Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Feature Article

ರೈತರು ಹೈನುಗಾರಿಕೆ ಮೂಲಕ ಆರ್ಥಿಕ ಸದೃಢ-ಶಾಸಕ ಟಿ.ರಘುಮೂರ್ತಿ

ಚಂದ್ರವಳ್ಳಿ ನ್ಯೂಸ್, ಚಳ್ಳಕೆರೆ:
ರೈತ ಸಮುದಾಯ ತನ್ನ ಆರ್ಥಿಕ ಸ್ವಾಲಂಬನೆಗಾಗಿ ಕೃಷಿ ಮೇಳೆಯೇ ಅವಲಂಬಿತವಾಗಿದೆ. ಆದರೆ
, ಇತ್ತೀಚಿನ ದಿನಗಳಲ್ಲಿ ಹೈನುಗಾರಿಕೆಯಿಂದಲೂ ಹೆಚ್ಚು ಲಾಭವನ್ನು ಪಡೆಯಲು ಆರಂಬಿಸಿದ್ಧಾರೆ. ಕೃಷಿ, ತೋmಗಾರಿಕೆ ಬೆಳೆಯ ಜೊತೆಗೆ ಹೈನುಗಾರಿಕೆಯನ್ನೂ ಒಗ್ಗೂಡಿಸಿಕೊಂಡು ಉತ್ತಮ ಲಾಭಪಡೆಯಬೇಕೆಂದು ಕ್ಷೇತ್ರದ ಶಾಸಕ, ಸಣ್ಣಕೈಗಾರಿಕೆ ಅಭಿವೃದ್ದಿಮಂಡಳಿ ಅಧ್ಯಕ್ಷ ಟಿ.ರಘುಮೂರ್ತಿ ತಿಳಿಸಿದರು.

ಅವರು, ಮಂಗಳವಾರ ನಗರಂಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನರಹರಿನಗರದಲ್ಲಿ ನರಹರಿ ಸೇವಾಪ್ರತಿಷ್ಠಾನ, ಪಶುಪಾಲನ ಮತ್ತು ಪಶುವೈದ್ಯ ಇಲಾಖೆ, ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ ಜಿಲ್ಲಾ ಸಹಕಾರ ಹಾಲು ಉತ್ಪಾದಕ ಸಂಘಗಳ ಒಕ್ಕೂಟ, ನರಹರಿನಗರ ಹಾಲುಉತ್ಪಾದಕರ ಸಹಕಾರ ಸಂಘ, ನಗರಂಗೆರೆ ಗ್ರಾಮ ಪಂಚಾಯಿತಿ ವತಿಯಿಂದ ಆಯೋಜಿಸಿದ್ದ ಒಂದುದಿನದ ಮಿಶ್ರತಳಿ ಹಸು-ಕರು ಪ್ರದರ್ಶನ ಮತ್ತು ಬರಡು ರಾಸುಗಳ ಚಿಕಿತ್ಸಾ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು.

ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ ಹಾಲುಒಕ್ಕೂಟ ಈ ಕಾರ್ಯಕ್ರಮವನ್ನು ಆಯೋಜಿಸುವಲ್ಲಿ ಪ್ರಧಾನ ಪಾತ್ರ ವಹಿಸಿದೆ. ವಿಶೇಷವಾಗಿ ಮಿಶ್ರತಳಿಹಸು-ಕರು ಪ್ರದರ್ಶನ, ಬಡರು ರಾಸುಗಳ ಚಿಕಿತ್ಸಾ ಶಿಬಿರ ಹಮ್ಮಿಕೊಳ್ಳಲಾಗಿದೆ. ಹೈನುಗಾರಿಕೆಗೆ ಹೆಚ್ಚು ಪ್ರೋತ್ಸಾಹವನ್ನು ನೀಡಲು ಈ ಕಾರ್ಯಕ್ರಮ ಯೋಜಿಸಿದೆ. ಸಹಕಾರಿ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಹಾಲು ಒಕ್ಕೂಟವೂ ಸಹ ಸೇರ್ಪಡೆಯಾಗಿದೆ.

ನಾನು ಸಹ ಕಳೆದ ಹಲವಾರು ವರ್ಷಗಳ ಜಿಲ್ಲಾ ಡಿಸಿಸಿ ಬ್ಯಾಂಕ್ ನಿರ್ದೇಶಕನಾಗಿ ಸಹಕಾರಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವೆ. ಹೈನುಗಾರಿಕೆಗೆ ಹೆಚ್ಚು ಆದ್ಯತೆ ನೀಡಲು ಸಹಕಾರಿ ಕ್ಷೇತ್ರದಲ್ಲೂ ಹಲವಾರು ಯೋಜನೆಗಳಿವೆ ರೈತರು ಇದರ ಮಾಹಿತಿ ಪಡೆದು ಯೋಜನೆಗಳ ಸದುಪಯೋಗಕ್ಕೆ ಮುಂದಾಗಬೇಕಿದೆ. ಒಕ್ಕೂಟದ ಅಧಿಕಾರಿಗಳು ಹಾಗೂ ನಿರ್ದೇಶಕರು ಹೈನುಗಾರಿಕೆಯನ್ನು ಗ್ರಾಮ, ಗ್ರಾಮಗಳಿಗೂ ವಿಸ್ತರಿಸುವಂತೆ ಮನವಿ ಮಾಡಿದರು.

ಪ್ರಾಸ್ತಾವಿಕವಾಗಿ ಮಾತನಾಡಿದ ಶಿವಮೊಗ್ಗ ಹಾಲುಒಕ್ಕೂಟದ ಜಿಲ್ಲಾ ನಿರ್ದೇಶಕ, ಸಹಕಾರಿ ದುರೀಣ ಬಿ.ಸಿ.ಸಂಜೀವಮೂರ್ತಿ, ಚಿತ್ರದುರ್ಗ ಜಿಲ್ಲೆಯಲ್ಲಿ ಹೈನುವಾರಿಕೆಯನ್ನು ಅಭಿವೃದ್ದಿ ಪಡಿಸುವ ನಿಟ್ಟಿನಲ್ಲಿ ಎಲ್ಲಾ ತಾಲ್ಲೂಕು ಕೇಂದ್ರಗಳಿಗೆ ಭೇಟಿ ನೀಡಿ ಉಪಯುಕ್ತ ಮಾಹಿತಿ ಒದಗಿಸಲಾಗಿದೆ. ಗ್ರಾಮೀಣ ಭಾಗದಲ್ಲಿ ತಟಸ್ಥವಾಗಿದ್ದ ಹಾಲುಒಕ್ಕೂಟ ಸಹಕಾರ ಸಂಘಗಳಿಗೆ ಪುನಶ್ಚೇತನ ನೀಡುವ ನಿಟ್ಟಿನಲ್ಲಿ ಸಾಕಷ್ಟು ಪರಿಶ್ರಮವಹಿಸಲಾಗಿದೆ. ಕಳೆದ ಕೆಲವು ತಿಂಗಳ ಹಿಂದೆ ಹಾಲುಒಕ್ಕೂಟದಲ್ಲಿ ಕಾರ್ಯನಿರ್ವಹಿಸುವಾಗ ಮೃತಪಟ್ಟ ಕುಟುಂಬಗಳಿಗೆ ಪರಿಹಾರ ಒದಗಿಸಲಾಗಿದೆ. ಶಿವಮೊಗ್ಗ ಹಾಲು ಒಕ್ಕೂಟ ಹೈನುಗಾರಿಕೆಯ ಸರ್ವತೋಮುಖ ಅಭಿವೃದ್ದಿಗೆ ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸುತ್ತದೆ ಎಂದರು.

ಕಾರ್ಯಕ್ರಮದ ದಿವ್ಯಸಾನಿಧ್ಯ ವಹಿಸಿದ್ದ ನರಹರಿ ಪ್ರತಿಷ್ಠಾಪನದ ವೈ.ರಾಜರಾಂಸ್ವಾಮೀಜಿ ಮಾತನಾಡಿ, ನಮ್ಮ ಸಂಸ್ಕೃತಿಯಲ್ಲಿ ಗೋವನ್ನು ಮಾತೃಸ್ಥಾನದಲ್ಲಿಟ್ಟು ಪೂಜಿಸುತ್ತೇವೆ. ಗೋವಿನಿಂದ ಹಲವಾರು ಉಪಯೋಗವನ್ನು ಪ್ರತಿನಿತ್ಯ ಪಡೆದುಕೊಳ್ಳುತ್ತೇವೆ. ಗೋವಿನ ಪೂಜೆಯಿಂದ ನಮ್ಮೆಲ್ಲರಿಗೂ ಪುಣ್ಯ ಪ್ರಾಪ್ತಿಯಾಗುತ್ತದೆ ಎಂಬ ಪ್ರತೀತಿ ಇದೆ. ಇಂದು ಈ ಕ್ಷೇತ್ರದಲ್ಲಿ ಪಶುಸಂಗೋಪನ ಇಲಾಖೆ ಮತ್ತು ಶಿವಮೊಗ್ಗ ಹಾಲುಒಕ್ಕೂಟ ರೈತ ಸಮುದಾಯಕ್ಕೆ ಆತ್ಮವಿಶ್ವಾಸ ತುಂಬಲು ಹೈನುಗಾರಿಕೆ ಪ್ರೋತ್ಸಾಹಿಸಲು ಈ ಕಾರ್ಯಕ್ರಮ ಆಯೋಜಿಸಿದೆ. ಇದರ ಸದುಪಯೋಗ ರೈತ ಸಮುದಾಯಕ್ಕೆ ಹೆಚ್ಚು ದೊರೆಯಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುವುದಾಗಿ ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ನಗರಂಗೆರೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮಂಗಳಮ್ಮ ವಹಿಸಿದ್ದರು. ಕಾರ್ಯಕ್ರಮದಲ್ಲಿ ಪಶುಸಂಗೋಪನೆ ಜಿಲ್ಲಾ ಉಪನಿರ್ದೇಶಕ ಕುಮಾರಸ್ವಾಮಿ, ಪಶುವೈದ್ಯಾಧಿಕಾರಿ ಡಾ.ರೇವಣ್ಣಶ್ರೀನಿವಾಸ್‌ಬಾಬು, ಡಾ.ಮುಕುಂದನಾಯಕ್, ಹಾಲುಒಕ್ಕೂಟದ ಅಧ್ಯಕ್ಷ ವಿದ್ಯಾಧರ, ನಿರ್ದೇಶಕ ಜಿ.ಪಿ.ರೇವಣಸಿದ್ದಪ್ಪ, ಜಿ.ಬಿ.ಶೇಖರಪ್ಪ, ಎನ್.ಜಿ.ಶೇಖರ್, ಕೆ.ಆರ್.ಮುರುಳೀಧರ, ಡಾ.ಎನ್.ಎಂ.ಮೂರ್ತಿ, ವಿಸ್ತಾರಣಾಧಿಕಾರಿ ನಯಾಜ್‌ಬೇಗ್, ಕೃಷ್ಣಕುಮಾರ್, ಗ್ರಾಮ ಪಂಚಾಯಿತಿ ಸದಸ್ಯರಾದ ಎನ್.ಮಂಜುನಾಥ, ಪಿಡಿಒ ಎಂ.ರಾಮಚಂದ್ರಪ್ಪ, ಮುಖಂಡ ಶಶಿಧರ, ಶೈಲಜಾಮಂಜುನಾಥ ಮುಂತಾದವರು ಉಪಸ್ಥಿತರಿದ್ದರು. 

 

 

 

Advertisement

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಸಾಪ ಮಾಜಿ ಜಿಲ್ಲಾಧ್ಯಕ್ಷ, ಶಿಕ್ಷಣತಜ್ಞ ಡಾ. ಕೆ.ಎಂ. ವೀರೇಶ್ ಹೃದಯಾಘಾತದಿಂದ ನಿಧನದುರ್ಗಕ್ಕೆ ಹರಿದು ಬಂದ ಭದ್ರೆ- ಸೆ.24ರಂದು ಮುಖ್ಯಮಂತ್ರಿಗಳಿಂದ ಗಂಗಾಪೂಜೆ,  ಬೃಹತ್ ಸಾರ್ವಜನಿಕ ಸಮಾರಂಭಆರ್.ಎಲ್ ಜಾಲಪ್ಪ ತಾಂತ್ರಿಕ ಮಹಾವಿದ್ಯಾಲಯದಲ್ಲಿ 22ನೇ ಘಟಿಕೋತ್ಸವ ಮತ್ತು ಪದವಿ ಪ್ರದಾನ ಕಾರ್ಯಕ್ರಮನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ ಬೈಕ್ ಸವಾರ ಸಾವುಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ಸರ್ವ ಸದಸ್ಯರ ವಾರ್ಷಿಕ ಸಭೆ ಹೋರಾಟಗಳಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಪ್ರಾತಿನಿಧ್ಯ ಕಡಿಮೆ- ಚಿಕ್ಕಪ್ಪನಹಳ್ಳಿ ಷಣ್ಮುಖಕುಂಚಿಟಿಗ ನೌಕರರ ಸಂಘಕ್ಕೆ ಸದಸ್ಯರಾಗಿ: ಎಸ್.ಕೆ ಲಕ್ಷ್ಮಣ್ಚಳವಳಿ ನೆನಪಾಗಿ ಉಳಿದ ‘ತೆಂಕ-ಬಡಗ’ಅಂತಾರಾಷ್ಟ್ರೀಯ ಶಾಂತಿ ದಿನ – ಮನದ ದ್ವೇಷ ಕರಗಿದಾಗಲೇ ಜಗದ ಶಾಂತಿ ಅರಳುವುದು!ಗಣಪತಿ ಮೆರವಣಿಗೆ ವೇಳೆ ಗಲಾಟೆ 7 ಯುವಕರ ವಿರುದ್ಧ ಸುಮೋಟೋ ಪ್ರಕರಣ ದಾಖಲು