ಚಂದ್ರವಳ್ಳಿ ನ್ಯೂಸ್, ಮಂಡ್ಯ:
ಮಳವಳ್ಳಿ ಕ್ಷೇತ್ರದ ಶಾಸಕರಾದ ಪಿ.ಎಂ. ನರೇಂದ್ರಸ್ವಾಮಿ ಅವರ ಸಹೋದರ ಶ್ರೀ ಪಿ.ಎಂ. ಪರಶಿವಾಮೂರ್ತಿ ಅವರು ನಿಧನರಾದ ಸುದ್ದಿ ತಿಳಿದು ತೀವ್ರ ದುಃಖವಾಯಿತು ಎಂದು ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
“ಪರಶಿವಾಮೂರ್ತಿ ಅವರು ಸಜ್ಜನಿಕೆಯ, ಸರಳತೆಯ ಪ್ರತೀಕವಾಗಿದ್ದರು. ಸಾಮಾಜಿಕ ಕಾರ್ಯಗಳಲ್ಲಿ ಸದಾ ಮುಂಚೂಣಿಯಲ್ಲಿದ್ದ ಅವರು ಎಲ್ಲರೊಂದಿಗೆ ಆತ್ಮೀಯ ಒಡನಾಟ ಹೊಂದಿದ್ದರು. ಅವರ ಅಗಲಿಕೆ ಕುಟುಂಬಕ್ಕೆ ಹಾಗೂ ಮಳವಳ್ಳಿ ಭಾಗದ ಜನತೆಗೆ ತುಂಬಲಾರದ ನಷ್ಟ. ಶಾಸಕ ನರೇಂದ್ರಸ್ವಾಮಿ ಅವರಿಗೆ ಈ ದುಃಖ ಭರಿಸುವ ಶಕ್ತಿಯನ್ನು ಭಗವಂತ ಕರುಣಿಸಲಿ.”
“ಮೃತರ ಆತ್ಮಕ್ಕೆ ಚಿರಶಾಂತಿ ಕೋರುತ್ತೇನೆ. ಅವರ ಕುಟುಂಬ ವರ್ಗ, ಬಂಧು-ಬಳಗ ಹಾಗೂ ಅಭಿಮಾನಿಗಳ ದುಃಖದಲ್ಲಿ ನಾನೂ ಭಾಗಿಯಾಗಿದ್ದೇನೆ” ಎಂದು ಸಚಿವರು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.


