Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Feature Article

ಮುಡಾ ಹಗರಣ: ಸಿದ್ದರಾಮಯ್ಯ ವಿರುದ್ಧ ಹೈಕೋರ್ಟ್‌ನಲ್ಲಿ ಇಡಿ ಮೇಲ್ಮನವಿ

​ ಚಂದ್ರವಳ್ಳಿ ನ್ಯೂಸ್, ಮೈಸೂರು/ಬೆಂಗಳೂರು:
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಸಿದ್ದರಾಮಯ್ಯ ಅವರ ಕುಟುಂಬಕ್ಕೆ ನಿಯಮಬಾಹಿರವಾಗಿ ನಿವೇಶನ ಹಂಚಿಕೆಯಾಗಿದೆ ಎಂಬ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ. ಲೋಕಾಯುಕ್ತ ಪೊಲೀಸರು ಸಲ್ಲಿಸಿದ್ದ 'ಬಿ' ರಿಪೋರ್ಟ್ ಅನ್ನು ಅಂಗೀಕರಿಸಿದ್ದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಜಾರಿ ನಿರ್ದೇಶನಾಲಯ ಇದೀಗ ಕರ್ನಾಟಕ ಉಚ್ಚ ನ್ಯಾಯಾಲಯಕ್ಕೆ ಮೇಲ್ಮನವಿ ಸಲ್ಲಿಸಿದೆ.

​ಸ್ನೇಹಮಯಿ ಕೃಷ್ಣ ಅವರ ಹೋರಾಟಕ್ಕೆ ಇಡಿ ಸಾಥ್:
​ಈಗಾಗಲೇ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರು 'ಬಿ' ರಿಪೋರ್ಟ್ ವಿರುದ್ಧ ಹೈಕೋರ್ಟ್‌ನಲ್ಲಿ ರಿಟ್ ಅರ್ಜಿ ಸಲ್ಲಿಸಿದ್ದಾರೆ. ಈ ಬೆನ್ನಲ್ಲೇ ಇಡಿ ಕೂಡ ಮೇಲ್ಮನವಿ ಸಲ್ಲಿಸಿರುವುದು ದೂರುದಾರರ ಹೋರಾಟಕ್ಕೆ ಮತ್ತಷ್ಟು ಬಲ ನೀಡಿದಂತಾಗಿದೆ.

​ಈ ಕುರಿತು ಪ್ರತಿಕ್ರಿಯಿಸಿರುವ ಸ್ನೇಹಮಯಿ ಕೃಷ್ಣ ಅವರು, ​"ನಾನು ಒಬ್ಬನೇ ಹೋರಾಟ ಮಾಡುತ್ತಿದ್ದೆ, ಈಗ ದೇಶದ ಪ್ರಭಾವಿ ತನಿಖಾ ಸಂಸ್ಥೆ ಇಡಿ ಕೂಡ ಮೇಲ್ಮನವಿ ಸಲ್ಲಿಸಿರುವುದು ನನ್ನ ಹೋರಾಟಕ್ಕೆ ದೊಡ್ಡ ಬೆಂಬಲ ನೀಡಿದೆ," ಎಂದು ಹೇಳಿದ್ದಾರೆ.

​ಸಾಕ್ಷ್ಯಾಧಾರಗಳ ಹಗ್ಗಜಗ್ಗಾಟ: ಲೋಕಾಯುಕ್ತವು 'ಸಾಕ್ಷಿಗಳಿಲ್ಲ' ಎಂದು ಪ್ರಕರಣ ಕೈಬಿಟ್ಟರೆ, ಇಡಿ ಸಂಸ್ಥೆಯು ತನ್ನ ತನಿಖೆಯಲ್ಲಿ 'ಸಾಕ್ಷ್ಯಗಳಿವೆ' ಎಂದು ವಾದಿಸುತ್ತಿದೆ. ಇಂತಹ ಪರಿಸ್ಥಿತಿಯಲ್ಲಿ ನ್ಯಾಯಾಲಯವು ಅರ್ಜಿಯನ್ನು ಗಂಭೀರವಾಗಿ ಪರಿಗಣಿಸಲಿದೆ ಎಂಬ ವಿಶ್ವಾಸವನ್ನು ಅವರು ವ್ಯಕ್ತಪಡಿಸಿದ್ದಾರೆ.​ಹಂತ ವಿವರಗಳು:
ಲೋಕಾಯುಕ್ತ ತನಿಖೆ ಸಿದ್ದರಾಮಯ್ಯ ಮತ್ತು ಅವರ ಪತ್ನಿ ಬಿ.ಎಂ. ಪಾರ್ವತಿ ಅವರ ವಿರುದ್ಧ ಸಾಕ್ಷ್ಯಗಳಿಲ್ಲ ಎಂದು 'ಬಿ' ರಿಪೋರ್ಟ್ ಸಲ್ಲಿಸಿತ್ತು.

ವಿಶೇಷ ನ್ಯಾಯಾಲಯದ ಆದೇಶ ಜನವರಿ 28, 2026 ರಂದು ಬೆಂಗಳೂರಿನ ವಿಶೇಷ ನ್ಯಾಯಾಲಯವು ಲೋಕಾಯುಕ್ತದ ಬಿ ರಿಪೋರ್ಟ್ ಅನ್ನು ಅಂಗೀಕರಿಸಿ ಸಿಎಂಗೆ ಕ್ಲೀನ್ ಚಿಟ್ ನೀಡಿತ್ತು.

ಇಡಿ ವಾದ ಮುಡಾದ 50:50 ಅನುಪಾತದಡಿ ನಿವೇಶನ ಹಂಚಿಕೆಯಲ್ಲಿ ಅಕ್ರಮ ನಡೆದಿದೆ ಮತ್ತು ಹಣಕಾಸಿನ ಅಕ್ರಮಗಳಿಗೆ ಸಂಬಂಧಿಸಿದ ಸಾಕ್ಷ್ಯಗಳಿವೆ ಎಂಬುದು ಇಡಿ ವಾದ.

ಮುಂದಿನ ಹಾದಿ ಏನು?:
​ಹೈಕೋರ್ಟ್ ಈಗ ಸ್ನೇಹಮಯಿ ಕೃಷ್ಣ ಮತ್ತು ಇಡಿ ಸಲ್ಲಿಸಿರುವ ಎರಡೂ ಮೇಲ್ಮನವಿಗಳನ್ನು ಒಟ್ಟಿಗೆ ವಿಚಾರಣೆಗೆ ಒಳಪಡಿಸುವ ಸಾಧ್ಯತೆಯಿದೆ. ನ್ಯಾಯಾಲಯವು ಪ್ರತಿವಾದಿಗಳಿಗೆ (ಸಿಎಂ ಸಿದ್ದರಾಮಯ್ಯ ಮತ್ತು ಇತರರು) ನೋಟಿಸ್ ಜಾರಿಗೊಳಿಸಿ, ಅಂತಿಮ ವಿಚಾರಣೆಯ ದಿನಾಂಕ ನಿಗದಿಪಡಿಸಲಿದೆ. ಒಂದು ವೇಳೆ ಹೈಕೋರ್ಟ್ ವಿಶೇಷ ನ್ಯಾಯಾಲಯದ ಆದೇಶ ರದ್ದುಗೊಳಿಸಿದರೆ, ಸಿದ್ದರಾಮಯ್ಯ ಅವರ ವಿರುದ್ಧ ಮತ್ತೆ ಕಾನೂನು ಸಂಕಷ್ಟ ಎದುರಾಗುವ ಸಾಧ್ಯತೆಯಿದೆ.

Advertisement

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮುಖ್ಯಮಂತ್ರಿಯವರ ತಾಂತ್ರಿಕ ಸಲಹೆಗಾರರಾಗಿ ನಿವೃತ್ತ ಕಾರ್ಯದರ್ಶಿ ಡಾ. ಕೆ. ಜೈಪ್ರಕಾಶ್ ನೇಮಕಜೆಎನ್‌ಯು ಪ್ರೊಫೆಸರ್ ಹಾಗೂ ಕಾಂಗ್ರೆಸ್ ಸಂಸದರಿಂದ ಲೈಂಗಿಕ ಕಿರುಕುಳ ಆರೋಪ, ಸೇವೆಯಿಂದ ವಜಾಆರ್‌ಬಿಐ ಬಿಗ್ ಶಾಕ್: ರೆಪೋ ದರ ಏರಿಕೆಯಿಂದ ಸಾಲಗಾರರಿಗೆ ಹೆಚ್ಚಳವಾದ ಇಎಂಐ ಬರೆ!ಎಸ್‌ಐಆರ್ ರದ್ದುಪಡಿಸುವಂತೆ ಜನತಾ ನ್ಯಾಯಾಲಯ ಸಮಾವೇಶ: ಮುಖ್ಯ ಚುನಾವಣಾ ಆಯುಕ್ತರ ರಾಜೀನಾಮೆಗೆ ಆಗ್ರಹ10 ಸಚಿವರ ವಿರುದ್ಧ ಸ್ಟಿಂಗ್ ಆಪರೇಷನ್ ಸುಪಾರಿ - ಶಾಸಕ ಗಣಿಗ ರವಿ ಸ್ಫೋಟಕ ಪೆನ್‌ಡ್ರೈವ್ ಬಾಂಬ್!ಸಚಿವರಿಗೆ ಬಲೆ ಬೀಳಿಸಲು ಯತ್ನ: ಸಿಎಂ ಎಚ್ಚರಿಕೆ ನೀಡಿದ್ದಾರೆ ಎಂದ ಸತೀಶ್ ಜಾರಕಿಹೊಳಿಕೇಂದ್ರದೊಂದಿಗೆ ಜಿಎಸ್‌ಟಿ ಸಭೆ: ರಾಜ್ಯದ ಬಾಕಿ ಹಣದ ಕುರಿತು 'ಸಿಹಿ ಸುದ್ದಿ' ನೀಡಿದ ಸಿಎಂ ಡಿ.ಕೆ ಶಿವಕುಮಾರ್ ಸುಳಿವು!ಪ್ರಜ್ವಲ್ ರೇವಣ್ಣ ಜೈಲಿನಲ್ಲಿ ಮೊಬೈಲ್ ಪತ್ತೆ ಪ್ರಕರಣ: ಹಿಂಡಲಗಾ ಜೈಲಿಗೆ ಸ್ಥಳಾಂತರಪ್ರತಿಭಟನೆ ಹೆಸರಲ್ಲಿ ಎಲ್ಲವನ್ನೂ ಬಂದ್ ಮಾಡಲು ಆಗದು: ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಸುಪ್ರೀಂ ಕೋರ್ಟ್ದಾವಣಗೆರೆಯಲ್ಲಿ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆಗೆ ವಕೀಲರ ಪಟ್ಟು: ಮಧ್ಯಕರ್ನಾಟಕದಲ್ಲಿ ತೀವ್ರಗೊಂಡ ಹೋರಾಟ