Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸಂಸದ ಸುಧಾಕರ್ ಹೆಸರು ಬರೆದಿಟ್ಟು ಗುತ್ತಿಗೆ ನೌಕರ ಆತ್ಮಹತ್ಯೆ

Advertisement
ಚಂದ್ರವಳ್ಳಿ ನ್ಯೂಸ್, ಚಿಕ್ಕಬಳ್ಳಾಪುರ:
ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ
ಬಿಜೆಪಿ ಸಂಸದ ಡಾ. ಕೆ ಸುಧಾಕರ್  ಅವರ ಹೆಸರು ಬರೆದಿಟ್ಟು ಗುತ್ತಿಗೆ ನೌಕರ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಜರುಗಿದೆ.


ಜಿಲ್ಲಾ ಪಂಚಾಯತಿ ಮುಖ್ಯ ಲೆಕ್ಕಾಧಿಕಾರಿಯ ಗುತ್ತಿಗೆ ನೌಕರ ಕಾರು ಚಾಲಕನಾಗಿದ್ದ ಬಾಬು, ಆಗಸ್ಟ್-07 ರಂದು ಗುರುವಾರ ಚಿಕ್ಕಬಳ್ಳಾಪುರ ಜಿಲ್ಲಾ ಪಂಚಾಯತಿ ಸಭಾಂಗಣದ ಪಕ್ಕದ ಮರದಡಿಯಲ್ಲೇ ಸರ್ಕಾರಿ ಕಾರು ನಿಲ್ಲಿಸಿ ಕಾರಿನ ಮೇಲೆ ಹತ್ತಿ ಹೊಂಗೆ ಮರಕ್ಕೆ ನೇಣಿಗೆ ಶರಣಾಗಿದ್ದಾನೆ. ವಿಚಾರ ತಿಳಿದು ಸ್ಥಳಕ್ಕೆ ಆಗಮಿಸಿದ ಚಿಕ್ಕಬಳ್ಳಾಪುರ ಎಸ್ಪಿ ಕುಶಾಲ್ ಚೌಕ್ಸಿ ಸೇರಿದಂತೆ ಚಿಕ್ಕಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ತನಿಖೆ ನಡೆಸಿದ್ದು, ಮೃತನ ಕಾರಿನಲ್ಲಿ 4 ಪುಟಗಳ ಡೆತ್ ನೋಟ್ ಸಿಕ್ಕಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.


ಡೆತ್ ನೋಟ್ ನ ಮೊದಲ ಪುಟದಲ್ಲೇ, ಮೊದಲ ಸಾಲಿನಲ್ಲೇ ನನ್ನ ಸಾವಿಗೆ ಡಾ ಕೆ ಸುಧಾಕರ್ ಕಾರಣ ಹಾಗೂ ನಾಗೇಶ್ ಸೇರಿದಂತೆ ಜಿಲ್ಲಾ ಪಂಚಾಯತಿ ಲೆಕ್ಕ ಪರಿಶೋಧಕ ವಿಭಾಗದ ಎಸ್ ಡಿಎ ಮಂಜುನಾಥ್ ಹೆಸರನ್ನ ಉಲ್ಲೇಖಿಸಿ ಪತ್ರ ಬರೆದಿದ್ದಾನೆ ಎನ್ನಲಾಗಿದೆ.

ಪತ್ರದಲ್ಲಿ ಏನಿದೆ-
ಕಾರು ಚಾಲಕ ಬರೆದಿಟ್ಟಿರುವ ಡೆತ್ ನೋಟ್ ನಲ್ಲಿ
, ಅಂದಿನ 2021ರಲ್ಲಿ ವೈದ್ಯಕೀಯ ಹಾಗೂ ಆರೋಗ್ಯ ಖಾತೆ ಮಂತ್ರಿ ಡಾ ಕೆ ಸುಧಾಕರ್ ಗೆ ಹೇಳಿ, ಸರ್ಕಾರಿ ಕೆಲಸ ಕೊಡಿಸುವುದಾಗಿ ನಾಗೇಶ್ 25 ಲಕ್ಷ ರೂ. ಹಣ ಪಡೆದು ಪಡೆದುಕೊಂಡಿದ್ದಾನಂತೆ.

ಹಿಂಗಂತ ಡೆತ್ ನೋಟ್ ಬರೆದು ಡೆತ್ ನೋಟ್ ನ್ನ ಅದೇ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದ ಶಿಲ್ಪಾ ಎನ್ನುವ ಮಹಿಳೆಯೊಬ್ಬರಿಗೆ ವಾಟ್ಸಾಪ್ ಮೂಲಕ ಕಳುಹಿಸಿದ್ದನಂತೆ. ಅದನ್ನು ಕಚೇರಿಯ ಶಿಲ್ಪಾ ಮೃತನ ಪತ್ನಿ ಶಿಲ್ಪಾಗೆ ಕಳುಹಿಸಿದ್ದಾಳೆ. ಆದ್ರೆ, ಇದನ್ನು ಯಾರು ಗಂಭೀರವಾಗಿ ತೆಗೆದುಕೊಂಡಿರಲಿಲ್ಲ.

ಇದೀಗ ಬಾಬು ಆತ್ಮಹತ್ಯಗೆ ಶರಣಾಗಿದ್ದಾನೆ. ಘಟನೆ ಸಂಬಂಧ ತನಿಖೆಗಿಳಿದ ಪೊಲೀಸರು ಮೃತದೇಹವನ್ನ ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಯ ಶವಗಾರಕ್ಕೆ ರವಾನೆ ಮಾಡಿದ್ದು ಇತ್ತ ಡೆತ್ ನೋಟ್ ನಲ್ಲಿ ಉಲ್ಲೇಖಿಸಿರುವ ನಾಗೇಶ್ ಗಾಗಿ ಹುಡುಕಾಟ ನಡೆಸಿದ್ದಾರೆ.
ಆತ್ಮಹತ್ಯೆ ವಿಚಾರ ತಿಳಿದು ಸ್ಥಳಕ್ಕೆ ಆಗಮಿಸಿದ ಮೃತನ ಪತ್ನಿ ಶಿಲ್ಪ ಹಾಗೂ ಆತನ ಸಹೋದರ ಲೋಕೇಶ್ ಸೇರಿದಂತೆ ತಾಯಿ ಕಾಳಮ್ಮನವರ ಆಕ್ರಂದನ ಮುಗಿಲುಮುಟ್ಟಿತ್ತು.
 

ಬೆಳಿಗ್ಗೆ ಮಿಟಿಂಗ್ ಇದೆ ಬೇಗ ಹೋಗಬೇಕು ಎಂದು ಗಂಡ 5 ಗಂಟೆಗೆ ಮನೆಯಿಂದ ಬಂದಿದ್ದರು. ಆದರೆ ಈಗ ಯಾಕೆ ಹೀಗೆ ಮಾಡಿಕೊಂಡರು ಗೊತ್ತಿಲ್ಲ ಅಂತ ಗೋಳಾಡಿದರು. ಮೃತನ ತಾಯಿ ಮಗನನ್ನ ಕಳೆದುಕೊಂಡಿದ್ದು ಸರ್ಕಾರಿ ಕೆಲಸದ ಆಮಿಷ ಹಾಗೂ ಡೆತ್ ನೋಟ್ ಬಗ್ಗೆ ನಮಗೇನು ಸರಿಯಾಗಿ ತಿಳಿದಿಲ್ಲ ಎಂದಿದ್ದಾರೆ.


ಆತ್ಮಹತ್ಯೆ ಪ್ರಕರಣ ರಾಜಕೀಯ ತಿರುವು ಪಡೆದುಕೊಂಡಿದೆ. ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಕಾಂಗ್ರೆಸ್ ಬಿಜೆಪಿ ನಾಯಕರ ನಡುವೆ ಪ್ರತಿಭಟನೆ ಪರ ವಿರೋಧ ಚರ್ಚೆಗೆ ಕಾರಣವಾಗಿದೆ.


ಚಿಕ್ಕಬಳ್ಳಾಪುರ ಗ್ರಾಮಾಂತರ ಠಾಣೆ ಬಳಿ ಬಿಜೆಪಿ ಹಾಗೂ ಕಾಂಗ್ರೆಸ್ ಮುಖಂಡರು ಜಮಾವಣೆಯಾಗಿದ್ದರು. ಸದ್ಯ ಪ್ರಕರಣದ ಕುರಿತು ವಾದ ವಿವಾದಗಳು ನಡೆಯುತ್ತಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

 ಕಾಂಗ್ರೆಸ್ ಮುಖಂಡರು ಚಿಕ್ಕಬಳ್ಳಾಪುರ ನಗರದ ಅಂಬೇಡ್ಕರ್ ವೃತ್ತದಲ್ಲಿ ಪ್ರತಿಭಟನೆ ನಡೆಸಿ ಅಮಾಯಕನ ಸಾವಿಗೆ ಕಾರಣರಾಗಿರೋ ಸಂಸದ ಸುಧಾಕರ್ ಹಾಗೂ ಡೆತ್ ನೋಟ್ ನಲ್ಲಿ ಉಲ್ಲೇಖಿಸಿರುವ ನಾಗೇಶ್ ಹಾಗೂ ಮಂಜುನಾಥ್ ವಿರುದ್ದ ಎಫ್ಐಆರ್ ದಾಖಲಿಸಿ ಕೂಡಲೇ ಕ್ರಮ ಕೈಗೊಳ್ಳುವಂತೆ ಪ್ರತಿಭಟನೆ ಮಾಡಿ ಒತ್ತಾಯಿಸಿದ್ದಾರೆ.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ