Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಜ.31ಕ್ಕೆ ಮೈ ಫ್ಯಾಮಿಲಿ ನಾಟಕ ಪ್ರದರ್ಶನ

Advertisement
ಚಂದ್ರವಳ್ಳಿ ನ್ಯೂಸ್, ತುಮಕೂರು:
ಇಲ್ಲಿನ ಎಂ.ಜಿ. ರಸ್ತೆಯ ಬಾಲಭವನದಲ್ಲಿ ಇದೇ ತಿಂಗಳ ೩೧ ರ ಶುಕ್ರವಾರ ಸಂಜೆ ೬.೩೦ ಕ್ಕೆ ಮೈಸೂರು ರಂಗಾಯಣದಿಂದ ಮೈ ಫ್ಯಾಮಿಲಿ ಎಂಬ ನಾಟಕ(ಪಪೆಟ್ರಿ) ಆಯೋಜಿಸಲಾಗಿದೆ.


ತುಮಕೂರು ಜಿ ಬಾಲಭವನ ಸಮಿತಿ ಹಾಗೂ ಝೆನ ಟೀಮ ಸಹಯೋಗದೊಂದಿಗೆ ಈ ನಾಟಕವನ್ನು ಪ್ರದರ್ಶಿಸಲಾಗುವುದು. ಶಿಕ್ಷಣದಲ್ಲಿ ರಂಗಭೂಮಿ ಎಂಬ ಪರಿಕಲ್ಪನೆಯಡಿ ಈ ನಾಟಕ ಸಿದ್ಧಪಡಿಸಲಾಗಿದೆ. ರೆಪರ್ಟರಿ ಕಲಾವಿದರು ಅಭಿನಯಿಸಿರುವ ಈ ನಾಟಕದ ಸಂಗೀತ, ವಿನ್ಯಾಸ ಹಾಗೂ ನಿರ್ದೇಶನವನ್ನು ಗಣೇಶ ಮಂದಾರ್ತಿ ಮಾಡಿzರೆ. ಸ್ಕ್ರಿಪ್ಟ ಮತ್ತು ಡ್ರಮಟರ್ಜಿಯನ್ನು ಸತೀಶ ತಿಪಟೂರು ನಿರ್ವಹಿಸಿzರೆ. ಪಪೆಟ್ರಿಯನ್ನು ಶ್ರವಣ ಹೆಗ್ಗೋಡು ಮಾಡಿದ್ದಾರೆ.

ನಾಟಕದ ಉದ್ಘಾಟನಾ ಸಮಾರಂಭದಲ್ಲಿ ಜಿಲ್ಲಾಧಿಕಾರಿ ಶುಭ ಕಲ್ಯಾಣ, ಜಿ.ಪಂ. ಸಿಇಓ ಜಿ. ಪ್ರಭು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಎಂ.ಎನ. ಚೇತನಕುರ್ಮಾ ಉಪಸ್ಥಿತರಿರುವರು.
ನಾಟಕದ ಮಧ್ಯೆ ಬರುವ ಪಪೆಟ್ರಿ ಎಲ್ಲರನ್ನು ಮತ್ತೊಂದು ಲೋಕಕ್ಕೆ ಕರೆದುಕೊಂಡು ಹೋಗುತ್ತದೆ ಎಂದು ಕರ್ನಾಟಕ ನಾಟಕ ಅಕಾಡೆಮಿ ಸದಸ್ಯ ಉಗಮ ಶ್ರೀನಿವಾಸ ತಿಳಿಸಿದ್ದಾರೆ.


ಈ ನಾಟಕದ ಕಥನವು ಮಕ್ಕಳ ನೋಟಗಳ ಮೂಲಕ ಅವರ ಲೋಕವಿನ್ಯಾಸ, ಗ್ರಹಿಕೆ, ಭಾವನೆ, ಕಲ್ಪನೆಗಳನ್ನು "ಮಕ್ಕಳು" ಎಂದು ಪ್ರತ್ಯೇಕಿಸದೆ ಒಟ್ಟಂದದಲ್ಲಿ ಹಿಡಿದಿಡಲು ಪ್ರಯತ್ನಿಸಿದೆ. ತಂತ್ರeನ ಯುಗದ ಈ ಕಾಲದಲ್ಲಿ ಮಕ್ಕಳು ಸೇರಿದಂತೆ ಎಲ್ಲರೂ ಮೊಬೈಲ ಮೂಲಕ ಹಲವು ವರ್ಚ್ಯುಯಲ ಲೋಕಗಳಲ್ಲಿ ಏಕಕಾಲದಲ್ಲಿ ಬದುಕುತ್ತಿದ್ದೇವೆ. ಈ "ವರ್ಚ್ಯುಯಲ ಜಗತ್ತು" ಎನ್ನುವುದು ನಮ್ಮೆಲ್ಲರ ನಿಜ ಬದುಕಿನ ವಾಸ್ತವವಾಗಿದೆ.

ಇಲ್ಲಿ ಬಾಳುತ್ತಿರುವ ಪ್ರತಿಯೊಬ್ಬರ ಬದುಕಿನ ಲಯಗಳೂ ಬೇರೆ ಬೇರೆಯಾಗಿದೆ. ಹೀಗೆ ಅಸಹಜ ಮತ್ತು ಸಹಜ ಬದುಕಿನ ನಡುವಿನ ವ್ಯತ್ಯಾಸಗಳೇ ಅರಿವಾಗದಂತೆ, ಛಿದ್ರಗೊ೦ಡ೦ತೆ ಭಾಸವಾಗುತ್ತಿರುವ ಲೋಕವನ್ನು ಪ್ರಕೃತಿ ಸಹಜ ಲಯ ಮತ್ತು ಭಾವಬ೦ಧದಲ್ಲಿ ಧ್ಯಾನಿಸುತ್ತಾ ವಾಸ್ತವ ಲೋಕದ ಅರಿವನ್ನು ಪಡೆದುಕೊಳ್ಳುವ ತೀವ್ರ ಪ್ರಯತ್ನ ಈ ಪ್ರಯೋಗದ ಭಾಗವಾಗಿದೆ.



ಈ ಪ್ರಯೋಗವು ಪೋಷಕರು, ಶಿಕ್ಷಕರು ಸೇರಿದಂತೆ ಭವಿಷ್ಯಕ್ಕಾಗಿ ಮಕ್ಕಳನ್ನು ರೂಪಿಸುತ್ತಿದ್ದೇವೆ ಎ೦ದು ಭಾವಿಸಿರುವ ಈ ಸಮಾಜದ ಎಲ್ಲರೂ ಮಕ್ಕಳ ಕಣ್ಣಿನಲ್ಲಿ ತಮ್ಮನ್ನು ನೋಡಿಕೊಳ್ಳಬೇಕಾದ ನಾಟಕ.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ