Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ನರೇಗಾ: ದುಡಿಯೋಣ ಬಾ ಅಭಿಯಾನ

Advertisement
ಚಂದ್ರವಳ್ಳಿ ನ್ಯೂಸ್, ಬೆಂ.ಗ್ರಾ.ಜಿಲ್ಲೆ:
ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತ್  ವತಿಯಿಂದ ಜಿಲ್ಲೆಯ ಎಲ್ಲಾ 101 ಗ್ರಾಮ ಪಂಚಾಯಿತಿಗಳಲ್ಲಿ ಮೇ 1 ರಿಂದ ಒಂದು ತಿಂಗಳ ಕಾಲ ಕೂಲಿಕಾರರಿಗೆ 100 ದಿನಗಳ ಕೆಲಸವನ್ನು ಒದಗಿಸಲು "ದುಡಿಯೋಣ ಬಾ
ಅಭಿಯಾನ ಕೈಗೊಳ್ಳಲಾಗಿದೆ ಎಂದು ಜಿ.ಪಂ ಸಿಇಒ ಡಾ.ಕೆ.ಎನ್ ಅನುರಾಧ ಅವರು ತಿಳಿಸಿದ್ದಾರೆ.

ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಸ್ಥಳೀಯ ಗ್ರಾಮೀಣ ಜನರಿಗೆ ನಿರಂತರ ಕೆಲಸವನ್ನು ಒದಗಿಸಲು ಕಾರ್ಯಕ್ರಮವನ್ನು ರೂಪಿಸಲಾಗಿದ್ದು ಇದರ ಸದುಪಯೋಗವನ್ನು ಗ್ರಾಮೀಣ ಭಾಗದ ಉದ್ಯೋಗ ಚೀಟಿಯನ್ನು ಹೊಂದಿರುವ ಸಣ್ಣ ರೈತರು, ಅತಿ ಸಣ್ಣ ರೈತರು ಮತ್ತು ಕೂಲಿಕಾರರು ನರೇಗಾ ಯೋಜನೆಯ ಸದುಪಯೋಗವನ್ನು ಪಡೆದುಕೊಳ್ಳುತ್ತಿದ್ದು ನಿರಂತರವಾಗಿ ಅಕುಶಲ ಕೆಲಸವನ್ನು ಒದಗಿಸುತ್ತಿರುವ ಬಗ್ಗೆ ಮೇಲ್ವಿಚಾರಣೆ ಮಾಡಲಾಗುತ್ತಿದೆ.

ದುಡಿಯೋಣ ಬಾ ಅಭಿಯಾನದಡಿ ವ್ಯಾಪಕ ಜನಜಾಗೃತಿ ಮೂಡಿಸಲು ಕರಪತ್ರಗಳ ವಿತರಣೆ ಗ್ರಾಮಮಟ್ಟದಲ್ಲಿ ಮನೆಮನೆ ಭೇಟಿ ಮಹಿಳಾ ಸಂಘದ ಸದಸ್ಯರ ಸಭೆಗಳಲ್ಲಿ ಮಾಹಿತಿ ವಿತರಣೆ, ಆಟೋ, ಸ್ವಚ್ಚತಾ ವಾಹಿನಿ ಮುಖಾಂತರ ಪ್ರಚಾರವನ್ನು ಮಾಡಲಾಗುತ್ತಿದೆ.

ನರೇಗಾ ಯೋಜನೆಯಡಿ ನೋಂದಾಯಿತ ಕುಟುಂಬಗಳಿಂದ ಮತ್ತು ಅಕುಶಲ ಕೆಲಸಕ್ಕಾಗಿ ಬೇಡಿಕೆಯನ್ನು ಸ್ವೀಕರಿಸಲು ತಾಲ್ಲೂಕು ಐಇಸಿ ಸಂಯೋಜಕರು, ಗ್ರಾಮ ಕಾಯಕ ಮಿತ್ರ, ಹಾಗೂ ಬಿಎಫ್ ಟಿ  ಕಾಯಕ ಬಂಧು, ಮಹಿಳಾ ಸ್ವಸಹಾಯ ಸಂಘದ ಸದಸ್ಯರು (ಎಮ್ ಬಿ ಕೆ ) ರಚಿಸಿ ಮನೆಮನೆ ಭೇಟಿ ಹಾಗೂ ರಾಜ್ಯ ದಿವಸ್ ಆಚರಿಸುವ ಮೂಲಕ ಬೇಡಿಕೆಯನ್ನು ಸಂಗ್ರಹಿಸಿ ಕಾರ್ಯದೇಶವನ್ನು ನೀಡಲಾಗಿದೆ.

ಹೊಸದಾಗಿ ಉದ್ಯೋಗ ಚೀಟಿಯನ್ನು ಪಡೆಯುವವರ ಹತ್ತಿರ ಅರ್ಜಿಯನ್ನು ಸ್ವೀಕರಿಸಿ ಉದ್ಯೋಗ ಚೀಟಿಯನ್ನು ನೀಡಲಾಗುತ್ತಿದೆ. ಕೆಲಸಕ್ಕೆ ಬೇಡಿಕೆ ಸಲ್ಲಿಸಿದ ಕೂಲಿಕಾರರಿಗೆ ನಿರಂತರವಾಗಿ ಕೆಲಸವನ್ನು ಒದಗಿಸಲಾಗುತ್ತಿದೆ. ಬೇಡಿಕೆ ಸಲ್ಲಿಸಿದ ವಿಶೇಷವಾಗಿ ಮಹಿಳೆಯರಿಗೆ ಮತ್ತು ವಿಶೇಷ ಚೇತನರಿಗೆ ಕೆಲಸ ಒದಗಿಸಲು ಅಗತ್ಯ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುತ್ತಿದೆ. ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಕೂಲಿ ಕಾರ್ಮಿಕರಿಗೆ ನಿರಂತರ ಅಕುಶಲ ಕೆಲಸವನ್ನು ಒದಗಿಸುತ್ತಿರುವ ಬಗ್ಗೆ ಪ್ರತಿ ದಿನ ತಾಲೂಕು ಮಟ್ಟದಿಂದ ಮೇಲ್ವಿಚಾರಣೆ ಮಾಡುವುದು ಜೊತೆಗೆ ಜಿಲ್ಲಾ ಮಟ್ಟದಿಂದ ವಾರಕ್ಕೆ ಒಮ್ಮೆ ಪ್ರಗತಿ ಪರಿಶೀಲನೆ ನಡೆಸಲಾಗುತ್ತಿದೆ ಎಂದು ಸಿಇಒ ತಿಳಿಸಿದ್ದಾರೆ.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ