Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪರಿಸರ ಸಂರಕ್ಷಣೆಗೆ ಪ್ರಾಮುಖ್ಯತೆ ನೀಡಿ: ನವ್ಯಶ್ರೀ ನಾಗೇಶ್

Advertisement
ಚಂದ್ರವಳ್ಳಿ ನ್ಯೂಸ್, ಶಿವಮೊಗ್ಗ:
ಉನ್ನತ ಶಿಕ್ಷಣ ಪಡೆದು ಉತ್ತಮ ಸಂಬಳದ ನೌಕರಿ ಪಡೆಯುವುದಷ್ಟೇ ವಿದ್ಯಾರ್ಥಿಗಳ ಜೀವನದ ಗುರಿಯಾಗಬಾರದು. ನಾವು ಉತ್ತಮ ವಾತಾವರಣದಲ್ಲಿ ಆರೋಗ್ಯಯುತವಾಗಿ ಜೀವಿಸಲು ಮಾಲಿನ್ಯ ರಹಿತ ಪರಿಸರ ಅಗತ್ಯ. ಆದ್ದರಿಂದ ಪರಿಸರ ಸಂರಕ್ಷಣೆಗೆ ಪ್ರಾಮುಖ್ಯತೆ ನೀಡಬೇಕೆಂದು ನವ್ಯಶ್ರೀ ಈಶ್ವರವನ ಚಾರಿಟಬಲ್ ಟ್ರಸ್ಟ್‌ನ ಅಧ್ಯಕ್ಷ ಎಂ.ವಿ. ನಾಗೇಶ್ ಮನವಿ ಮಾಡಿದರು.


ನಗರದ ಜೆಎನ್‌ಎನ್ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳು ಬುಧವಾರ ಬೆಳಿಗ್ಗೆ ತಾಲೂಕಿನ ಅಬ್ಬಲಗೆರೆ ಬಳಿಯ ಈಶ್ವರವನಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಪ್ರಕೃತಿ ಮಹತ್ವ ಕುರಿತು ಅವರು ವಿವರ ನೀಡಿದರು.

ಪರಿಸರದಲ್ಲಿ ಎಲ್ಲಾ ಜೀವಿಗಳಿಗೂ ಬದುಕುವ ಹಕ್ಕಿದೆ. ಆದರೆ ಮನುಷ್ಯ ತನ್ನ ಸ್ವಾರ್ಥಕ್ಕಾಗಿ ಪರಿಸರದಿಂದ ಅತಿ ಹೆಚ್ಚು ಪ್ರಯೋಜನ ಪಡೆಯುತ್ತಿರುವುದಲ್ಲದೆ ಮಾಲಿನ್ಯವನ್ನು ಮಿತಿಮೀರಿ ಮಾಡುತ್ತಿದ್ದಾನೆ.

ಮನುಷ್ಯ ಪ್ರಕೃತಿಗೆ ಕೃತಜ್ಞರಾಗಿ, ಪರಿಸರಕ್ಕೆ ಪೂರಕವಾಗಿ ಬದುಕಿದರೆ ಮಾತ್ರ ಮನುಕುಲವಷ್ಟೇ ಅಲ್ಲ ಜೀವ ಸಂಕುಲ ಬದುಕಲು ಸಾಧ್ಯವೆಂದರು.

ಇದೇ ಸಂದರ್ಭದಲ್ಲಿ ಪದ್ಮಶ್ರೀ ತುಳಸಿಗೌಡ ಅವರ ನಿಧನಕ್ಕೆ ಸಂತಾಪ ಸೂಚಿಸಲಾಯಿತು. ಜೆಎನ್‌ಎನ್ ಇಂಜಿನಿಯರಿಂಗ್ ಕಾಲೇಜಿನ ಪ್ರೊ.ಹೆಚ್.ಎಂ. ಮಹೇಶ್ವರಪ್ಪ, ಪರಿಸರ ಜನಾರ್ಧನ ಪೈ ಉಪಸ್ಥಿತರಿದ್ದರು. 

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ