Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಚಿತ್ರದುರ್ಗ ಜಿಲ್ಲೆಗೆ ಹೆಚ್ಚುವರಿ ಏಕಲವ್ಯ ಶಾಲೆ ಮಂಜೂರಾತಿಗೆ ಮನವಿ : ಸಂಸದ ಕಾರಜೋಳ

Advertisement
ಚಂದ್ರವಳ್ಳಿ ನ್ಯೂಸ್, ದೆಹಲಿ:
     ಸುಮಾರು ೪ ಲಕ್ಷಕ್ಕೂ ಹೆಚ್ಚು ಪರಿಶಿಷ್ಟ ಪಂಗಡಗಳ ಜನರು ವಾಸಿಸುತ್ತಿರುವ ಚಿತ್ರದುರ್ಗ ಜಿಲ್ಲೆಗೆ ಹಾಲಿ ಇರುವ ಏಕಲವ್ಯ ವಸತಿ ಶಾಲೆಯ ಜೊತೆಗೆ ಇನ್ನೊಂದು ಹೆಚ್ಚುವರಿ ಏಕಲವ್ಯ ವಸತಿ ಶಾಲೆಯನ್ನು ಮಂಜೂರು ಮಾಡಲು ಕೇಂದ್ರ ಬುಡಕಟ್ಟು ವ್ಯವಹಾರಗಳ ಸಚಿವರಿಗೆ ಶಿಫಾರಸ್ಸು ಮಾಡುವಂತೆ ಸಂಸದ ಗೋವಿಂದ ಎಂ.ಕಾರಜೋಳ ರವರು ನವದೆಹಲಿಯಲ್ಲಿ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು ಹಾಗೂ ರಾಷ್ಟ್ರೀಯ ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು.

      ಚಿತ್ರದುರ್ಗ ಜಿಲ್ಲೆಯಲ್ಲಿ ಸಾಕಷ್ಟು ಪರಿಶಿಷ್ಟ ಪಂಗಡಕ್ಕೆ ಸೇರಿದವರ ಜನಸಂಖ್ಯೆಯಿದೆ, ಅದರಲ್ಲೂ ಚಳ್ಳಕೆರೆ ಹಾಗೂ ಮೊಳಕಾಲ್ಮೂರು ತಾಲ್ಲೂಕುಗಳಲ್ಲಿ ಅತಿ ಹೆಚ್ಚು ಪರಿಶಿಷ್ಟ ವರ್ಗದ ಜನರು ವಾಸಿಸುತ್ತಿದ್ದಾರೆ. ಜಿಲ್ಲೆಯಲ್ಲಿ ಹಾಲಿ ಇರುವ ಏಕಲವ್ಯ ವಸತಿ ಶಾಲೆ ಬೇಡಿಕೆಯನ್ನೂ ಪೂರೈಸಲಾಗುತ್ತಿಲ್ಲ. ಪರಿಶಿಷ್ಟ ವರ್ಗಗಳ ಮಕ್ಕಳೂ ಕೂಡ ಗುಣಮಟ್ಟದ ಶಿಕ್ಷಣ ಪಡೆದು ಮುಖ್ಯವಾಹಿನಿಗೆ ಬರಬೇಕು ಎನ್ನುವ ಆಶಯ ನನ್ನದಾಗಿದೆ ಎಂಬದನ್ನು ಸಚಿವರಿಗೆ ಸಂಸದರು ಮನದಟ್ಟು ಮಾಡಿದ್ದಾರೆ.


ಏಕಲವ್ಯ ವಸತಿ ಶಾಲೆಗೆ ಅಗತ್ಯವಾಗಿರುವ ೧೫ ಎಕರೆ ಜಮೀನನ್ನೂ ಸಹ ಗುರುತಿಸಲು ಈಗಾಗಲೇ ಕ್ರಮಕೈಗೊಂಡಿರುವುದಾಗಿ ಪತ್ರದಲ್ಲಿ ಸಂಸದರು ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ಚಿತ್ರದುರ್ಗದ ವಿಧಾನ ಪರಿಷತ್ ಸದಸ್ಯ ಕೆ.ಎಸ್. ನವೀನ್‌, ವಿಧಾನ ಪರಿಷತ್ ಸದಸ್ಯ ಎನ್.ರವಿಕುಮಾರ್‌ ಉಪಸ್ಥಿತರಿದ್ದರು.

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ