Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವಿದ್ಯಾರ್ಥಿಗಳಿಗೆ ಬದುಕು ರೂಪಿಸಿಕೊಳ್ಳುವ ಶಿಕ್ಷಣ ಅಗತ್ಯವಿದೆ: ಶಾಸಕ ರಘುಮೂರ್ತಿ

Advertisement
ಚಂದ್ರವಳ್ಳಿ ನ್ಯೂಸ್, ಚಳ್ಳಕೆರೆ:
ಪ್ರಸ್ತುತ ರಾಜ್ಯ ಸರ್ಕಾರ ಕಾಲೇಜು ಶಿಕ್ಷಣವೂ ಸೇರಿದಂತೆ ಎಲ್ಲಾ ಹಂತಗಳಲ್ಲೂ ಶೈಕ್ಷಣಿಕ ಅಭಿವೃದ್ದಿಗೆ ಪೂರಕವಾದ ವಾತಾವರಣ ನಿರ್ಮಿಸುತ್ತಿದೆ. ಪದವಿ ಪೂರ್ವ ಹಾಗೂ ಪದವಿ ಶಿಕ್ಷಣದ ನಂತರ ವಿದ್ಯಾರ್ಥಿಗಳು ತಮ್ಮ ಬದುಕನ್ನು ಭದ್ರಪಡಿಸಿಕೊಳ್ಳಲು ಕೆಲಸದ ಮೊರೆ ಹೋಗತ್ತಾರೆ. ಈ ಹಿನ್ನೆಲೆಯಲ್ಲಿ ಸರ್ಕಾರ ತಾಂತ್ರಿಕ ಆಧಾರಿತ ಶಿಕ್ಷಣ ನೀಡುವ ಚಿಂತನೆ ನಡೆಸಿದೆ ಎಂದು ಕ್ಷೇತ್ರದ ಶಾಸಕ
, ಸಣ್ಣಕೈಗಾರಿಕೆ ಅಭಿವೃದ್ದಿಮಂಡಳಿ ಅಧ್ಯಕ್ಷ ಟಿ.ರಘುಮೂರ್ತಿ ತಿಳಿಸಿದರು.

ಅವರು, ಶನಿವಾರ ತಾಲ್ಲೂಕಿನ ಪರಶುರಾಮಪುರ ಪದವಿಪೂರ್ವ ಕಾಲೇಜು ಆವರಣದಲ್ಲಿ ಹಮ್ಮಿಕೊಂಡಿದ್ದ ಸಾಂಸ್ಕೃತಿ, ಕ್ರೀಡೆ, ರಾಷ್ಟ್ರೀಯಸೇವಾಯೋಜನೆ, ಸ್ಕೌಟ್ಸ್ ಅಂಡ್ ಗೈಡ್ಸ್ ಸಮಾರೋಪ ಸಮಾರಂಭ ಮತ್ತು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಬೀಳ್ಕೊಡಿಗೆ ಸಮಾರಂಭವನ್ನು ಜ್ಯೋತಿಬೆಳಗುವ ಮೂಲಕ ಉದ್ಘಾಟಿಸಿ ಮಾತನಾಡಿದರು. ಪರಶುರಾಮಪುರದ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿದ್ಧಾರೆ.

ಉತ್ತಮ ಕಲಿಕೆಯಿಂದ ಮಾತ್ರ ವಿದ್ಯಾರ್ಥಿಗಳ ಶೈಕ್ಷಣಿಕ ಅಭಿವೃದ್ದಿ ಸಾಧ್ಯ. ಕಲಿಕಾ ಅವಧಿಯಲ್ಲಿ ಯಾವ ವಿದ್ಯಾರ್ಥಿ ನಿರ್ಲಕ್ಷ್ಯೆ ವಹಿಸುತ್ತಾನೋ ಅವನು ನಿರೀಕ್ಷೆಗೂ ಮೀರಿ ಹಿನ್ನಡೆ ಅನುಭವಿಸುತ್ತಾನೆ. ಇತ್ತೀಚೆಗೆ ಸರ್ಕಾರ ಪ್ರತಿಕಾಲೇಜುನಲ್ಲೂ ಗುಣಾತ್ಮಕ ಶಿಕ್ಷಣ ದೊರೆಯುವ ವ್ಯವಸ್ಥೆ ಮಾಡಿದೆ. ಸರ್ಕಾರ ಪ್ರತಿವರ್ಷ ಲಕ್ಷಾಂತರ ರೂ ವೆಚ್ಚದಲ್ಲಿ ವಿದ್ಯಾರ್ಥಿಗಳಿಗೆ ಬೋಧನೆ ನೀಡುತ್ತಿದೆ. ಅಷ್ಟೇ ವೇಗದಲ್ಲಿ ವಿದ್ಯಾರ್ಥಿಗಳು ಪ್ರಗತಿಯತ್ತ ದಾಪುಗಾಲಿಡಬೇಕೆಂದರು.

ಪ್ರಾಸ್ತಾವಿಕವಾಗಿ ಮಾತನಾಡಿದ ಕಾಲೇಜು ಪ್ರಾಂಶುಪಾಲ ನಾಗರಾಜು, ಕ್ಷೇತ್ರದ ಶಾಸಕ ಟಿ.ರಘುಮೂರ್ತಿ ಮಾರ್ಗದರ್ಶನದಲ್ಲಿ ಕಾಲೇಜು ಶೈಕ್ಷಣಿಕ ಅಭಿವೃದ್ದಿಯಲ್ಲಿ ಮುನ್ನಡೆ ಸಾಧಿಸಿದೆ. ಕಾಲೇಜಿಗೆ ಬಹುತೇಕ ಎಲ್ಲಾ ಮೂಲಭೂತ ಸೌಕರ್ಯವನ್ನು ಒದಗಿಸುವ ಮೂಲಕ ಶಾಸಕರು ಕಲಿಕೆಯ ಒತ್ತಡವನ್ನು ಕಡಿಮೆಗೊಳಿಸಿದ್ಧಾರೆ. ಕಾಲೇಜಿನಲ್ಲಿ ಬೋಧನೆ ನೀಡುತ್ತಿರುವ ಎಲ್ಲಾ ಉಪನ್ಯಾಸಕರು ಮಕ್ಕಳಿಗೆ ಉತ್ತಮ ಜ್ಞಾನವನ್ನು ಕಲಿಸುವಲ್ಲಿ ಯಶಸ್ವಿಯಾಗಿದ್ಧಾರೆಂದರು.

ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಎಂ.ಆರ್.ರುದ್ರೇಶ್, ಜಿಲ್ಲಾ ಗ್ಯಾರಂಟಿ ಸಮಿತಿ ಅಧ್ಯಕ್ಷ ಚನ್ನಕೇಶವ, ಕೆಡಿಪಿ ಸದಸ್ಯ ಬಸವರಾಜು, ಪಶುರಾಂಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶಶಿಧರ, ಮುಖಂಡರಾದ ನಾಗಭೂಷಣ, ಕೃಷ್ಣಪ್ಪ, ಜಗಳೂರು ಸ್ವಾಮಿ, ಪ್ರಕಾಶ್, ರಂಗಸ್ವಾಮಿ, ನಾಗರಾಜು ಮುಂತಾದವರು ಉಪಸ್ಥಿತರಿದ್ದರು.
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ