LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಚಿತ್ರದುರ್ಗದಲ್ಲಿ ನೀರ್ ಲ್ಯಾಬ್’ ಉದ್ಘಾಟಿಸಿದ ಸಚಿವ ಟಿ.ರಘುಮೂರ್ತಿ

Advertisement
Advertisement

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಜಿಲ್ಲೆಯ ಪ್ರತಿಯೊಂದು ಗ್ರಾಮಕ್ಕೂ ಕುಡಿಯುವ ನೀರು ಸಮರ್ಪಕವಾಗಿ ತಲುಪುತ್ತಿದೆಯೇ ಹಾಗೂ ತ್ಯಾಜ್ಯ ವಿಲೇವಾರಿ ಸರಿಯಾಗಿ ನಡೆಯುತ್ತಿದೆಯೇ ಎಂಬುದನ್ನು ಡಿಜಿಟಲ್ ರೂಪದಲ್ಲಿ ಆನ್‍ಲೈನ್ ಮೂಲಕವೇ ನೇರ ಉಸ್ತುವಾರಿ ವಹಿಸಲು ನೀರ್ ಲ್ಯಾಬ್ವ್ಯವಸ್ಥೆ ಅತ್ಯಂತ ಉಪಯುಕ್ತವಾಗಿದೆ ಎಂದು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಟಿ. ರಘುಮೂರ್ತಿ ತಿಳಿಸಿದರು.

ನಗರದ ಜಿಲ್ಲಾ ಪಂಚಾಯಿತಿ ಕಚೇರಿಯ ಎರಡನೇ ಮಹಡಿಯಲ್ಲಿ ನೂತನವಾಗಿ ಸ್ಥಾಪಿಸಲಾಗಿರುವ ನೀರ್ ಲ್ಯಾಬ್’ (ಡೇಟಾ ಸೆಂಟರ್)  ಉದ್ಘಾಟಿಸಿ ಅವರು ಮಾತನಾಡಿದರು.

ಯಾವ ಗ್ರಾಮದಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಹೇಗಿದೆ, ಎಲ್ಲಿಂದ ಎಷ್ಟು ನೀರು ಸಿಗುತ್ತಿದೆ ಎಂಬುದನ್ನು ಜನಪ್ರತಿನಿಧಿಗಳು, ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಆನ್‍ಲೈನ್ ಮೂಲಕವೇ ಕುಳಿತಲ್ಲಿಂದಲೇ ವೀಕ್ಷಿಸಬಹುದು. ಪ್ರತಿಯೊಬ್ಬರಿಗೂ ನಿಗದಿತ 55 ಎಲ್‍ಪಿಸಿಡಿ ಪ್ರಮಾಣದ ನೀರು ಸಿಗುತ್ತಿದೆಯೇ ಅಥವಾ ಯಾವ ಗ್ರಾಮಗಳಲ್ಲಿ ಕೊರತೆ ಎದುರಾಗಿದೆ ಎಂಬುದನ್ನು ನಿಖರವಾಗಿ ಪತ್ತೆಹಚ್ಚಿ ತಕ್ಷಣವೇ ಸಮಸ್ಯೆ ಬಗೆಹರಿಸಲು ಈ ವ್ಯವಸ್ಥೆ ನೆರವಾಗಲಿದೆ ಎಂದು ಹೇಳಿದರು.

ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಕಸ ವಿಲೇವಾರಿ ಪ್ರಕ್ರಿಯೆ ಸರಿಯಾದ ರೀತಿಯಲ್ಲಿ ಸಾಗುತ್ತಿದೆಯೇ ಎಂಬುದನ್ನು ಪರಿಶೀಲಿಸಿ, ನೈರ್ಮಲ್ಯ ಸಮಸ್ಯೆಗಳನ್ನು ತ್ವರಿತವಾಗಿ ಇತ್ಯರ್ಥಪಡಿಸಲು ಈ ಲ್ಯಾಬ್ ನೆರವಾಗಲಿದೆ ಎಂದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಎಸ್.ಆಕಾಶ್ ಮಾತನಾಡಿ, ಗ್ರಾಮೀಣ ಕುಡಿಯುವ ನೀರು ಪೂರೈಕೆ ಮತ್ತು ವಲಯದ ಕಾಮಗಾರಿಗಳಿಗೆ ವೇಗ ನೀಡುವ ಉದ್ದೇಶದಿಂದ ಜಿಲ್ಲಾ ಪಂಚಾಯತ್‍ನಿಂದ ನೀರ್ ಲ್ಯಾಬ್’ (ಡೇಟಾ ಸೆಂಟರ್) ಅನ್ನು ರೂಪಿಸಲಾಗಿದೆ ಎಂದು ತಿಳಿಸಿದರು.

ನೀರ್ ಲ್ಯಾಬ್‍ನ ಭೌತಿಕ ಕಟ್ಟಡವನ್ನು ಇಂದು ಉದ್ಘಾಟಿಸಲಾಗುತ್ತಿದ್ದರೂ, ಇದರ ಕಾರ್ಯಕ್ರಮ ನಿರ್ವಹಣಾ ಘಟಕದ ಕಾರ್ಯಗಳು ಈಗಾಗಲೇ ಕಳೆದ ಒಂದು ವರ್ಷದಿಂದ ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿವೆ. ರೂಪಕ್ಕಿಂತ ಮೊದಲು ಕಾರ್ಯಎಂಬ ತತ್ವದಡಿ, ಯಾವುದೇ ಹೊಸ ವೆಚ್ಚವಿಲ್ಲದೆ ಅಸ್ತಿತ್ವದಲ್ಲಿದ್ದ ಅಧಿಕಾರಿಗಳು, ಎಂಜಿನಿಯರ್‍ಗಳು ಹಾಗೂ ತಾಂತ್ರಿಕ ಸಿಬ್ಬಂದಿಯನ್ನೇ ಒಟ್ಟುಗೂಡಿಸಿ ಈ ಜಲ-ವಲಯದ ಯೋಜನೆಯನ್ನು ಅನುಷ್ಠಾನಗೊಳಿಸಲಾಗಿದೆ ಎಂದು ತಿಳಿಸಿದರು. 

ಕಳೆದ ಒಂದು ವರ್ಷದ PMU (Programme Management Unit)  ಕಾರ್ಯಾಚರಣೆಯಿಂದಾಗಿ ಜಲ ಜೀವನ್ ಮಿಷನ್ ಹಾಗೂ ಬಹು-ಗ್ರಾಮ ಯೋಜನೆಗಳಲ್ಲಿ ಗಮನಾರ್ಹ ಪ್ರಗತಿ ಕಂಡುಬಂದಿದೆ. ಜಲ ಜೀವನ್ ಮಿಷನ್ ಅಡಿಯಲ್ಲಿ ಕಳೆದ ಐದು ವರ್ಷಗಳಲ್ಲಿ ವಾರ್ಷಿಕ ಸರಾಸರಿ 121 FHTC  ಕಾಮಗಾರಿಗಳು ಮಾತ್ರ ನಡೆಯುತ್ತಿದ್ದು, 2025-26ರ ಅವಧಿಯಲ್ಲಿ ಬಾರಿಗೆ ಮೂರು ಪಟ್ಟು ಹೆಚ್ಚಳದೊಂದಿಗೆ 369 ಕಾಮಗಾರಿಗಳನ್ನು ಪೂರ್ಣಗೊಳಿಸಲಾಗಿದೆ. ಹಾಗೆಯೇ ಬಹು-ಗ್ರಾಮ ಯೋಜನೆಯಡಿ ಕಳೆದ ಒಂಬತ್ತು ವರ್ಷಗಳ ವಾರ್ಷಿಕ ಸರಾಸರಿ ಜನಸಂಖ್ಯೆಯ ವ್ಯಾಪ್ತಿ 1,42,918 ಇತ್ತು. PMU ಹಸ್ತಕ್ಷೇಪದ ನಂತರ 2025-26ರಲ್ಲಿ ಇದು 2,18,347 ಕ್ಕೆ ಏರಿಕೆಯಾಗಿದ್ದು, ಶೇ.53 ರಷ್ಟು ಸುಧಾರಣೆ ಕಂಡಿದೆ.

ಮಾಹಿತಿ ಆಧಾರಿತ ನಿರ್ಧಾರಗಳಿಗಾಗಿ ಜಿಲ್ಲೆಯ 6 ತಾಲೂಕುಗಳ 189 ಗ್ರಾಮ ಪಂಚಾಯತ್‍ಗಳ ವ್ಯಾಪ್ತಿಯ 1,559 ಹಳ್ಳಿ/ವಸತಿಗಳಲ್ಲಿ ನೈಜ ನೀರು ಪೂರೈಕೆಯ ಸಮಗ್ರ ಮೌಲ್ಯಮಾಪನ ನಡೆಸಲಾಗಿದೆ. ಈ ಪೈಕಿ 550 ಹಳ್ಳಿಗಳಲ್ಲಿ ನಿಗದಿತ 55Pಅಆ (ತಲಾ ದೈನಂದಿನ ಲೀಟರ್) ಗಿಂತ ಕಡಿಮೆ ನೀರು ಪೂರೈಕೆಯಾಗುತ್ತಿರುವುದು ಕಂಡುಬಂದಿದೆ. ಇದರಲ್ಲಿ 25 LPCD ಗಿಂತ ಕಡಿಮೆ ನೀರು ಪಡೆಯುವ 40 ಹಳ್ಳಿಗಳು ಮತ್ತು 26-55 LPCD ವ್ಯಾಪ್ತಿಯಲ್ಲಿರುವ 510 ಹಳ್ಳಿಗಳನ್ನು ಗುರುತಿಸಲಾಗಿದ್ದು, ಮುಂದಿನ ಹೂಡಿಕೆ ಹಾಗೂ ಮೂಲ ಸೌಕರ್ಯ ವೃದ್ಧಿಗೆ ಆದ್ಯತೆ ನೀಡಲು ಸ್ಪಷ್ಟ ಆಧಾರ ಸಿಕ್ಕಂತಾಗಿದೆ ಎಂದು ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ, ಆದಿಜಾಂಬವ ಅಭಿವೃದ್ಧಿ ನಿಗಮದ ಅಧ್ಯಕ್ಷ ಜಿ.ಎಸ್.ಮಂಜುನಾಥ, ಕರ್ನಾಟಕ ಸಫಾಯಿ ಕರ್ಮಚಾರಿ ಆಯೋಗದ ಅಧ್ಯಕ್ಷ ಪಿ.ರಘು, ನಗರಾಭಿವೃದ್ಧಿ  ಪ್ರಾಧಿಕಾರದ ಅಧ್ಯಕ್ಷ ತಾಜ್‍ಪೀರ್, ಜಿಲ್ಲಾ ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರ ಅಧ್ಯಕ್ಷ ಆರ್.ಶಿವಣ್ಣ, ಜಿಲ್ಲಾಧಿಕಾರಿ ಟಿ.ವೆಂಕಟೇಶ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಎಸ್.ಆಕಾಶ್, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಕಾರ್ಯಪಾಲಕ ಇಂಜಿನಿಯರ್ ಅಮರನಾಥ್ ಜೈನ್ ಇದ್ದರು.

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸರ್ಕಾರಿ ಶಾಲೆಗಳ ಉಳಿವಿಗೆ ಜಾಗೃತಿ ಅಗತ್ಯ: ಕೆಜಿ ಹನುಮಂತರಾಯ‘ನಾನು ಸಚಿವನಾಗಿರುವುದು ಶ್ರೀರಾಮುಲುಗೆ ಸಹಿಸಲು ಆಗುತ್ತಿಲ್ಲ’: ಬಿ. ನಾಗೇಂದ್ರ‘ವಂದೇ ಮಾತರಂ’ ಗೀತೆ ಆಕ್ಷೇಪ ವಿವಾದ: ಬಿಜೆಪಿ ಆರೋಪಕ್ಕೆ ಸೋನಿಯಾ ಗಾಂಧಿ ಪರವಾಗಿ ಕಾಂಗ್ರೆಸ್ ಸ್ಪಷ್ಟನೆ!ಭದ್ರಾ ನೀರಿಗಾಗಿ ಆ.18ಕ್ಕೆ ಸಿಎಂ ಜೊತೆ ಸಭೆ: ರೈತರಿಂದ ಹೆದ್ದಾರಿ ತಡೆ ಹಿಂಪಡೆತ!ವರ್ಷದೊಳಗೆ ಮೇಕೆದಾಟು ಯೋಜನೆಗೆ ಶಂಕುಸ್ಥಾಪನೆ: ಸಚಿವ ಚಲುವರಾಯಸ್ವಾಮಿ ಘೋಷಣೆ!‘RSS ನೋಂದಣಿಯೂ ಇಲ್ಲ, ಆಗೋದೂ ಇಲ್ಲ’: ಪ್ರಿಯಾಂಕ್ ಖರ್ಗೆಗೆ ಬಿ.ಎಲ್. ಸಂತೋಷ್ ತಿರುಗೇಟು!ಮಾಣಿಕ್ ಶಾ ಪೆರೇಡ್ ಮೈದಾನದಲ್ಲಿ ಧ್ವಜಾರೋಹಣ ನಡೆಸಿದ ಸಿಎಂ ಡಿ.ಕೆ. ಶಿವಕುಮಾರ್2047ರ ‘ವಿಕಸಿತ ಭಾರತ’ಕ್ಕಾಗಿ ದೊಡ್ಡ ಕನಸು ಕಾಣಲು ದೇಶದ ಜನತೆಗೆ ಪ್ರಧಾನಿ ಮೋದಿ ಕರೆ!80ನೇ ಸ್ವಾತಂತ್ರ್ಯ ದಿನಾಚರಣೆ: ಕೆಂಪುಕೋಟೆಯಲ್ಲಿ ತ್ರಿವರ್ಣ ಧ್ವಜ ಹಾರಿಸಿ ದೇಶಕ್ಕೆ ಪ್ರಧಾನಿ ಮೋದಿ ನೀಡಿದ ಸಂದೇಶಗಳಿವು!ಪೆಟ್ರೋಲ್, ಡೀಸೆಲ್ ಮೇಲಿನ ವಿಂಡ್‌ಫಾಲ್ ತೆರಿಗೆ ಕಡಿತಗೊಳಿಸಿದ ಕೇಂದ್ರ!