Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಎಂಪಿಆರ್ ಎಸಿಎಸ್ ಚುನಾವಣೆ: ಬಿಜೆಪಿ–ಜೆಡಿಎಸ್ ಮೈತ್ರಿಗೆ ಸ್ಪಷ್ಟ ಬಹುಮತ

 ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ತಾಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026
2031ನೇ ಅವಧಿಯ ಆಡಳಿತ ಮಂಡಳಿ ನಿರ್ದೇಶಕರ ಚುನಾವಣೆಯಲ್ಲಿ ಬಿಜೆಪಿಜೆಡಿಎಸ್ ಮೈತ್ರಿ ಬೆಂಬಲಿತ ಅಭ್ಯರ್ಥಿಗಳು 12 ಸ್ಥಾನಗಳ ಪೈಕಿ 9 ಸ್ಥಾನಗಳಲ್ಲಿ ಗೆಲುವು ಸಾಧಿಸುವ ಮೂಲಕ ಆಡಳಿತದ ಚುಕ್ಕಾಣಿ ಹಿಡಿದಿದ್ದಾರೆ. ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು 3 ಸ್ಥಾನಗಳಲ್ಲಿ ಜಯಗಳಿಸಿದ್ದಾರೆ.

ತೂಬಗೆರೆ ತೇರಿನಬೀದಿಯ ಸಮುದಾಯ ಭವನದಲ್ಲಿ ಭಾನುವಾರ ಬೆಳಿಗ್ಗೆ 10ರಿಂದ ಮಧ್ಯಾಹ್ನ 3 ಗಂಟೆಯವರೆಗೆ ಮತದಾನ ನಡೆಯಿತು. ಆರಂಭದಿಂದಲೇ ಮತದಾರರು ಉತ್ಸಾಹದಿಂದ ಆಗಮಿಸಿ ಮತ ಚಲಾಯಿಸಿದರು. ಮಹಿಳೆಯರು, ಹಿರಿಯ ನಾಗರಿಕರು ಹಾಗೂ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದು, ಚುನಾವಣೆ ಶಾಂತಿಯುತ ಹಾಗೂ ವ್ಯವಸ್ಥಿತವಾಗಿ ನಡೆಯಿತು.

Advertisement

 ಚುನಾವಣೆ ನಡೆದು ಫಲಿತಾಂಶ ಪ್ರಕಟವಾಗಿದ್ದು  ಬಿಜೆಪಿ ಜೆಡಿಎಸ್ ಮೈತ್ರಿ ಕೂಟದ ಮುಖಂಡರು ಹಾಗೂ ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚಿ ಪರಸ್ಪರ ಅಭಿನಂದನೆ ಸಲ್ಲಿಸುವ ಮೂಲಕ ವಿಜಯೋತ್ಸವ ಆಚರಿಸಿದರು.

ಬಿಜೆಪಿ ಮುಖಂಡ ಪ್ರತಾಪ್ ಮಾತನಾಡಿ, "ಎನ್‌ಡಿಎ ಮೈತ್ರಿಕೂಟದ ಸಂಘಟಿತ ಕಾರ್ಯವೈಖರಿ, ಕಾರ್ಯಕರ್ತರ ಪರಿಶ್ರಮ ಹಾಗೂ ರೈತರು ಮತ್ತು ಷೇರುದಾರರು ವ್ಯಕ್ತಪಡಿಸಿದ ವಿಶ್ವಾಸಕ್ಕೆ ಸಂದ ಜಯ ಇದಾಗಿದೆ. ಸಂಘದ ಅಭಿವೃದ್ಧಿ, ಪಾರದರ್ಶಕ ಆಡಳಿತ ಹಾಗೂ ರೈತರ ಹಿತಾಸಕ್ತಿಗೆ ಆದ್ಯತೆ ನೀಡುವ ನಿಟ್ಟಿನಲ್ಲಿ ನೂತನ ಆಡಳಿತ ಮಂಡಳಿ ಕಾರ್ಯನಿರ್ವಹಿಸಲಿದೆ," ಎಂದು ಹೇಳಿದರು.

ಜೆಡಿಎಸ್ ಮುಖಂಡ ಹಾಡೋನಹಳ್ಳಿ ನಾಗರಾಜು ಮಾತನಾಡಿ, "ಸಹಕಾರ ಕ್ಷೇತ್ರದ ಅಭಿವೃದ್ಧಿ ಹಾಗೂ ರೈತರ ಕಲ್ಯಾಣಕ್ಕೆ ಮತದಾರರು ಬೆಂಬಲ ವ್ಯಕ್ತಪಡಿಸಿದ್ದಾರೆ. ಷೇರುದಾರರ ನಿರೀಕ್ಷೆಗೆ ತಕ್ಕಂತೆ ಸಂಘವನ್ನು ಮತ್ತಷ್ಟು ಅಭಿವೃದ್ಧಿಪಡಿಸಲು ಎಲ್ಲರೂ ಒಗ್ಗಟ್ಟಿನಿಂದ ಶ್ರಮಿಸಲಾಗುವುದು," ಎಂದರು.

ಚುನಾವಣೆ ಶಾಂತಿಯುತ ಹಾಗೂ ಪಾರದರ್ಶಕವಾಗಿ ನಡೆಯಲು ಸಹಕರಿಸಿದ ಮತದಾರರು, ಚುನಾವಣಾ ಸಿಬ್ಬಂದಿ ಮತ್ತು ಪೊಲೀಸ್ ಇಲಾಖೆಗೆ ಸಂಘದ ವತಿಯಿಂದ ಕೃತಜ್ಞತೆ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಟಿಎಪಿಸಿಎಂಎಸ್ ಸದಸ್ಯ ಪುರೋಷೋತ್ತಮ್, ಬಿಜೆಪಿ ಹೋಬಳಿ ಅಧ್ಯಕ್ಷ ಕೃಷ್ಣಪ್ಪ, ಬಿಜೆಪಿ ಮುಖಂಡರಾದ ಧನುಂಜಯ ಮತ್ತು ವಾಸು, ಜೆಡಿಎಸ್ ಮುಖಂಡರಾದ ಕನಕದಾಸ, ಉದಯ ಆರಾಧ್ಯ, ಕೃಷ್ಣಚಾರಿ ಸೇರಿದಂತೆ ಮೈತ್ರಿಕೂಟದ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದು, ನೂತನವಾಗಿ ಆಯ್ಕೆಯಾದ ನಿರ್ದೇಶಕರಿಗೆ ಅಭಿನಂದನೆ ಸಲ್ಲಿಸಿದರು.

ನೂತನವಾಗಿ ಆಯ್ಕೆಯಾದ ನಿರ್ದೇಶಕರು: ಸಾಮಾನ್ಯ ಕ್ಷೇತ್ರ.. ಅಶ್ವತ್ಥನಾರಾಯಣ್ ಎನ್., ರಾಜಕುಮಾರ್, ಅರವಿಂದ್ ಎನ್., ಸತ್ಯನಾರಾಯಣಸ್ವಾಮಿ ಹಾಗೂ ಸತೀಶ್ ಎಂ.

ಪರಿಶಿಷ್ಟ ಜಾತಿ (ಎಸ್‌ಸಿ) ಮೀಸಲು ಕ್ಷೇತ್ರ... ಗಂಗರಾಜು ಎನ್.ಸಿ.
ಪರಿಶಿಷ್ಟ ಪಂಗಡ (ಎಸ್‌ಟಿ) ಮೀಸಲು ಕ್ಷೇತ್ರ... ನಾರಾಯಣಪ್ಪ.
ಹಿಂದುಳಿದ ವರ್ಗ (ಪ್ರವರ್ಗ
ಅ)...ಟಿ.ಜಿ. ವಾಸುದೇವ.
ಹಿಂದುಳಿದ ವರ್ಗ (ಪ್ರವರ್ಗ
ಬ) ಕ್ಷೇತ್ರ.. ಸುಬ್ರಮಣಿ.

ಮಹಿಳಾ ಮೀಸಲು ಕ್ಷೇತ್ರ.. ವಿನೋದಮ್ಮ ಹಾಗೂ ಆನಂದಮ್ಮ. ಸಾಲಗಾರರಲ್ಲದ ಕ್ಷೇತ್ರ... ಟಿ.ಆರ್. ವೆಂಕಟಲಕ್ಷ್ಮಿ. ರವರು ಆಯ್ಕೆಯಾಗಿದ್ದಾರೆ.       ನೂತನವಾಗಿ ಆಯ್ಕೆಯಾದ ನಿರ್ದೇಶಕರನ್ನು ತಾಲ್ಲೂಕಿನ ಹಲವಾರು ಗಣ್ಯರು ಹಾಗೂ ವಿವಿಧ ಪಕ್ಷಗಳ ಮುಖಂಡರು ಅಭಿನಂದಿಸಿದ್ದಾರೆ.

 

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಸಾಪ ಮಾಜಿ ಜಿಲ್ಲಾಧ್ಯಕ್ಷ, ಶಿಕ್ಷಣತಜ್ಞ ಡಾ. ಕೆ.ಎಂ. ವೀರೇಶ್ ಹೃದಯಾಘಾತದಿಂದ ನಿಧನದುರ್ಗಕ್ಕೆ ಹರಿದು ಬಂದ ಭದ್ರೆ- ಸೆ.24ರಂದು ಮುಖ್ಯಮಂತ್ರಿಗಳಿಂದ ಗಂಗಾಪೂಜೆ,  ಬೃಹತ್ ಸಾರ್ವಜನಿಕ ಸಮಾರಂಭಆರ್.ಎಲ್ ಜಾಲಪ್ಪ ತಾಂತ್ರಿಕ ಮಹಾವಿದ್ಯಾಲಯದಲ್ಲಿ 22ನೇ ಘಟಿಕೋತ್ಸವ ಮತ್ತು ಪದವಿ ಪ್ರದಾನ ಕಾರ್ಯಕ್ರಮನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ ಬೈಕ್ ಸವಾರ ಸಾವುಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ಸರ್ವ ಸದಸ್ಯರ ವಾರ್ಷಿಕ ಸಭೆ ಹೋರಾಟಗಳಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಪ್ರಾತಿನಿಧ್ಯ ಕಡಿಮೆ- ಚಿಕ್ಕಪ್ಪನಹಳ್ಳಿ ಷಣ್ಮುಖಕುಂಚಿಟಿಗ ನೌಕರರ ಸಂಘಕ್ಕೆ ಸದಸ್ಯರಾಗಿ: ಎಸ್.ಕೆ ಲಕ್ಷ್ಮಣ್ಚಳವಳಿ ನೆನಪಾಗಿ ಉಳಿದ ‘ತೆಂಕ-ಬಡಗ’ಅಂತಾರಾಷ್ಟ್ರೀಯ ಶಾಂತಿ ದಿನ – ಮನದ ದ್ವೇಷ ಕರಗಿದಾಗಲೇ ಜಗದ ಶಾಂತಿ ಅರಳುವುದು!ಗಣಪತಿ ಮೆರವಣಿಗೆ ವೇಳೆ ಗಲಾಟೆ 7 ಯುವಕರ ವಿರುದ್ಧ ಸುಮೋಟೋ ಪ್ರಕರಣ ದಾಖಲು