Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸರ್ಕಾರಿ ಆಸ್ತಿ ದುರ್ಬಳಕೆ ಹಾಸ್ಟೆಲ್ ವಾರ್ಡನ್ ಅಮಾನತು

Advertisement
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಸರ್ಕಾರಿ ಆಸ್ತಿ ದುರ್ಬಳಕೆ ಹಾಗೂ ವಿದ್ಯಾರ್ಥಿ ನಿಲಯ ನಿರ್ವಹಣೆಯಲ್ಲಿನ ಕರ್ತವ್ಯ ಲೋಪ ಆರೋಪದ ಮೇರೆಗೆ ಕೋನಸಾಗರ ಪರಿಶಿಷ್ಟ ಜಾತಿ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿನಿಲಯದ ವಾರ್ಡನ್ ಫಯಾಜ್ ಬಾಷಾ ಅವರನ್ನು ಸೇವೆಯಿಂದ ಅಮಾನತುಗೊಳಿಸಿ, ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಸ್.ಜೆ.ಸೋಮಶೇಖರ್ ಆದೇಶ ಹೊರಡಿಸಿದ್ದಾರೆ.  

ಫಯಾಜ್ ಬಾಷಾ ಅವರು ಮೊಳಕಾಲ್ಮೂರು ಟೌನ್ ಪರಿಶಿಷ್ಟ ವರ್ಗಗಳ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿನಿಲಯದ ವಾರ್ಡನ್ ಆಗಿದ್ದ ಸಂದರ್ಭದಲ್ಲಿ ವಿದ್ಯಾರ್ಥಿ ನಿಲಯಕ್ಕಾಗಿ,

ಚಿತ್ರದುರ್ಗ ನಗರದ .ಯು.ಡಿ.ಪಿ ಲೇ ಔಟ್ ಸರ್ಕಾರಿ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿನಿಲಯದಲ್ಲಿ ಹೆಚ್ಚುವರಿಯಾಗಿದ್ದ 30 ಟೂ-ಟಯರ್ ಕಾಟ್, 44 ಬೆಡ್ ಮತ್ತು 36 ಪಿಲ್ಲೋಗಳನ್ನು ತೆಗೆದುಕೊಂಡು ಹೋಗಿದ್ದರು.  ವಾರ್ಡನ್ ಫಯಾಜ್ ಬಾಷಾ ಇವುಗಳಲ್ಲಿ 30 ಟೂ-ಟಯರ್ ಕಾಟ್ಗಳನ್ನು ದುರಪಯೋಗ ಪಡಿಸಿಕೊಂಡಿದ್ದಾರೆ.

 ಸರ್ಕಾರಿ ಆಸ್ತಿಗಳ ದುರ್ಬಳಕೆ, ಕರ್ತವ್ಯ ನಿರ್ಲಕ್ಷತೆ ಮತ್ತು ಬೇಜವಾಬ್ದಾರಿ ತೋರಿದ್ದಾರೆ ಎಂಬುದಾಗಿ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಹಾಗೂ ಸಮಾಜ ಕಲ್ಯಾಣ ಇಲಾಖೆ ಜಂಟಿನಿರ್ದೇಶಕರು ನೀಡಿದ ವರದಿ ಆಧರಿಸಿ, ಕೆ.ಸಿ.ಎಸ್(ಸಿ.ಸಿ.) ನಿಯಮಾವಳಿ-1957 ನಿಯಮ 10(1) ಅನ್ವಯ

ವಾರ್ಡನ್ ಫಯಾಜ್ ಬಾಷಾ ಅವರನ್ನು ಇಲಾಖಾ ವಿಚಾರಣೆ/ ಶಿಸ್ತು ಕ್ರಮ ಕಾಯ್ದಿರಿಸಿ ತಕ್ಷಣದಿಂದ ಜಾರಿಗೆ ಬರುವಂತೆ ಅಮಾನುತ್ತುಗೊಳಿಸಲಾಗಿದೆ ಎಂದು ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಸ್.ಜೆ. ಸೋಮಶೇಖರ್ ಅವರು ಆದೇಶದಲ್ಲಿ ತಿಳಿಸಿದ್ದಾರೆ.

 

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ