Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕೊಲೆ, ಸುಲಿಗೆ, ಅತ್ಯಾಚಾರ, ದೌರ್ಜನ್ಯಗಳಲ್ಲಿ ನಿರತರಾಗಿರುವ ಗೂಂಡಾಗಳು, ಸಮಾಜಘಾತುಕ ಶಕ್ತಿಗಳು

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ರಾಜ್ಯದ ಕಾನೂನು ಸುವ್ಯವಸ್ಥೆಯನ್ನು ಆಪೋಶನ ಮಾಡಿಕೊಂಡಿರುವ ಗೂಂಡಾಗಳು
, ಸಮಾಜಘಾತುಕ ಶಕ್ತಿಗಳು ಕೊಲೆ, ಸುಲಿಗೆ, ಅತ್ಯಾಚಾರ ಹಾಗೂ ದೌರ್ಜನ್ಯಗಳಲ್ಲಿ ನಿರತವಾಗಿವೆ. ಮಂಗಳೂರಿನ ಹಿಂದೂ ಕಾರ್ಯಕರ್ತ ಸುಹಾಸ್ ಅವರ ಭೀಕರ ಕೊಲೆ ನಾಗರಿಕ ಸಮಾಜವನ್ನು ಬೆಚ್ಚಿ ಬೀಳಿಸಿದೆ.

ಮತೀಯವಾದಿ ಹಿಂದೂ ವಿರೋಧಿ ರಕ್ಕಸರು ನಡು ರಸ್ತೆಯಲ್ಲೇ ಅಟ್ಟಹಾಸಗೈದು ಕೊಲೆಗೈಯುತ್ತಿರುವ ದೃಶ್ಯ ನಾವು ಯಾವ ನೆಲದಲ್ಲಿ ವಾಸಿಸುತ್ತಿದ್ದೇವೆ ಎಂಬ ಪ್ರಶ್ನೆ ಜನಸಾಮಾನ್ಯರನ್ನು ಕಾಡುತ್ತಿದೆ, ಈ ಅಮಾನುಷ ಘಟನೆಯನ್ನು ತೀವ್ರವಾಗಿ ಖಂಡಿಸುವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ತಿಳಿಸಿದ್ದಾರೆ.

ಸುಹಾಸ್ ಬರ್ಬರ ಕೊಲೆಗೀಡಾಗಿರುವ ಘಟನೆಯ ಹಿನ್ನೆಲೆ ಪೂರ್ವನಿಯೋಜಿತ ಎನ್ನುವುದು ಸುಸ್ಪಷ್ಟ. ಈ ಹಿನ್ನೆಲೆಯಲ್ಲಿ ಇದು ಗುಪ್ತಚರ ಇಲಾಖೆಯ ವೈಫಲ್ಯವೋ? ಕಾನೂನು ಸುವ್ಯವಸ್ಥೆಯ ಜವಾಬ್ದಾರಿ ಹೊತ್ತವರ ಹೊಣೆಗೇಡಿತನ ಕಾರಣವೋ? ಎಂಬ ಬಗ್ಗೆ ಸೂಕ್ತ ತನಿಖೆ ನಡೆಯಬೇಕಿದೆ ಎಂದು ವಿಜಯೇಂದ್ರ ಆಗ್ರಹ ಮಾಡಿದರು.

ಕಾಶ್ಮೀರದಲ್ಲಿ ಹಿಂದೂಗಳ ಮಾರಣ ಹೋಮದ ಸುದ್ದಿ ಇನ್ನೂ ಹಸಿಯಾಗಿರುವಾಗಲೇ, ಹಿಂದೂ ಕಾರ್ಯಕರ್ತನನ್ನು ಕೊಚ್ಚಿಕೊಂದಿರುವ ಮಂಗಳೂರು ಘಟನೆಯನ್ನು ಗಮನಿಸಿದರೆ ಕಾಂಗ್ರೆಸ್ ಸರ್ಕಾರ ಕರ್ನಾಟಕದಲ್ಲಿ ಕಾಶ್ಮೀರ ಪರಸ್ಥಿತಿ ನಿರ್ಮಾಣ ಮಾಡಲು ಹೊರಟಂತೆ ಕಾಣುತ್ತಿದೆ. ಮೇಲಿಂದ ಮೇಲೆ ಕರ್ನಾಟಕದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯ, ಹಲ್ಲೆ, ಕೊಲೆಗಳು ನಿರಂತರವಾಗಿ ನಡೆಯುತ್ತಿದ್ದು ರಾಜ್ಯದ ಜನತೆ ತೀವ್ರ ಆತಂಕಿತರಾಗಿದ್ದಾರೆ.

ಕಾನೂನು ಸುವ್ಯವಸ್ಥೆಯನ್ನು ಕೊಲೆಗಡುಕರು, ದುಷ್ಟರ ಕೈಗೆ ಒಪ್ಪಿಸಿರುವಂತೆ ಕಾಣುತ್ತಿರುವ ಈ ಕರ್ನಾಟಕ ಕಾಂಗ್ರೆಸ್ ಸರ್ಕಾರದ ಮುಷ್ಟಿಯಿಂದ ರಾಜ್ಯವನ್ನು ಕಾಪಾಡುವ ನಿಟ್ಟಿನಲ್ಲಿ ರಾಜ್ಯಪಾಲರು ಮಧ್ಯ ಪ್ರವೇಶಿಸುವಂತೆ ಒತ್ತಾಯಿಸುವೆ. ಮೃತ ಕಾರ್ಯಕರ್ತನ ಆತ್ಮಕ್ಕೆ ಚಿರಶಾಂತಿ ಕೋರುತ್ತಾ, ಕಾರ್ಯಕರ್ತ ಸುಹಾಸ್ ಅವರ ಕುಟುಂಬ ವರ್ಗದವರಿಗೆ ಈ ದುಃಖ ಸಹಿಸುವ ಶಕ್ತಿಯನ್ನು ದೇವರು ಕರುಣಿಸಲಿ ಎಂದು ವಿಜಯೇಂದ್ರ ಪ್ರಾರ್ಥಿಸಿದ್ದಾರೆ.
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ