Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ನಿರೀಕ್ಷಗೂ ಮೀರಿದ ಸಮೃದ್ಧಿ ಮಳೆ-ಶಾಸಕ ರಘುಮೂರ್ತಿ

Advertisement
ಚಂದ್ರವಳ್ಳಿ ನ್ಯೂಸ್, ಚಳ್ಳಕೆರೆ:
ಈ ಬಾರಿ ಬಂದ ಮಳೆಯಿಂದ ಬರಗಾಲದ ಹಣೆಪಟ್ಟಿಯಿಂದ ನಮ್ಮ ಕ್ಷೇತ್ರ ದೂರವಾಗಿದೆ. ಸಮೃದ್ದಿ ಮಳೆಯಿಂದ ಜನರು, ಜಾನುವಾರುಗಳಿಗೆ ಮೇವು ನೀರಿನ ಕೊರತೆ ನೀಗಿದೆ ಎಂದು ಕ್ಷೇತ್ರದ ಶಾಸಕ, ಸಣ್ಣಕೈಗಾರಿಕೆ ಅಭಿವೃದ್ದಿಮಂಡಳಿ ಅಧ್ಯಕ್ಷ ಟಿ.ರಘುಮೂರ್ತಿ ತಿಳಿಸಿದರು.

ಅವರು, ಅಜ್ಜಯ್ಯನಗುಡಿ ಕೆರೆ ತುಂಬಿಕೋಡಿಬಿದ್ದ ಹಿನ್ನೆಲೆಯಲ್ಲಿ ಬಾಗಿನ ಅರ್ಪಿಸಿ ಮಾತನಾಡಿದರು. ನಗರ ಪ್ರದೇಶ ವ್ಯಾಪ್ತಿಯ ಅಜ್ಜಯ್ಯಗುಡಿಕೆರೆಗೂ ಸಹ ಬಾಗಿನ ಅರ್ಪಿಸುವ ಪುಣ್ಯದೊರಕಿದ್ದು ನನಗೆ ಹೆಚ್ಚು ಸಂತಸ ತಂದಿದೆ.

ಪ್ರಸ್ತುತ ವರ್ಷ ತಾಲ್ಲೂಕಿನಾದ್ಯಂತ ಗ್ರಾಮ ದೇವತೆ ಚಳ್ಳಕೆರೆಯಮ್ಮ, ಶ್ರೀಜಗಲೂರಜ್ಜಸ್ವಾಮಿ, ವೀರಭದ್ರಸ್ವಾಮಿ, ಉಡಲಸಮ್ಮ ಸೇರಿದಂತೆ ಎಲ್ಲಾ ದೇವರುಗಳ ಕೃಪೆಯಿಂದ ನಿರೀಕ್ಷೆಗೂ ಮೀರಿ ಉತ್ತಮ ಹದ ಮಳೆಯಾಗಿದೆ. ಕೇವಲ ಎರಡು ತಿಂಗಳ ಅವಧಿಯಲ್ಲಿ ಸಾವಿರಕ್ಕೂ ಹೆಚ್ಚು ಎಂ.ಎಂ.ಮಳೆಯಾಗಿದ್ದು, ಎಲ್ಲೆಡೆ ಕೆರೆಗಳು ತುಂಬಿ ಕೋಡಿಬಿದ್ದಿವೆ.

ತಾಲ್ಲೂಕಿನಾದ್ಯಂತ ಗಂಗಾದೇವತೆ ದರ್ಶನವಾಗುತ್ತಿದೆ. ಅಜ್ಜಯ್ಯನಗುಡಿ ಕೆರೆಯೂ ಸಹ ಕೋಡಬಿದ್ದಿದ್ದು, ಬಾಗಿನ ಅರ್ಪಿಸಿ, ಗಂಗಾಪೂಜೆ ನೆರವೇರಿಸಿ ಮುಂದಿನ ದಿನಗಳಲ್ಲೂ ಇದೇ ರೀತಿ ಕರುಣೆ ತೋರುವಂತೆ ದೇವರನ್ನು ಪ್ರಾರ್ಥಿಸಿರುವುದಾಗಿ ತಿಳಿಸಿದರು.

ನಗರಸಭೆ ಅಧ್ಯಕ್ಷೆ ಜೈತುಂಬಿ, ಉಪಾಧ್ಯಕ್ಷೆ ಸುಜಾತ, ಸದಸ್ಯರಾದ ಕೆ.ವೀರಭದ್ರಪ್ಪ, ಬಿ.ಟಿ.ರಮೇಶ್‌ಗೌಡ, ಎಂ.ಜೆ.ರಾಘವೇಂದ್ರ, ಸುಮಭರಮಣ್ಣ, ಕವಿತಾಬೋರಯ್ಯ, ಮಲ್ಲಿಕಾರ್ಜುನ್, ನಾಮಿನಿ ಸದಸ್ಯರಾದ ಅನ್ವರ್‌ಮಾಸ್ಟರ್, ಬಡಗಿಪಾಪಣ್ಣ, ಆರ್.ವೀರಭದ್ರಿ, ಕೆಡಿಪಿ ಸದಸ್ಯ ಸುರೇಶ್, ಮುಖಂಡರಾದ ಸಿ.ಟಿ.ಶ್ರೀನಿವಾಸ್, ಬೋರಯ್ಯ, ಭರಮಣ್ಣ, ವ್ಯವಸ್ಥಾಪಕ ಲಿಂಗರಾಜು, ಹಿರಿಯ ಆರೋಗ್ಯ ನಿರೀಕ್ಷಕರಾದ ಗಣೇಶ್, ಗೀತಾಕುಮಾರಿ ಮುಂತಾದವರು ಉಪಸ್ಥಿತರಿದ್ದರು.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ