Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮಗುವಿನ ಕಲಿಕೆಯ ಸವಾಲುಗಳನ್ನು ಗುರುತಿಸಿ-ನಾಸಿರುದ್ದೀನ್

Advertisement
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಮಗುವಿನ ಕಲಿಕೆಯ ಸವಾಲುಗಳನ್ನು ಗುರುತಿಸಿ ಮಾರ್ಗದರ್ಶನ ಮಾಡಬೇಕು ಎಂದು ಡಯಟ್ ಪ್ರಾಚಾರ್ಯ ಎಂ.ನಾಸಿರುದ್ದೀನ್ ಹೇಳಿದರು. ನಗರದ ಡಯಟ್‌ನಲ್ಲಿ ಶಾಲಾ ಭೇಟಿ ಮತ್ತು ಬೆಂಬಲ ವ್ಯವಸ್ಥೆ ಕುರಿತು ಜಿಲ್ಲೆಯ ಶಿಕ್ಷಣ ಸಂಯೋಜಕರು,

ಬಿ.ಆರ್.ಪಿ ಮತ್ತು ಸಿ.ಆರ್.ಪಿ ಗಳಿಗೆ ಗುರುವಾರ ಆಯೋಜಿಸಿದ್ದ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದ ಅವರು ಶೈಕ್ಷಣಿಕ ಅನುಷ್ಠಾನಾಧಿಕಾರಿಗಳು ಶಾಲಾ ಭೇಟಿ ನೀಡಿದ ಸಂದರ್ಭದಲ್ಲಿ ಶಿಕ್ಷಕರ ಬೋಧನೆ ಮತ್ತು ಮಕ್ಕಳ ಕಲಿಕೆ ಪರಿಶೀಲಿಸಿ  ಧನಾತ್ಮಕ ಅಂಶಗಳನ್ನು ಗುರುತಿಸಬೇಕು.

ಮಕ್ಕಳ ಬುನಾದಿ ಸಾಕ್ಷರತೆ ಮತ್ತು ಸಂಖ್ಯಾ ಜ್ಞಾನ ಸಾಮರ್ಥ್ಯ ಗುರುತಿಸಿ ಕಲಿಕಾ ಸಾಮರ್ಥ್ಯದಲ್ಲಿ ಹಿಂದುಳಿದಿರುವ ಮಕ್ಕಳಿಗೆ ನಾವಿನ್ಯಯುತ ಚಟುವಟಿಕೆಗಳನ್ನು ಅಳವಡಿಸಿಕೊಂಡು ಕಲಿಕಾ ಸಾಮರ್ಥ್ಯ ಹೆಚ್ಚಿಸಲು ಶಿಕ್ಷಕರಿಗೆ ಸಲಹೆ ನೀಡಬೇಕು ಎಂದರು.

 ಉಪನ್ಯಾಸಕ ಯು. ಸಿದ್ದೇಶಿ ಮಾತನಾಡಿ, ಮಕ್ಕಳಲ್ಲಿ ಕಲಿಕಾ ಭಿನ್ನತೆಯಿರುತ್ತದೆ. ಶಿಕ್ಷಕರು ತರಗತಿ ನಿರ್ವಹಣೆಯಲ್ಲಿ ಮಕ್ಕಳ ಮನಸ್ಥಿತಿ ಅರ್ಥೈಸಿಕೊಳ್ಳಬೇಕು. ಮಕ್ಕಳ ಕಲಿಕೆಗೆ ಪೂರಕವಾದ ಚಟುವಟಿಕೆಗಳು, ಕಲಿಕಾ ಸಂಪನ್ಮೂಲಗಳನ್ನು ಬಳಸಿಕೊಂಡು ಬೋಧಿಸುವುದರಿಂದ ಕಲಿಕೆ ಪರಿಣಾಮಕಾರಿಯಾಗುತ್ತದೆ ಎಂದು ತಿಳಿಸಿದರು.

 ಉಪನ್ಯಾಸಕರಾದ ಎಸ್.ಬಸವರಾಜುಎಲ್. ರೇವಣ್ಣ, ಪದ್ಮ ಸಂಪನ್ಮೂಲ ವ್ಯಕ್ತಿಗಳಾದ ಮಂಜುನಾಥ್, ಸಂತೋಷ್ ಕುಮಾರ್, ಜಾವಿದ್ ಭಾಷಾ, ಶಿಕ್ಷಣ ಸಂಯೋಜಕರಾದ ವಿನುತಾ, ಸಮೀರ ಮತ್ತು ಜಿಲ್ಲೆಯ ಎಲ್ಲಾ ತಾಲೂಕಿನ ಇ.ಸಿ.ಓಬಿ.ಆರ್.ಪಿ ಹಾಗೂ ಸಿ.ಆರ್.ಪಿಯವರು ಇದ್ದರು.

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ