Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮುಡಾ ಹಗರಣ ಸಿಬಿಐಗೆ ವಹಿಸುವ ಪ್ರಕರಣದ ತೀರ್ಪು ಕಾಯ್ದಿರಿಸಿದ ಹೈಕೋರ್ಟ್

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಕೇಳಿ ಬಂದಿದ್ದ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ನಿವೇಶನ ಹಂಚಿಕೆ ಸಂಬಂಧ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಪೂರ್ಣಗೊಳಿಸಿರುವ ಹೈಕೋರ್ಟ್
ತನ್ನ ತೀರ್ಪು ಕಾಯ್ದಿರಿಸಿ ಆದೇಶಿಸಿದೆ.

 ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕೆಂದು ಕೋರಿ ದೂರುದಾರ ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ನ್ಯಾಯಪೀಠ ವಾದ-ಪ್ರತಿವಾದ ಪೂರ್ಣಗೊಳಿಸಿ ತೀರ್ಪಿಗೆ ಆದೇಶ ಕಾಯ್ದಿರಿಸಿತು.

ದೂರುದಾರ ಸ್ನೇಹಮಯಿ ಕೃಷ್ಣ ಪರವಾಗಿ ಸುಪ್ರೀಂಕೋರ್ಟ್‌ನ ಹಿರಿಯ ವಕೀಲರ ಮಣೀಂದ್ರ ಸಿಂಗ್ ವಾದ ಮಂಡಿಸಿ, ಮುಡಾ ಹಗರಣ ಕುರಿತ ಪ್ರಕರಣದಲ್ಲಿ ಸರ್ಕಾರದಲ್ಲಿರುವ ಹಿರಿಯ ವ್ಯಕ್ತಿಗಳು ಆರೋಪಿಯಾಗಿರುವುದರಿಂದ ರಾಜ್ಯ ಸರ್ಕಾರದ ಅಧೀನದ ಸಂಸ್ಥೆ ವಿಚಾರಣೆ ನಡೆಸಿದರೂ ಸತ್ಯಾಂಶ ಹೊರಬರುವುದಕ್ಕೆ ಸಾಧ್ಯವಿಲ್ಲ. ಹೀಗಾಗಿ, ಪ್ರಕರಣವನ್ನು ಸಿಬಿಐಗೆ ವಹಿಸಬೇಕು ಎಂದು ಕೋರಿದರು.

ಸರ್ಕಾರದ ಪರ ವಾದ ಮಂಡಿಸಿದ ಸುಪ್ರೀಂಕೋರ್ಟ್ ಹಿರಿಯ ವಕೀಲ, ಕಪಿಲ್ ಸಿಬಲ್ ಅವರು ಇದಕ್ಕೆ ಆಕ್ಷೇಪಿಸಿದರು. ಎಲ್ಲ ಪ್ರಕರಣಗಳು ಸಿಬಿಐಗೆ ವಹಿಸಬೇಕು ಎಂದರೆ ಲೋಕಾಯುಕ್ತ ಕಾರ್ಯ ನಿರ್ವಹಿಸುವುದಾದರೂ ಏಕೆ? ಜನಪ್ರತಿನಿಧಿಗಳ ವಿರುದ್ಧದ ಪ್ರಕರಣಗಳ ವಿಚಾರಣೆಗೆ ಲೋಕಾಯುಕ್ತಕ್ಕೆ ಅಧಿಕಾರವಿದೆ. ಆ ಅಧಿಕಾರವನ್ನು ಅಸಾಂವಿಧಾನಿಕ ಎಂದು ಘೋಷಣೆ ಮಾಡಬೇಕು ಎಂದು ಪೀಠಕ್ಕೆ ತಿಳಿಸಿದರು.

ಸಿದ್ದರಾಮಯ್ಯ ಪರ ಹಿರಿಯ ವಕೀಲರಾದ ಅಭಿಷೇಕ್ ಮನು ಸಿಂಘ್ವಿ ಹಾಗೂ ಪ್ರೊ.ರವಿವರ್ಮ ಕುಮಾರ್ ವಾದ ಮಂಡಿಸಿದರು. ಇದೇ ಸಂದರ್ಭದಲ್ಲಿ ತೀರ್ಪು ಪ್ರಕಟಿಸುವವರೆಗೆ ಲೋಕಾಯುಕ್ತ ಪೊಲೀಸರಿಂದ ವಿಶೇಷ ನ್ಯಾಯಾಲಯಕ್ಕೆ ವರದಿ ಸಲ್ಲಿಕೆಗೆ ನ್ಯಾಯಾಲಯ ಕಾಲಾವಕಾಶ ವಿಸ್ತರಿಸಿತು.
ಈ ವಿಚಾರಣೆ ವೇಳೆ
, ಲೋಕಾಯುಕ್ತ ಪರ ವಕೀಲ ವೆಂಕಟೇಶ್‌ಅರಬಟ್ಟಿ ಅವರು ಮುಚ್ಚಿದ ಲಕೋಟೆಯಲ್ಲಿ ತನಿಖಾ ವರದಿ ಸಲ್ಲಿಸಿದ್ದು, ಅದನ್ನೂ ನ್ಯಾಯಾಲಯ ದಾಖಲಿಸಿಕೊಂಡಿತು.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ