Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮೋದಿ ಅವರಿಗೆ ಭಾರತ ಭಾಗ್ಯವಿದಾತ ಬಿರುದು ನೀಡಿ ಸನ್ಮಾನಿಸಿದ ಶ್ರೀಗಳು

Advertisement
ಚಂದ್ರವಳ್ಳಿ ನ್ಯೂಸ್, ಉಡುಪಿ:
ಕರಾವಳಿಯ ಪುಣ್ಯಭೂಮಿ ಉಡುಪಿಯಲ್ಲಿ ಆಯೋಜಿಸಲಾಗಿದ್ದ ಲಕ್ಷಕಂಠ ಭಗವದ್ಗೀತಾ ಸಮಾವೇಶದಲ್ಲಿ ಪಾಲ್ಗೊಳ್ಳಲು ಆಗಮಿಸಿ ಕೃಷ್ಣ ದರ್ಶನ ಮಾಡಿದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸುಗುಣೇಂದ್ರ ತೀರ್ಥ ಸ್ವಾಮೀಜಿ ಅವರು
ಭಾರತ ಭಾಗ್ಯವಿದಾತಬಿರುದು ನೀಡಿ ಸನ್ಮಾನ ಮಾಡಿದರು. ಈ ಸಂದರ್ಭದಲ್ಲಿ ಪ್ರಧಾನಿಗೆ ಬೆಳ್ಳಿಯ ಕಡೆಗೋಲು ನೀಡಿ ಗೌರವಿಸಲಾಯಿತು.


ನರೇಂದ್ರ ಮೋದಿ ಅವರು ಲಕ್ಷಕಂಠ ಪಾರಾಣದಲ್ಲಿ ಭಾಗವಹಿಸಿ 7 ನಿಮಿಷಗಳ ಕಾಲ ಶ್ಲೋಕ ಪಠಣ ಮಾಡಿದ ಬಳಿಕ ವೇದಿಕೆ ಕಾರ್ಯಕ್ರಮದಲ್ಲಿ ಹಲವು ವಿಚಾರಗಳ ಬಗ್ಗೆ ಮಾತನಾಡಿದರು.


ಜೈ ಶ್ರೀಕೃಷ್ಣ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಮೋದಿ ಅವರು, ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣದಲ್ಲಿ ಉಡುಪಿ ಪಾತ್ರವನ್ನು ಪ್ರಸ್ತಾಪಿಸಿದ್ದು, ವಿಶ್ವೇಶ ತೀರ್ಥ ಸ್ವಾಮೀಜಿ ರಾಮ ಮಂದಿರ ಆಂದೋಲನ ನಡೆಸಿದ್ದು ವಿಶ್ವ ಅರಿತಿದೆ. ಅಯೋಧ್ಯೆಯಿಂದ ಉಡುಪಿಯವರೆಗೆ ಅಸಂಖ್ಯ ಸಂಖ್ಯೆಯಲ್ಲಿ ರಾಮ ಭಕ್ತರು ಇದ್ದಾರೆ ಎಂದು ಮೋದಿ ತಿಳಿಸಿದರು.


ಉಡುಪಿ ಕೊಂಡಾಡಿದ ಮೋದಿ-
ಗುಜರಾತ್ ನಲ್ಲಿ ನನ್ನ ಜನನ ಆಗಿದ್ದರೂ ಉಡುಪಿ ಜೊತೆ ಅವಿನಾಭಾವ ಸಂಬಂಧ ಇದೆ. ಉಡುಪಿಗೆ ಭೇಟಿ ನೀಡಿದ್ದು ವಿಶಿಷ್ಟ ಅನುಭೂತಿ. ನಾನು ದ್ವಾರಕೆಯಲ್ಲಿ ಹೋಗಿ ಶ್ರೀಕೃಷ್ಣನ ದರ್ಶನ ಪಡೆದಿದ್ದೆ. ಉಡುಪಿಗೆ ಬರುವುದು ಅಂದ್ರೆ ನನಗೆ ಬಹಳ ವಿಶೇಷ ಎಂದು ಮೋದಿ ಅವರು ಭಾವುಕರಾದರು.


ಈ ಹಿಂದೆ ಸ್ವಚ್ಛತಾ ಅಭಿಯಾನದಲ್ಲಿ ಉಡುಪಿಗೆ ಮೊದಲ ಸ್ಥಾನ ಬಂದಿತ್ತು. ಉಡುಪಿ ಭಾರತೀಯ ಜನತಾ ಪಕ್ಷದ ಕರ್ಮಭೂಮಿಯಾಗಿದೆ. ಬಿಜೆಪಿಗೆ ದಿವಂಗತ ವಿ.ಎಸ್​.ಆಚಾರ್ಯರ ಕೊಡುಗೆ ಸಾಕಷ್ಟಿದೆ. ಕಲಿಯುಗದಲ್ಲಿ ಭಗವಂತನ ನಾಮಸ್ಮರಣೆಯಿಂದ ಮೋಕ್ಷ ಸಾಧ್ಯ. ಲಕ್ಷ ಕಂಠ ಗೀತಾ ಪಾರಾಯಣ ನಮಗೆ ಹೊಸ ಶಕ್ತಿ ನೀಡುತ್ತಿದೆ. ಇಂದು ವಿಶೇಷವಾಗಿ ಸುಗುಣೇಂದ್ರ ತೀರ್ಥ ಸ್ವಾಮೀಜಿಯವರಿಗೆ ನಮಿಸುತ್ತೇನೆ. ಲಕ್ಷ ಕಠ ಗೀತಾ ಪಾರಾಯಣವನ್ನು ಇಂದು ಸಾಕಾರಗೊಳಿಸಿದ್ದಾರೆ ಎಂದು ಮೋದಿ ಅವರು ಉಡುಪಿ ಕುರಿತು ಸಾಕಷ್ಟು ಕೊಂಡಾಡಿದರು.


ಕಳೆದ ಮೂರು ದಿನಗಳ ಹಿಂದೆ ನಾನು ಅಯೋಧ್ಯೆಯಲ್ಲಿದ್ದೆ, ಅಲ್ಲಿ ಧರ್ಮ ಧ್ವಜದ ಸ್ಥಾಪನೆಯಾಗಿದೆ. ಶ್ರೀರಾಮಮಂದಿರ ಆಂದೋಲನದಲ್ಲಿ ಉಡುಪಿಯ ಜನರ ಪಾತ್ರ ಇಡೀ ದೇಶಕ್ಕೆ ಗೊತ್ತಿದೆ. ಸ್ವರ್ಗೀಯಾಗಿರುವ ದಿ. ಪೇಜಾವರ ಶ್ರೀಗಳನ್ನ ನಾವು ಸ್ಮರಿಸಲೇಬೇಕು. ಅಲ್ಲದೇ ರಾಮಮಂದಿರ ನಿರ್ಮಾಣ ಉಡುಪಿಗೆ ಮತ್ತೊಂದು ಕಾರಣಕ್ಕೆ ವಿಶೇಷವಾಗಿದೆ. ಹೊಸ ಮಂದಿರದಲ್ಲಿ ಮಧ್ವಾಚಾರ್ಯರ ಹೆಸರಿನ ಒಂದು ದ್ವಾರ ನಿರ್ಮಾಣ ಮಾಡಲಾಗಿದೆ. ರಾಮ ಮಂದಿರ ಪರಿಷತ್‌ನ ಒಂದು ದ್ವಾರ ಮಧ್ವರ ಹೆಸರಿನಲ್ಲಿ ಆಗಿರೋದು ಉಡುಪಿಗೆ ಮತ್ತೊಂದು ಹೆಮ್ಮೆ. ಜಗದ್ಗುರು ಮಧ್ವಾಚಾರ್ಯರ ಪರಂಪರೆ ಹರಿದಾಸ ಪರಂಪರೆಗಳಲ್ಲಿ ಒಂದು. ಶ್ರೀಕೃಷ್ಣನ ಉಪದೇಶ ಎಲ್ಲಾ ಯುಗಗಳಿಗೆ ಅನ್ವಯವಾಗುತ್ತದೆ ಎಂದು ತಿಳಿಸಿದರುಭಗವದ್ಗೀತೆಯೊಂದಿಗೆ ಮುಂದಿನ ಪೀಳಿಗೆಯನ್ನು ಜೋಡಿಸುವ ಪ್ರಯತ್ನ ಆಗಿದೆ.

ಅಯೋಧ್ಯೆಯಲ್ಲಿ ರಾಮಮಂದಿರಲ್ಲಿ ಧರ್ಮ ಧ್ವಜದ ಸ್ಥಾಪನೆಯಾಗಿದೆ. ಅಯೋಧ್ಯೆಯಿಂದ ಉಡುಪಿಯವರೆಗೆ ಅಸಂಖ್ಯ ಸಂಖ್ಯೆಯಲ್ಲಿ ರಾಮ ಭಕ್ತರು ಇದರೊಂದಿಗೆ ಸೇರಿದ್ದಾರೆ. ವಿಶ್ವೇಶ ತೀರ್ಥ ಸ್ವಾಮೀಜಿ ರಾಮ ಮಂದಿರ ಆಂದೋಲನ ನಡೆಸಿದ್ದು ವಿಶ್ವ ಅರಿತಿದೆ. ರಾಮ ಮಂದಿರದ ಒಂದು ದ್ವಾರಕ್ಕೆ ಮಧ್ವಾಚಾರ್ಯರ ಹೆಸರು ಉಡುಪಿ ಮತ್ತು ಕರ್ನಾಟಕಕ್ಕೆ ಹೆಮ್ಮೆಯ ವಿಷಯ. ಪುರಂದರ ದಾಸರು, ಕನಕದಾಸರು ದಾಸ ಪರಂಪರೆಯನ್ನು ಕನ್ನಡ ಭಾಷೆಯಲ್ಲಿ ಜನರ ಬಳಿಗೆ ಕೊಂಡೊಯ್ದರು. ಇಂದು ಉಡುಪಿಯಲ್ಲಿ ಕಿಂಡಿಯ ಮೂಲಕ ಭಗವಾನ್ ಶ್ರೀಕೃಷ್ಣನ ದರ್ಶನ ಆಯಿತು. ಕನಕದಾಸರಿಗೆ ನಮನ ಸಲ್ಲಿಸುವ ಅವಕಾಶ ಸಿಕ್ಕಿತು.

ಪಾಕ್​​ಗೆ ಪರೋಕ್ಷ ಎಚ್ಚರಿಕೆ-
ಕರ್ನಾಟಕದ ಸಹೋದರರೂ ಪೆಹಲ್ಗಾಮ್ ದುರಂತದಲ್ಲಿ ಜೀವ ತೆತ್ತರು. ಈ ಹಿಂದಿನ ಸರ್ಕಾರಗಳು ಉಗ್ರ ಕೃತ್ಯಗಳಾದಾಗ ಸುಮ್ಮನಿದ್ದವು. ಆದರೆ ನಾವು ಕೈ ಕಟ್ಟಿ ಕುಳಿತುಕೊಳ್ಳಲಿಲ್ಲ. ಆಪರೇಷನ್ ಸಿಂಧೂರ ಮೂಲ ತಕ್ಕ ಉತ್ತರ ಕೊಟ್ಟಿದ್ದು ಈ ಮೂಲಕ ಭಯೋತ್ಪಾದನೆ ಕೃತ್ಯ ಸಹಿಸುವುದಿಲ್ಲ ಎಂದು ಪಾಕಿಸ್ತಾನಕ್ಕೆ ಪ್ರಧಾನಿ ಮೋದಿ ಅವರು ಪರೋಕ್ಷ ಎಚ್ಚರಿಕೆ ನೀಡಿದರು.


ನವ ಸಂಕಲ್ಪ ಮಾಡಲು ಮೋದಿ ಕರೆ-
ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ನಾಗರಿಕರಿಗೆ ನವ ಸಂಕಲ್ಪ ಮಾಡುವಂತೆ ಮನವಿ ಮಾಡಿದರು.
ವರ್ತಮಾನ ಮತ್ತು ಭವಿಷ್ಯಕ್ಕೆ ಎಲ್ಲರೂ ಈ ಒಂಭತ್ತು ಸಂಕಲ್ಪ ಮಾಡಿ, ಇವು ಅಗತ್ಯ ಎಂದು ಮೋದಿ ಅವರು ಒತ್ತಿ ಹೇಳಿದರು.
ಮೋದಿ ಹೇಳಿದ
9 ಸಂಕಲ್ಪಗಳೇನು-
ಸಾರ್ವಜನಿಕರಿಗೆ ಪ್ರಧಾನಿ ಮೋದಿ ಅವರು ಸೂಚಿಸಿದ 9 ಸಂಕಲ್ಪಗಳನ್ನು ಪಾಲಿಸುವಂತೆ ತಿಳಿಸಿದರು.


ಮೊದಲ ಸಂಕಲ್ಪ: ಜಲಸಂರಕ್ಷಣೆ ಮಾಡುವುದು.
ಎರಡನೇ ಸಂಕಲ್ಪ: ಮರ ಬೆಳೆಸುವುದು
, ತಾಯಿ ಹೆಸರಲ್ಲಿ ಒಂದು ಮರ ಅಭಿಯಾನ ಆರಂಭಿಸಿ.
ಮೂರನೇ ಸಂಕಲ್ಪ: ಪ್ರತಿಯೊಬ್ಬರೂ ಕನಿಷ್ಠ ಒಬ್ಬ ಬಡವನ ಜೀವನ ಸುಧಾರಿಸಿ.


ನಾಲ್ಕನೇ ಸಂಕಲ್ಪ: ಸ್ವದೇಶಿ ಅಳವರಿಸಿಕೊಳ್ಳಿ, ವೂಕಲ್-ಲೋಕಲ್ ಮಂತ್ರ ನಮ್ಮದಾಗಲಿದೆ.
ಐದನೇ ಸಂಕಲ್ಪ: ನೈಸರ್ಗಿಕ ಕೃಷಿ ಅಳವಡಿಸಿಕೊಳ್ಳಿ.
ಆರನೇ ಸಂಕಲ್ಪ: ಆರೋಗ್ಯ ಪೂರ್ಣ ಜೀವನ ಶೈಲಿ ಅವಳವಡಿಸಿಕೊಳ್ಳೋಣ
, ಊಟದಲ್ಲಿ ಎಣ್ಣೆ ಕಡಿಮೆ ಮಾಡೋಣ. ಸಿರಿಧಾನ್ಯ ಬಳಸೋಣ.

ಏಳನೇ ಸಂಕಲ್ಪ: ಯೋಗ ಅಳವಡಿಸಿಕೊಳ್ಳಿ, ಎಲ್ಲರೂ ಯೋಗಿಗಳಾಗಿ.
ಎಂಟನೇ ಸಂಕಲ್ಪ: ಹಸ್ತಪ್ರತಿ ಸಂರಕ್ಷಣೆಗೆ ಸಹಯೋಗ ನೀಡಿ.
ಒಂಭತ್ತನೇ ಸಂಕಲ್ಪ: ದೇಶದ ಕನಿಷ್ಠ
25 ಪುಣ್ಯಕ್ಷೇತ್ರಗಳ ದರ್ಶನ ಮಾಡುತ್ತೇನೆ ಎಂಬ ಸಂಕಲ್ಪ ಮಾಡಿ.

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ