ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಜಿಲ್ಲಾ ಕಾಂಗ್ರೆಸ್ ಜವಾಹರ್ ಬಾಲ್ ಮಂಚ್ ಘಟಕದ ವತಿಯಿಂದ ನವೆಂಬರ್ 14ರಂದು ಹಮ್ಮಿಕೊಳ್ಳಲಾಗಿರುವ ದೇಶದ ಪ್ರಥಮ ಪ್ರಧಾನಮಂತ್ರಿ ಪಂಡಿತ್ ಜವಾಹರ್ ಲಾಲ್ ನೆಹರು ಅವರ ಜನ್ಮದಿನ ಹಾಗೂ ಮಕ್ಕಳ ದಿನಾಚರಣೆ ಕಾರ್ಯಕ್ರಮದ ಅಧಿಕೃತ ಪೋಸ್ಟರ್‌ಗಳನ್ನು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂ. ಕೆ. ತಾಜ್ ಪೀರ್ ಅವರು ಬಿಡುಗಡೆ ಮಾಡಿದರು.
ಜಿಲ್ಲಾ ಜವಾಹರ್ ಬಾಲ್ ಮಂಚ್ ಘಟಕದ ಜಿಲ್ಲಾಧ್ಯಕ್ಷ ಜಿ. ದಾದಾ ಪೀರ್ ಅವರು ಮಾತನಾಡಿ ನವೆಂಬರ್ 14ರಂದು ನಡೆಯಲಿರುವ ಮಕ್ಕಳ ದಿನಾಚರಣೆ ಮತ್ತು ಜವಾಬ್ದಾರಿಯುತ ಕಾರ್ಯಕ್ರಮಗಳ ಕುರಿತಂತೆ ಕೆಪಿಸಿಸಿ ಅಧ್ಯಕ್ಷರ ಆದೇಶದ ಮೇರೆಗೆ ಚಿತ್ರದುರ್ಗ ಜಿಲ್ಲಾ ಕಾಂಗ್ರೆಸ್ ಕಮಿಟಿ ವತಿಯಿಂದ ವಿಶೇಷ ಪೋಸ್ಟರ್ ಅನ್ನು ಲಾಂಚ್ ಮಾಡಲಾಯಿತು.
ಈ ಕಾರ್ಯಕ್ರಮದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ರಾಜಣ್ಣ, ಕಾರ್ಯಾಧ್ಯಕ್ಷ ಆದಿಶಿವ, ಆರ್.ಕೆ ಸಂತೋಷ್ ಹಾಗೂ ಪಕ್ಷದ ಇತರ ಮುಖಂಡರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದು, ಪೋಸ್ಟರ್ ಬಿಡುಗಡೆಗೊಳಿಸಿ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಕಾರ್ಯಾಧ್ಯಕ್ಷ ಹಾಲೇಶ್, ಮುಖಂಡ ಆರ್. ಕೆ ಸರ್ದಾರ್ ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ವಿವಿಧ ಮುಂಚೂಣಿ ಘಟಕಗಳ ಜಿಲ್ಲಾಧ್ಯಕ್ಷರು, ಜಿಲ್ಲಾ ಕಾಂಗ್ರೆಸ್ ಪದಾಧಿಕಾರಿಗಳು, ಪ್ರಮುಖ ಮುಖಂಡರು ಹಾಗೂ ಪಕ್ಷದ ಕಾರ್ಯಕರ್ತರು ಭಾಗವಹಿಸಿದ್ದರು.




