Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

'ನನ್ನ ಇ-ಖಾತಾ ನನ್ನ ಹಕ್ಕು' ಅಭಿಯಾನ ಆರಂಭ

Advertisement

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ನಾಗರಿಕರಿಗೆ ಸುಲಭವಾಗಿ ಮತ್ತು ಪಾರದರ್ಶಕವಾಗಿ ಇ-ಖಾತಾ ತಲುಪಿಸುವ ನಿಟ್ಟಿನಲ್ಲಿ ಇಂದಿನಿಂದ ರಾಜ್ಯಾದ್ಯಂತ ಬಹುನಿರೀಕ್ಷಿತ 'ನನ್ನ ಇ-ಖಾತಾ ನನ್ನ ಹಕ್ಕು' ಅಭಿಯಾನ ಆರಂಭಗೊಂಡಿದೆ.

​ಉಪಮುಖ್ಯಮಂತ್ರಿ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವರಾದ ಡಿ.ಕೆ. ಶಿವಕುಮಾರ್ ಅವರು ಶನಿವಾರ ಬೆಂಗಳೂರು ಪೂರ್ವ ನಗರ ಪಾಲಿಕೆ ವ್ಯಾಪ್ತಿಯ ಹೊರಮಾವು ಬಳಿಯ ನ್ಯಾಷನಲ್ ಪಬ್ಲಿಕ್ ಸ್ಕೂಲ್, ಕಲ್ಕೆರೆ ಅಗರ ಮುಖ್ಯ ರಸ್ತೆಯಲ್ಲಿರುವ ಇ-ಖಾತಾ ನೋಂದಣಿ ಕೇಂದ್ರಕ್ಕೆ ಖುದ್ದಾಗಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.

​ಸಾರ್ವಜನಿಕರೊಂದಿಗೆ ಸಮಾಲೋಚನೆ, ಸಿಬ್ಬಂದಿಗೆ ಸೂಚನೆ ​ಕೇಂದ್ರದಲ್ಲಿ ಇ-ಖಾತಾ ಪಡೆದುಕೊಳ್ಳಲು ಆಗಮಿಸಿದ್ದ ಸಾರ್ವಜನಿಕರೊಂದಿಗೆ ನೇರವಾಗಿ ಮಾತನಾಡಿದ ಡಿ.ಕೆ. ಶಿವಕುಮಾರ್ ಅವರು, ಪ್ರಕ್ರಿಯೆಯಲ್ಲಿ ಎದುರಾಗುತ್ತಿರುವ ಸವಾಲುಗಳು ಹಾಗೂ ಸೌಲಭ್ಯಗಳ ಬಗ್ಗೆ ಮಾಹಿತಿ ಪಡೆದರು.

ಇ-ಖಾತಾ ವಿತರಣೆಯಲ್ಲಿ ಯಾವುದೇ ವಿಳಂಬಕ್ಕೆ ಆಸ್ಪದ ನೀಡದೆ, ಸಾರ್ವಜನಿಕರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಸುಗಮವಾಗಿ ಪ್ರಕ್ರಿಯೆ ಪೂರ್ಣಗೊಳಿಸಬೇಕು ಎಂದು ಸ್ಥಳದಲ್ಲಿದ್ದ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

​"ನಾಗರಿಕರ ಆಸ್ತಿ ಹಕ್ಕುಗಳನ್ನು ರಕ್ಷಿಸುವುದು ಮತ್ತು ಖಾತಾ ಪ್ರಕ್ರಿಯೆಯನ್ನು ಸಂಪೂರ್ಣ ಪಾರದರ್ಶಕಗೊಳಿಸುವುದೇ ಈ ಅಭಿಯಾನದ ಮುಖ್ಯ ಉದ್ದೇಶವಾಗಿದೆ. ಪ್ರತಿಯೊಬ್ಬ ಅರ್ಹ ನಾಗರಿಕರಿಗೂ ಅವರ ಇ-ಖಾತಾ ತಲುಪಿಸಲು ಸರ್ಕಾರ ಬದ್ಧವಾಗಿದೆ."
ಡಿ.ಕೆ. ಶಿವಕುಮಾರ್, ಉಪಮುಖ್ಯಮಂತ್ರಿ.

​ಏನಿದು 'ನನ್ನ ಇ-ಖಾತಾ ನನ್ನ ಹಕ್ಕು' ಅಭಿಯಾನ?:
​ಆಸ್ತಿ ಮಾಲೀಕರು ಕಚೇರಿಗಳಿಗೆ ಅಲೆಯುವುದನ್ನು ತಪ್ಪಿಸಲು ಮತ್ತು ಮಧ್ಯವರ್ತಿಗಳ ಹಾವಳಿಗೆ ಬ್ರೇಕ್ ಹಾಕಲು ಸರ್ಕಾರ ಈ ವಿಶೇಷ ಅಭಿಯಾನವನ್ನು ಹಮ್ಮಿಕೊಂಡಿದೆ. ಆಸ್ತಿ ದಾಖಲೆಗಳ ಡಿಜಿಟಲೀಕರಣ ಹಾಗೂ ತಂತ್ರಜ್ಞಾನದ ಬಳಕೆಯ ಮೂಲಕ ಅತ್ಯಂತ ಸರಳವಾಗಿ ಸಾರ್ವಜನಿಕರು ತಮ್ಮ ಇ-ಖಾತಾವನ್ನು ಪಡೆದುಕೊಳ್ಳಲು ಈ ಕೇಂದ್ರಗಳು ನೆರವಾಗಲಿವೆ.

​ಬೆಂಗಳೂರಿನಾದ್ಯಂತ ವಿವಿಧ ಕೇಂದ್ರಗಳಲ್ಲಿ ಇಂದಿನಿಂದ ಈ ಪ್ರಕ್ರಿಯೆ ಚುರುಕುಗೊಂಡಿದ್ದು, ಆಸ್ತಿ ಮಾಲೀಕರು ಇದರ ಸದುಪಯೋಗ ಪಡೆದುಕೊಳ್ಳುವಂತೆ ಪ್ರಕಟಣೆಯಲ್ಲಿ ಕೋರಲಾಗಿದೆ.

 

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಹಿರಿಯೂರು ಉಪಚುನಾವಣೆ: ಶೋಕಿ ನಾಯಕರಿಗೆ ‘ತಕ್ಕ ಪಾಠ’ ಕಲಿಸಲು ಹಿರಿಯೂರು ಮತದಾರ ಸಜ್ಜು!ಲೋಹಿತ್‌ ಕುಮಾರ್ ಪಿ ಅವರಿಗೆ ಪಿಎಚ್.ಡಿ. ಪದವಿ ಪ್ರದಾನ: ಅಭಿನಂದನೆಗಳ ಮಹಾಪೂರಫ್ಯಾಕ್ಟರಿಯಿಂದ ಹೊರಬರುತ್ತಿರುವ ದುರ್ವಾಸನೆ: ದೊಡ್ಡಬಳ್ಳಾಪುರದ ವರದನಹಳ್ಳಿ ಗ್ರಾಮಸ್ಥರು ಹೈರಾಣು!ಗ್ರಾಮ ಪಂಚಾಯಿತಿಯಲ್ಲಿ ರಾತ್ರಿ ವೇಳೆ ರಹಸ್ಯ ಕೆಲಸ: ಗ್ರಾಮಸ್ಥರಲ್ಲಿ ಹೆಚ್ಚಿದ ಕಳ್ಳ ವ್ಯವಹಾರದ ಸಂಶಯ!ಚಿತ್ರದುರ್ಗ ಸಖಿ ಒನ್ ಸ್ಟಾಪ್ ಸೆಂಟರ್: ಸೋಶಿಯಲ್ ವರ್ಕರ್ ಹುದ್ದೆಗೆ ಅರ್ಜಿ ಆಹ್ವಾನಹಿರಿಯೂರು ನಗರಸಭೆ: ವಿವಿಧ ಸೌಲಭ್ಯಗಳಿಗೆ ಅರ್ಜಿ ಆಹ್ವಾನಮೇ 17ರಂದು ಪೊಲೀಸ್ ಅಧಿಕಾರಿಗಳ ಸ್ನೇಹ ಸಮ್ಮೀಲನಹೊಸ ರೈಲ್ವೆ ಕಾಮಗಾರಿಗಳ ಪರಾಮರ್ಶೆ- ಸಚಿವ ವಿ. ಸೋಮಣ್ಣಇ-ಬಸ್, ಇ-ಟ್ರಾಕ್ ಮತ್ತು ಹಸಿರು ಸಾರಿಗೆ, ಸುಸ್ಥಿರ ಕೈಗಾರಿಕಾ ಭವಿಷ್ಯಕ್ಕೆ ಒತ್ತು:  ಕುಮಾರಸ್ವಾಮಿದೇಶದಲ್ಲಿ ಎಲೆಕ್ಟ್ರಿಕ್ ಬಸ್‌ಗಳ ಸಂಚಾರಕ್ಕೆ ಮತ್ತಷ್ಟು ವೇಗ: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ