Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಮೈಸೂರು ಅರಮನೆ ಖಾಸಗಿ ದರ್ಬಾರ್‌: ಪಟ್ಟದ ಆನೆಯಾಗಿ 'ಶ್ರೀಕಂಠ', ನಿಶಾನೆ ಆನೆಯಾಗಿ 'ಏಕಲವ್ಯ' ಆಯ್ಕೆ!

ಚಂದ್ರವಳ್ಳಿ ನ್ಯೂಸ್, ಮೈಸೂರು:
ವಿಶ್ವಪ್ರಸಿದ್ಧ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಅರಮನೆಯಲ್ಲಿ ರಾಜವಂಶಸ್ಥರು ನಡೆಸುವ ಸಾಂಪ್ರದಾಯಿಕ ಹಾಗೂ ಧಾರ್ಮಿಕ ಕಾರ್ಯಕ್ರಮಗಳಿಗಾಗಿ
'ಶ್ರೀಕಂಠ' ಆನೆಯನ್ನು ಪಟ್ಟದ ಆನೆಯನ್ನಾಗಿ ಹಾಗೂ 'ಏಕಲವ್ಯ' ಆನೆಯನ್ನು ನಿಶಾನೆ ಆನೆಯನ್ನಾಗಿ ರಾಜಮಾತೆ ಪ್ರಮೋದದೇವಿ ಒಡೆಯರ್ ಅವರು ಆಯ್ಕೆ ಮಾಡಿದ್ದಾರೆ.

ಸರ್ಕಾರ ನಡೆಸುವ ನಾಡಹಬ್ಬ ದಸರಾ ಒಂದೆಡೆಯಾದರೆ, ನವರಾತ್ರಿಯ ಸಂದರ್ಭದಲ್ಲಿ ರಾಜವಂಶಸ್ಥರು ಅರಮನೆಯ ಒಳಗಡೆ ನಡೆಸುವ ಖಾಸಗಿ ದರ್ಬಾರ್ ಹಾಗೂ ಧಾರ್ಮಿಕ ವಿಧಿವಿಧಾನಗಳು ತನ್ನದೇ ಆದ ಐತಿಹಾಸಿಕ ಮಹತ್ವವನ್ನು ಹೊಂದಿವೆ.

Advertisement

ಆಯ್ಕೆ ಪ್ರಕ್ರಿಯೆ ನಡೆದಿದ್ದು ಹೇಗೆ?
ಮೊದಲ ಹಂತದಲ್ಲಿ ಅರಮನೆ ಆವರಣ ತಲುಪಿರುವ ಒಂಬತ್ತು ಆನೆಗಳ ಗಜಪಡೆಯನ್ನು ಅರಮನೆಯ 'ಆನೆಯ ಬಾಗಿಲಿ'ನ ಮೂಲಕ ಸವಾರಿ ತೊಟ್ಟಿಗೆ ಕರೆಯಿಸಿಕೊಳ್ಳಲಾಯಿತು. ಅಲ್ಲಿಗೆ ಆಗಮಿಸಿದ ರಾಜಮಾತೆ ಪ್ರಮೋದಾದೇವಿ ಒಡೆಯರ್ ಅವರು ಎಲ್ಲಾ ಆನೆಗಳನ್ನು ಪರಿಶೀಲಿಸಿದ ಬಳಿಕ, ಬಲಭೀಮ 'ಶ್ರೀಕಂಠ'ನನ್ನು ಪಟ್ಟದ ಆನೆಯನ್ನಾಗಿ ಹಾಗೂ 'ಏಕಲವ್ಯ'ನನ್ನು ನಿಶಾನೆ ಆನೆಯನ್ನಾಗಿ ಅಧಿಕೃತವಾಗಿ ಆಯ್ಕೆ ಮಾಡಿದರು. ಈ ಕುರಿತು ಡಿಸಿಎಫ್ ಪ್ರಭುಗೌಡ ಅವರು ಮಾಹಿತಿ ನೀಡಿದ್ದಾರೆ.

ರಾಜವಂಶಸ್ಥರ ನವರಾತ್ರಿಯಲ್ಲಿ ಪಟ್ಟದ ಹಾಗೂ ನಿಶಾನೆ ಆನೆಯ ಪಾತ್ರ:

 

ಅರಮನೆ ಸಂಪ್ರದಾಯ: ರಾಜವಂಶಸ್ಥರು ಕೇವಲ ಹೆಣ್ಣು ಆನೆಗಳನ್ನು ಮಾತ್ರ ಸಾಕುವುದು ವಾಡಿಕೆ (ಪ್ರಸ್ತುತ ಅರಮನೆಯಲ್ಲಿ ಎರಡು ಹೆಣ್ಣು ಆನೆಗಳಿವೆ). ಹೀಗಾಗಿ ದಸರಾ ನವರಾತ್ರಿ ಧಾರ್ಮಿಕ ಪೂಜಾ ಕೈಂಕರ್ಯಗಳಿಗಾಗಿ ಅರಣ್ಯ ಇಲಾಖೆಯಿಂದ ಆಗಮಿಸುವ ಗಜಪಡೆಯ ಗಂಡಾನೆಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ.

ಧಾರ್ಮಿಕ ಪೂಜೆ: ನವರಾತ್ರಿಯ ಒಂಬತ್ತು ದಿನಗಳು, ಆಯುಧ ಪೂಜೆ ಹಾಗೂ ವಿಜಯದಶಮಿಯಂದು ನಡೆಯುವ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಪಟ್ಟದ ಕುದುರೆ, ಪಟ್ಟದ ಒಂಟೆ, ಪಟ್ಟದ ಹಸುವಿನೊಂದಿಗೆ ಈ ಪಟ್ಟದ ಆನೆ ಹಾಗೂ ನಿಶಾನೆ ಆನೆಗಳು ಭಾಗವಹಿಸಲಿವೆ.

ಖಾಸಗಿ ದರ್ಬಾರ್: ನವರಾತ್ರಿ ವೇಳೆ ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ರತ್ನ ಸಿಂಹಾಸನಕ್ಕೆ ಪೂಜೆ ಸಲ್ಲಿಸಿ, ಖಾಸಗಿ ದರ್ಬಾರ್ ನಡೆಸುವ ಪೂರ್ವದಲ್ಲಿ ಈ ಆನೆಗಳಿಗೆ ವಿಶೇಷ ಪೂಜೆ ನೆರವೇರಿಸಲಾಗುತ್ತದೆ.

 

Author
ಸಿ.ಹೆಂಜಾರಪ್ಪ
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬರ ಪರಿಹಾರಕ್ಕೆ ಹೆಚ್ಚಿನ ಅನುದಾನ ಬಿಡುಗಡೆಗೆ ಕೇಂದ್ರ ತಂಡಕ್ಕೆ ಟಿ.ಬಿ. ಜಯಚಂದ್ರ ಮನವಿರಾಹುಲ್ ಗಾಂಧಿ 'ಚೀನಾ-ಪಾಕ್ ಏಜೆಂಟ್' ಎಂದ ಶಾಸಕ; ಸಿದ್ದರಾಮಯ್ಯಗೆ ಕಾಂಗ್ರೆಸ್ ಬಿಡುವಂತೆ ಬಹಿರಂಗ ಸಲಹೆ!ಹಿರಿಯ ಚಲನಚಿತ್ರ ಮಾಂತ್ರಿಕ ಸಿಂಗೀತಂ ಶ್ರೀನಿವಾಸ ರಾವ್ ಇನ್ನಿಲ್ಲ: ಗಣ್ಯರಿಂದ ಕಂಬನಿಹಿಂದೂ ಮಹಾಗಣಪತಿ ಶೋಭಾಯಾತ್ರೆ ವೇಳೆ ಮುರಿದುಬಿದ್ದ ಎಲ್‌ಇಡಿ ಕಮಾನು; ವೃದ್ಧ ಸೇರಿ ಹಲವರಿಗೆ ಗಾಯಕರ್ನಾಟಕ, ಕೇರಳದಲ್ಲೂ 'ವೋಟ್ ಚೋರಿ' ಆಗಿದ್ರೆ ಸರ್ಕಾರಕ್ಕೆ ರಾಜೀನಾಮೆ ಕೊಡಿಸಿ: ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಸವಾಲುಹಿರಿಯ ಐಎಎಸ್‌ಅಧಿಕಾರಿಗಳ ವರ್ಗಾವಣೆ ಮತ್ತು ಹೊಸ ಜವಾಬ್ದಾರಿ ಹಂಚಿಕೆಜಂತರ್ ಮಂತರ್ ಪ್ರತಿಭಟನೆ ವೇಳೆ ಮಹಿಳಾ ಪತ್ರಕರ್ತರಿಗೆ ಲೈಂಗಿಕ ಕಿರುಕುಳ"ರಾಹುಲ್ ಗಾಂಧಿಗೆ ಅಮೇಥಿ ಬಿಟ್ಟು ರಾಯ್‌ಬರೇಲಿಯಿಂದ ಸ್ಪರ್ಧಿಸಲು ಹೆದರಿಕೆಯಿತ್ತು": ಸಂಸದರ ವಿವಾದಾತ್ಮಕ ಹೇಳಿಕೆವೀಳ್ಯದೆಲೆ, ಮೆಕ್ಕೆಜೋಳ ಬೆಳೆ ಹಾನಿ ವೀಕ್ಷಿಸಿ ರೈತರಿಗೆ ಧೈರ್ಯ ತುಂಬಿದ ನಿಖಿಲ್ ಕುಮಾರಸ್ವಾಮಿದಸರಾ ವಿಜೃಂಭಣೆಗೆ ಸಿದ್ಧತೆ: ರಾಜಕೀಯ ರಹಿತ, ವೈಭವದ ದಸರಾಗೆ ಡಿ.ಕೆ. ಶಿವಕುಮಾರ್ ಕರೆ