Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ನಾಲ್ವಡಿ ಕೃಷ್ಣರಾಜೇಂದ್ರ ಒಡೆಯರ್ ಆಡಳಿತಾವಧಿ 'ಸುವರ್ಣಯುಗ'ವಾಗಿದೆ - ರಮೇಶ್

ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ಕನ್ನಡಿಗರ ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ನಾಲ್ವಡಿ ಕೃಷ್ಣರಾಜೇಂದ್ರ ಒಡೆಯರ ಜಯಂತಿಯನ್ನು ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಸಿಹಿ ಹಂಚುವ ಮೂಲಕ ಆಚರಿಸಲಾಯಿತು.

ಈ ಸಂದರ್ಭದಲ್ಲಿ ರಾಜ್ಯ ಪ್ರಧಾನ ಕಾರ್ಯದರ್ಶಿಯಾದ ರಮೇಶ್ ಮಾತನಾಡಿ  ನಾಲ್ವಡಿ ಕೃಷ್ಣರಾಜೇಂದ್ರ ಒಡೆಯರು ಜೂನ್ 04 ರಂದು 1884 ರಲ್ಲಿ ಮೈಸೂರಿನಲ್ಲಿ ಜನಿಸಿದರು ಅವರು ಮೈಸೂರು ಸಂಸ್ಥಾನದಲ್ಲಿ 24ನೇ ರಾಜರಾಗಿ ಆಳ್ವಿಕೆಗೆ ಪಾದರ್ಪಣೆ ಮಾಡಿದ ಮಹಾನ್ ವ್ಯಕ್ತಿ ಅವರು ಮೈಸೂರು ಸಂಸ್ಥಾನವನ್ನು ಮಾದರಿ ಸಂಸ್ಥಾನವಾಗಿ ಪರಿವರ್ತನೆ ಮಾಡಿದಂತಹ ಹೆಗ್ಗಳಿಕೆ ಅವರಿಗೆ ಸಲ್ಲುತ್ತದೆ.  ಸುಮಾರು ಕಾಲೇಜುಗಳನ್ನು ಸ್ಥಾಪನೆ ಮಾಡಿ ಮೈಸೂರು ವಿದ್ಯಾವಂತ ರಾಜ್ಯವನ್ನಾಗಿ ಮಾಡಿದಂತಹ ಕೀರ್ತಿ ಅವರದು  ಎಂದರು.

Advertisement

 ಅವರು ಭಾರತದಲ್ಲಿಯೇ ಮೊದಲ ಬಾರಿಗೆ ಜನಪ್ರತಿನಿಧಿ ಸಭೆಯನ್ನು ಸ್ಥಾಪಿಸಿ, ಮಹಿಳೆಯರಿಗೆ ಮತದಾನದ ಹಕ್ಕು ನೀಡಿದರು. ಮೈಸೂರು ವಿಶ್ವವಿದ್ಯಾನಿಲಯ, ಬೆಂಗಳೂರಿನ ಭಾರತೀಯ ವಿಜ್ಞಾನ ಸಂಸ್ಥೆ (IISc) ಮುಂತಾದವುಗಳ ಸ್ಥಾಪನೆಗೆ ಭೂಮಿ ಮತ್ತು ಧನಸಹಾಯ ನೀಡಿ ಪ್ರೋತ್ಸಾಹ ನೀಡಿದರು .ಕೈಗಾರಿಕೆ ಹಾಗೂ ನೀರಾವರಿ ಗಾಗಿ ಭದ್ರಾವತಿ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ಹಾಗೂ ಕೃಷ್ಣರಾಜ ಸಾಗರ (KRS) ಅಣೆಕಟ್ಟು ಇವರ ದೂರದೃಷ್ಟಿಯ ಫಲವಾಗಿದೆ. ಅಲ್ಲದೆ ಮೈಸೂರು ನಗರದಲ್ಲಿ ಭಾರತದಲ್ಲಿಯೇ ಮೊದಲ ಬಾರಿಗೆ  ಒಳಚರಂಡಿ ವ್ಯವಸ್ಥೆ ಮತ್ತು ಕಾವೇರಿ ವಿದ್ಯುತ್‌ಪೂರೈಕೆಯನ್ನು ಜಾರಿಗೆ ತಂದವರು ನಾಲ್ವಡಿ ಕೃಷ್ಣರಾಜೇಂದ್ರ ಒಡೆಯರ್ ಅವರ ಆಡಳಿತಾವಧಿಯನ್ನು (೧೯೦೨ ರಿಂದ ೧೯೪೦) ಮೈಸೂರು ಇತಿಹಾಸದ 'ಸುವರ್ಣಯುಗ' ಎಂದು ಕರೆಯಲಾಗುತ್ತದೆ ಮುಖ್ಯವಾಗಿ ನಮ್ಮ ದೊಡ್ಡಬಳ್ಳಾಪುರಕ್ಕೆ ವಿದ್ಯುತ್ ಶಕ್ತಿಯನ್ನು ತಂದುಕೊಟ್ಟಂತಹ ಗೌರವ ಅವರಿಗೆ ಸಲ್ಲುತ್ತದೆ ಹಾಗಾಗಿ ನಾಲ್ವಡಿ ಕೃಷ್ಣರಾಜೇಂದ್ರ ಒಡೆಯರ ಜಯಂತಿಯನ್ನು ನಮ್ಮ ಸಂಘಟನೆ ವತಿಯಿಂದ ಆಚರಿಸುತ್ತಿರುವುದು ನಮ್ಮ ಹೆಮ್ಮೆಯಾಗಿದೆ ಎಂದರು.

ಕಾರ್ಯಕ್ರಮದಲ್ಲಿ ರಾಜ್ಯ ಸಂಘಟನಾ ಕಾರ್ಯದರ್ಶಿ ಅರವಿಂದಪ್ಪ,ರಾಜ್ಯ ಮುಖಂಡ ಪಿ ವಾಸು, ಜಿಲ್ಲಾ ಪ್ರಧಾನ ಕಾರ್ಯದರ್ಶಿತಾಯೇಗೌಡ,ಜಿಲ್ಲಾ ಯುವ ಘಟಕದ ಅಧ್ಯಕ್ಷ ರಂಜಿತ್ ಗೌಡ,ಜಿಲ್ಲಾ ಕಾರ್ಯದರ್ಶಿ ಪ್ರದೀಪ್ ಕುಮಾರ್,  ತಾಲೂಕು ಉಪಾಧ್ಯಕ್ಷ ಅಂಬರೀಶ್,  ತಾಲೂಕು ಕಾರ್ಯ ಘಟಕದ ಅಧ್ಯಕ್ಷ ಶಿವಶಂಕರ್ ರೆಡ್ಡಿ ಹಾಗೂ ವೇದಿಕೆಯ ಕಾರ್ಯಕರ್ತರು ಭಾಗವಹಿಸಿದ್ದರು.

 

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಸಾಪ ಮಾಜಿ ಜಿಲ್ಲಾಧ್ಯಕ್ಷ, ಶಿಕ್ಷಣತಜ್ಞ ಡಾ. ಕೆ.ಎಂ. ವೀರೇಶ್ ಹೃದಯಾಘಾತದಿಂದ ನಿಧನದುರ್ಗಕ್ಕೆ ಹರಿದು ಬಂದ ಭದ್ರೆ- ಸೆ.24ರಂದು ಮುಖ್ಯಮಂತ್ರಿಗಳಿಂದ ಗಂಗಾಪೂಜೆ,  ಬೃಹತ್ ಸಾರ್ವಜನಿಕ ಸಮಾರಂಭಆರ್.ಎಲ್ ಜಾಲಪ್ಪ ತಾಂತ್ರಿಕ ಮಹಾವಿದ್ಯಾಲಯದಲ್ಲಿ 22ನೇ ಘಟಿಕೋತ್ಸವ ಮತ್ತು ಪದವಿ ಪ್ರದಾನ ಕಾರ್ಯಕ್ರಮನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ ಬೈಕ್ ಸವಾರ ಸಾವುಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ಸರ್ವ ಸದಸ್ಯರ ವಾರ್ಷಿಕ ಸಭೆ ಹೋರಾಟಗಳಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಪ್ರಾತಿನಿಧ್ಯ ಕಡಿಮೆ- ಚಿಕ್ಕಪ್ಪನಹಳ್ಳಿ ಷಣ್ಮುಖಕುಂಚಿಟಿಗ ನೌಕರರ ಸಂಘಕ್ಕೆ ಸದಸ್ಯರಾಗಿ: ಎಸ್.ಕೆ ಲಕ್ಷ್ಮಣ್ಚಳವಳಿ ನೆನಪಾಗಿ ಉಳಿದ ‘ತೆಂಕ-ಬಡಗ’ಅಂತಾರಾಷ್ಟ್ರೀಯ ಶಾಂತಿ ದಿನ – ಮನದ ದ್ವೇಷ ಕರಗಿದಾಗಲೇ ಜಗದ ಶಾಂತಿ ಅರಳುವುದು!ಗಣಪತಿ ಮೆರವಣಿಗೆ ವೇಳೆ ಗಲಾಟೆ 7 ಯುವಕರ ವಿರುದ್ಧ ಸುಮೋಟೋ ಪ್ರಕರಣ ದಾಖಲು