Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ತಂತ್ರಜ್ಞಾನ, ಹವಾಮಾನ, ಸಾಮರ್ಥ್ಯ ನಿರ್ಮಾಣದಂತಹ ಕ್ಷೇತ್ರಗಳಲ್ಲಿ ಕ್ವಾಡ್ ದೇಶಗಳು ಕೆಲಸ ಮಾಡಲಿವೆ-ಮೋದಿ

Advertisement
ಚಂದ್ರವಳ್ಳಿ ನ್ಯೂಸ್, ವಾಷಿಂಗ್ಟನ್:
ಪ್ರಜಾಪ್ರಭುತ್ವದ ಮೌಲ್ಯಗಳ ಆಧಾರದ ಮೇಲೆ ಕ್ವಾಡ್ ದೇಶಗಳು ಒಟ್ಟಾಗಿ ಕೆಲಸ ಮಾಡುವುದು ಇಡೀ ಮಾನವೀಯತೆಗೆ ಬಹಳ ಮುಖ್ಯವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.


ಅಮೆರಿಕದಲ್ಲಿ ನಡೆಯುತ್ತಿರುವ ಕ್ವಾಡ್​ ಶೃಂಗಸಭೆ 2024ರಲ್ಲಿ ಪಾಲ್ಗೊಂಡು ಹಾಟ್ ಮೈಕ್ ನಲ್ಲಿ ಮಾತನಾಡಿದ ಅವರು, ನಾವು ಯಾರ ವಿರುದ್ಧವೂ ಅಲ್ಲ. ನಾವೆಲ್ಲರೂ ನಿಯಮಾಧಾರಿತ ಅಂತಾರಾಷ್ಟ್ರೀಯ ಆದೇಶ, ಸಾರ್ವಭೌಮತ್ವ ಮತ್ತು ಪ್ರಾದೇಶಿಕ ಸಮಗ್ರತೆಗೆ ಗೌರವ ಮತ್ತು ಎಲ್ಲಾ ಸಮಸ್ಯೆಗಳ ಶಾಂತಿಯುತ ಪರಿಹಾರ ಬೆಂಬಲಿಸುತ್ತೇವೆ ಎಂದು ತಿಳಿಸಿದರು.

 ಆರೋಗ್ಯ, ಭದ್ರತೆ, ನಿರ್ಣಾಯಕ ಉದಯೋನ್ಮುಖ ತಂತ್ರಜ್ಞಾನಗಳು, ಹವಾಮಾನ ಬದಲಾವಣೆ ಮತ್ತು ಸಾಮರ್ಥ್ಯ ನಿರ್ಮಾಣದಂತಹ ಕ್ಷೇತ್ರಗಳಲ್ಲಿ ಕ್ವಾಡ್ ದೇಶಗಳು ಅನೇಕ ಸಕಾರಾತ್ಮಕ ಮತ್ತು ಅಂತರ್ಗತ ಉಪಕ್ರಮಗಳನ್ನು ತೆಗೆದುಕೊಂಡಿವೆ ಎಂದು ಮೋದಿ ಶ್ಲಾಘೀಸಿದರು.

ಅಂತೆಯೇ 2025 ರಲ್ಲಿ ಭಾರತದಲ್ಲಿ ಕ್ವಾಡ್ ಶೃಂಗಸಭೆಯನ್ನು ಆಯೋಜಿಸುವ ಬದ್ಧತೆಯನ್ನು ಪ್ರಧಾನಿ ಮೋದಿ ಪುನರುಚ್ಚರಿಸಿದರು.
ಇದೇ ವೇಳೆ ಅಮೆರಿಕ ಅಧ್ಯಕ್ಷ ಜೋ ಬೈಡನ್ ಮಾತನಾಡಿ
, ಚೀನಾ ದೇಶವು ಕ್ವಾಡ್‌ ಸದಸ್ಯ ರಾಷ್ಟ್ರಗಳನ್ನು ಪರೀಕ್ಷಿಸುತ್ತಿದೆ. ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್‌ ಅವರು ದೇಶೀಯ ಆರ್ಥಿಕ ಸವಾಲುಗಳು ಹಾಗೂ ಪ್ರಕ್ಷುಬ್ಧತೆ ನಿಯಂತ್ರಿಸುವುದರ ಮೇಲೆ ಗಮನ ಕೇಂದ್ರೀಕರಿಸಿದ್ದಾರೆ ಎಂದು ಭಾವಿಸಿದ್ದೇವೆ ಎಂದು ತಿಳಿಸಿದರು.

ರಾಜತಾಂತ್ರಿಕ ಅವಕಾಶಗಳನ್ನೇ ಚೀನಾ ಅಧ್ಯಕ್ಷರು ಖರೀದಿಸಲು ನೋಡುತ್ತಿದ್ದಾರೆ. ದೇಶದ ಹಿತದೃಷ್ಟಿಯಿಂದ ಅವರು ಆಕ್ರಮಣಕಾರಿಯಾಗಿ ಸಾಗುತ್ತಿದ್ದಾರೆ ಎಂದು ನನಗನಿಸುತ್ತಿದೆ ಎಂದು ಹೇಳಿದರು.

ಅಂತೆಯೇ ಆಕ್ರಮಣಕಾರಿಯಾಗಿ ನಡೆದುಕೊಳ್ಳುವುದು ಇಂಡೋಪೆಸಿಫಿಕ್‌ಭಾಗದ ನಮ್ಮನ್ನೆಲ್ಲ ಆರ್ಥಿಕತೆ, ತಂತ್ರಜ್ಞಾನ ಸೇರಿದಂತೆ ವಿವಿಧ ರೀತಿಯಲ್ಲಿ ಪರೀಕ್ಷಿಸುತ್ತಿದೆ. ಅದೇ ವೇಳೆ, ತೀವ್ರ ಸ್ಪರ್ಧೆಗೆ ತೀವ್ರ ರಾಜತಾಂತ್ರಿಕತೆ ಅಗತ್ಯವಾಗುತ್ತದೆ ಎಂಬುದನ್ನು ನಂಬಿದ್ದೇವೆ ಎಂದು ಅಮೆರಿಕ ಅಧ್ಯಕ್ಷ ಬೈಡನ್ ಹೇಳಿದರು.

ಅಮೆರಿಕದ ಡೆಲವೇರ್ ನಲ್ಲಿ ನಡೆದ ಕ್ವಾಡ್ ಶೃಂಗಸಭೆಯಲ್ಲಿ ಭಾರತ, ಅಮೆರಿಕ, ಜಪಾನ್ ಮತ್ತು ಆಸ್ಟ್ರೇಲಿಯಾ ರಾಷ್ಟ್ರಗಳ ಮುಖ್ಯಸ್ಥರು ಪಾಲ್ಗೊಂಡು ಮಹತ್ವದ ವಿಷಯಗಳ ಕುರಿತು ಗಂಭೀರ ಚರ್ಚೆ ಮಾಡಿದ್ದಾರೆ.

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸಾರ್ವತ್ರಿಕ ಚುನಾವಣೆ ಮೀರಿಸಿದ ಜಿಲ್ಲಾ ಗೊಲ್ಲರ ಸಂಘದ ಸಮರ: ‘ಕುರುಡು ಕಾಂಚಾಣ’ ಸದ್ದು, ಘಟಾನುಘಟಿಗಳ ಜಿದ್ದಾಜಿದ್ದಿ!ಹಿರಿಯೂರು ಉಪಚುನಾವಣೆ: ಶೋಕಿ ನಾಯಕರಿಗೆ ‘ತಕ್ಕ ಪಾಠ’ ಕಲಿಸಲು ಹಿರಿಯೂರು ಮತದಾರ ಸಜ್ಜು!ಲೋಹಿತ್‌ ಕುಮಾರ್ ಪಿ ಅವರಿಗೆ ಪಿಎಚ್.ಡಿ. ಪದವಿ ಪ್ರದಾನ: ಅಭಿನಂದನೆಗಳ ಮಹಾಪೂರಫ್ಯಾಕ್ಟರಿಯಿಂದ ಹೊರಬರುತ್ತಿರುವ ದುರ್ವಾಸನೆ: ದೊಡ್ಡಬಳ್ಳಾಪುರದ ವರದನಹಳ್ಳಿ ಗ್ರಾಮಸ್ಥರು ಹೈರಾಣು!ಗ್ರಾಮ ಪಂಚಾಯಿತಿಯಲ್ಲಿ ರಾತ್ರಿ ವೇಳೆ ರಹಸ್ಯ ಕೆಲಸ: ಗ್ರಾಮಸ್ಥರಲ್ಲಿ ಹೆಚ್ಚಿದ ಕಳ್ಳ ವ್ಯವಹಾರದ ಸಂಶಯ!ಚಿತ್ರದುರ್ಗ ಸಖಿ ಒನ್ ಸ್ಟಾಪ್ ಸೆಂಟರ್: ಸೋಶಿಯಲ್ ವರ್ಕರ್ ಹುದ್ದೆಗೆ ಅರ್ಜಿ ಆಹ್ವಾನಹಿರಿಯೂರು ನಗರಸಭೆ: ವಿವಿಧ ಸೌಲಭ್ಯಗಳಿಗೆ ಅರ್ಜಿ ಆಹ್ವಾನಮೇ 17ರಂದು ಪೊಲೀಸ್ ಅಧಿಕಾರಿಗಳ ಸ್ನೇಹ ಸಮ್ಮೀಲನಹೊಸ ರೈಲ್ವೆ ಕಾಮಗಾರಿಗಳ ಪರಾಮರ್ಶೆ- ಸಚಿವ ವಿ. ಸೋಮಣ್ಣಇ-ಬಸ್, ಇ-ಟ್ರಾಕ್ ಮತ್ತು ಹಸಿರು ಸಾರಿಗೆ, ಸುಸ್ಥಿರ ಕೈಗಾರಿಕಾ ಭವಿಷ್ಯಕ್ಕೆ ಒತ್ತು:  ಕುಮಾರಸ್ವಾಮಿ