Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮೇಕೆದಾಟು ಯೋಜನೆಗೆ ಮೋದಿ ಮಧ್ಯಪ್ರವೇಶಿಸಲಿ: ಕಾವೇರಿ ಕ್ರಿಯಾ ಸಮಿತಿ ಆಗ್ರಹ; ತಮಿಳುನಾಡು ಸಿಎಂ ನಡೆಗೆ ಆಕ್ಷೇಪ!

Advertisement
Advertisement

ಚಂದ್ರವಳ್ಳಿ ನ್ಯೂಸ್, ಮೈಸೂರು:
ಮೇಕೆದಾಟು ಸಮತೋಲನ ಜಲಾಶಯ ನಿರ್ಮಾಣ ಯೋಜನೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಅವರು ತಕ್ಷಣ ಮಧ್ಯಪ್ರವೇಶಿಸಿ ಕರ್ನಾಟಕಕ್ಕೆ ನ್ಯಾಯ ಒದಗಿಸಬೇಕು ಎಂದು ಕಾವೇರಿ ಕ್ರಿಯಾ ಸಮಿತಿ ಗೌರವಾಧ್ಯಕ್ಷ ಹಾಗೂ ವಿಧಾನ ಪರಿಷತ್ ಸದಸ್ಯ ಸಿ.ಎನ್. ಮಂಜೇಗೌಡ ಒತ್ತಾಯಿಸಿದ್ದಾರೆ.

ಮೈಸೂರಿನ ಜಿಲ್ಲಾ ಪತ್ರಕರ್ತರ ಭವನದಲ್ಲಿ ನಡೆದ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತಮಿಳುನಾಡಿನ ನೂತನ ಮುಖ್ಯಮಂತ್ರಿ ಜೋಸೆಫ್ ವಿಜಯ್ ಅವರು ಪ್ರಧಾನಿ ಮೋದಿ ಅವರನ್ನು ಭೇಟಿಯಾಗಿ ಮೇಕೆದಾಟು ಯೋಜನೆಗೆ ಅನುಮತಿ ನೀಡಬಾರದು ಎಂದು ಮನವಿ ಮಾಡಿರುವುದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದರು.

ತಮಿಳುನಾಡು ಸಿಎಂಗೆ ಕಾವೇರಿ ಒಪ್ಪಂದದ ಪಾಠ!:
ಮೇಕೆದಾಟು ಯೋಜನೆಯು ಕೇವಲ ಕರ್ನಾಟಕಕ್ಕೆ ಮಾತ್ರವಲ್ಲ
, ತಮಿಳುನಾಡು ರಾಜ್ಯಕ್ಕೂ ಅನುಕೂಲಕರವಾಗಿದೆ ಎಂಬುದನ್ನು ಅಲ್ಲಿನ ನೂತನ ಮುಖ್ಯಮಂತ್ರಿಗಳು ಮೊದಲು ಅರ್ಥಮಾಡಿಕೊಳ್ಳಬೇಕು ಎಂದು ಸಮಿತಿ ನಾಯಕರು ತಿಳಿಸಿದರು.

"ಕಾವೇರಿ ನದಿ ಹುಟ್ಟುವುದು ನಮ್ಮ ಕೊಡಗಿನಲ್ಲಿ. ಹೀಗಿರುವಾಗ ಇಲ್ಲಿ ಹರಿಯುವ ನೀರು ವ್ಯರ್ಥವಾಗಿ ಸಮುದ್ರ ಸೇರುವುದನ್ನು ತಡೆಯಲು ಅಣೆಕಟ್ಟು ನಿರ್ಮಿಸುವುದು ನಮ್ಮ ಹಕ್ಕು. ಇದರಿಂದ ತಮಿಳುನಾಡಿಗೆ ಯಾವುದೇ ನೀರಿನ ಸಮಸ್ಯೆ ಎದುರಾಗುವುದಿಲ್ಲ. ಆದರೂ ರಾಜಕೀಯ ಕಾರಣಗಳಿಗಾಗಿ ವಿರೋಧಿಸಲಾಗುತ್ತಿದೆ" ಎಂದು ಸಿ.ಎನ್. ಮಂಜೇಗೌಡ ಬೇಸರ ವ್ಯಕ್ತಪಡಿಸಿದರು.

1974ರ ಒಪ್ಪಂದದ ಮರುಪರಿಶೀಲನೆ: ಕಾವೇರಿ ಕೊಳ್ಳದ ಹಳೆಯ ಒಪ್ಪಂದಗಳನ್ನು ಇಂದಿನ ಪರಿಸ್ಥಿತಿಗೆ ತಕ್ಕಂತೆ ಮರುಪರಿಶೀಲನೆ ನಡೆಸಬೇಕು.

ಒಗ್ಗಟ್ಟಿನ ಕೊರತೆ: ತಮಿಳುನಾಡಿನಲ್ಲಿ ನೆಲ, ಜಲ, ಭಾಷೆಯ ವಿಚಾರ ಬಂದಾಗ ಎಲ್ಲ ಪಕ್ಷಗಳೂ ಒಂದಾಗುತ್ತವೆ. ಆದರೆ ನಮ್ಮ ಕರ್ನಾಟಕದಲ್ಲಿ ರಾಜಕೀಯ ಪಕ್ಷಗಳ ಕಿತ್ತಾಟದಿಂದಾಗಿ ವಿವಾದ ಜೀವಂತವಾಗಿದೆ.

ದೆಹಲಿ ನಿಯೋಗ: ಕಾವೇರಿ ಕ್ರಿಯಾ ಸಮಿತಿಯ ವತಿಯಿಂದ ಶೀಘ್ರದಲ್ಲೇ ರಾಷ್ಟ್ರಪತಿ, ಪ್ರಧಾನಿ ಹಾಗೂ ಕೇಂದ್ರ ನೀರಾವರಿ ಸಚಿವರನ್ನು ಭೇಟಿ ಮಾಡಿ ಮೇಕೆದಾಟು ಯೋಜನೆಗೆ ಶೀಘ್ರ ಅನುಮತಿ ನೀಡುವಂತೆ ಒತ್ತಾಯಿಸಿ ಮನವಿ ಸಲ್ಲಿಸಲಾಗುವುದು.

ಯೋಜನೆ ಕೈಬಿಟ್ಟರೆ ಉಗ್ರ ಹೋರಾಟದ ಎಚ್ಚರಿಕೆ!ಛ
ಇದೇ ವೇಳೆ ಮಾತನಾಡಿದ ಸಮಿತಿ ಅಧ್ಯಕ್ಷ ಎಸ್. ಜಯಪ್ರಕಾಶ್
, "ರಾಜ್ಯ ಸರ್ಕಾರವು ಇನ್ನು ಮುಂದೆ ಮೌನವಾಗಿರದೆ ಕೇಂದ್ರ ಸರ್ಕಾರದ ಮೇಲೆ ನಿರಂತರ ಒತ್ತಡ ಹೇರಬೇಕು. ಈ ಯೋಜನೆ ಬೆಂಗಳೂರು ಸೇರಿದಂತೆ ಸುತ್ತಮುತ್ತಲಿನ ಕೋಟ್ಯಂತರ ಜನರಿಗೆ ಕುಡಿಯುವ ನೀರು ಒದಗಿಸುವ ಜೀವನಾಡಿಯಾಗಿದೆ. ಒಂದು ವೇಳೆ ಯೋಜನೆಗೆ ಹಿನ್ನಡೆಯಾದರೆ ರಾಜ್ಯಾದ್ಯಂತ ಉಗ್ರ ಹೋರಾಟ ಹಮ್ಮಿಕೊಳ್ಳಲಾಗುವುದು" ಎಂದು ಎಚ್ಚರಿಸಿದರು.

ಪತ್ರಿಕಾ ಗೋಷ್ಠಿಯಲ್ಲಿ ಚಿತ್ರನಟಿ ಶುಭರಕ್ಷ, ಕಾವೇರಿ ಕ್ರಿಯಾ ಸಮಿತಿ ಪ್ರಧಾನ ಸಂಚಾಲಕ ಮೂಗೂರು ನಂಜುಂಡಸ್ವಾಮಿ, ಕಾರ್ಯದರ್ಶಿ ಮೆಲ್ಲಹಳ್ಳಿ ಮಹದೇವಸ್ವಾಮಿ, ಪ್ರಮುಖರಾದ ಎಂ.ಜೆ. ಸುರೇಶ್‌ಗೌಡ, ರೈತ ಮುಖಂಡರಾದ ಶಿವಕುಮಾರ್, ರವೀಶ್, ಹನುಮಂತೇಗೌಡ ಹಾಗೂ ಸ್ವಾಮಿಗೌಡ ಉಪಸ್ಥಿತರಿದ್ದರು.

 

 

 

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST