Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ವಿದ್ಯಾರ್ಥಿಗಳಿಗೆ ನಿರಾಸೆ

Advertisement
Advertisement

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ : 
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ವೈದ್ಯಕೀಯ ಶಿಕ್ಷಣ ಪಡೆಯಬೇಕೆಂಬ ಆಸೆಯಿಟ್ಟುಕೊಂಡಿರುವ ವಿದ್ಯಾರ್ಥಿಗಳಿಗೆ ನಿರಾಸೆಯಾಗಿದೆ. ಇದರಿಂದ ಓದಿ ಮುಂದೆ ವೈದ್ಯರಾಗುವವರ ಕೈಗೆ ರೋಗಿಗಳು ಸಿಕ್ಕರೆ ಗತಿಯೇನು ಎಂದು ರಾಷ್ಟ್ರೀಯ ವಿದ್ಯಾರ್ಥಿ ಕಾಂಗ್ರೆಸ್ ರಾಜ್ಯಾಧ್ಯಕ್ಷ ಹಾಗೂ ಡಿ.ದೇವರಾಜ ಅರಸು ಅಭಿವೃದ್ದಿ ನಿಗಮದ ಅಧ್ಯಕ್ಷ ಕೀರ್ತಿ ಗಣೇಶ್ ಕೇಂದ್ರ ಸರ್ಕಾರವನ್ನು ಪ್ರಶ್ನಿಸಿದರು.
?

ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಶುಕ್ರವಾರ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ಮನ ನೊಂದು ದೇಶದಲ್ಲಿ ಹದಿನೆಂಟು ವಿದ್ಯಾರ್ಥಿಗಳು ಜೀವ ಕಳೆದುಕೊಂಡಿದ್ದಾರೆ. ಕೇಂದ್ರ ಸಚಿವ ಧರ್ಮೆಂದ್ರ ಪ್ರಧಾನ್ ತಕ್ಷಣವೆ ರಾಜಿನಾಮೆ ಕೊಡಬೇಕು. ಸಿ.ಬಿ.ಎಸ್.ಇ.ನಲ್ಲೂ ಗೊಂದಲ ಉಂಟಾಗಿದೆ. ಪ್ರಶ್ನೆ ಪತ್ರಿಕೆಗಳ ಸೋರಿಕೆಗೆ ಸಂಬಂಧಿಸಿದಂತೆ ಪಾರದರ್ಶಕ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ದ ಕಠಿಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಶನಿವಾರ ಸಂಜೆ ಆರು ಗಂಟೆಗೆ ನಗರದ ನೀಲಕಂಠೇಶ್ವರ ದೇವಸ್ಥಾನದಿಂದ ಪಂಜಿನ ಮೆರವಣಿಗೆ ಹೊರಟು ಒನಕೆ ಓಬವ್ವ ವೃತ್ತಕ್ಕೆ ಆಗಮಿಸಲಿದೆ ಎಂದು ತಿಳಿಸಿದರು.

ನ್ಯಾಯವಾದಿ ಮಹಮದ್ ರಫಿ ಮಾತನಾಡಿ ವೈದ್ಯಕೀಯ ಶಿಕ್ಷಣಕ್ಕಾಗಿ ನೀಟ್ ಪರೀಕ್ಷೆ ಬರೆಯಲು ಶ್ರಮ ಪಟ್ಟು ಓದಿರುವ ವಿದ್ಯಾರ್ಥಿಗಳು ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ಹತಾಶರಾಗಿದ್ದಾರೆ. ಕೆಲವು ವಿದ್ಯಾರ್ಥಿಗಳು ಮತ್ತೆ ನೀಟ್ ಪರೀಕ್ಷೆ ಬರೆಯಬೇಕಾಗುತ್ತದೆಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನಿಸ್ಪಕ್ಷಪಾತ ತನಿಖೆಯಾಗಬೇಕು. ಅತ್ಯಾಧುನಿಕ ಭದ್ರತೆ ಒದಗಿಸಿ ಮುಂದಿನ ದಿನಗಳಲ್ಲಿ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆಯಾಗುವುದನ್ನು ತಡೆಗಟ್ಟುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದರು.

ಭಾರತೀಯ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟ, ಕರ್ನಾಟಕ ಜಿಲ್ಲಾಧ್ಯಕ್ಷ ಕಿರಣ್ ಯಾದವ್ ಎ.ಟಿ, ಜಿ.ವಿ.ಮಧುಗೌಡ, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಗಳಾದ ಕೆ.ಪಿ.ಸಂಪತ್‌ಕುಮಾರ್, ಡಿ.ಎನ್.ಮೈಲಾರಪ್ಪ, ಹಿಂದುಳಿದ ವರ್ಗಗಳ ವಿಭಾಗದ ಜಿಲ್ಲಾಧ್ಯಕ್ಷ ಎನ್.ಡಿ.ಕುಮಾರ್, ಅಲ್ಪಸಂಖ್ಯಾತ ವಿಭಾಗದ ಜಿಲ್ಲಾಧ್ಯಕ್ಷ ಸೈಯದ್ ಖುದ್ದೂಸ್, ಪದವೀಧರ ವಿಭಾಗದ ಜಿಲ್ಲಾಧ್ಯಕ್ಷ ಪ್ರಕಾಶ್‌ರಾಮನಾಯ್ಕ, ಹರ್ಷಿತ, ನ್ಯಾಯವಾದಿ ಶಶಾಂಕ್, ಚಾಂದ್‌ಪೀರ್, ನಾಗರಾಜ್ ಪೈಲೆಟ್ ಇವರುಗಳು ಪತ್ರಿಕಾಗೋಷ್ಠಿಯಲ್ಲಿ ಹಾಜರಿದ್ದರು.

 

 

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನ್ಯಾಷನಲ್ ಫ್ರೈಡ್ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆಪಟ್ಟಣ ಪಂಚಾಯತಿ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಸಿ.ನಾರಾಯಣಸ್ವಾಮಿ ಆಯ್ಕೆಕೆ.ಹೆಚ್ ಮುನಿಯಪ್ಪ ರವರ ಹಿರಿತನಕ್ಕೆ ತಕ್ಕ ಖಾತೆ ನೀಡಬೇಕು-ಆರ್.ವಿ ಮಹೇಶ್ಹಸಿರ ಒಡಲಿಗೆ ಚಿಣ್ಣರ ಪ್ರೀತಿಯ ಸ್ಪರ್ಶ: ಕರಗಿದ ಕಲ್ಲುಕೋಟೆಯ ನಾಡು!ಮಲ್ಲಿಕಾರ್ಜುನ ಖರ್ಗೆ, ಪವನ್ ಖೇರಾ ಸೇರಿ ಮೂವರಿಂದ ನಾಮಪತ್ರ ಸಲ್ಲಿಕೆಬಿಜೆಪಿಗೆ ಅಣ್ಣಾಮಲೈ ಗುಡ್‌ಬೈ: 6 ವರ್ಷಗಳ ಸುದೀರ್ಘ ಸಂಬಂಧ ಅಂತ್ಯ, ರಾಜೀನಾಮೆ ಅಂಗೀಕರಿಸಿದ ಹೈಕಮಾಂಡ್ಸರ್ಕಾರಕ್ಕೆ ಮೊದಲ ಶಾಕ್: ಸಚಿವ ಸ್ಥಾನಕ್ಕೆ ರಾಮಲಿಂಗಾರೆಡ್ಡಿ ರಾಜೀನಾಮೆ!ಕೆಪಿಸಿಸಿ ಅಧ್ಯಕ್ಷ ಸ್ಥಾನ ಕೈತಪ್ಪಿಲ್ಲ, ಅದು ಪಕ್ಷದ ‘ಒಬ್ಬರಿಗೆ ಒಂದು ಹುದ್ದೆ’ ಸೂತ್ರ: ಸಚಿವ ಸತೀಶ್ ಜಾರಕಿಹೊಳಿಖಾತೆ ಕಿಚ್ಚು: ಸಚಿವರ ಅಸಮಾಧಾನದ ಸವಾಲಿಗೆ 'ಕನಕಪುರ ಬಂಡೆ' ರೆಡಿ!ದಾವಣಗೆರೆ ರೈಲ್ವೆ ನಿಲ್ದಾಣದಲ್ಲಿ ಶಂಕಿತ ಉಗ್ರನ ಬಂಧನ: ತುಮಕೂರು ಪೊಲೀಸರ ಭರ್ಜರಿ ಕಾರ್ಯಾಚರಣೆ!