Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಐತಿಹಾಸಿಕ ಸಮಾವೇಶಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ: ಮುರುಳೀಧರ ಹಾಲಪ್ಪ

Advertisement
ಚಂದ್ರವಳ್ಳಿ ನ್ಯೂಸ್, ಚಳ್ಳಕೆರೆ:
ರಾಷ್ಟ್ರಪಿತ ಮಹಾತ್ಮಗಾಂಧೀಜಿಯವರು ಕಾಂಗ್ರೆಸ್ ಪಕ್ಷದ ಸಂಘಟನೆಗಾಗಿ ಕರ್ನಾಟಕ ಹೆಬ್ಬಾಗಿಲು ಬೆಳಗಾವಿಗೆ ೧೯೨೪ರಲ್ಲಿ ಆಗಮಿಸಿ ಪಕ್ಷದ ಸಮಾವೇಶವನ್ನು ನಡೆಸಿ ಇಂದಿಗೆ ೧೦೦ ವರ್ಷಗಳು ಸಂದಿವೆ. ಇದರ ಸವಿನೆನಪಿಗಾಗಿ ಕಾಂಗ್ರೆಸ್ ಪಕ್ಷ ಬೆಳಗಾವಿಯಲ್ಲಿ ಐತಿಹಾಸಿಕ ಸಮಾವೇಶವನ್ನು ಡಿ.೨೭ರಂದು ಹಮ್ಮಿಕೊಂಡಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಪಕ್ಷದ ಕಾರ್ಯಕರ್ತರು ಆಗಮಿಸುವಂತೆ ಕೆಪಿಸಿಸಿ ಉಪಾಧ್ಯಕ್ಷ, ಸಮಾವೇಶದ ಜಿಲ್ಲಾ ಉಸ್ತುವಾರಿ ಮುರುಳೀಧರಹಾಲಪ್ಪ ತಿಳಿಸಿದರು.

ಅವರು, ಗುರುವಾರ ಶಾಸಕರ ಭವನದಲ್ಲಿ ಪರಶುರಾಂಪುರ ಮತ್ತು ಚಳ್ಳಕೆರೆ ಬ್ಲಾಕ್ ಕಾಂಗ್ರೆಸ್ ಪಕ್ಷ ಹಮ್ಮಿಕೊಂಡಿದ್ದ ಬೆಳಗಾವಿ ಸಮಾವೇಶದ ಪೂರ್ವಬಾವಿ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು. ರಾಜ್ಯಮತ್ತು ರಾಷ್ಟ್ರದಲ್ಲಿ ಶತಮಾನಗಳನ್ನು ಕಳೆದ ಏಕೈಕ ಪಕ್ಷ ಕಾಂಗ್ರೆಸ್. ದೇಶಕ್ಕೆ ಸ್ವಾತಂತ್ರ್ಯವನ್ನು ತಂದುಕೊಟ್ಟಿದ್ದಲ್ಲದೆ, ಕೋಟ್ಯಾಂತರ ಬಡ ಜನರಿಗೆ ನೆಮ್ಮದಿಯ ಬದುಕು ನೀಡಿದ್ದು ಕಾಂಗ್ರೆಸ್ ಪಕ್ಷ.  ದೇಶದ ಇತಿಹಾಸದಲ್ಲಿ ಬಡವರು, ಕಾರ್ಮಿಕರು, ಮಹಿಳೆಯರು, ಯುವಕರಿಗೆ ಸಕಾಲದಲ್ಲಿ ನೆರವು ನೀಡಿ ಅವರ ಬದುಕನ್ನು ಉತ್ತಮ ಪಡಿಸುವ ನಿಟ್ಟಿನಲ್ಲಿ ಪಕ್ಷ ಸದಾ ಕಾರ್ಯನಿರ್ವಹಿಸುತ್ತಾ ಬಂದಿದೆ.

ವಿಶೇಷವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಪಕ್ಷ ಐದು ಗ್ಯಾರಂಟಿ ಜಾರಿಗೆ ತರುವಮೂಲಕ ಕರ್ನಾಟಕ ಬಡ ಜನರಿಗೆ ಹೊಸ ಆತ್ಮವಿಶ್ವಾಸ ತುಂಬಿದೆ. ಬಿಜೆಪಿಯ ಸುಳ್ಳು ಆರೋಪಗಳಿಗೆ ಜನತೆ ಇತ್ತೀಚೆಗೆ ನಡೆದ ಉಪಚುನಾವಣೆಯಲ್ಲಿ ಉತ್ತರ ನೀಡಿದ್ಧಾರೆ. ಬೆಳಗಾವಿಯ ಐತಿಹಾಸಿಕ ಸಮಾವೇಶಕ್ಕೆ ಹಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಪಕ್ಷಕ್ಕೆ ಶಕ್ತಿ ತುಂಬಬೇಕು ಎಂದರು.

ಪ್ರಾಸ್ತಾವಿಕವಾಗಿ ಮಾತನಾಡಿದ ಕೆಪಿಸಿಸಿ ಜಿಲ್ಲಾಧ್ಯಕ್ಷ, ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಎಂ.ಕೆ.ತಾಜ್‌ಪೀರ್, ಜಿಲ್ಲೆಯ ಎಲ್ಲಾ ಬ್ಲಾಕ್‌ಗಳಲ್ಲಿ ಐತಿಹಾಸಿಕ ಸಮಾವೇಶವನ್ನು ಯಶಸ್ವಿಗೊಳಿಸುವ ನಿಟ್ಟಿನಲ್ಲಿ ಪೂರ್ವಬಾವಿ ಸಭೆ ನಡೆಸಲಾಗಿದೆ. ಸಮಾವೇಶದ ರೂಪುರೇಷೆಗಳ ಕುರಿತು ಪಕ್ಷದ ಸಂಘಟನೆಯ ಹಿತದೃಷ್ಠಿಯಿಂದ ಕೆಪಿಸಿಸಿ ಉಪಾಧ್ಯಕ್ಷರಾದ ಮುರುಳಿಧರಹಾಲಪ್ಪ ಸಾಕಷ್ಟು ಮಾಹಿತಿ ನೀಡಿದ್ಧಾರೆ. ಚಳ್ಳಕೆರೆ ವಿಧಾನಸಭಾ ಕ್ಷೇತ್ರವ್ಯಾಪ್ತಿಯ ಕನಿಷ್ಠಪಕ್ಷ ಎರಡು ಸಾವಿರ ಕಾರ್ಯಕರ್ತರು ಭಾಗವಹಿಸಬೇಕೆಂದು ಮನವಿ ಮಾಡಿದರು.

ಜಿಲ್ಲಾ ಕಾರ್ಯಾಧ್ಯಕ್ಷ ಹಾಲಸ್ವಾಮಿ, ಪ್ರಧಾನ ಕಾರ್ಯದರ್ಶಿ ಸಂಪತಕುಮಾರ್, ಡಿ.ಮೈಲಾರಪ್ಪ, ಹಿರಿಯ ಮುಖಂಡ ಟಿಎಟಿ ಪ್ರಭುದೇವ್, ಜಿಲ್ಲಾ ಗ್ಯಾರಂಟಿ ಸಮಿತಿ ಅಧ್ಯಕ್ಷ ಚನ್ನಕೇಶವ ತಾಲ್ಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷ ಗದ್ದಿಗೆತಿಪ್ಫೇಸ್ವಾಮಿ, ನಗರಸಭೆ ಅಧ್ಯಕ್ಷೆ ಜೈತುಂಬಿ, ಸದಸ್ಯರಾದ ಸುಮ, ಶಿಲ್ಪ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಟಿ.ವೀರಭದ್ರಪ್ಪ, ಪರಶುರಾಮಪುರ ಅಧ್ಯಕ್ಷ ಶಶಿಧರ,

ಕರಕುಶಲಪರಿಷತ್ ಅಧ್ಯಕ್ಷ ಆರ್.ಪ್ರಸನ್ನಕುಮಾರ್, ಮಹಿಳಾ ಘಟಕದ ಅಧ್ಯಕ್ಷೆ ಗೀತಾಬಾಯಿ, ಬಿ.ಎಂ.ಭಾಗ್ಯಮ್ಮ, ವಾಣಿ, ಮಂಜುಳಾ, ನಾಮಿನಿ ಸದಸ್ಯರಾದ ಅನ್ವರ್‌ ಮಾಸ್ಟರ್, ಬಡಗಿ ಪಾಪಣ್ಣ, ಆರ್.ವೀರಭದ್ರಪ್ಪ, ನಟರಾಜು, ನೇತಾಜಿಪ್ರಸನ್ನ, ಎಂ.ಚೇತನ್‌ಕುಮಾರ್, ಚೌಳೂರುಪ್ರಕಾಶ್, ಎಲ್‌ಐಸಿತಿಪ್ಪೇಸ್ವಾಮಿ ಮುಂತಾದವರು ಉಪಸ್ಥಿತರಿದ್ದರು.
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ