LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ನವೋದಯ ವಿದ್ಯಾಲಯ: ಪ್ರಥಮ ಪಿಯು ವಿಜ್ಞಾನ ವಿಭಾಗದ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ

Advertisement
Advertisement

ಚಂದ್ರವಳ್ಳಿ ನ್ಯೂಸ್, ​ಹಿರಿಯೂರು:
ಹಿರಿಯೂರು ತಾಲ್ಲೂಕಿನ ಉಡುವಳ್ಳಿಯ ಜವಹಾರ್ ನವೋದಯ ವಿದ್ಯಾಲಯದಲ್ಲಿ 2026-27ನೇ ಶೈಕ್ಷಣಿಕ ವರ್ಷಕ್ಕೆ ಖಾಲಿ ಇರುವ ಸೀಟುಗಳಿಗೆ 11ನೇ ತರಗತಿಯ ವಿಜ್ಞಾನ ವಿಭಾಗದ ಪ್ರವೇಶಕ್ಕಾಗಿ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಜೂನ್ 25 ಅರ್ಜಿ ಸಲ್ಲಿಸಲು ಕೊನೆಯ ದಿನ.

ಅರ್ಜಿ ಸಲ್ಲಿಸುವ ಅಭ್ಯರ್ಥಿಯ ಜನ್ಮ ದಿನಾಂಕವು 01.06.2009 ರಿಂದ 31.07.2011 ರ ನಡುವೆ ಇರಬೇಕು. ಅಭ್ಯರ್ಥಿಯು 2025-26ರ ಶೈಕ್ಷಣಿಕ ಅವಧಿಯಲ್ಲಿ ಜೆ.ಎನ್.ವಿ ಇರುವ ಜಿಲ್ಲೆಯ ಮಾನ್ಯತೆ ಪಡೆದ ಶಾಲೆಯಿಂದ 10ನೇ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು. ಅಲ್ಲದೆ, 10ನೇ ತರಗತಿಯಲ್ಲಿ ಕನಿಷ್ಠ ಶೇ.60 ಅಥವಾ ಅದಕ್ಕಿಂತ ಹೆಚ್ಚಿನ ಪ್ರಥಮ ದರ್ಜೆ ಅಂಕಗಳನ್ನು ಪಡೆದ ವಿದ್ಯಾರ್ಥಿಗಳು ಮಾತ್ರ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ವಿಜ್ಞಾನ ವಿಭಾಗವನ್ನು ಆಯ್ಕೆ ಮಾಡಿಕೊಳ್ಳುವ ಅಭ್ಯರ್ಥಿಗಳು 10ನೇ ತರಗತಿಯ ವಿಜ್ಞಾನ ಮತ್ತು ಗಣಿತ ವಿಷಯಗಳಲ್ಲಿ ಕನಿಷ್ಠ ಶೇ.60 ಅಂಕಗಳನ್ನು ಹೊಂದಿರಬೇಕಿರುವುದು ಕಡ್ಡಾಯವಾಗಿದೆ.

ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಸಲ್ಲಿಸಲು 2026ರ ಜೂನ್ 25 ಕೊನೆಯ ದಿನಾಂಕವಾಗಿದೆ. ಹೆಚ್ಚಿನ ಮಾಹಿತಿ ಹಾಗೂ ಪ್ರವೇಶ ಪ್ರಕ್ರಿಯೆಗಾಗಿ ಆಸಕ್ತರು ಮೊಬೈಲ್ ಸಂಖ್ಯೆಗಳಾದ 8301968144, 8618537422, 9740133395, 8453091534 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜವಹಾರ್ ನವೋದಯ ವಿದ್ಯಾಲಯ ಪ್ರಾಚಾರ್ಯರು ತಿಳಿಸಿದ್ದಾರೆ.

 

 

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮನದಲ್ಲಿ ಜಾತಿ ಉಳಿದಿರುವವರೆಗೂ, ಜಾತ್ಯತೀತತೆ ಕೇವಲ ಮುಖವಾಡ ​ ಅಂತರಂಗದ ಬೇಸಾಯವೇ ಬದುಕಿನ ಸಾರ್ಥಕ ಬೆಳೆ*ಶಿಕ್ಷಕ-ರಕ್ಷಕ*ಆತ್ಮಹತ್ಯೆಗೆ ಶರಣಾದ ರೈತ ದಂಪತಿ ಮನೆಗೆ ಕುಮಾರಸ್ವಾಮಿ ಭೇಟಿ- ಸಾಂತ್ವನ, ಧೈರ್ಯ ತುಂಬಿದ ನಾಯಕಗೋಪೂಜೆ ಮತ್ತು ರಾಗಿಹುಲ್ಲು ವಿತರಣೆಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನಿವಾಸಕ್ಕೆ ದಿಗ್ವಿಜಯ್ ಸಿಂಗ್ ಭೇಟಿ:ಬೆಂಗಳೂರಿನಲ್ಲಿ ಆಸ್ಟ್ರೇಲಿಯಾ ಕಾನ್ಸುಲೇಟ್ ಜನರಲ್ ಕಚೇರಿ ಅಧಿಕೃತವಾಗಿ ಉದ್ಘಾಟನೆ: ಎಂ.ಬಿ. ಪಾಟೀಲ್ ಹರ್ಷ​‘ಕಾಂಗ್ರೆಸ್‌ನ 6ನೇ ಗ್ಯಾರೆಂಟಿ ಅಂದರೆ ಕೃಷಿ ಕಾರ್ಮಿಕರಿಗೆ ಗುಳೆ ಗ್ಯಾರೆಂಟಿ’: ಆರ್‌. ಅಶೋಕ್ ತೀವ್ರ ವಾಗ್ದಾಳಿ!ಕಾಂಗ್ರೆಸ್ ಸರ್ಕಾರ ‘ಮನೆಗೆ ಮಾರಿ, ಪರರಿಗೆ ಉಪಕಾರಿ’: ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆತಮಿಳುನಾಡಿಗೆ ಕಾವೇರಿ ನೀರು ಹರಿಸಲು ಪ್ರಾಧಿಕಾರದ ಆದೇಶ: ರಾಜ್ಯದ ಹಿತ ಕಾಯುವಲ್ಲಿ ಕಾಂಗ್ರೆಸ್‌ಸರ್ಕಾರ ವಿಫಲ - ಸಿ.ಟಿ. ರವಿ ಆಕ್ರೋಶ