಟ್ಟೆಗೆ ಸ್ಥಳಾಂತರಿಸುವಂತೆ ಸಚಿವ ಡಿ.ಸುಧಾಕರ್ ಅವರು ನಗರಸಭೆ ಆಯುಕ್ತೆ ಎಂ.ರೇಣುಕಾ ಅವರಿಗೆ ನಿರ್ದೇಶನ ನೀಡಿದರು.


ಸುಮಾರು ಹತ್ತು ವರ್ಷಗಳ ಹಿಂದೇ ಖಾಸಗಿ ಬಸ್ ನಿಲ್ದಾಣದ ಹಿಂಭಾಗದಲ್ಲಿ, ಮಾರುಕಟ್ಟೆ ನಿರ್ಮಿಸಿ, ವ್ಯಾಪಾರಿಗಳಿಗೆ ಈ ಹಿಂದೆಯೇ ಹಂಚಿಕೆ ಮಾಡಲಾಗಿದೆ. ಆದರೂ ವ್ಯಾಪಾರಿಗಳು ಸ್ಥಳಾಂತರವಾಗಿಲ್ಲ. ಇದರಿಂದ ನಗರಸಭೆಗೆ ಆರ್ಥಿಕ ನಷ್ಟ ಉಂಟಾಗಿದೆ. ಕೂಡಲೇ ಸಂತೆಹೊಂಡದ ಬಳಿಯ ತರಕಾರಿ, ಹಣ್ಣು ವ್ಯಾಪಾರಿಗಳನ್ನು ಸ್ಥಳಾಂತರಿಸಬೇಕು. ಇಲ್ಲವಾದರೆ, 10 ವರ್ಷಗಳ ಹಿಂದಿನ ಟೆಂಡರ್ ರದ್ದು ಮಾಡಿ ಹೊಸದಾಗಿ ಅರ್ಜಿ ಕರೆದು, ವ್ಯಾಪಾರಿಗಳಿಗೆ ಸ್ಥಳ ನಿಗದಿ ಮಾಡಬೇಕು. ಇಲ್ಲವಾದರೆ, ನಗರಸಭೆಗೆ ಉಂಟಾದ ಅರ್ಥಿಕ ನಷ್ಟವನ್ನು ಆಯುಕ್ತರೇ ಭರಿಸುವಂತೆ ಸರ್ಕಾರಕ್ಕೆ ಪತ್ರ ಬರೆಯುವುದಾಗಿ ಸಚಿವ ಡಿ.ಸುಧಾಕರ್ ಎಚ್ಚರಿಸಿದರು.


ಸಚಿವರ ಭೇಟಿ ವೇಳೆ, ಜಿಲ್ಲಾಧಿಕಾರಿ ಜಿ.ವೆಂಕಟೇಶ್, ನಗರಸಭೆ ಅಧ್ಯಕ್ಷೆ ಸುಮಿತಾ ರಾಘವೇಂದ್ರ, ಪೌರಾಯುಕ್ತೆ ಎಂ.ರೇಣುಕಾ ಸೇರಿದಂತೆ ನಗರಸಭೆ ಅಧಿಕಾರಿಗಳು ಉಪಸ್ಥಿತರಿದ್ದರು.

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ