Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಶೋಷಣೆ ಮುಕ್ತ ಸಮಾಜ ನಿರ್ಮಾಣದ ಆಶಯ ಹೊಂದಿದ್ದ ನಾರಾಯಣಗುರು

 ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ನಾರಾಯಣಗುರುಗಳು ಶೋಷಣೆಯಿಂದ ಮುಕ್ತವಾದ ಸಮಾಜವನ್ನು ಕಟ್ಟಲು ಶ್ರಮಿಸಿದ ದಾರ್ಶನಿಕರಾಗಿದ್ದಾರೆ. ಎಲ್ಲ ಭೇದಭಾವಗಳನ್ನು ತೊರೆದು ಮನುಷ್ಯರಾಗಿ ಬದುಕುವುದು ಮುಖ್ಯ ಎಂದು ಶ್ರೀ ದೇವರಾಜ್‌ಅರಸ್‌ಶಿಕ್ಷಣ ಸಂಸ್ಥೆಯ ಉಪಾಧ್ಯಕ್ಷ ಜೆ.ರಾಜೇಂದ್ರ ಹೇಳಿದರು.

ಇಲ್ಲಿನ ಆರ್.ಎಲ್.ಜಾಲಪ್ಪ ಸಮೂಹ ಶಿಕ್ಷಣ ಸಂಸ್ಥೆಗಳ ನೇತೃತ್ವದಲ್ಲಿ ಗುರುವಾರ ನಡೆದ ಬ್ರಹ್ಮಶ್ರೀ ನಾರಾಯಣಗುರು ಜಯಂತ್ಯುತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು, ನಾರಾಯಣಗುರು ಅವರ ಭಾವಚಿತ್ರಗಳಿಗೆ ಪುಷ್ಪ ನಮನ ಸಲ್ಲಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

Advertisement

ಆಲೋಚನಾ ಬದ್ದತೆಯಿಂದ ದೇಶದ ಭವಿಷ್ಯವನ್ನು ಸದೃಢಗೊಳಿಸಿದ್ದಾರೆ. ಹಿಂದುಳಿದ ವರ್ಗಗಳ ದನಿಯಾಗಿ, ಸಮಸಮಾಜ ನಿರ್ಮಾಣದ ಆಶೋತ್ತರಗಳನ್ನು ಪ್ರಭಾವಿಸಿದ್ದು, ಅವರ ಆದರ್ಶಗಳು ಪಾಲನೀಯ ಎಂದರು.

ಪರಿವರ್ತನೆಯ ಹರಿಕಾರ: ಮುಖ್ಯ ಭಾಷಣಕಾರರಾಗಿ ಮಾತನಾಡಿದ ಪ್ರಾಧ್ಯಾಪಕ ಪ್ರೊ.ಕೆ.ಆರ್.ರವಿಕಿರಣ್‌, ಸಾಮಾಜಿಕ ಅನಿಷ್ಠಗಳಾದ ಅಸ್ಪೃಶ್ಯತೆ, ಅಸಮಾನತೆ, ಅನಕ್ಷರತೆ ಮೂಢನಂಬಿಕೆ, ಕಂದಾಚಾರಗಳ ವಿರುದ್ಧ ಸಮರ ಸಾರಿ, ಧಾರ್ಮಿಕ ಸುಧಾರಣೆಯ ಮೂಲಕವೇ ಸಮಾಜದ ಪರಿವರ್ತನೆ ಸಾಧ್ಯ ಎಂದು ಸಾಧಿಸಿ ತೋರಿದ ನಾರಾಯಣ ಗುರುಗಳು ಒಬ್ಬ ಮೌನ ಕ್ರಾಂತಿಕಾರಿ. ಅವರ ಚಿಂತನೆ, ಹೋರಾಟ ಮತ್ತು ಸಾಧನೆ ನಮಗೆಲ್ಲ ಆದರ್ಶಪ್ರಾಯವಾದುದು. ಶೈಕ್ಷಣಿಕ ಮತ್ತು ಆಧ್ಯಾತ್ಮಿಕ ಕ್ಷೇತ್ರದಲ್ಲಿ ಗುರುಗಳ ಕ್ರಾಂತಿಕಾರಿ ಚಿಂತನೆಗಳು ಸಮಾಜವನ್ನು ಪ್ರಗತಿಯತ್ತ ಮುನ್ನಡೆಸುತ್ತದೆ. ಗುರುಗಳ ಬದುಕಿನ ಮೌಲ್ಯಗಳು ಎಲ್ಲರಿಗೂ ಆದರ್ಶವಾಗಬೇಕಿದೆ ಎಂದು ತಿಳಿಸಿದರು.

ಹುಟ್ಟಿನ ಜಾತಿಯ ಕಾರಣಕ್ಕೆ ವ್ಯಕ್ತಿ ಶ್ರೇಷ್ಠ ಅಥವಾ ಕನಿಷ್ಠವಾಗುವುದಿಲ್ಲ, ಆ ರೀತಿ ಭಾವಿಸಿದರೆ ಅದು ಧರ್ಮ ವಿರೋಧಿಯಾಗುತ್ತದೆ. ಅಸ್ಪೃಶ್ಯತೆ ಎಂಬ ರೋಗ ಮಾನವ ಸೃಷ್ಟಿ. ದೇವರ ಸೃಷ್ಟಿಯಲ್ಲಿ ಎಲ್ಲರೂ ಸಮಾನರು ಎಂಬುದನ್ನು ತಮ್ಮದೇ ಆದ ಆಲೋಚನಾಕ್ರಮದ ಮೂಲಕ ನಾರಾಯಣಗುರುಗಳು ಪ್ರತಿಪಾದಿಸಿದರು. ಜ್ಞಾನಮಾರ್ಗ ಮತ್ತು ಕರ್ಮಮಾರ್ಗಗಳಿಂದ ಶ್ರೇಷ್ಠತೆಯನ್ನು ಸಾಧಿಸಬಹುದೆಂದು ತಿಳಿಸಿದ ಅವರು ಸಮಾನತೆಯ ಸಮಸಮಾಜ ಕಟ್ಟಲು ತಮ್ಮ ಜೀವನ ಮುಡಿಪಾಗಿಟ್ಟಿದ್ದರು ಎಂದರು.

ಆರ್‌ಎಲ್‌ಜೆಐಟಿ ಪ್ರಾಂಶುಪಾಲ ಡಾ.ಜಿ.ಮುರಳಿ, ಸಂಶೋಧನೆ ಮತ್ತು ಅಭಿವೃದ್ದಿ ನಿರ್ದೇಶಕ ಡಾ.ಎಂ.ಶ್ರೀನಿವಾಸರೆಡ್ಡಿ, ಉಪಪ್ರಾಂಶುಪಾಲ ಡಾ.ಆರ್.ಎಂ.ಸುನಿಲ್‌ಕುಮಾರ್‌, ವಿದ್ಯಾರ್ಥಿ ಕಲ್ಯಾಣಾಧಿಕಾರಿ ಡಾ.ಎನ್.ಬಿ.ಶಂಕರ್, ವಿಭಾಗ ಮುಖ್ಯಸ್ಥರಾದ ಡಾ.ಬಸವರಾಜನಾಯಕ್, ಡಾ.ಶಿಲ್ಪಕಲಾ, ಡಾ.ಮಂಜುನಾಥ್, ಡಾ.ಪ್ರಚಲಿತ್, ಉದ್ಯೋಗಾಧಿಕಾರಿ ಕಾವ್ಯ, ಜಾಲಪ್ಪ ಪಾಲಿಟೆಕ್ನಿಕ್ ಕಾಲೇಜು ಪ್ರಾಂಶುಪಾಲ ಡಾ.ನರಸಿಂಹರೆಡ್ಡಿ, ವ್ಯವಸ್ಥಾಪಕ ಯತಿನ್, ದೈಹಿಕ ಶಿಕ್ಷಣ ನಿರ್ದೇಶಕ ದಾದಾಫೀರ್‌, ಸೇರಿದಂತೆ ಹಲವರು ಪಾಲ್ಗೊಂಡರು.

 

 

Author
ಸಿ.ಹೆಂಜಾರಪ್ಪ
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಸಾಪ ಮಾಜಿ ಜಿಲ್ಲಾಧ್ಯಕ್ಷ, ಶಿಕ್ಷಣತಜ್ಞ ಡಾ. ಕೆ.ಎಂ. ವೀರೇಶ್ ಹೃದಯಾಘಾತದಿಂದ ನಿಧನದುರ್ಗಕ್ಕೆ ಹರಿದು ಬಂದ ಭದ್ರೆ- ಸೆ.24ರಂದು ಮುಖ್ಯಮಂತ್ರಿಗಳಿಂದ ಗಂಗಾಪೂಜೆ,  ಬೃಹತ್ ಸಾರ್ವಜನಿಕ ಸಮಾರಂಭಆರ್.ಎಲ್ ಜಾಲಪ್ಪ ತಾಂತ್ರಿಕ ಮಹಾವಿದ್ಯಾಲಯದಲ್ಲಿ 22ನೇ ಘಟಿಕೋತ್ಸವ ಮತ್ತು ಪದವಿ ಪ್ರದಾನ ಕಾರ್ಯಕ್ರಮನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ ಬೈಕ್ ಸವಾರ ಸಾವುಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ಸರ್ವ ಸದಸ್ಯರ ವಾರ್ಷಿಕ ಸಭೆ ಹೋರಾಟಗಳಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಪ್ರಾತಿನಿಧ್ಯ ಕಡಿಮೆ- ಚಿಕ್ಕಪ್ಪನಹಳ್ಳಿ ಷಣ್ಮುಖಕುಂಚಿಟಿಗ ನೌಕರರ ಸಂಘಕ್ಕೆ ಸದಸ್ಯರಾಗಿ: ಎಸ್.ಕೆ ಲಕ್ಷ್ಮಣ್ಚಳವಳಿ ನೆನಪಾಗಿ ಉಳಿದ ‘ತೆಂಕ-ಬಡಗ’ಅಂತಾರಾಷ್ಟ್ರೀಯ ಶಾಂತಿ ದಿನ – ಮನದ ದ್ವೇಷ ಕರಗಿದಾಗಲೇ ಜಗದ ಶಾಂತಿ ಅರಳುವುದು!ಗಣಪತಿ ಮೆರವಣಿಗೆ ವೇಳೆ ಗಲಾಟೆ 7 ಯುವಕರ ವಿರುದ್ಧ ಸುಮೋಟೋ ಪ್ರಕರಣ ದಾಖಲು