LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಬಹುರಾಷ್ಟ್ರೀಯ ಕಂಪನಿಗಳೇ ಭಾರತ ಬಿಟ್ಟು ತೊಲಗಿ ಹೋರಾಟಕ್ಕೆ ಚಾಲನೆ

Advertisement
Advertisement

 ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ :
ಬಹುರಾಷ್ಟ್ರೀಯ ಕಂಪನಿಗಳನ್ನು ಭಾರತದಿಂದ ತೊಲಗಿಸುವುದಕ್ಕಾಗಿ ದೇಶಾದ್ಯಂತ ಸೋಮವಾರ ಹಮ್ಮಿಕೊಳ್ಳಲಾಗಿದ್ದ ಚಳುವಳಿಗೆ ಬೆಂಬಲಿಸಿ ವಿವಿಧ ಸಂಘಟನೆಗಳು ಗಾಂಧಿ ವೃತ್ತದಲ್ಲಿ ಒಂದು ಗಂಟೆಗಳಿಗೂ ಹೆಚ್ಚು ಕಾಲ ಪ್ರತಿಭಟನೆ ನಡೆಸಿದ ಪರಿಣಾಮ ಪ್ರವಾಸಿ ಮಂದಿರದ ಮುಂಭಾಗದಿಂದ ಗಾಂಧಿ ಸರ್ಕಲ್‌ವರೆಗೂ ನೂರಾರು ವಾಹನಗಳು ಸಾಲುಗಟ್ಟಿ ನಿಂತಿದ್ದರಿಂದ ಟ್ರಾಫಿಕ್ ಜಾಮ್ ಆಗಿತ್ತು.

ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಸಂಯುಕ್ತ ಹೋರಾಟ ಸಮಿತಿ ಜಿಲ್ಲಾಧ್ಯಕ್ಷ ಜೆ.ಯಾದವರೆಡ್ಡಿ ವಿದೇಶಿ ಕಂಪನಿಗಳು, ಕಾರ್ಪೊರೇಟರ್‌ಗಳು, ಬಂಡವಾಳ ಶಾಹಿಗಳು ನಮ್ಮ ದೇಶದ ರೈತರು ಕಾರ್ಮಿಕರ ಮೇಲೆ ಸವಾರಿ ಮಾಡುತ್ತಿದ್ದಾರೆ. ರೈತರು ಬೆಳೆದ ಬೆಳೆಗಳಿಗೆ ಬೆಂಬಲ ಬೆಲೆ ಸಿಗದ ಕಾರಣ ಸಾಲದ ಸುಳಿಗೆ ಸಿಲುಕಿರುವ ರೈತ ಆತ್ಮಹತ್ಯೆ ದಾರಿ ಹಿಡಿಯುತ್ತಿದ್ದಾನೆ. ನರೇಗಾ ಉದ್ಯೋಗ ಖಾತ್ರಿ ಯೋಜನೆಯ ಹೆಸರನ್ನು ಜಿರಾಮ್‌ಜಿ ಎಂದು ಬದಲಾವಣೆ ಮಾಡಿರುವುದರಿಂದ ಗ್ರಾಮೀಣ ಪ್ರದೇಶಗಳಲ್ಲಿ ಬಡವರಿಗೆ ಕೆಲಸ ಸಿಗುತ್ತಿಲ್ಲ ಎಂದು ಕೇಂದ್ರ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು.

ಕೇಂದ್ರ ಸರ್ಕಾರ ನಾಲ್ಕು ಕಾರ್ಮಿಕ ಕಾಯಿದೆಗಳಿಗೆ ತಿದ್ದುಪಡಿ ತಂದಿರುವುದರಿಂದ ದಿನಕ್ಕೆ ಎಂಟು ಗಂಟೆಗಳ ಕಾಲ ದುಡಿಯುತ್ತಿರುವ ಕಾರ್ಮಿಕರು ಹನ್ನೆರಡು ಗಂಟೆಗಳ ಕಾಲ ಕೆಲಸ ಮಾಡಬೇಕಿದೆ. ಮಹಿಳೆಯರು ರಾತ್ರಿ ಪಾಳೆಯದಲ್ಲಿ ಕೆಲಸ ಮಾಡಬೇಕೆಂಬ ಷರತ್ತು ವಿಧಿಸಿದೆ. ಕೈಗಾರಿಕಾ ನ್ಯಾಯಲಯದ ಬದಲಿಗೆ ಕಾರ್ಮಿಕ ನ್ಯಾಯಾಲಯ

ಗುತ್ತಿಗೆ ನೌಕರಿಯನ್ನು ಬಿಟ್ಟರೆ ಇನ್ನು ಮುಂದೆ ಯಾರಿಗೂ ಖಾಯಂ ಕೆಲಸವಿಲ್ಲ. ಇವು ಕಾರ್ಮಿಕರಿಗೆ ಮರಣ ಶಾಸಕನವಾಗಿ ಪರಿಣಮಿಸಿದೆ. ರೈತರಿಗೆ ಅತ್ಯವಶ್ಯಕವಾಗಿರುವ ಬೀಜ, ರಸಗೊಬ್ಬರ, ಕೀಟನಾಶಕಗಳಿಗೆ ಸಿಂಪಡಿಸುವ ಔಷಧಿಗಳ ಮೇಲೂ ಕೇಂದ್ರ ಸರ್ಕಾರ ಲಗ್ಗೆಯಿಟ್ಟಿರುವುರಿಂದ ರೈತ ಹೈರಾಣಾಗಿದ್ದಾನೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ರೈತರು, ಕಾರ್ಮಿಕರ ಹಿತ ಕಾಯುವ ಕಾಯಿದೆಗಳನ್ನು ಜಾರಿಗೆ ತರಬೇಕೆಂದು ಒತ್ತಾಯಿಸಿದರು.

ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ಕಾರ್ಯಾಧ್ಯಕ್ಷ ಈಚಘಟ್ಟದ ಸಿದ್ದವೀರಪ್ಪ ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡುತ್ತ ಗಾಂಧಿಜಿ ಬ್ರಿಟೀಷರೆ ಭಾರತ ಬಿಟ್ಟು ತೊಲಗಿ ಕ್ವಿಟ್ ಇಂಡಿಯಾ ಚಳುವಳಿ ಆರಂಭಿಸಿದ ಭಾಗವಾಗಿ ಈಗ ಕಾರ್ಪೊರೇಟ್ ಕಂಪನಿಗಳನ್ನು ದೇಶದಿಂದ ಓಡಿಸುವ ಚಳುವಳಿ ಆರಂಭವಾಗಿದೆ. ಸಾವಿರಾರು ಬಹುರಾಷ್ಟ್ರೀಯ ಕಂಪನಿಗಳು ನಮ್ಮ ದೇಶಕ್ಕೆ ಕಾಲಿಟ್ಟಿವೆ. ಕೇಂದ್ರ ಸರ್ಕಾರ ಜನ ವಿರೋಧಿ ಹಾಗೂ ರೈತ ವಿರೋಧಿ ಕಾಯಿದೆಗಳನ್ನು ಹಿಂದಕ್ಕೆ ಪಡೆಯಬೇಕು. ಇಲ್ಲವಾದಲ್ಲಿ ನಮ್ಮ ಹೋರಾಟ ನಿಲ್ಲುವುದಿಲ್ಲ ಎಂದು ಎಚ್ಚರಿಸಿದರು.

ರೈತ ಮುಖಂಡ ಆರ್.ಬಿ.ನಿಲಿಂಗಪ್ಪ ಮಾತನಾಡಿ ಭದ್ರಾ ಮೇಲ್ದಂಡೆ ಯೋಜನೆ ಕಾಮಗಾರಿಗೆ ಬೇಕಾಗಿರುವ ಸಾಮಗ್ರಿಗಳು ತುಕ್ಕು ಹಿಡಿಯುತ್ತಿವೆ. ಕೇಂದ್ರ ಸರ್ಕಾರ ೫೩೦೦

ಕೋಟಿ ರೂ.ಗಳನ್ನು ಘೋಷಿಸಿದೆ. ಇದುವರೆವಿಗೂ ನಯಾ ಪೈಸೆಯೂ ಬಿಡುಗಡೆಯಾಗಿಲ್ಲ. ಕೆರೆಗಳಿಗೆ ನೀರು ತುಂಬಿಸಿ ಬರ ಪೀಡಿತ ಚಿತ್ರದುರ್ಗ ಜಿಲ್ಲೆಯ ರೈತರು ಕಾರ್ಮಿಕರು, ಬಡವರ ಬದುಕನ್ನು ಹಸನುಗೊಳಿಸುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದರು.

ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ರಾಜ್ಯ ಉಪಾಧ್ಯಕ್ಷ ಕೆ.ಪಿ.ಭೂತಯ್ಯ ಮಾತನಾಡಿ ವಿದೇಶಿ ಕಂಪನಿಗಳನ್ನು ದೇಶದಿಂದ ಒದ್ದೋಡಿಸಲು ವಿವಿಧ ಸಂಘಟನೆಗಳು ಭಾರತಾದ್ಯಂತ ಚಳುವಳಿಗೆ ಇಳಿದಿವೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಳು ರೈತ ಕಾರ್ಮಿಕ ವಿರೋಧಿ ನೀತಿ ಅನುಸರಿಬಾರದೆಂದರು.

ಸಂಯುಕ್ತ ಹೋರಾಟ ಕರ್ನಾಟಕ ಸಂಚಾಲಕ ಕುಮಾರ್ ಸಮತಳ ಮಾತನಾಡುತ್ತ ರೈತರು ಕಾರ್ಮಿಕರು ತಮ್ಮ ಹಕ್ಕುಗಳಿಗಾಗಿ ಹೋರಾಟ ಮಾಡುತ್ತಿದ್ದರು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಗಂಭೀರವಾಗಿ ತೆಗೆದುಕೊಳ್ಳುತ್ತಿಲ್ಲ. ಬಿಡದಿ ಟೌನ್‌ಶಿಪ್‌ಗಾಗಿ ರೈತರ ಫಲವತ್ತಾದ ಭೂಮಿಗಳನ್ನು ಕಸಿದುಕೊಳ್ಳುವ ಹುನ್ನಾರ ನಡೆಸುತ್ತಿದೆ. ಬಗರ್ ಹುಕುಂ ಸಾಗುವಳಿದಾರರಿಗೆ ಭೂಮಿ ಹಕ್ಕು ಕೊಡುತ್ತಿಲ್ಲ. ಮನೆಯಿಲ್ಲದವರಿಗೆ ಮನೆಗಳನ್ನು ಕೊಡಬೇಕೆನ್ನುವುದು ನಮ್ಮ ಬಹುದಿನಗಳ ಬೇಡಿಕೆ ಎಂದರು.

ರೈತ ಮುಖಂಡರುಗಳಾದ ಧನಂಜಯ ಹಂಪಯ್ಯನಮಾಳಿಗೆ, ಹೊರಕೇರಪ್ಪ, ಡಿ.ಎಸ್.ಮಲ್ಲಿಕಾರ್ಜುನ, ಚಿಕ್ಕಪ್ಪನಹಳ್ಳಿ ರುದ್ರಸ್ವಾಮಿ, ಬಸ್ತಿಹಳ್ಳಿ ಸುರೇಶ್, ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿಯ ಜಿಲ್ಲಾಧ್ಯಕ್ಷ ಸತ್ಯಪ್ಪ ಮಲ್ಲಾಪುರ, ಸಿಐಟಿಯು.ನ ಮಲಿಯಪ್ಪ, ತಿಪ್ಪೇಸ್ವಾಮಿ, ಅಖಂಡ ಕರ್ನಾಟಕ ರೈತ ಸಂಘದ ಶಾಂತಮ್ಮ, ಹನುಮಂತಪ್ಪ ಗೋನೂರು, ಕರ್ನಾಟಕ ಜನಶಕ್ತಿ ರಾಜ್ಯ ಸಮಿತಿ ಸದಸ್ಯ ಟಿ.ಶಫಿವುಲ್ಲಾ ಸೇರಿದಂತೆ ಸಂಯುಕ್ತ ಕಿಸಾನ್ ಮೋರ್ಚಾ, ಕಾರ್ಮಿಕ ಸಂಘಟನೆಗಳ ಜಂಟಿ ವೇದಿಕೆ, ಸಂಯುಕ್ತ ಹೋರಾಟ ಕರ್ನಾಟಕದ ಪದಾಧಿಕಾರಿಗಳು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

 

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಣಿ ಎಲಿಜಬೆತ್ ಹೊಗಳಿದ್ದ ನಮ್ಮ ವಿಧಾನಸೌಧವೇ ನನಗೆ ಸ್ಫೂರ್ತಿ-ಟಿ.ಬಿ ಜಯಚಂದ್ರಕೆಪಿಸಿಸಿ ಅಧ್ಯಕ್ಷರ ಆಶೀರ್ವಾದ ಸಿಕ್ಕಿದೆ- ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಸಣ್ಣಚಿತ್ತಯ್ಯ ಯುವ ಜನತೆಗೆ ಯೋಗ, ವ್ಯಾಯಾಮ ಅತ್ಯಂತ ಅವಶ್ಯ:ದಿವ್ಯ ಜ್ಞಾನಾನಂದ ಶ್ರೀಎಸ್. ನಾಗೇನಹಳ್ಳಿ ಎಂಪಿಸಿಎಸ್ ನೂತನ ಅಧ್ಯಕ್ಷರಾಗಿ ಮುನಿಕೃಷ್ಣಪ್ಪ ಆಯ್ಕೆಅಪಘಾತದಲ್ಲಿ ಮೃತಪಟ್ಟ ಕೋಳಿಗಳು 'ಜೀವಸಂಪತ್ತು': ವಿಮಾ ಪರಿಹಾರ ಎತ್ತಿಹಿಡಿದ ಹೈಕೋರ್ಟ್ಸವರ್ಣೀಯ ಮುಖಂಡರಿಂದ ದಲಿತ ಅಧಿಕಾರಿಗಳಿಗೆ ಕಿರುಕುಳ-ಮಾರಸಂದ್ರ ಮುನಿಯಪ್ಪಅಂಗನವಾಡಿ ಕೇಂದ್ರದ ಮಕ್ಕಳಿಗೆ ಸಮವಸ್ತ್ರ ವಿತರಣೆಮೈಸೂರಲ್ಲಿ  'ಜೋಡೆತ್ತು' ಚಿತ್ರದ ಅದ್ದೂರಿ ಕ್ಲೈಮ್ಯಾಕ್ಸ್ಬಿಡದಿ ಟೌನ್‌ಶಿಪ್ ರದ್ದತಿಗೆ ಆಗ್ರಹಿಸಿ ಹೋರಾಟ: ರೈತರ 2ನೇ ದಿನದ ಪಾದಯಾತ್ರೆಗೆ ದೇವೇಗೌಡರು ಭಾಗಿಹಾರುವ ಕಾರಿನ ಯಶಸ್ವಿ ಪರೀಕ್ಷೆ: ಭಾರತದ ಭವಿಷ್ಯದ ಸಂಚಾರ ವ್ಯವಸ್ಥೆಗೆ ಹೊಸ ಮೆರುಗು