Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮೋದಿ 'ಬೊಗಳುತ್ತಾರೆ' ಅವಾಚ್ಯ ಶಬ್ಧ ಬಳಸಿದ ಕಾಂಗ್ರೆಸ್ ಪಕ್ಷ

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ರಾಷ್ಟ್ರಸೇವೆಯನ್ನೇ ತನ್ನ ಜೀವನದ ಏಕೈಕ ಧ್ಯೇಯವನ್ನಾಗಿಸಿಕೊಂಡು ಕರ್ಮಯೋಗಿಯಂತೆ  ಶ್ರಮಿಸುತ್ತಿರುವ ಹಿಂದುಳಿದ ಸಮುದಾಯದ ನರೇಂದ್ರ ಮೋದಿ ಅವರ ಅಪಾರ ಜನಪ್ರಿಯತೆ, ವಿಶ್ವದೆಲ್ಲೆಡೆ ಅವರಿಗೆ ಸಿಗುತ್ತಿರುವ ಅಭೂತಪೂರ್ವ ಗೌರವ, ಸನ್ಮಾನಗಳನ್ನು ಸಹಿಸದ ಕಾಂಗ್ರೆಸ್ ನಾಯಕರು ಹತಾಶೆಯಿಂದ ಮೋದಿ ಅವರ ಮೇಲೆ ವೈಯಕ್ತಿಕ ನಿಂದನೆ ಮಾಡುತ್ತಾ ಬಂದಿರುವುದು ಹೊಸದೇನಲ್ಲ ಎಂದು ವಿಪಕ್ಷ ನಾಯಕ ಆರ್.ಅಶೋಕ್ ವಾಗ್ದಾಳಿ ಮಾಡಿದ್ದಾರೆ.

ಸೋನಿಯಾ ಗಾಂಧಿ ಆದಿಯಾಗಿ ಕಾಂಗ್ರೆಸ್ ಶಾಸಕರವರೆಗೂ ಅನೇಕರು 'ಮೌತ್ ಕಿ ಸೌದಾಗರ್' 'ರಾವಣ', 'ನೀಚ ವ್ಯಕ್ತಿ', 'ಚಹಾ ಮಾರುವವನು', "ಮೋದಿ ಮೋದಿ ಎನ್ನುವ ಯುವಕರಿಗೆ ಚಪ್ಪಲಿಯಲ್ಲಿ ಹೊಡೆಯಬೇಕು", 'ವಿಷಸರ್ಪ' ಎಂದೆಲ್ಲಾ ಮೋದಿ ಅವರನ್ನು ನಿಂದಿಸಿ ಕಾಂಗ್ರೆಸ್ ಪಕ್ಷದ ನೀಚ ಸಂಸ್ಕೃತಿಯನ್ನು ಪ್ರದರ್ಶನ ಮಾಡುತ್ತಲೇ ಇದ್ದಾರೆ.

ಮೇಡಂ ಸೋನಿಯಾ ಗಾಂಧಿ ಹಾಕಿಕೊಟ್ಟ ಈ ಮೇಲ್ಪಂಕ್ತಿಯನ್ನ, ಈ ನೀಚ ಪರಂಪರೆಯನ್ನ ಮುಂದುವರೆಸುವುದೇ ತನ್ನ ಕರ್ತವ್ಯ ಎಂಬಂತೆ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು ಮೈಸೂರಿನ ಸಾಧನಾ ಸಮಾವೇಶದಲ್ಲಿ ಮೋದಿ ಅವರು 'ಬೊಗಳುತ್ತಾರೆ' ಎಂದು ಅವಾಚ್ಯ ಶಬ್ಧ ಬಳಸುವ ಮೂಲಕ ಮತ್ತೊಮ್ಮೆ ಕಾಂಗ್ರೆಸ್ ಪಕ್ಷದ ಕೀಳು ಮನಸ್ಥಿತಿಯನ್ನು ಸ್ವಯಂ ಬಯಲು ಮಾಡಿದ್ದಾರೆ ಎಂದು ಅಶೋಕ್ ಟೀಕಾಪ್ರಹಾರ ಮಾಡಿದ್ದಾರೆ.

ಸ್ವಾಮಿ ಖರ್ಗೆ ಅವರೇ, ನಿಮ್ಮ ಮೇಡಂ ಸೋನಿಯಾ ಗಾಂಧಿ ಅವರು ಮೋದಿ ಅವರು ಗುಜರಾತ್ ಮುಖ್ಯಮಂತ್ರಿಗಳಾಗಿದ್ದಾಗ 'ಮೌತ್ ಕಾ ಸೌದಾಗರ್' ಎಂದಿದ್ದರು. ಅದಾದ ಮೇಲೆ ಮೋದಿ ಅವರು ನಾಲ್ಕು ಬಾರಿ ಮುಖ್ಯಮಂತ್ರಿಗಳಾಗಿ ಈಗ ಮೂರನೇ ಅವಧಿಗೆ ಪ್ರಧಾನಿಗಳಾಗಿದ್ದರೆ. ನಿಮ್ಮ ನಿಂದನೆ, ಬೈಗುಳಗಳು ನಿಮಗೇ ತಿರುಗುಬಾಣ ಆಗುತ್ತಿವೆ ಎಂದು ಅರ್ಥ ಆಗಲು ನಿಮಗೆ ಇನ್ನೂ ಎಷ್ಟು ವರ್ಷ ಬೇಕು ಸ್ವಾಮಿ?

ತಾವು ಹಿರಿಯರು. ರಾಜಕಾರಣದಲ್ಲಿ ವಿರೋಧಿಗಳನ್ನು ಹೇಗೆ ಸಂಬೋಧನೆ ಮಾಡಬೇಕು, ವಿರೋಧಿಗಳ ಜೊತೆ ಹೇಗೆ ನಡೆದುಕೊಳ್ಳಬೇಕು ಎನ್ನುವುದಕ್ಕೆ ತಮ್ಮ ನಡೆ-ನುಡಿಗಳ ಮೂಲಕ ತಾವು ಕಿರಿಯರಿಗೆ ಮಾದರಿಯಾಗಬೇಕು. ಅದು ಬಿಟ್ಟು ಹಿರಿಯರಾಗಿ ನೀವೇ ಈ ರೀತಿ ಪದೇ ಪದೇ ದೇಶದ ಪ್ರಧಾನಿಗಳನ್ನು ನಿಂದನೆ ಮಾಡಿದರೆ ಅದು ನಿಮಗೆ ಶೋಭೆ ತರುವುದಿಲ್ಲ ಎಂದು ಅಶೋಕ್ ಕಿಡಿಕಾರಿದ್ದಾರೆ.

ಮೋದಿ ಅವರು ಬೊಗಳುತ್ತಾರೋ ಇಲ್ಲವೋ ಅದು ನಿಮ್ಮ ಸಮಸ್ಯೆಯಲ್ಲ. ಮೋದಿ ಅವರ ನೇತೃತ್ವದಲ್ಲಿ ಭಾರತ ವಿಶ್ವ ಮಟ್ಟದಲ್ಲಿ ಘರ್ಜನೆ ಮಾಡುತ್ತಿದೆಯಲ್ಲ, ಅದು ನಿಮ್ಮ ಸಮಸ್ಯೆ. ಭಾರತದ ಘರ್ಜನೆಯನ್ನು ಸಹಿಸಲಾಗದೆ ಮೋದಿ ಅವರನ್ನು ನಿಂದಿಸಿದರೆ ಜನ ಮೆಚ್ಚುತ್ತಾರಾ ಖರ್ಗೆ ಅವರೇ? ಇನ್ನೊಮ್ಮೆ ನಾಲಿಗೆ ಹರಿಬಿಡುವ ಮುನ್ನ ಆತ್ಮಾವಲೋಕನ ಮಾಡಿಕೊಳ್ಳಿ ಎಂದು ಅಶೋಕ್ ತಾಕೀತು ಮಾಡಿದ್ದಾರೆ.

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ