Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ರಾಷ್ಟ್ರೀಯ ಭಾವೈಕ್ಯತೆ ಮೇಳ

Advertisement
ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ವಿದ್ಯಾರ್ಥಿಗಳು ಈಗಿನಿಂದಲೇ ತಮ್ಮ ವಿದ್ಯಾರ್ಥಿ ಜೀವನದಲ್ಲಿ ರಾಷ್ಟ್ರ ಪ್ರೇಮ
, ರಾಷ್ಟ್ರಭಕ್ತಿ, ರಾಷ್ಟ್ರೀಯ ಭಾವೈಕ್ಯತೆಯನ್ನು ಬೆಳೆಸಿಕೊಳ್ಳಬೇಕು ಎಂದು ತಾಲೂಕು ದಂಡಾಧಿಕಾರಿ ವಿದ್ಯಾ ವಿಭಾ ರಾಥೋಡ್ ಹೇಳಿದರು.

ಅವರು ನಗರದ ಅಂಬೇಡ್ಕರ್ ಭವನದಲ್ಲಿ ಭಾರತ ಸೇವಾದಳದ ತಾಲೂಕು ಸಮಿತಿಯಿಂದ ಭಾರತ್ ಸೇವಾ  ಸೇವಾದಳದ ಸಪ್ತಾಹದ ಅಂಗವಾಗಿ ರಾಷ್ಟ್ರೀಯ ಭಾವೈಕ್ಯತೆ ಮಕ್ಕಳ ಮೇಳದಲ್ಲಿ ಮಾತನಾಡಿ ಪ್ರಸ್ತುತ ಕಾಲದಲ್ಲಿ ವಿದ್ಯಾರ್ಥಿಗಳಿಗೆ ಈಗಿನಿಂದಲೇ ರಾಷ್ಟ್ರಪ್ರೇಮ ರಾಷ್ಟ್ರ ಭಕ್ತಿಯನ್ನು ಬೆಳೆಸುವ ಕೆಲಸ ಮುಖ್ಯವಾಗಿ ರಾಷ್ಟ್ರೀಯ ಭಾವೈಕ್ಯತೆಯನ್ನು ಬೆಳೆಸುವಂತಹ ಕೆಲಸ ಆಗಬೇಕು ಮಹಾತ್ಮ ಗಾಂಧೀಜಿ ಅವರು ಕಂಡಂತಹ ಕನಸು ನನಸಾಗಬೇಕು ಇಂತಹ ಕಾರ್ಯಗಳನ್ನು ಭಾರತ ಸೇವಾದಳ ಶಾಲೆಗಳಿಗೆ ಹಮ್ಮಿಕೊಂಡಿರುವುದು ತುಂಬಾ ಸಂತೋಷದ ವಿಷಯ ಎಂದರು.

 ವೇದಿಕೆ ಕಾರ್ಯಕ್ರಮದಲ್ಲಿ ಭಾರತ ಸೇವಾದಳದ ಜಿಲ್ಲಾ ಸಮಿತಿ ಅಧ್ಯಕ್ಷ ಲಕ್ಷ್ಮೀ ಪತಿ ಮಾತನಾಡಿ ತಾಲೂಕಿನಲ್ಲಿರುವ ಎಲ್ಲಾ ಶಾಲೆಯ ಎಲ್ಲಾ ಶಾಖೆಗಳಿಗೆ ಸುಮಾರು 5000 ಸಮವಸ್ತ್ರಗಳನ್ನು ಉಚಿತವಾಗಿ ನೀಡಲಾಗುವುದು ಎಂದರು, ತಾಲೂಕಿನ ಶಾಖಾ ನಾಯಕರಗಳು ವಿದ್ಯಾರ್ಥಿಗಳಲ್ಲಿ ಶಿಸ್ತು ಮೂಡಿಸುವಲ್ಲಿ ಶ್ರಮ ವಹಿಸುತ್ತಿರುವುದು ತುಂಬಾ ಸಂತೋಷ ಎಂದರು.   

ಭಾರತೀಯ ಸೇವಾದಳದ ತಾಲೂಕು ಸಮಿತಿಯ ಅಧ್ಯಕ್ಷ ಆರ್. ವಿ ಮಹೇಶ್ ಮಾತನಾಡಿ ಭಾರತ ಸೇವಾದಳ ಸ್ವಾತಂತ್ರ್ಯಕ್ಕಾಗಿ ಯುವಕರನ್ನು ಸಂಘಟಿಸುವಲ್ಲಿ ಮಹತ್ವದ ಪಾತ್ರ ವಹಿಸಿದ್ದು ಇತ್ತೀಚಿನ ದಿನಗಳಲ್ಲಿ ವಿದ್ಯಾರ್ಥಿಗಳಿಗೆ ಶಿಸ್ತು ಸಾಮರಸ್ಯ ಮೂಡಿಸುವಲ್ಲಿ ಭಾರತ ಸೇವಾದಳ ಮಹತ್ವದ ಕೆಲಸ ಮಾಡುತ್ತಿದೆ ಎಂದರು.  

 ಕಾರ್ಯಕ್ರಮಕ್ಕೆ ಮೊದಲು ಸುಮಾರು 300 ವಿದ್ಯಾರ್ಥಿಗಳು ನಗರದ ನೆಲದಾಂಜನೇಯ ಸ್ವಾಮಿ ದೇವಸ್ಥಾನದಿಂದ ಅಂಬೇಡ್ಕರ್ ಭವನದವರೆಗೂ   ಪ್ರಭಾತ ಬೇರಿ ಮೂಲಕ   ಜಾಥ ನಡೆಸಿದರು.ಈ ಕಾರ್ಯಕ್ರಮಕ್ಕೆ ಶಾಸಕರಾದ  ಧೀರಜ್ ಮುನಿರಾಜು ರವರು ಹಸಿರು ಬಾವುಟ ತೋರಿಸಿ ಚಾಲನೆ ನೀಡಿದರು.

 ಈ ಕಾರ್ಯಕ್ರಮದಲ್ಲಿ ಟಿ ಎ ಪಿ ಎಂ ಸಿ ನಿರ್ದೇಶಕ ರಂಗಪ್ಪ, ತೂಬಗೆರೆ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ರವಿ ಸಿದ್ದಪ್ಪ, ಭೂ ಮಂಜೂರಾತಿ ಸಮಿತಿ ಸದಸ್ಯ ಶ್ರೀಧರ್, ಹೊಸಕೋಟೆ ತಾಲೂಕು ಕೃಷಿಕ ಸಮಾಜ ಅಧ್ಯಕ್ಷ ಹರೀಶ್, ದೊಡ್ಡಬಳ್ಳಾಪುರ ತಾಲೂಕು ಕೃಷಿಕ ಸಮಾಜದ ಅಧ್ಯಕ್ಷ ಮುರುಳೀಧರ್, ನಗರಸಭೆ ಸದಸ್ಯ ಕಾಂತರಾಜ್, ಕರ್ನಾಟಕ ರಾಜ್ಯ ಕೈಮಗ್ಗ ಅಭಿವೃದ್ಧಿ ನಿಗಮದ ಮಾಜಿ ಸದಸ್ಯ ಸಿ. ರಾಮಕೃಷ್ಣ ಕಾರ್ಯಧ್ಯಕ್ಷ ವೆಂಕಟೇಶ್, ಪ್ರಧಾನ ಕಾರ್ಯದರ್ಶಿ, ವಿ.ಸಿ ಜ್ಯೋತಿ ಕುಮಾರ್ , ವಕೀಲ ಆರ್,ವಿ,ಶಿವಕುಮಾರ್ ಹಾಗೂ ತಾಲೂಕ ಸಮಿತಿಯ ನಿರ್ದೇಶಕರು ಮುಂತಾದವರು ಭಾಗವಹಿಸಿದ್ದರು.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ