Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕರ್ನಾಟಕದಲ್ಲಿ ಯುವಕರೇ ಶೇ. 60 ಕ್ಕಿಂತ ಹೆಚ್ಚು

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕರ್ನಾಟಕ ಇಂದು ಒಂದು ವಿಶಿಷ್ಟ ಜನಸಂಖ್ಯೆಯ ಹೊರಳು ಹಾದಿಯಲ್ಲಿದೆ. ನಮ್ಮ ಜನಸಂಖ್ಯೆಯ ಶೇ. 60 ಕ್ಕಿಂತ ಹೆಚ್ಚು ಜನರು 35 ವಯೋಮಾನದೊಳಗಿದ್ದಾರೆ. ಮುಂದಿನ ದಶಕದಲ್ಲಿ ಸುಮಾರು 1.2 ಕೋಟಿ ಯುವಕರು ಕಾರ್ಯಪಡೆಯನ್ನು ಪ್ರವೇಶಿಸುತ್ತಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.


ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆಯ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಬೆಂಗಳೂರು ಕೌಶಲ್ಯ ಶೃಂಗಸಭೆಉದ್ಘಾಟಿಸಿ, ಸಮಾರಂಭ ಉದ್ದೇಶಿಸಿ - ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾತನಾಡಿದರು. 

ಈ ಯುವಪೀಳಿಗೆಯನ್ನು ಸರಿಯಾದ ಕೌಶಲ್ಯ, ಮನಸ್ಥಿತಿ ಮತ್ತು ಆತ್ಮವಿಶ್ವಾಸದಿಂದ ಸಜ್ಜುಗೊಳಿಸಿದರೆ ಇದು ಅಸಾಧಾರಣ ಅವಕಾಶವಾಗಲಿದೆ. ಉದ್ಯಾನ ನಗರಿ ಎನ್ನುವ ಹೆಗ್ಗಳಿಕೆಯಿಂದ ಸ್ಟಾರ್ಟ್ಅಪ್ ರಾಜಧಾನಿಯಾಗಿ ರೂಪಾಂತರಗೊಂಡಿರುವ ಬೆಂಗಳೂರು ನಗರ ಈಗ ಭಾರತದ ಕೌಶಲ್ಯ ರಾಜಧಾನಿಯಾಗಿರುವುದು ಹೆಮ್ಮೆಯ ವಿಷಯ.

ಕಳೆದ ವರ್ಷದ ಆಯವ್ಯಯದಲ್ಲಿ ಘೋಷಿಸಲಾಗಿದ್ದ ಕರ್ನಾಟಕ ಕೌಶಲ್ಯಾಭಿವೃದ್ಧಿ ನೀತಿ 2025-32 ನ್ನು ಇಂದು ಬೆಂಗಳೂರು ಸ್ಕಿಲ್ ಸಮಿಟ್ 2025 ಕಾರ್ಯಕ್ರಮದ ಮೂಲಕ ಕಾರ್ಯರೂಪಕ್ಕೆ ತರಲಾಗುತ್ತಿದೆ. ಈ 7 ವರ್ಷದ ಕಾರ್ಯತಂತ್ರದ ನೀಲನಕ್ಷೆಗೆ 4,432 ಕೋಟಿ ರೂ. ಅನುದಾನದ ಬೆಂಬಲ ನೀಡಲಾಗಿದ್ದು, ಕರ್ನಾಟಕವನ್ನು ಕೌಶಲ್ಯಭರಿತ ಹಾಗೂ ಭವಿಷ್ಯದ ಸವಾಲುಗಳಿಗೆ ಸನ್ನದ್ಧರಾಗಿಸುವುದು ಹಾಗೂ ಕಾರ್ಮಿಕ ಶಕ್ತಿಯ ಜಾಗತಿಕ ಕೇಂದ್ರವನ್ನಾಗಿ ರೂಪಿಸುವುದು ನಮ್ಮ ಉದ್ದೇಶ. 2032 ಕ್ಕೆ ಸುಮಾರು 30 ಲಕ್ಷ ಯುವಕರಿಗೆ ಕೌಶಲ್ಯ ತರಬೇತಿ, ಐಟಿಐ ಗಳಲ್ಲಿ ಮಹಿಳೆಯರ ಪ್ರವೇಶವನ್ನು ಶೇ. 33 ಕ್ಕೆ ಹೆಚ್ಚಳ ಹಾಗೂ ಐಎಂಸಿಕೆ (International Migration Centre-Karnataka) ದ ಮೂಲಕ ಜಾಗತಿಕ ಉದ್ಯೋಗಾವಕಾಶಗಳ ವೃದ್ಧಿಯನ್ನು ಸಾಧಿಸುವ ಗುರಿಯನ್ನು ಹೊಂದಿರುವುದಾಗಿದೆ ಎಂದು ಸಿಎಂ ತಿಳಿಸಿದರು.

ಜಾಗತಿಕ ಮಟ್ಟಕ್ಕೆ ಕಾರ್ಮಿಕ ಶಕ್ತಿಯನ್ನು ಸಿದ್ಧಪಡಿಸಲು ಕರ್ನಾಟಕ ಸ್ಕಿಲ್ ಒಲಂಪಿಕ್ಸ್  ಎಂಬ ಯೋಜನೆಯನ್ನು ಹಮ್ಮಿಕೊಳ್ಳಲಾಗಿದೆ. ಕೌಶಲ್ಯ ಸ್ಪರ್ಧೆಯಲ್ಲಿ 48 ಪದಕಗಳನ್ನು ಪಡೆದು ಭಾರತದಲ್ಲಿ ಕರ್ನಾಟಕ ಎರಡನೇ ಸ್ಥಾನವನ್ನು ಪಡೆದಿದೆ ಹಾಗೂ 4 ಅಂತರಾಷ್ಟ್ರೀಯ ಪದಕಗಳನ್ನು ತನ್ನದಾಗಿಸಿಕೊಂಡಿದೆ. ಐಟಿಐಗಳು ಹಾಗೂ ಜಿಟಿಟಿಸಿಗಳ ಮೂಲಕ ಸುಮಾರು 33,212 ಯುವಕರಿಗೆ ತರಬೇತಿಯನ್ನು ನೀಡಲಾಗಿದ್ದು, ಶಾಲಾ ಮಕ್ಕಳಿಗೆ ನನ್ನ ವೃತ್ತಿ , ನನ್ನ ಆಯ್ಕೆಕಾರ್ಯಕ್ರಮದಡಿ, 35,000 ಮಕ್ಕಳಿಗೆ ತರಬೇತಿ ನೀಡಲಾಗಿದೆ. ಈ ವರ್ಷ,ಯೋಜನೆಯನ್ನು 500 ಶಾಲೆಗಳಿಗೆ ವಿಸ್ತರಿಸಿ 2.3 ಲಕ್ಷ ವಿದ್ಯಾರ್ಥಿಗಳಿಗೆ ತರಬೇತಿ ನೀಡುವ ಗುರಿಯಿದೆ.

ಬೆಂಗಳೂರು ಕೌಶಲ್ಯ ಶೃಂಗಸಭೆ ಕರ್ನಾಟಕದ  ಕೌಶಲ್ಯ ಪಯಣದಲ್ಲಿ ಒಂದು ಮೈಲಿಗಲ್ಲು. ಕರ್ನಾಟಕವನ್ನು ವಿಶ್ವದಲ್ಲೇ ಕೌಶಲ್ಯಗಳಿಗೆ ಹೆಸರಾದ ರಾಜ್ಯವನ್ನಾಗಿಸುವುದು ನಮ್ಮ ಗುರಿ. ಇಎಸ್‌ಡಿಎಂಎಐ /ಎಂಎಲ್ ಏರೋಸ್ಪೇಸ್, ಹಸಿರು ಇಂಧನ, ಒಳಗೊಳ್ಳುವಿಕೆ ಹಾಗೂ ಅಂತರರಾಷ್ಟ್ರೀಯ ಮಟ್ಟದಲ್ಲಿ ಉದ್ಯೋಗಕ್ಕೆ ತಯಾರಾಗಿರುವ ಕಾರ್ಮಿಕ ಪಡೆಯನ್ನು ಸಿದ್ಧಮಾಡುವತ್ತ ಗಮನವನ್ನು ಕೇಂದ್ರೀಕೃತಗೊಳಿಸಿದೆ.

2032ರ ಹೊತ್ತಿಗೆ ಕರ್ನಾಟಕವನ್ನು ಒಂದು ಟ್ರಿಲಿಯನ್  ಡಾಲರ್ ಆರ್ಥಿಕತೆಯ ರಾಜ್ಯವನ್ನಾಗಿಸುವುದು ನಮ್ಮ ಗುರಿ. ಈ ಗುರಿಯನ್ನು ಸಾಧಿಸಲು ನಮಗಿರುವ ಪ್ರಬಲ ಅಸ್ತ್ರವೆಂದರೆ ನಮ್ಮ ಜನ - ಕೌಶಲ್ಯಭರಿತ, ಭವಿಷ್ಯಕ್ಕೆ ತಯಾರಾದ ಹಾಗೂ ನಾವೀನ್ಯತೆವುಳ್ಳ  ಕಾರ್ಮಿಕಶಕ್ತಿ. 

ಕೌಶಲ್ಯಾಭಿವೃದ್ಧಿಯಲ್ಲಿ ಕರ್ನಾಟಕ ಸದಾ ಮುಂಚೂಣಿಯಲ್ಲಿರುವ ರಾಜ್ಯವಾಗಿದ್ದು, ದೇಶದಲ್ಲಿ ಪ್ರತ್ಯೇಕವಾಗಿ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯನ್ನು ಪ್ರಾರಂಭಿಸಿದ ರಾಜ್ಯಗಳಲ್ಲಿ ಒಂದಾಗಿದೆ. ಮುಖ್ಯಮಂತ್ರಿಗಳ ಕೌಶಲ್ಯ ಕರ್ನಾಟಕ ಯೋಜನೆಯ ಮೂಲಕ ಕೌಶಲ್ಯವನ್ನು ರಾಜ್ಯದ ಮೂಲೆ ಮೂಲೆಗೂ ಕೊಂಡೊಯ್ದಿದ್ದೇವೆ. 5 ಲಕ್ಷ ಯುವಜನರನ್ನು ತಲುಪುವ ಗುರಿ ಹೊಂದಿದ್ದರೂ ನಾವು ಅದಕ್ಕೂ ಹೆಚ್ಚು ಜನರನ್ನು ತಲುಪಿದ್ದೇವೆ. ಯುವಯುಗ ಯೋಜನೆಯಡಿ ಸುಧಾರಿತ ಡಿಜಿಟಲ್ ಕೌಶಲ್ಯವನ್ನು 1.10 ಲಕ್ಷ ಜನರಿಗೆ ಒದಗಿಸುವ ಮೂಲಕ ಕರ್ನಾಟಕ ಕೈಗಾರಿಕಾ ಕ್ರಾಂತಿಯನ್ನು 4 ನೇ ಸ್ಥಾನದಲ್ಲಿದೆ.

ಕಳೆದ ಎರಡು ವರ್ಷಗಳಲ್ಲಿ ರಾಜ್ಯಾದ್ಯಂತ 34 ಬೃಹತ್ ಉದ್ಯೋಗ ಮೇಳಗಳನ್ನು ಹಮ್ಮಿಕೊಂಡಿದ್ದು 1.43 ಲಕ್ಷ ಉದ್ಯೋಕಾಂಕ್ಷಿಗಳು ಭಾಗವಹಿಸಿದ್ದಾರೆ. 27,123  ಜನರಿಗೆ ಉದ್ಯೋಗಾವಕಾಶಗಳು ಲಭಿಸಿವೆ.  ಬದಲಾಗುತ್ತಿರುವ ಜಾಗತಿಕ ಆರ್ಥಿಕತೆಗೆ ತಕ್ಕಂತೆ ರಾಜ್ಯದ ಕೌಶಲ್ಯ ದೃಷ್ಟಿಯನ್ನು ಪರಿವರ್ತಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ