Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕಾಣೆಯಾಗಿದ್ದ ಮಹಿಳೆ 23 ವರ್ಷಗಳ ನಂತರ ಕುಟುಂಬಕ್ಕೆ ಸೇರ್ಪಡೆ

Advertisement
ಚಂದ್ರವಳ್ಳಿನ್ಯೂಸ್, ಬೆಂಗಳೂರುಸುಮಾರು 23 ವರ್ಷಗಳ ಹಿಂದೆ ಕಾಣೆಯಾಗಿದ್ದಬಳ್ಳಾರಿ ಜಿಲ್ಲೆಯ (ವಿಜಯನಗರಹೊಸಪೇಟೆಯ ದಣನಾಯಕನಕೆರೆಯ ಸಾಕಮ್ಮ ಅವರು ಕುಟುಂಬಕ್ಕೆ ಸೇರ್ಪಡೆಯಾಗಲು ಕಾರಣರಾದ ಸಾಮಾಜಿಕ ಜಾಲತಾಣ ಎಕ್ಸ್ ಖಾತೆಯಲ್ಲಿ ಸರ್ಕಾರದ ಪ್ರಧಾನ ಕಾರ್ಯದರ್ಶಿ ಮೇಜರ್ ಮಣಿವಣ್ಣನ್ಪಿ ಅವರನ್ನು ಟ್ಯಾಗ್ ಮಾಡಿ ಟ್ವೀಟ್ ಮಾಡಿದ್ದ ವಿಜಯಕುಮಾರ ಜಿ., ಸಮಾಜ ಕಲ್ಯಾಣ ಇಲಾಖೆ ಕಾರ್ಯಾಚರಣೆ ತಂಡದವರನ್ನು ಹಾಗೂ ಕಾಣೆಯಾಗಿದ್ದ ಮಹಿಳೆ ಸಾಕಮ್ಮ ಅವರನ್ನು ಸಚಿವ ಡಾಹೆಚ್.ಸಿಮಹದೇವಪ್ಪ ಅವರು ಅಭಿನಂದಿಸಿದರು.

                ಬೆಂಗಳೂರು ನಗರದಶಿವಾನಂದ ವೃತ್ತದ ಹತ್ತಿರವಿರುವ ಸಮಾಜ ಕಲ್ಯಾಣ ಇಲಾಖೆ ಸಚಿವರ ಅಧಿಕೃತ ನಿವಾಸದಲ್ಲಿ ಇಂದು ನಡೆದ ಪತ್ರಿಕಾಗೋಷ್ಠಿಯಲ್ಲಿ ಸಚಿವರು ಮಾತನಾಡಿಕಾಣೆಯಾಗಿದ್ದ ಮಹಿಳೆ ಹಾಗೂ ಇತರರನ್ನು ಅಭಿನಂದಿಸಿಸಾಕಮ್ಮ ಅವರನ್ನು ಅವರ ಕುಟುಂಬದವರ ವಶಕ್ಕೆ ಹಸ್ತಾಂತರಿಸಿದರು.ಕಾಣೆಯಾಗಿದ್ದ 50 ವರ್ಷದ ಮಹಿಳೆ ಸಾಕಮ್ಮ ಅವರು ಹಲವು ವರ್ಷಗಳ ನಂತರ ಆಕೆಯ ಕುಟುಂಬವನ್ನು ಸುರಕ್ಷಿತವಾಗಿ ಸೇರಿರುವುದು ಸಂಭ್ರಮದ ವಿಷಯವಾಗಿದೆ ಘಟನೆಯು ಸಲ್ಮಾನ್ ಖಾನ್ ಅವರ ಭಜರಂಗಿ ಭಾಯಿಜಾನ್ ಸಿನಿಮಾವನ್ನು ನೆನಪಿಸುತ್ತಿದೆ ಹಾಗೂ  ಘಟನೆಗೆ ಕಾರಣವಾದ ಸಾಮಾಜಿಕ ಮಾಧ್ಯಮದ ಉತ್ತಮ ಬಳಕೆಯು ಶ್ಲಾಘನೀಯವಾದುದು ಎಂದರು.

                ಮಹಿಳೆಯು ಸುಮಾರು 23 ವರ್ಷಗಳ ಹಿಂದೆ ತನ್ನ ಕುಟುಂಬ ತೊರೆದು ಕಾಣೆಯಾಗಿರುತ್ತಾರೆನಂತರ ಸುಮಾರು ಎರಡು ವರ್ಷಗಳ ಹಿಂದೆ ತಿಳಿಯದೇ ಕರ್ನಾಟಕದಿಂದ ರೈಲಿನ ಮೂಲಕ ಹಿಮಾಚಲ ಪ್ರದೇಶದ ಮಂಡಿ ಜಿಲ್ಲೆಗೆ ತಲುಪಿಕುಟುಂಬದವನ್ನು ಸೇರಲು ಸಾಧ್ಯವಾಗದೇ ಪರದಾಡುತ್ತಿದ್ದಾರೆ ಎಂಬ ವಿಚಾರವನ್ನು ಕರ್ನಾಟಕ ಮೂಲದವರಾದ ಉತ್ತರಾಖಂಡದ .ಪಿ.ಎಸ್ಅಧಿಕಾರಿ ರವಿನಂದನ್ ಅವರ ಮೂಲಕ ಮಾಹಿತಿ ಪಡೆದಿದ್ದ ಸಾಮಾಜಿಕ ಕಾರ್ಯಕರ್ತ ವಿಜಯಕುಮಾರ ಜಿಎಂಬುವರು  ವಿಷಯವನ್ನು 2024  ಡಿಸೆಂಬರ್ 19 ರಂದು ಸಾಮಾಜಿಕ ಜಾಲತಾಣ ಎಕ್ಸ್ ಖಾತೆಯಲ್ಲಿ ಸರ್ಕಾರದ ಪ್ರಧಾನ ಕಾರ್ಯದರ್ಶಿ ಮೇಜರ್ ಮಣಿವಣ್ಣನ್.ಪಿ ಅವರನ್ನು ಟ್ಯಾಗ್ ಮಾಡಿ ಟ್ವೀಟ್ ಮಾಡಿ ಸಹಾಯ ಕೋರಿದ್ದರುಅದರಂತೆ ಪ್ರಧಾನ ಕಾರ್ಯದರ್ಶಿಯವರು ತಕ್ಷಣವೇ ಸಮಾಜ ಕಲ್ಯಾಣ ಇಲಾಖೆಯ ಸಹಾಯವಾಣಿಗೆ ಟ್ಯಾಗ್ ಮಾಡಿ ಮಹಿಳೆಯನ್ನು ಮರಳಿ ಕರ್ನಾಟಕಕ್ಕೆ ಕರೆತರುವ ನಿಟ್ಟಿಯಲ್ಲಿ ಕಾರ್ಯನಿರ್ವಹಿಸುವಂತೆ ಸೂಚಿಸಿರುತ್ತಾರೆ ಎಂದು ತಿಳಿಸಿದರು.

                ಸಾಕಮ್ಮನವರ ವಿಷಯವು ನನ್ನ ಗಮನಕ್ಕೆ ಬರುತ್ತಿದ್ದಂತೆ ಅವರನ್ನು ರಾಜ್ಯಕ್ಕೆ ಕರೆತರಲು ಅಗತ್ಯ ಕ್ರಮ ತೆಗೆದುಕೊಳ್ಳುವ ಮೂಲಕಅಧಿಕಾರಿಗಳ ತಂಡವನ್ನು ವಿಮಾನದ ಮೂಲಕ ಕಳುಹಿಸಿ ಸಾಕಮ್ಮನವರನ್ನು ವಿಮಾನದಲ್ಲೇ ಸುರಕ್ಷಿತವಾಗಿ ಕರೆತರುವಂತೆ ಆದೇಶಿಸಿದೆ ಎಂದು ತಿಳಿಸಿದ ಸಚಿವರುಸರ್ಕಾರದ ಪ್ರಧಾನ ಕಾರ್ಯದರ್ಶಿ ಮೇಜರ್ ಮಣಿವಣ್ಣನ್.ಪಿ ಅವರಿಗೆ ಉತ್ತರಾಖಂಡದ .ಪಿ.ಎಸ್ಅಧಿಕಾರಿ ರವಿನಂದನ್ ಅವರೊಂದಿಗೆ ಉತ್ತಮ ಓಡನಾಟ ಇದ್ದುರಿಂದ ಅವರನ್ನು ಸಂಪರ್ಕಿಸಿ  ವಿಚಾರವನ್ನು ಮುಂದಿನ ಕ್ರಮಕ್ಕಾಗಿ ಇಲಾಖೆಯ ಅಧಿಕಾರಿಗಳು ಹಾಗೂ ಸಹಾಯವಾಣಿಗೆ ಅನುಕೂಲವಾಗುವಂತೆ ಅಗತ್ಯ ನಿರ್ದೇಶನಗಳನ್ನು ನೀಡಿದರು.

                ಸಮಾಜ ಕಲ್ಯಾಣ ಇಲಾಖೆಯ ಸಹಾಯವಾಣಿಯು  ಕುರಿತು ಕೇಂದ್ರ ಪರಿಹಾರ ಸಮಿತಿಯ ಕಾರ್ಯದರ್ಶಿ ನಾಗೇಶ್ಬಳ್ಳಾರಿ ಜಿಲ್ಲೆಯ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಮಲ್ಲಿಕಾರ್ಜುನ ಹಾಗೂ ವಿಜಯನಗರ ಜಿಲ್ಲೆಯ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಮಂಜುನಾಥ್ ಅವರನ್ನು ಸಂರ್ಪಕಿಸಿತುಎರಡು ಜಿಲ್ಲೆಗಳ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು ಬಳ್ಳಾರಿ ಜಿಲ್ಲೆಯ ಜಿಲ್ಲಾಧಿಕಾರಿ ಪ್ರಶಾಂತ್ ಮಿಶ್ರಾ ಅವರೊಂದಿಗೆ ಸಮನ್ವಯ ಸಾಧಿಸಿಜಿಲ್ಲಾಧಿಕಾರಿಯವರ ಅನುಮೋದನೆ ಪಡೆದು ಅವರ ನಿರ್ದೇಶನದಂತೆ ಓರ್ವ ಮಹಿಳಾ ಅಧಿಕಾರಿ ಸೇರಿದಂತೆ ಮೂವರು ಅಧಿಕಾರಿಗಳನ್ನು ಕಾರ್ಯಾಚರಣೆಗೆ ನಿಯೋಜಿಸಿದರುವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿಯ ಸಮಾಜ ಕಲ್ಯಾಣ ಇಲಾಖೆಯ ಹಿರಿಯ ಅಧೀಕ್ಷಕ ಬಸವರಾಜಬಳ್ಳಾರಿ ಜಿಲ್ಲೆಯ ಎನ್.ಪಿ.ಕೆ ಕೇಂದ್ರದ ವಾರ್ಡನ್ಬಳ್ಳಾರಿ ಜಿಲ್ಲೆಯ ಸಮಾಜ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕಿಯರ ವಸತಿ ನಿಲಯದ ವಾರ್ಡನ್ ಭಾರತಿಯವರು ಕಾರ್ಯಾಚರಣೆ ತಂಡದಲ್ಲಿ ಇದ್ದರು ಎಂದು ತಿಳಿಸಿದರು.

                 ತಂಡವು 2024  ಡಿಸೆಂಬರ್ 21 ರಂದು ಚಂಡೀಗಢವನ್ನು ತಲುಪಿನಂತರ ಸಾಕಮ್ಮ ಅವರು ಇದ್ದ ಹಿಮಾಚಲ ಪ್ರದೇಶದ ಮಂಡಿ ಜಲ್ಲೆಯ ಬಾಲ್ವಲಿ ಕಲ್ಯಾಣ ಸಭಾ (ವೃದ್ದಾಶ್ರಮ)ವನ್ನು ತಲುಪಿದರುಸಾಕಮ್ಮ ಅವರ ಆರೋಗ್ಯವನ್ನು ವಿಚಾರಿಸಿದ ಅಧಿಕಾರಿಗಳು ವೀಡಿಯೋ ಕರೆ ಮೂಲಕ ಸಾಕಮ್ಮ ಅವರ ಕುಟುಂಬದೊದಿಗೆ ಸಂಪರ್ಕ ಸಾಧಿಸುವಲ್ಲಿ ಯಶಸ್ವಿಯಾದರು

 ವೇಳೆ ಆಕೆಗೆ 3 ಮಕ್ಕಳಿದ್ದುಅವರು ತಮ್ಮ ತಾಯಿಯನ್ನು ಸ್ವೀಕರಿಸಲು ಕಾಯುತ್ತಿದ್ದಾರೆ ಎಂದು ಅಧಿಕಾರಿಗಳು ಖಚಿತಪಡಿಸಿಕೊಂಡು ವಿಡಿಯೋ ಮೂಲಕ ಮಾಹಿತಿ ನೀಡಿದರುಮರುದಿನ ಸಾಕಮ್ಮ ಅವರನ್ನು ನಮ್ಮ ಅಧಿಕಾರಿಗಳಿಗೆ ಬಾಲ್ ಕಣಿವೆ ಮ್ಯಾಜಿಸ್ಟ್ರೇಟ್ ಉಪ ವಿಭಾಗ ಸ್ಮೃತಿಕಾ ನೇಗಿ ಹಾಗೂ ಧರಮ್ ಶೀಲಾ ಅವರು ಮಹಿಳೆಯ ಹಸ್ತಾಂತರ ಪ್ರಕ್ರಿಯೆಯನ್ನು ಪೂರ್ಣಗೊಳಿದರು.

 ಸಾಕಮ್ಮನವರು 2024  ಡಿಸೆಂಬರ್ 24  ಮಂಗಳವಾರ ಮಧ್ಯಾಹ್ನ 12 ಗಂಟೆಗೆ ಸಮಾಜ ಕಲ್ಯಾಣ ಇಲಾಖೆಯ ತಂಡದೊದಿಗೆ ಚಂಢೀಗಢ ವಿಮಾನ ನಿಲ್ದಾಣವನ್ನು ತಲುಪಿದ ನಂತರ ರಾತ್ರಿ 08.30ಕ್ಕೆ ದೇವನಹಳ್ಳಿ ವಿಮಾನ ನಿಲ್ದಾಣದ ಮೂಲಕ ಬೆಂಗಳೂರು ತಲುಪಿದರು ಎಂದು ಸಚಿವರು ಘಟನೆಯನ್ನು ವಿವರಿಸಿದರುಇಂದು ಸಾಕಮ್ಮ ಅವರನ್ನು ಅವರ ಕುಟುಂಬದವರ ವಶಕ್ಕೆ ಒಪ್ಪಿಸಲಾಗಿದೆ ಎಂದರು.
 ಪತ್ರಿಕಾಗೋಷ್ಠಿಯಲ್ಲಿ ಸಮಾಜ ಕಲ್ಯಾಣ ಇಲಾಖೆಯ ಕಾರ್ಯದರ್ಶಿ ರಣದೀಪ್ ಡಿಸೇರಿದಂತೆ ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ