Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Education News

35 ಕೋಟಿಯಲ್ಲಿ 150 ಶಾಲಾ ಕಾಲೇಜ್ ಕೊಠಡಿ ನಿರ್ಮಾಣ-ಶಾಸಕ ರಘುಮೂರ್ತಿ

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ನನ್ನ ಕ್ಷೇತ್ರದಲ್ಲಿ ಶಾಲಾ ಕಾಲೇಜುಗಳ ಅಭಿವೃದ್ಧಿಗೆ ಸುಮಾರು ೩೫ ಕೋಟಿಗೂ ಹೆಚ್ಚಿನ ಅನುದಾನದಲ್ಲಿ ನೀಡಿದ್ದು 150ಕ್ಕೂ ಹೆಚ್ಚು ನೂತನ ಕೊಠಡಿಗಳನ್ನು ನಿರ್ಮಾಣ ಮಾಡಲಾಗುತ್ತಿದೆ ಎಂದು ಸಣ್ಣ ಕೈಗಾರಿಕೆ ನಿಗಮದ ಅಧ್ಯಕ್ಷ ಹಾಗೂ ಚಳ್ಳಕೆರೆ ಶಾಸಕ ಟಿ.ರಘುಮೂರ್ತಿ ಹೇಳಿದರು.

ಚಿತ್ರದುರ್ಗ ತಾಲೂಕಿನ ತುರುವನೂರು ಹೋಬಳಿಯಲ್ಲಿ ಮುದ್ದಾಪುರ ಗ್ರಾಮದಲ್ಲಿ ಶನಿವಾರ ಆರ್.ಐ.ಡಿ.ಎಫ್. ನಬಾರ್ಡ್ ಯೋಜನೆಯಡಿ ಮುದ್ದಾಪುರ ಗ್ರಾಮದಲ್ಲಿ ನೂತನವಾಗಿ ನಿರ್ಮಾಣವಾಗಿದ್ದ  ೬ ಶಾಲಾ ಕೊಠಡಿಗಳ ಉದ್ಘಾಟನೆ ಮತ್ತು ವಿವಿಧ ಕಾರ್ಯಕ್ರಮಗಳ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು.

ಗ್ರಾಮೀಣ ಭಾಗದಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲಾ ಕಟ್ಟಡಗಳ ನಿರ್ಮಾಣಕ್ಕೆ ಶಾಸಕರ ಅನುದಾನ, ಡಿಎಂಎಫ್, ನಬರ್ಡ್, ಸಿಎಂ ವಿಶೇಷ ಅನುದಾನ, ರಾಜ್ಯ ವಲಯ ಸೇರಿ ಸುಮಾರು ೩೫ ಕೋಟಿ ವೆಚ್ಚದಲ್ಲಿ ಅತ್ಯಗತ್ಯವಾಗಿರುವ ಕಡೆ ನೂತನ ಕಟ್ಟಡಗಳನ್ನು ಇಡೀ ಚಳ್ಳಕೆರೆ ಕ್ಷೇತ್ರದಲ್ಲಿ ನಿರ್ಮಾಣವನ್ನು ಮಾಡಲಾಗುತ್ತಿದೆ.

ನನಗೆ ಬರುವಂತಹ ಶಾಸಕರ ಅನುದಾನದಲ್ಲಿ ಮೊದಲ ಆದ್ಯತೆ ಶಾಲೆಗಳ ಮಾಲಭೂತ ಸೌಲಭ್ಯಕ್ಕೆ ನೀಡುತ್ತಿದ್ದೇನೆ. ಚಳ್ಳಕೆರೆ ನಗರದಲ್ಲಿ ಬಿಎಂಹೆಚ್ ಎಸ್ ೬ ಕೊಠಡಿ, ಮತ್ತು ಹೆಗ್ಗೆರೆ ತಾಯಮ್ಮ ಶಾಲೆ ೬ ಕೊಠಡಿ, ಕ್ಷೇತ್ರ ಮಾದರಿ ಬಾಲಕರ ಶಾಲೆ ೬ ಕೊಠಡಿ, ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ೬ ಕೊಠಡಿ ಸೇರಿ ೨೪ ನೂತನ ಕಟ್ಟಡಗಳನ್ನು ನಿರ್ಮಾಣ ಮಾಡಿ ಈಗಾಗಲೇ ಲೋಕಾರ್ಪಣೆ ಮಾಡಲಾಗಿದೆ ಎಂದರು.

ತುರುವನೂರು ಹೋಬಳಿಯ ತುರುವನೂರು ಗ್ರಾಮದಲ್ಲಿ ಐದು ಕೋಟಿ ವೆಚ್ಚದಲ್ಲಿ ಪದವಿ ಕಾಲೇಜು ನಿರ್ಮಾಣ ಮಾಡಿದ್ದು ಉದ್ಘಾಟನೆ ಹಂತದಲ್ಲಿದೆ. ಚಿಕ್ಕಗೊಂಡನಹಳ್ಳಿ ಪ್ರಾಥಮಿಕ ಶಾಲೆಗೆ ೬ ಕೊಠಡಿ, ಕೂನಬೇವು ಪ್ರಾಥಮಿಕ ಶಾಲೆಗೆ ೪ ಕೊಠಡಿ, ತುರುವನೂರು ಪ್ರೌಢಶಾಲೆಗೆ ೬ ಕೊಠಡಿ ನಿರ್ಮಾಣಕ್ಕೆ ಅನುದಾನ ನೀಡಿದ್ದು ಮುದ್ದಪುರದಲ್ಲಿ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ೬೬ ಲಕ್ಷದ ೬ ಕೊಠಡಿಗಳನ್ನು ಇಂದು ಉದ್ಘಾಟನೆ  ಮಾಡಿದ್ದೇನೆ.

ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಅವಶ್ಯಕತೆ ಇದ್ದು, ಶಿಕ್ಷಣದಿಂದ ನಾವೆಲ್ಲರೂ ವಂಚಿತರಾಗಬಾರದು. ಶಿಕ್ಷಣಕ್ಕಾಗಿ ಸರ್ಕಾರ ಹಲವಾರು ಯೋಜನೆಗಳನ್ನು ಜಾರಿಗೊಳಿಸಿದೆ. ಮಕ್ಕಳಿಗೆ ಉಚಿತ ಶಿಕ್ಷಣ, ಉಚಿತ ಸಮವಸ್ತ್ರ, ಕ್ಷೀರಭಾಗ್ಯ, ಮೊಟ್ಟೆ ಸೇರಿ ಹಲವು ಸೌಲಭ್ಯ ಒದಗಿಸಲಾಗಿದೆ. ಪೋಷಕರು ಕಡ್ಡಾಯವಾಗಿ ಮಕ್ಕಳನ್ನು ಶಾಲೆಗೆ ಕಳುಹಿಸುವ ಮೂಲಕ ಮಕ್ಕಳಿಗೆ ಶಿಕ್ಷಣವನ್ನು ಕೊಡಿಸಬೇಕು ಎಂದು ಮನವಿ ಮಾಡಿದರು.

ಶಿಕ್ಷಣದಿಂದಲೇ ದೇಶದ ಅಭಿವೃದ್ಧಿ ಸಾಧ್ಯವಾಗಲಿದೆ. ಒಂದು ಹೆಣ್ಣು ಮಗು ಶಾಲೆ ಕಲಿತರೆ, ಇಡೀ ಕುಟುಂಬವೆ ಶಾಲೆ ಕಲಿತಂತೆ. ಈ ಹಿನ್ನೆಲೆಯಲ್ಲಿ ಗಂಡು, ಹೆಣ್ಣು ತಾರತಮ್ಯ ಮಾಡದೇ ಎಲ್ಲಾರೂ ಅಭ್ಯಾಸ ಮಾಡಬೇಕು.



ಕ್ಷೇತ್ರದಲ್ಲಿ  ಅಂಗವಾಡಿ ಕೇಂದ್ರಗಳು, ಶಾಲಾ ಕಟ್ಟಡಗಳು, ಆಸ್ಪತ್ರೆಗಳು, ರಸ್ತೆ, ಬ್ರಿಡ್ಜ್ ಕಂ ಬ್ಯಾರೇಜ್‌ಗಳಂತಹ ಹಲವಾರು ಅಭಿವೃದ್ಧಿ ಕಾಮಗಾರಿಗಳನ್ನು ಮಾಡಲಾಗಿದೆ. ಕಾಂಗ್ರೆಸ್ ಸರ್ಕಾರ ಬಡವರ ಪರವಾಗಿದ್ದು, ಬಡವರಿಗಾಗಿ ಅನೇಕ ಯೋಜನೆಗಳನ್ನು ರೂಪಿಸಲಾಗಿದೆ ಎಂದು ತಿಳಿಸಿದರು.

 

Advertisement

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಸಾಪ ಮಾಜಿ ಜಿಲ್ಲಾಧ್ಯಕ್ಷ, ಶಿಕ್ಷಣತಜ್ಞ ಡಾ. ಕೆ.ಎಂ. ವೀರೇಶ್ ಹೃದಯಾಘಾತದಿಂದ ನಿಧನದುರ್ಗಕ್ಕೆ ಹರಿದು ಬಂದ ಭದ್ರೆ- ಸೆ.24ರಂದು ಮುಖ್ಯಮಂತ್ರಿಗಳಿಂದ ಗಂಗಾಪೂಜೆ,  ಬೃಹತ್ ಸಾರ್ವಜನಿಕ ಸಮಾರಂಭಆರ್.ಎಲ್ ಜಾಲಪ್ಪ ತಾಂತ್ರಿಕ ಮಹಾವಿದ್ಯಾಲಯದಲ್ಲಿ 22ನೇ ಘಟಿಕೋತ್ಸವ ಮತ್ತು ಪದವಿ ಪ್ರದಾನ ಕಾರ್ಯಕ್ರಮನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ ಬೈಕ್ ಸವಾರ ಸಾವುಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ಸರ್ವ ಸದಸ್ಯರ ವಾರ್ಷಿಕ ಸಭೆ ಹೋರಾಟಗಳಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಪ್ರಾತಿನಿಧ್ಯ ಕಡಿಮೆ- ಚಿಕ್ಕಪ್ಪನಹಳ್ಳಿ ಷಣ್ಮುಖಕುಂಚಿಟಿಗ ನೌಕರರ ಸಂಘಕ್ಕೆ ಸದಸ್ಯರಾಗಿ: ಎಸ್.ಕೆ ಲಕ್ಷ್ಮಣ್ಚಳವಳಿ ನೆನಪಾಗಿ ಉಳಿದ ‘ತೆಂಕ-ಬಡಗ’ಅಂತಾರಾಷ್ಟ್ರೀಯ ಶಾಂತಿ ದಿನ – ಮನದ ದ್ವೇಷ ಕರಗಿದಾಗಲೇ ಜಗದ ಶಾಂತಿ ಅರಳುವುದು!ಗಣಪತಿ ಮೆರವಣಿಗೆ ವೇಳೆ ಗಲಾಟೆ 7 ಯುವಕರ ವಿರುದ್ಧ ಸುಮೋಟೋ ಪ್ರಕರಣ ದಾಖಲು