ಚಂದ್ರವಳ್ಳಿ ನ್ಯೂಸ್, ಹಿರಿಯೂರು:
ಇಲ್ಲಿನ ಸಾರ್ವಜನಿಕ ಆಸ್ಪತ್ರೆಯಲ್ಲಿ ನಿನ್ನೆ ತಡರಾತ್ರಿ ಸುಮಾರು 12 ಗಂಟೆಯ ವೇಳೆಗೆ ಕಳ್ಳತನದ ಘಟನೆಯೊಂದು ನಡೆದಿದ್ದು, ರೋಗಿಯ ಸಂಬಂಧಿಯೊಬ್ಬರ ಜೇಬಿನಲ್ಲಿದ್ದ ಮೊಬೈಲ್ ಫೋನ್ ಅನ್ನು ಕಳ್ಳರು ದೋಚಿ ಪರಾರಿಯಾಗಿದ್ದಾರೆ.
ಆಸ್ಪತ್ರೆಗೆ ಬಂದಿದ್ದ ಕದುರಪ್ಪ ಎಂಬುವವರು ನಿನ್ನೆ ರಾತ್ರಿ ನಿದ್ರಿಸುತ್ತಿದ್ದ ಸಮಯದಲ್ಲಿ, ಅವರ ಜೇಬಿನಲ್ಲಿದ್ದ ಮೊಬೈಲ್ ಅನ್ನು ಕಳ್ಳ ಅತ್ಯಂತ ಜಾಣತನದಿಂದ ಕದ್ದೊಯ್ದಿದ್ದಾನೆ. ಈ ಇಡೀ ಕೃತ್ಯ ಆಸ್ಪತ್ರೆಯ ಸಿಸಿಟಿವಿ (CCTV) ಕ್ಯಾಮೆರಾದಲ್ಲಿ ಸೆರೆಯಾಗಿದೆ.
ಮೊಬೈಲ್ ಕಳೆದುಕೊಂಡ ಕದುರಪ್ಪ ಅವರು ತಕ್ಷಣವೇ ಘಟನೆ ಕುರಿತು ಸ್ಥಳೀಯ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿರುವ ಪೊಲೀಸರು, ಆರೋಪಿಯ ಗುರುತು ಪತ್ತೆ ಹಚ್ಚಿದ್ದು, ಆತನನ್ನು ಬಂಧಿಸಲು ಬಲೆ ಬೀಸಿದ್ದಾರೆ.




