Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ದೇಶಕ್ಕಾಗಿ ಬಹಳಷ್ಟು ತ್ಯಾಗ ಬಲಿದಾನ ಮಾಡಿದ ನೆಹರು

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ದೇಶದ ಮೊದಲ ಪ್ರಧಾನಮಂತ್ರಿ ಜವಾಹರ್ ಲಾಲ್ ನೆಹರೂ ಅವರ ಜನ್ಮದಿನದಂದೇ ಮಕ್ಕಳ ದಿನಾಚರಣೆ ಆಚರಿಸಲಾಗುತ್ತದೆ. ಮಕ್ಕಳನ್ನು ಕಂಡರೆ ಬಹಳ ಪ್ರೀತಿಯಿದ್ದ ಅವರು ಇಂದಿನ ಮಕ್ಕಳೇ ಭವಿಷ್ಯದ ಪ್ರಜೆಗಳು ಎಂದು ಅರ್ಥೈಸಿಕೊಂಡಿದ್ದರು. ಆದ್ದರಿಂದ ಚಾಚಾ ನೆಹರೂ ಎಂದೇ ಅವರನ್ನು ಕರೆಯಲಾಗುತ್ತಿತ್ತು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.


ಮಾಜಿ ಪ್ರಧಾನಿ ಪಂಡಿತ್ ಜವಾಹರಲಾಲ್ ನೆಹರೂರವರ ಜಯಂತಿಯ ಅಂಗವಾಗಿ ವಿಧಾನಸೌಧದ ಆವರಣದಲ್ಲಿರುವ ನೆಹರೂ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾಧ್ಯಮದೊಂದಿಗೆ ಮಾತನಾಡಿದರು.

ನೆಹರು ಅವರು ವಿದ್ಯಾರ್ಥಿ ದೆಸೆಯಲ್ಲಿದ್ದಾಗಲೇ ದೇಶ ಪ್ರೇಮ ಹಾಗೂ ಸ್ವಾತಂತ್ರ್ಯ ಪ್ರೇಮಗಳನ್ನು ಬೆಳೆಸಿಕೊಂಡಿದ್ದರು. ಬ್ರಿಟಿಷರ ವಿರುದ್ಧ ಹೋರಾಡುವ ಮನೋಭಾವ ಬೆಳೆಸಿಕೊಂಡು ಮಹಾತ್ಮ ಗಾಂಧಿಯವರ ನೆಚ್ಚಿನ ಶಿಷ್ಯರಾಗಿ ಸ್ವಾತಂತ್ರ್ಯ ಹೋರಾಟದಲ್ಲಿ ಪಾಲ್ಗೊಳ್ಳುತ್ತಾರೆ. ಸುಮಾರು 9 ವರ್ಷಗಳ ಕಾಲ ಕಾರಾಗೃಹದಲ್ಲಿದ್ದು ದೇಶಕ್ಕಾಗಿ ಬಹಳಷ್ಟು ತ್ಯಾಗ ಬಲಿದಾನಗಳನ್ನು ಮಾಡಿದ್ದಾರೆ. ದೇಶಕ್ಕೆ ಸ್ವಾತಂತ್ರ್ಯ ಲಭಿಸಿದಾಗ ದೇಶದ ಬಜೆಟ್ ಗಾತ್ರ 197 ಕೋಟಿ ರೂ. ಗಳು ಮಾತ್ರ ಇತ್ತು.  ಎರಡು ಮೂರು ವರ್ಷಗಳ ನಂತರ 4 ಅಂಕಿಗಳ ಹಂತಕ್ಕೆ ತಲುಪಿತು.

ಕೃಷಿ, ನೀರಾವರಿ, ಕೈಗಾರಿಕೆಗಳಲ್ಲಿ ಆಸಕ್ತಿ ಹೊಂದಿದ್ದ ನೆಹರೂ ಅವರು ದೇಶವನ್ನು ವೈಜ್ಞಾನಿಕವಾಗಿ, ವೈಚಾರಿಕವಾಗಿ ಬೆಳೆಸುವ ಪ್ರಯತ್ನ ಮಾಡಿದರು. ಪಂಚ ವಾರ್ಷಿಕ ಯೋಜನೆಗಳ ಮೂಲಕ ದೇಶ ಕಟ್ಟುವ ಕೆಲಸವನ್ನು ಮಾಡಿದರು. ದೇಶದಲ್ಲಿ ಅನೇಕ ಕೈಗಾರಿಕೆಗಳಾಗಿದ್ದರೆ, ಅಣೆಕಟ್ಟುಗಳಾಗಿದ್ದರೆ, ಕೃಷಿಯಲ್ಲಿ ಸ್ವಾವಲಂಬಿಗಳಾಗಿದ್ದರೆ ಅದಕ್ಕೆ ನೆಹರೂ ಅವರು ಕಾರಣ. ಸುದೀರ್ಘ ಹದಿನೇಳು ವರ್ಷಗಳ ಕಾಲ ಈ ದೇಶದ  ಪ್ರಧಾನಿಗಳಾಗಿ ಸೇವೆ ಸಲ್ಲಿಸಿದ್ದಾರೆ.

ಬಿಜೆಪಿಗೆ ಮಹಾತ್ಮ ಗಾಂಧಿ ಹಾಗೂ ಜವಾಹರಲಾಲ್ ನೆಹರೂ ಅವರನ್ನು ತೆಗಳುವುದೇ ಕೆಲಸ. ದೇಶದ ಸ್ವಾತಂತ್ರ್ಯ ಹೋರಾಟದಲ್ಲಿ ಬಿಜೆಪಿಯ ಪಾತ್ರವೇ ಇಲ್ಲ. ಮಹಾತ್ಮ ಗಾಂಧಿ, ನೆಹರೂ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟವರು. ಅವರನ್ನು ತೆಗಳಿ, ಇಲ್ಲದ ಆರೋಪಗಳನ್ನು ಹೊರಿಸುವುದೇ ಅವರ ಕೆಲಸ. ನರೇಂದ್ರ ಮೋದಿ, ಬಿಜೆಪಿ, ಆರ್.ಎಸ್.ಎಸ್ ಗಾಂಧಿ ಮತ್ತು ನೆಹರೂ ಅವರನ್ನು ಹೀಯಾಳಿಸುವುದನ್ನೇ ಉದ್ಯೋಗ ಮಾಡಿಕೊಂಡಿದ್ದಾರೆ ಎಂದು ಮುಖ್ಯಮಂತ್ರಿಗಳು ಹೇಳಿದರು.

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ