Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ರಸ್ತೆ ಅಗಲೀಕರಣಕ್ಕೆ ಬೆಂಬಲ ನೀಡಿದ ನವ ಕ್ರಾಂತಿ ರಕ್ಷಣಾ ವೇದಿಕೆ

Advertisement
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ :
ಪ್ರವಾಸಿ ಮಂದಿರದಿಂದ ಮಹಾತ್ಮಗಾಂಧಿ ವೃತ್ತದವರೆಗೆ ರಸ್ತೆ ಕಿರಿದಾಗಿರುವುದರಿಂದ ಯಾವುದೇ ಒತ್ತಡಕ್ಕೆ ಮಣಿಯದೆ ರಸ್ತೆ ಅಗಲೀಕರಣಗೊಳಿಸುವಂತೆ ನವ ಕ್ರಾಂತಿ ರಕ್ಷಣಾ ವೇದಿಕೆ ಕಾರ್ಯಕರ್ತರು ಅಪರ ಜಿಲ್ಲಾಧಿಕಾರಿಗೆ ಮಂಗಳವಾರ ಮನವಿ ಪತ್ರ ಸಲ್ಲಿಸಿದರು.


ಗಾಂಧಿ ವೃತ್ತದಿಂದ ಹೊಳಲ್ಕೆರೆ ರಸ್ತೆ ಹಾಗೂ ಮೆದೇಹಳ್ಳಿ ರಸ್ತೆಯಲ್ಲಿ ದಿನನಿತ್ಯವೂ ಸಂಚಾರ ದಟ್ಟಣೆಯಿಂದ ಕೂಡಿರುತ್ತದೆ. ರಸ್ತೆ ಬದಿಯಲ್ಲಿಯೇ ಹೂಣ ಹಣ್ಣು ವ್ಯಾಪಾರ ಮಾಡುತ್ತಿರುವುದರಿಂದ ಪಾದಚಾರಿಗಳು ಸಂಚರಿಸುವುದು ಕಷ್ಟವಾಗಿದೆ. ತುರ್ತು ಸಂದರ್ಭಗಳಲ್ಲಿ ರೋಗಿಗಳನ್ನು ಆಸ್ಪತ್ರೆಗೆ ಸಾಗಿಸಲು ಅಂಬ್ಯುಲೆನ್ಸ್‌ನವರು ಪರದಾಡಬೇಕಾಗುತ್ತದೆ.

ವಾಹನಗಳಿಗೆ ಪಾರ್ಕಿಂಗ್ ಇಲ್ಲ. ಮಳೆ ಬಂದರೆ ನೀರು ಹರಿದು ಹೋಗಲು ಚರಂಡಿ ವ್ಯವಸ್ಥೆಯಿರುವುದಿಲ್ಲ. ಒಟ್ಟಾರೆ ಚಿತ್ರದುರ್ಗ ನಗರ ನಾನಾ ರೀತಿಯ ಸಮಸ್ಯೆಗಳನ್ನು ಹೆಣೆದುಕೊಂಡಿರುವುದರಿಂದ ತಕ್ಷಣದಿಂದಲೆ ರಸ್ತೆ ಅಗಲೀಕರಣವಾಗಬೇಕೆಂದು ಪ್ರತಿಭಟನಾಕಾರರು ಅಪರ ಜಿಲ್ಲಾಧಿಕಾರಿಯನ್ನು ಒತ್ತಾಯಿಸಿದರು.

ನವ ಕ್ರಾಂತಿ ರಕ್ಷಣಾ ವೇದಿಕೆ ಗೌರವಾಧ್ಯಕ್ಷ ಮಹಾಂತೇಶ್, ಸಂಸ್ಥಾಪಕ ರಾಜ್ಯಾಧ್ಯಕ್ಷ ಪ್ರದೀಪ್‌ಕುಮಾರ್, ಪ್ರಧಾನ ಕಾರ್ಯದರ್ಶಿ ವಿರುಪಾಕ್ಷಿ, ಜಿಲ್ಲಾಧ್ಯಕ್ಷ ಮೋಹನ್ ಸಿ.ಆರ್. ಆನಂದ್‌ಪೈಲೆಟ್, ವರುಣ್‌ಕುಮಾರ್, ವಿನಾಯಕ, ಸುನಿಲ್‌ಕುಮಾರ್, ಮನೋಜ್, ಮಂಜು, ಬಸವರಾಜ್, ಪ್ರದೀಪ್ ಹೆಚ್. ಮಂಜುನಾಥ್ ಟಿ.ಎನ್. ಪ್ರತಿಭಟನೆಯಲ್ಲಿದ್ದರು.
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ