ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ರಾಜ್ಯ ಸರ್ಕಾರದ ಪ್ರಮುಖ ರಾಜಕೀಯ ಬೆಳವಣಿಗೆಗಳ ಹಿನ್ನೆಲೆಯಲ್ಲಿ, ಗೃಹ ಕಚೇರಿ 'ಕೃಷ್ಣಾ'ದಲ್ಲಿ ಸಂಪುಟದ ಪ್ರಮುಖ ಸಹೋದ್ಯೋಗಿಗಳು ಹಾಗೂ ಪಕ್ಷದ ಹಿರಿಯ ಮುಖಂಡರ ಉನ್ನತ ಮಟ್ಟದ ಸಭೆ ನಡೆಯಿತು.
ಈ ಮಹತ್ವದ ಸಭೆಯಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಹಿರಿಯ ನಾಯಕ ಹಾಗೂ ಸಚಿವ ಡಾ. ಜಿ. ಪರಮೇಶ್ವರ, ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್, ಸಚಿವರಾದ ಕೆ.ಜೆ. ಜಾರ್ಜ್, ಎಂ.ಬಿ. ಪಾಟೀಲ್, ಕೆ.ಎಚ್. ಮುನಿಯಪ್ಪ, ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್, ಸಚಿವರಾದ ಕೃಷ್ಣ ಬೈರೇಗೌಡ, ಪ್ರಿಯಾಂಕ್ ಖರ್ಗೆ ಹಾಗೂ ಯತೀಂದ್ರ ಸಿದ್ದರಾಮಯ್ಯ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.
ಸಭೆಯಲ್ಲಿ ಸರ್ಕಾರದ ಆಡಳಿತಾತ್ಮಕ ಕಾರ್ಯವೈಖರಿ, ಪ್ರಮುಖ ನೀತಿಗಳು, ಸಂಘಟನಾತ್ಮಕ ವಿಷಯಗಳು ಹಾಗೂ ರಾಜ್ಯದ ಅಭಿವೃದ್ಧಿ ಕಾರ್ಯಗಳ ಕುರಿತು ವಿಸ್ತೃತವಾಗಿ ಚರ್ಚೆ ನಡೆಸಲಾಗಿದೆ ಎಂದು ತಿಳಿದುಬಂದಿದೆ.



