Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವಿವಿಧ ಉದ್ಯಾನವನಗಳ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದ ಸಂಸದೆ ಡಾ.ಪ್ರಭಾ

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಹರಿಹರ ನಗರದ ಜೆ.ಸಿ ಬಡಾವಣೆಯಲ್ಲಿರುವ ರಾಮಮಂದಿರದ ಆವರಣದಲ್ಲಿ ದೂಡಾ ವತಿಯಿಂದ ಆಯೋಜಿಸಲಾದ ವಿವಿಧ ಉದ್ಯಾನವನಗಳ ಅಭಿವೃದ್ಧಿ ಕಾಮಗಾರಿಗಳಿಗೆ
ದಾವಣಗೆರೆ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಭೂಮಿಪೂಜೆ ನೆರವೇರಿಸಿ ಮಾತನಾಡಿದರು.

ಹರಿಹರ ನಗರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಹಸಿರು ವಾತಾವರಣ ನಿರ್ಮಾಣ ಮತ್ತು ಸಾರ್ವಜನಿಕರಿಗೆ ಉತ್ತಮ ವಿನೋದ ಹಾಗೂ ಆರೋಗ್ಯಕರ ಪರಿಸರ ಒದಗಿಸುವ ಉದ್ದೇಶದಿಂದ ಕೆಳಗಿನ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ ಎಂದು ಸಂಸದರು ತಿಳಿಸಿದರು.


ದಾವಣಗೆರೆಹರಿಹರ ನಗರಾಭಿವೃದ್ಧಿ ಪ್ರಾಧಿಕಾರದ ವತಿಯಿಂದ ಸುಮಾರು 1 ಕೋಟಿ 15 ಲಕ್ಷ ವೆಚ್ಚದಲ್ಲಿ ಹರಿಹರ ನಗರದ ವಿವಿಧ ಉದ್ಯಾನಗಳ ಸಮಗ್ರ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸಲಾಯಿತು.

ನಗರದ ಹಸಿರು ವಾತಾವರಣವನ್ನು ವೃದ್ಧಿಸಿ, ನಾಗರಿಕರಿಗೆ ಉತ್ತಮ ವಿಶ್ರಾಂತಿ ಮತ್ತು ಮನರಂಜನಾ ಸೌಲಭ್ಯಗಳನ್ನು ಒದಗಿಸುವ ಉದ್ದೇಶದಿಂದ ಈ ಅಭಿವೃದ್ಧಿ ಕಾರ್ಯಗಳನ್ನು ಕೈಗೆತ್ತಿಕೊಳ್ಳಲಾಗಿದೆ.

1.ಮಹಜೇನಹಳ್ಳಿ ಗ್ರಾಮದಲ್ಲಿ ಉದ್ಯಾನವನ ಅಭಿವೃದ್ಧಿ 21 ಲಕ್ಷ
2.ಮಹಜೇನಹಳ್ಳಿ ಗ್ರಾಮದಲ್ಲಿ ಅಂಬೇಡ್ಕರ್ ಉದ್ಯಾನವನ ಅಭಿವೃದ್ಧಿ 23 ಲಕ್ಷ
3.ಮಹಜೇನಹಳ್ಳಿಯ ರಿ.ಸ.ನಂ 9/2 ರಲ್ಲಿ ಉದ್ಯಾನವನ ಅಭಿವೃದ್ಧಿ 25 ಲಕ್ಷ
4.ಕೊಂಡಜ್ಜಿ ರಸ್ತೆಯ ಶಿವಪುರದಲ್ಲಿ ಉದ್ಯಾನವನ ಅಭಿವೃದ್ಧಿ ಕಾಮಗಾರಿ 23 ಲಕ್ಷ

5.ಹರಿಹರ ನಗರದ 4ನೇ ವಾರ್ಡ್ ಲೇಬರ್ ಕಾಲೋನಿ ಉದ್ಯಾನವನ ಅಭಿವೃದ್ಧಿ 25 ಲಕ್ಷ
6.ಹರಿಹರ ನಗರದ ಜೀಜಾಮಾತಾ ಕಾಲೋನಿಯಲ್ಲಿರುವ ಉದ್ಯಾನವನ ಅಭಿವೃದ್ಧಿ 21 ಲಕ್ಷ
ಈ ಎಲ್ಲಾ ಯೋಜನೆಗಳು ಸ್ಥಳೀಯ ನಾಗರಿಕರಿಗೆ ವಿಶ್ರಾಂತಿ, ವ್ಯಾಯಾಮ ಹಾಗೂ ಮಕ್ಕಳ ಆಟೋಪಾಯಕ್ಕಾಗಿ ಸುಸಜ್ಜಿತ ಉದ್ಯಾನವನಗಳನ್ನು ಒದಗಿಸುವುದರ ಜೊತೆಗೆ ನಗರದ ಸೌಂದರ್ಯವರ್ಧನೆಗೂ ಸಹಕಾರಿಯಾಗಲಿದೆ.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ